Connect with us

State

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!?

Published

on

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ನಿಷೇಧಿಸಲಾಗಿದೆ. ಅಲ್ಲದೇ ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ
ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್‌ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ
ಈ ವರ್ಷದ ಕುಮಾರಪರ್ವತ ಚಾರಣದ ಅವಧಿ ಮುಗಿದಿದೆ. ಅಲ್ಲದೆ ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ ಮುಂದೆ ಬಿಸಿಲಿನ ಬೇಗೆಗೆ ಬೆಂಕಿಗೆ ತುತ್ತಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಆವಶ್ಯಕತೆ ಇದೆ. ಇದೀಗ ಕುಮಾರ ಪರ್ವತಕ್ಕೆ ಬರುವ ಚಾರಣಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಬೇಸಗೆಯ ಕಾರಣ ನೀರಿನ ಮೂಲಗಳು ಬತ್ತಿ ಹೋಗಿವೆ. ಚಾರಣಿಗರು ತಂಗುವ ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.


ಪುಷ್ಪಗಿರಿ ಬೆಟ್ಟಗಳು ಎಂದೂ ಕರೆಯಲ್ಪಡುವ ಕುಮಾರ ಪರ್ವತವು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿದೆ. ಈ ಟ್ರೆಕ್ಕಿಂಗ್ ಸ್ಥಳವು ಅಪಾರ ಜನಪ್ರಿಯತೆಯನ್ನು ಗಳಿಸಿದೆ, ಹೆಚ್ಚಾಗಿ ಸಾಮಾಜಿಕ ಜಾಲತಾಣದ ಮಾನ್ಯತೆಯಿಂದ ಉತ್ತೇಜಿಸಲ್ಪಟ್ಟಿದೆ. ಪ್ರವಾಸಿಗರ ಭೇಟಿಯ ಉಲ್ಬಣವು ಒಂದು ನಿರ್ಣಾಯಕ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಈ ಹೊಸ ಖ್ಯಾತಿಯು ವರವೋ ಅಥವಾ ಶಾಪವೋ? ಎಂಬ ಪ್ರಶ್ನೆ ಎದ್ದಿದೆ.
ಏಕೆಂದರೆ ಜನವರಿ 26 ರಂದು, ಒಂದೇ ದಿನದಲ್ಲಿ 1,000 ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳನ್ನು ಈ ದಾರಿಯಲ್ಲಿ ವೀಕ್ಷಿಸಲಾಯಿತು. ಇದು ಪರಿಸರವಾದಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ.
ಈ ಹಿನ್ನಲೆಯಲ್ಲಿ ದಿನಕ್ಕೆ 600 ಮಂದಿಗಷ್ಟೇ ಚಾರಣಕ್ಕೆ ಅವಕಾಶ ನೀಡುವಂತೆ ಆನ್ ಲೈನ್ ಬುಕ್ಕಿಂಗ್ ನಡೆಸುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ಮತ್ತು ಸೋಮವಾರಪೇಟೆ ಕಡೆಯಿಂದ ತಲಾ 300 ಮಂದಿಗೆ ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Continue Reading
Click to comment

Leave a Reply

Your email address will not be published. Required fields are marked *

State

ಸರ್ಕಾರಿ ಶಾಲೆಯಲ್ಲಿ ಓದಿ SSLC ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಅಂಕಿತಾ 5 ಲಕ್ಷ, 3ನೇ ಸ್ಥಾನ ಪಡೆದ ನವನೀತ್ ಗೆ 2 ಲಕ್ಷ ರೂ. ಉಡುಗೊರೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು, ಮೇ 14:

ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3 ನೇ ರಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು.

ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್ ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10 ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ.

ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ ಎಂದರು.

ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

Continue Reading

State

ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಅವರ ಅವಧಿ ಕೇವಲ ಒಂದು ವರ್ಷ ಮಾತ್ರ ಎಂಬ ಕೇಜ್ರಿವಾಲ್ ಅವರ ಹೇಳಿಕೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;

“ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗು ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು” ಎಂದರು.

ಲೋಕಸಭೆ ಮಾದರಿಯಲ್ಲಿ ಪರಿಷತ್ ಚುನಾವಣೆ ಎದುರಿಸುತ್ತೇವೆ:

ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಬಗ್ಗೆ ಕೇಳಿದಾಗ, “ಶಿಕ್ಷಕರ ಹಾಗು ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹಾಗು ಪದಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲಾ ಮುಖಂಡರು ಸೇರಿ ಈ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇನ್ನು ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ” ಎಂದು ತಿಳಿಸಿದರು.

ಲೋಕಸಭೆ ಮಾದರಿಯಲ್ಲೇ ಚುನಾವಣೆ ಮಾಡುತ್ತೀರಾ ಎಂದು ಕೇಳಿದಾಗ, “ಹೌದು, ಲೋಕಸಭೆ ಚುನಾವಣೆ ಮಾದರಿಯಲ್ಲಿ ಈ ಚುನಾವಣೆ ಎದುರಿಸುತ್ತೇವೆ” ಎಂದರು.

ಪರಿಷತ್ ಚುನಾವಣೆಗೂ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ಬಗ್ಗೆ ಕೇಳಿದಾಗ, “ಅವರು ಶಾಶ್ವತವಾಗಿ ಮೈತ್ರಿ ಮಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಮೈತ್ರಿಯಾದರೂ ಮಾಡಿಕೊಳ್ಳಲಿ, ವಿಲೀನವಾದರೂ ಮಾಡಿಕೊಳ್ಳಲಿ. ಅದು ಅವರ ಪಕ್ಷಗಳ ತೀರ್ಮಾನ. ನಮಗೂ ಅದಕ್ಕೂ ಸಂಬಂಧವಿಲ್ಲ” ಎಂದು ತಿಳಿಸಿದರು.

Continue Reading

State

ಪ್ರಜ್ವಲ್ ರೇವಣ್ಣ ಪ್ರಕರಣ ಎಸ್ ಐಟಿ ತನಿಖೆ ದಿಕ್ಕುತಪ್ಪುತ್ತಿದೆ, ಸಿಬಿಐ ತನಿಖೆಗೆ ವಹಿಸಲಿ: ಬಸವರಾಜ ಬೊಮ್ಮಾಯಿ

Published

on

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಯಾರೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಸರಿಯಾದ ತನಿಖೆಗೆ ಸಿಬಿಐಗೆ ವಹಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಅಂದರೆ, ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.
ಈ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಚಾರಣೆಯೂ‌ ಮಾಡಬೇಕು ಎಂಬ ಕೆಲವರ ಆಗ್ರಹದ ಕುರಿತು ಕೇಳಿದ ಪ್ರಶ್ನೆಗೆ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ್ಯಾರ‌ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯೂ‌ ಮಾಡಲಿ ಅದಕ್ಕೇ ನಾವು ಪ್ರಕರಣ ಸಿಬಿಐಗೆ ಕೊಡಲಿ ಅಂತ ಕೇಳುತ್ತಿದ್ದೇವೆ ಎಂದರು.


ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆಯಾದ ಮೇಲೆ ಕೆಲವರಲ್ಲಿ ಅಸಮಧಾನವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಧಾನ ಪರಿಷತ್ ಚುನಾವಣೆಗೆ ಹಲವರು ಆಕಾಂಕ್ಷಿಗಳು ಇದ್ದರು. ಟಿಕೆಟ್ ಕೈತಪ್ಪಿದಾಗ ಸಹಜವಾಗಿ ಬೇಸರ ಆಗುತ್ತದೆ. ಎಲ್ಲವೂ ಸರಿ ಹೋಗುತ್ತದೆ. ಈಗಾಗಲೇ ಮೈತ್ರಿ ಬಗ್ಗೆ ವರಿಷ್ಠರು ಯಾವ ರೀತಿ ತೀರ್ಮಾನ ಮಾಡಿದ್ದಾರೋ ಅದರಂತೆ ನಡೆಯುತ್ತದೆ ಎಂದರು.

ಎಸ್ಎಂಕೆ ಆರೋಗ್ಯ ವಿಚಾರಣೆ
ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ ವಿಚಾರಿಸಿದರು.
ಇದಕ್ಕೂ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಎಸ್ ಎಂ‌ ಕೃಷ್ಣ ಅವರ ಆರೋಗ್ಯ ಎರಡು ದಿನಗಳಿಂದ ಕ್ಷೀಣಿಸಿದೆ. ಅವರು ಬೇಗ ಗುಣಮುಖರಾಗಲಿ ಅಂತ ಹಾರೈಸುತ್ತೇನೆ ಎಂದರು.

Continue Reading

Trending

error: Content is protected !!