Connect with us

Crime

ಬಟ್ಟೆ ಧರಿಸುವ ವಿಚಾರಕ್ಕೆ ಪತಿ ಪತ್ನಿ ನಡುವೆ ಕಲಹ – ಚಾಕುವಿನಿಂದ ಇರಿದು ಪತ್ನಿಯ ಬರ್ಬರ ಹತ್ಯೆ

Published

on

ಹಾಸನ : ಬಟ್ಟೆ ಧರಿಸುವ ವಿಚಾರಕ್ಕೆ ಪತಿ ಪತ್ನಿ ನಡುವೆ ಕಲಹ

ಚಾಕುವಿನಿಂದ ಇರಿದು ಪತ್ನಿಯ ಬರ್ಬರ ಹತ್ಯೆ

ಜ್ಯೋತಿ (22) ಕೊಲೆಯಾದ ಮಹಿಳೆ

ಜೀವನ್ (25) ಪತ್ನಿ ಕೊಲೆಗೈದ ಆರೋಪಿ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ರಾಂಪುರ ಗ್ರಾಮದಲ್ಲಿ ಘಟನೆ

ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವಾಗ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜ್ಯೋತಿ-ಜೀವನ್

ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಜ್ಯೋತಿ-ಜೀವನ್

ಮಾಡ್ರನ್ ಡ್ರೆಸ್ ಧರಿಸುತ್ತಿದ್ದ ಜ್ಯೋತಿ

ಮಾಡ್ರನ್ ಡ್ರೆಸ್ ಧರಿಸುವ ಜೊತೆಗೆ ಬೋಲ್ಡ್ ಆಗಿ ಇರುತ್ತಿದ್ದ ಜ್ಯೋತಿ

ಇದೇ ವಿಚಾರಕ್ಕೆ ಪತ್ನಿ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದ ಜೀವನ್

ಅಲ್ಲದೇ ಪತ್ನಿ ಜ್ಯೋತಿ ಮೇಲೆ ಅನುಮಾನ ಪಡುತ್ತಿದ್ದ ಪತಿ ಜೀವನ್

ನಿನ್ನೆ ಸಂಜೆ ಮಾಡ್ರನ್ ಡ್ರೆಸ್ ಹಾಕಿಕೊಂಡು ಹೊರಗೆ ಹೊರಟಿದ್ದ ಜ್ಯೋತಿ

ಇದನ್ನು ವಿರೋಧಿಸಿದ್ದ ಪತಿ ಜೀವನ್

ನಂತರ ಬೈಕ್‌ನಲ್ಲಿ ಡ್ರಾಪ್ ಕೊಡುವುದಾಗಿ ಕರೆದೊಯ್ದ ಜೀವನ್

ಅರಣ್ಯ ಪ್ರದೇಶದಲ್ಲಿ ಚಾಕುವಿನಿಂದ ಕುತ್ತಿಗೆ ಕುಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಜೀವನ್

ಕೊಲೆ ಮಾಡಿದ ನಂತರ ಆರೋಪಿ ಜೀವನ್ ಎಸ್ಕೇಪ್

ಜೀವನ್ ರಾಂಪುರ ಗ್ರಾಮದವನು

ಜ್ಯೋತಿ ಹುಬ್ಬಳ್ಳಿ ಮೂಲದವಳು

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading
Click to comment

Leave a Reply

Your email address will not be published. Required fields are marked *

Crime

ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ

Published

on

*ಮದುವೆಗೆ ಬಂದ ಮಹಿಳೆ ಸ್ಮಶಾನ ಸೇರಿದರು.

ಸಂಬಂಧಿಕರ ಮದುವೆಗೆಂದು ಬಂದಿದ್ದ ಮಹಿಳೆಯೊಬ್ಬರು ಮಾರುತಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಸು ನೀಗಿರುವ ಘಟನೆ ಇಂದು ಮಧ್ಯಾಹ್ನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಕಾಸರಗೋಡುವಿನ ರಾಬಿಯ ಎಂಬುವವರು ಮೃತ ದುರ್ದೈವಿ. 7ನೇ ಹೊಸಕೋಟೆಯಲ್ಲಿರುವ ಇವರ ಸಂಬಂಧಿಯ ವಿವಾಹ ಗದ್ದೆಹಳ್ಳದಲ್ಲಿ ನಡೆಯುತ್ತಿತ್ತು. ಮದುವೆಯಲ್ಲಿ ಪಾಲ್ಗೊಂಡಿದ್ದ ರಾಬಿಯ ರಸ್ತೆ ಬದಿಯಲ್ಲಿ ನಿಂತಿದ್ದರು.

ಈ ಸಂದರ್ಭ ಗಿರಿಯಪ್ಪ ಮನೆ ಗದ್ದೆ ನಿವಾಸಿ ಪೊನ್ನಪ್ಪ ಎಂಬುವವರ ಪುತ್ರ ಶರತ್ ಎಂಬಾತ ವೇಗವಾಗಿ ಚಲಾಯಿಸಿಕೊಂಡು ಬಂದ ಮಾರುತಿ ಕಾರು ಮೂವರು ಮಹಿಳೆಯರಿಗೆ ಡಿಕ್ಕಿಪಡಿಸಿ ಗಾಯಗೊಳಿಸಿದೆ. ಅಲ್ಲಿಯೂ ನಿಯಂತ್ರಣಕ್ಕೆ ಬಾರದ ಕಾರು ಮುಂದಕ್ಕೆ ಚಲಿಸಿ ರಾಬಿಯ ಅವರಿಗೆ ಗುದ್ದಿ ಅವರೊಂದಿಗೆ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಬಿಯ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ. ಕಾರು ಡಿಕ್ಕಿಯಾಗಿ ಗಾಯಗೊಂಡಿರುವ ಇನ್ನುಳಿದ ಮೂವರು ಮಹಿಳೆಯರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

Crime

ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಪತಿ…!

Published

on

ನಾಗಮಂಗಲ :- ಕ್ರಿಕೆಟ್ ಬೆಟ್ಟಿಂಗ್ ಹಾಗೂ ಪರಸ್ತ್ರೀ ಜೊತೆಗಿನ ಮೋಜಿನಿಂದ ಸಾಲದ ಸುಳಿಗೆ ಸಿಲುಕಿದ್ದ ಪತಿಯೊಬ್ಬ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ವಿಷ ವುಣಿಸಿ ಕೊಲೆಗೈದು ತಾನು ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಎಂಟನೇ ವಾರ್ಡ್ ನ ಪೇಟೆ ಹೊಲ ರಸ್ತೆಯ ನಿವಾಸಿ ನರಸಿಂಹ ಪತ್ನಿ ಮತ್ತು ಮಕ್ಕಳನ್ನು ಕೊಲಗೈದಿದ್ದಲ್ಲದೆ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ.
ಈತನ ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ಮತ್ತು ಒಂದೂವರೆ ವರ್ಷದ ರಿಷಿಕಾ ಸಾವನ್ನಪ್ಪಿದ್ದು, ನರಸಿಂಹನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಾಲೂಕಿನ ತೆಂಗಿನಭಾಗ ಗ್ರಾಮದ ಸ್ವಾಮಿ ರ ಪುತ್ರ ನರಸಿಂಹ ಕಟಿಂಗ್ ಶಾಪ್ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದನು ಮಂಡ್ಯ ತಾಲೂಕಿನ ಬಸರಾಳು ಸಮೀಪದ ಕಂಬದಹಳ್ಳಿ ಗ್ರಾಮದ ಕೀರ್ತನ ಳನ್ನು ಮದುವೆಯಾಗಿದ್ದು ದಂಪತಿಗೆ ಮುದ್ದಾದ ಎರಡು ಮಕ್ಕಳು ಇದ್ದವು.
ಪರಸ್ತ್ರೀ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಈತ ಕ್ರಿಕೆಟ್ ಬೆಟ್ಟಿಂಗ್ ನಿಂದ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದನು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪತ್ನಿಗೆ ಹಣ ತರುವಂತೆ ಪೀಡಿಸುತ್ತಿದ್ದು ನ್ಯಾಯ ಪಂಚಾಯಿತಿ ನಡೆಸಿ ಹಣವನ್ನು ನೀಡಲಾಗಿತ್ತು, ಆದರೂ ಸಹ ಈತ ಬದಲಾಗಿರಲಿಲ್ಲ, ಐಪಿಎಲ್ ಪಂದ್ಯಾವಳಿ ಆರಂಭ ಗೊಂಡ ನಂತರ ಬೆಟ್ಟಿಂಗ್ ನಲ್ಲಿ ಹೆಚ್ಚು ಹಣ ಕಳೆದುಕೊಂಡಿದ್ದನು.
ಸುಮಾರು ಎಂಟು ಲಕ್ಷ ಸಾಲದ ಹೊರೆ ಈತನ ಮೇಲಿತ್ತು, ಸಾಲಗಾರರ ಕಿರುಕುಳಕ್ಕೆ ಒಳಗಾಗಿದ್ದ ಈತ ಸಾಲ ತೀರಿಸುವ ಮಾರ್ಗ ಇಲ್ಲದೆ ಪತ್ನಿ ಜೊತೆ ಆಗಾಗ್ಗೆ ಜಗಳ ಮಾಡಿಕೊಳ್ಳುತ್ತಿದ್ದನು,

ಗುರುವಾರ 11 ರ ಮನೆಗೆ ಬಂದ ಈತ ಪತ್ನಿ ಕೀರ್ತನ ಮತ್ತು ಇಬ್ಬರು ಮಕ್ಕಳಿಗೆ ವಿಷ ವುಣಿಸಿದ ನಂತರ ಅವರು ಸಾವನ್ನಪ್ಪಿರುವುದನ್ನು ಖಚಿತ ಮಾಡಿಕೊಂಡು ತಾನು ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ಮದ್ಯಾಹ್ನದ ವೇಳೆ ಮನೆಯವರು ಹೋಗಿ ನೋಡಿದಾಗ ಪ್ರಕರಣ ನೆಡೆದಿರುವುದು ಬೆಳಕಿಗೆ ಬಂದಿದೆ, ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ತವರು ಮನೆಯಿಂದ ಹಣ ತರುವಂತೆ ಒತ್ತಡ ಹಾಕುತ್ತಿದ್ದ ನರಸಿಂಹ ಬಲವಂತವಾಗಿ ಹೆಂಡತಿ ಮಕ್ಕಳಿಗೆ ವಿಷ ವುಣಿಸಿದ್ದಾನೆ, ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕುಟುಂಬವನ್ನು ಕೊಲೆಗೈದಿದ್ದಾನೆ ಎಂದು ಹೇಳಲಾಗುತ್ತಿದ್ದು ಪ್ರಕರಣದ ಸುತ್ತ ಹಲವು ಅನುಮಾನ ಸೃಷ್ಟಿಯಾಗಿದೆ.
ಕೀರ್ತನ ತಂದೆ ಶಿವನಂಜು ಮಾತನಾಡಿ ವರದಕ್ಷಿಣೆ ಕಿರಿಕುಳವನ್ನು ಪದೇ ಪದೇ ನೀಡುತ್ತಿದ್ದನು, 8 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡು ನ್ಯಾಯ ಪಂಚಾಯತಿ ಎಲ್ಲ ನಡೆದಿದ್ದವು. ಆದರೂ ಕೂಡ ನಾನು ಅವರ ಹಣವನ್ನು ನೀಡಿದ್ದೆ ಅಳಿಯ ನರಸಿಂಹನ ಆಕ್ರಮ ಸಂಬಂಧದ ಹಿನ್ನೆಲೆಯಲ್ಲಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ತಿಳಿಸಿದರು
ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Continue Reading

Crime

ಯಾವ ತಪ್ಫಿಗಾಗಿ ಈ ಕೃತ್ಯ, ಬಿಜೆಪಿ ಮಾಧ್ಯಮ ವಕ್ತಾರ ವಿಜಯ್ ಕುಮಾರ್ ಮೇಲಿನ ಹಲ್ಲೆಗೆ ಕಳವಳ ವ್ಯಕ್ತಪಡಿಸಿದ ಮಾಜಿ ಪ್ರದಾನಿ ದೇವೇಗೌಡರು

Published

on

ಹಾಸನ: ಯಾವ ತಪ್ಫಿಗಾಗಿ ಈ ಕೃತ್ಯ, ಬಿಜೆಪಿ ಮಾಧ್ಯಮ ವಕ್ತಾರ ವಿಜಯ್ ಕುಮಾರ್ ಮೇಲಿನ ಹಲ್ಲೆಗೆ ಕಳವಳ ವ್ಯಕ್ತಪಡಿಸಿದ ಮಾಜಿ ಪ್ರದಾನಿ ದೇವೇಗೌಡರು
ಆರ್ ಎಎಸ್ ಎಸ್ ನವರು ನಿಸ್ವಾರ್ಥವಾಗಿ ಕೆಲಸ ಮಾಡೋರು, ದೇಶದ ತುರ್ತು ಪರಿಸ್ಥಿತಿ ವೇಳೆಯಲ್ಲೂ ಕೂಡ ದೇಶಕ್ಕಾಗಿ ಕೆಲಸ ಮಾಡಿದವರು, ನನಗೆ ಎಲ್ಲವೂ ಗೊತ್ತಿದೆ ತಿಳಿದು ಕೊಂಡಿದ್ದೇನೆ.
ನೀವು ಏನು ಮಾತಾಡಿದ್ರಿ ನಂದೂ ಒಂದು ಮತ ಅವರದು ಒಂದು ಮತ ಎಂದಿದ್ದೀರಿ,
ನೀವು ಜನರಲ್ ಆಗಿ ಮಾತಾಡಿದ್ರಿ ಅದ್ರಲ್ಲಿ ಏನು ತಪ್ಪಿದೆ, ಪ್ರೀತಂಗೌಡ ಹೆಸರು ಹೇಳದೆ ಘಟನೆ ಖಂಡಿಸಿದ ದೇವೇಗೌಡರು.
ನಾನು ಈ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳೋದಿಲ್ಲ. ಈಗ ಏನೂ ಮಾತನಾಡಲ್ಲ
ನೀವೆಲ್ಲಾ ವಾಸ್ತವಾಂಶವನ್ನು ವರದಿ ಮಾಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ ದೇವೇಗೌಡರು.
ಹಿಮ್ಸ್ ನಲ್ಲಿ ಗಾಯಾಳು ವಿಜಯಕುಮಾರ್ ಅರೋಗ್ಯ ವಿಚಾರಿಸಿ ನಂತರ ಮಾತನಾಡಿದ ಮಾಜಿ ಪ್ರಧಾನಿ

ನಾನು ನಿಮ್ಮ ಜೊತೆ ಇರ್ತೇನೆ ಎಂದು ವಿಜಯಕುಮಾರ್ಗೆ ಭರವಸೆ, ನಾಳೆ ಸಂಜೆ ಮತ್ತೆ ಬರ್ತೇನೆ ಪೊಲೀಸರು ಏನು ಕ್ರಮ ಕೈಗೊಳ್ತಾರೆ ತಿಳಿದುಕೊಳ್ತೇನೆ. ಕೆಲವರಿಗೆ ಜೀವ ಬೆದರಿಕೆ ಇದೆ ಎಂದು ದೇವೇಗೌಡ ರಿಗೆ ಮಾಹಿತಿ ನೀಡಿದ ಬಿಜೆಪಿ ಕಾರ್ಯಕರ್ತರು
ಇದಕ್ಕೆ ನಾನು ನಿಮ್ಮ ಜೊತೆ ಇದ್ದೇನೆ ಎಂದ ಗೌಡರು.

Continue Reading

Trending

error: Content is protected !!