Connect with us

State

ಬಿಜೆಪಿ ಮಂತ್ರಾಕ್ಷತೆ ಅಕ್ಕಿಯನ್ನು ಡಿಕೆ ಶಿವಕುಮಾರ್ ಅವರು ದೊಡ್ಡ ಆಲದಹಳ್ಳಿಯ ತೋಟದಲ್ಲಿ ಬೆಳೆದು ಕೊಟ್ಟಿದ್ದಾರೆಯೇ? ಡಿಕೆಶಿ ಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Published

on

ಬಿಜೆಪಿ ಮಂತ್ರಾಕ್ಷತೆ ಅಕ್ಕಿಯನ್ನು ಡಿಕೆ ಶಿವಕುಮಾರ್ ಅವರು ದೊಡ್ಡ ಆಲದಹಳ್ಳಿಯ ತೋಟದಲ್ಲಿ ಬೆಳೆದು ಕೊಟ್ಟಿದ್ದಾರೆಯೇ?

ನಮ್ಮ ಅಕ್ಕಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿಯ ಅವರ ತೋಟದಲ್ಲಿ ಬೆಳೆದಿರುವುದಾ? ಎಂದು ಟಾಂಗ್ ಕೊಟ್ಟರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜಕೀಯ ಮಾಡುತ್ತಿರುವುದು ಅವರು. ಇವರು ಅಕ್ಕಿಯನ್ನು ತಮ್ಮ ಸ್ವಗ್ರಾಮ ದೊಡ್ಡ ಆಲದಹಳ್ಳಿಯಲ್ಲಿ ಬೆಳೆದು ಕಳಿಸಿ ಕೊಟ್ಟಿದ್ದಾರೆಯೇ? ಎಂದು ಅವರು ಡಿಕೆಶಿ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ರಾಮ ಮಂದಿರಕ್ಕೆ ನಮಗೆ ಆಹ್ವಾನ ನೀಡಿಲ್ಲ ಎಂದು ದೂರಿರುವ ಡಿಕೆಶಿ ಆರೋಪದ ಬಗ್ಗೆ ಪ್ರತ್ಯುತ್ತರ ನೀಡಿದ ಅವರು; ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕರೆಯಬೇಕಾ ಅವರನ್ನು? ಪ್ರಧಾನಿಗಳು ಈಗಾಗಲೇ ಹೇಳಿದ್ದಾರೆ. ಉದ್ಘಾಟನೆ ದಿನ ಗೊಂದಲ ಆಗುವುದು ಬೇಡ. ಮುಂದೆ ದೇವಾಲಯವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಿದಾಗ ಎಲ್ಲರೂ ಶ್ರೀರಾಮ ದೇವರ ದರ್ಶನ ಪಡೆಯಬಹುದು. ಆಗ ಯಾರು ಬೇಕಾದರೂ ಹೋಗಬಹುದು. ಅದಕ್ಕೇನು ಪರ್ಮಿಷನ್ ಬೇಕಾ? ಎಂದು ಚಾಟಿ ಬೀಸಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ಜಾಸ್ತಿ ಜನ ಇರುತ್ತಾರೆ. ಸಮಸ್ಯೆ ಆಗಬಾರದು ಎಂದು ಪ್ರಧಾನಿಗಳೇ ಮನವಿ ಮಾಡಿಕೊಂಡಿದ್ದಾರೆ. ರಾಮನ ಬಗ್ಗೆ ಭಕ್ತಿ ಇರುವವರು, ದೇವರ ಬಗ್ಗೆ ನಂಬಿಕೆ ಇರುವವರು ಅಲ್ಲಿಗೆ ಹೋಗಬಹುದು. ಡಿ.ಕೆ. ಶಿವಕುಮಾರ್ ಮನೆಯಲ್ಲಿ ಬರೀ ದೇವರ ಪೋಟೋಗಳು ಇವೆ. ದೇವರ ರಕ್ಷಣೆ ಇಲ್ಲದೆ ಹೋದರೆ ಅವರು ಉಳಿಯಬೇಕಲ್ಲವಾ? ಅದಕ್ಕೆ ಫೋಟೋಗಳನ್ನು ಹಾಕಿಕೊಂಡಿದ್ದಾರೆ ಕುಮಾರಸ್ವಾಮಿ ಅವರು ಡಿಕೆಶಿ ಅವರಿಗೆ ತಿರುಗೇಟು ನೀಡಿದರು.

ಸುಮಲತಾ ಅವರು ನನಗೇನು ಶತ್ರು ಅಲ್ಲ

ಅಗತ್ಯಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ ಎಂದು ತಾವು ನೀಡಿರುವ ಹೇಳಿಕೆಯ ಬಗ್ಗೆ ಮತ್ತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಸುಮಲತಾ ಅವರು ನನಗೇನು ಶತ್ರು ಅಲ್ಲ. ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನು? ಆ ಹಿನ್ನೆಲೆಯಲ್ಲಿ ಈ ಹೇಳಿಕೆ ಅಷ್ಟೇ ಎಂದರು ಮಾಜಿ ಮುಖ್ಯಮಂತ್ರಿಗಳು.

ಅಯೋಧ್ಯೆಗೆ ದೇವೇಗೌಡರು ಹೋಗುವ ವಿಚಾರ

ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಹೋಗುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಮಾಜಿ ಪ್ರಧಾನಿಗಳ ಆರೋಗ್ಯದ ಪರಿಸ್ಥಿತಿಗಳ ಆಧಾರದ ಮೇಲೆ ಹೋಗುವ ಬಗ್ಗೆ ಮುಂದೆ ನಿರ್ಧಾರ ಮಾಡುತ್ತೇವೆ. ದೇವೇಗೌಡರು ಪ್ರಯಾಣ ಮಾಡುವುದಕ್ಕೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಸಲಹೆ ಏನಿದೆ, ಅದರ ಮೇಲೆ ಹೋಗಬೇಕಾ? ಬೇಡವಾ ಅಂತ ತೀರ್ಮಾನ ಮಾಡುತ್ತೇವೆ ಎಂದರು ಅವರು.

ಮಾಜಿ ಸಚಿವ ಬಂಡೆಪ್ಪ ಕಾಶೇಂಪೂರ್, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್. ಎಂ. ರಮೇಶ್ ಗೌಡ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

State

ಗೃಹಲಕ್ಷ್ಮೀ ಯೋಜನೆಯಲ್ಲಿ ಮೋಸ: ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಸಿ.ಟಿ.ರವಿ

Published

on

ಬೆಳಗಾವಿ:  ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ   ಫೆಬ್ರವರಿ, ಮಾರ್ಚ್ ತಿಂಗಳ ಹಣವನ್ಜು ಫಲಾನುಭವಿಗಳಿಗೆ ಹಾಕಿಲ್ಲ. ಹಾಗಾಗಿ ರಾಜ್ಯದ ಮಹಿಳೆಯರಿಗೆ ಮೋಸ ಮಾಡಲಾಗಿದೆ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ  ನ್ಯಾಯಾಂಗ ತನಿಖೆಯಾಗಬೇಕೆಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಈ ಕುರಿತು  ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮೀ  ಫಲಾನುಭವಿಗಳಿಗೆ ಫೆಬ್ರವರಿ ಮಾರ್ಚ್ ತಿಂಗಳ ಹಣ ಬಂದಿಲ್ಲ ಅಂತಾ ದೂರು ಬಂದಿದೆ.  ಈ ದೂರಿನ ಸತ್ಯಾಸತ್ಯತೆ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ. ನಮ್ಮ ಶಾಸಕ ಸುಳ್ಳು ಹೇಳುತ್ತಿದ್ದಾರೋ ಅಥವಾ ಸಚಿವರು ಸುಳ್ಳು ಹೇಳುತ್ತಿದ್ದಾರೋ ಎಂಬುದು ನ್ಯಾಯಾಂಗ ತನಿಖೆಯಾದರೆ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಎರಡು ತಿಂಗಳ ಹಣ ನೀಡಿದ್ದರೆ ಫಲಾನುಭವಿಗಳ ಖಾತೆಗೆ ಬಂದಿದೆಯಾ ಅಥವಾ ನಕಲಿ ಖಾತೆಗೆ ಹೋಗುತ್ತಿದೆಯಾ ಎಂಬುದು ತನಿಖೆಯಾಗಲಿ.  ಎಲ್ಲವೂ ಹೊರಗೆ ಬರಬೇಕು ಅಂದರೆ ನ್ಯಾಯಾಂಗ ತನಿಖೆಯಾಗಬೇಕು ಎಂದು  ಒತ್ತಾಯಿಸಿದ್ದಾರೆ.

Continue Reading

State

ಶೀಘ್ರವೇ ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್‌ಗೆ ತ್ವರಿತ ಪರಿಹಾರ: ಕೃಷ್ಣ ಬೈರೇಗೌಡ

Published

on

ಬೆಳಗಾವಿ: ರಾಜ್ಯದಲ್ಲಿ ಶೀಘ್ರವೇ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ರಾಜ್ಯದ ಜನತೆಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ  ತಿಳಿಸಿದ್ದಾರೆ.

 

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ವಿಧಾನ ಪರಿಷತ್ತಿನ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಮತ್ತು ದಾನಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್‌ಟಿಸಿ, ಮೋಜಿಣಿ ನಕ್ಷೆ, ಇ-ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್‌ಎಮ್‌ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನಪತ್ರಗಳು ನೋಂದಣಿ ಆಗಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ವೇಳೆ ಸರ್ಕಾರದ ಉಪವಿಭಾಗಾಧಿಕಾರಿಗಳ ಎಸಿ ಕೋರ್ಟ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರವೂ ಶೇ.80ರಷ್ಟು ಇತ್ಯರ್ಥಗೊಳಿಸಿದ್ದು, ಇನ್ನುಳಿದ ಬಾಕಿ ಪ್ರಕರಣಗಳನ್ನು ಕೂಡ ಇತ್ಯರ್ಥಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ರಾಮೋಜಿ ಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅಧಿಕ ಪ್ರಕರಣಗಳು ಬಾಕಿಯಿರುವ ಜಿಲ್ಲೆಗಳಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಮೇಲ್ಮನವಿ ಪ್ರಕರಣಗಳನ್ನು ಉಪವಿಭಾಗಾಧಿಕಾರಿ ವೃಂದಕ್ಕೆ ಸಮಾನಾಂತರ ವೃಂದದ ಇತರೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿಗಳಿಗೆ ಕಾರ್ಯಹಂಚಿಕೆ ಮಾಡಿ ಸರ್ಕಾರವೂ ಆದೇಶಿಸಿದೆ ಎಂದು ಹೇಳಿದ್ದಾರೆ.

ಕಂದಾಯ ನ್ಯಾಯಲಯಗಳ ನಿರ್ವಹಣೆಯಲ್ಲಿ ಪಾರದರ್ಶಕತೆ, ದಕ್ಷತೆ, ಸಕಾಲಿಕ ವಿಲೇವಾರಿ ಮತ್ತು ಲಭ್ಯತೆಯ ಹಿತದೃಷ್ಟಿಯಿಂದ ಡಿಜಿಟಲ್ ಸಹಿ ಅಥವಾ ಸಮಾನವಾದ ಕಾನೂನು ಬದ್ಧವಾಗಿ ಗುರುತಿಸಲ್ಪಟ್ಟ ಎಲೆಕ್ಟ್ರಾನಿಕ್ ವಿಧಾನಗಳಿಂದ ದೃಢೀಕರಣ ಮಾಡಲಾಗುತ್ತದೆ. ಅಲ್ಲದೇ ಕೇಂದ್ರೀಕೃತ ವೇದಿಕೆಯ ಮೂಲಕ ಅಂತಹ ಎಲ್ಲಾ ಎರಡು ಪ್ರಕ್ರಿಯೆಗಳ ಆನ್‌ಲೈನ್ ಫೈಲಿಂಗ್ ಮತ್ತು ಎಲೆಕ್ಟ್ರಾನಿಕ್ ನಿರ್ವಹಣೆಯನ್ನು ಒದಗಿಸುವುದು ಸೂಕ್ತವೆಂದು ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಕರ್ನಾಟಕ ಕಂದಾಯ ನ್ಯಾಯಾಲಯದ ನಡವಳಿಗಳ ಕುರಿತು (ಆನ್‌ಲೈನ್‌ ಸಲ್ಲಿಕೆ, ದೃಢೀಕರಣ ಮತ್ತು ಡಿಜಿಟಲೀಕರಣ) ಸರ್ಕಾರವು 2025ರ ಆ. 29ರಂದು ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಕಂದಾಯ ನ್ಯಾಯಾಲಯಗಳು ನಿರ್ವಹಣೆಯನ್ನು ಕಡ್ಡಾಯವಾಗಿ ಆರ್‌ಸಿಸಿಎಂಎಸ್ ತಂತ್ರಾಂಶದಲ್ಲಿಯೇ ನಿರ್ದೇಶಿಸಲಾಗಿರುತ್ತದೆ ಎಂದು  ಉತ್ತರಿಸಿದ್ದಾರೆ.

Continue Reading

State

ಹೆಣ್ಣು ಸಿಗದ ಕೃಷಿಕ ಯುವಕರಿಗೆ ಸರ್ಕಾರದಿಂದ 10 ರಿಂದ 25 ಲಕ್ಷ ರೂ. ಸಹಾಯಧನ ನೀಡಬೇಕು: MLC ಪುಟ್ಟಣ್ಣ ಆಗ್ರಹ

Published

on

ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಕೃಷಿ ಮಾಡುತ್ತಿರುವ ಯುವಕರಿಗೆ ಮದುವೆ ಆಗಲು ಹೆಣ್ಣು ಸಿಗುತ್ತಿ;ಲ್ಲ. ಹಾಗಾಗಿ ಸರ್ಕಾರ ಇಂತಹ ಯುವಕರಿಗೆ ವಿಶೇಷ ಯೋಜನೆ ಜಾರಿ ಮಾಡಿ 10 ರಿಂದ 25 ಲಕ್ಷ ರೂ.ವರೆಗೆ ಸಹಾಯಧನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಎಂಎಲ್‌ಸಿ  ಪುಟ್ಟಣ್ಣ ಆಗ್ರಹಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ವಿಧಾನ ಪರಿಷತ್ ಶೂನ್ಯ ವೇಳೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕೃಷಿ ಮಾಡೋ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಸರ್ಕಾರ ಇಂತಹ ಯುವಕರಿಗೆ ಯೋಜನೆ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹೆಣ್ಣುಮಕ್ಕಳು ಸಿಗದೇ ತಾಲೂಕಿಗೊಂದು ಮಠ ಕಟ್ಟಿಕೊಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಯುವಕರ ಮಧ್ಯೆ ಚರ್ಚೆ ಆಗುತ್ತಿದೆ. ಮದುವೆ ಆಗದ ಯುವಕರು ದೇವಾಲಯಗಳಿಗೆ ಪಾದಯಾತ್ರೆ ಹೋಗುತ್ತಾ ಇದ್ದಾರೆ. ಕೃಷಿ ಮಾಡೋ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಇದು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದೆ ಎಂದು ಹೇಳಿದ್ದಾರೆ.

ಸರ್ಕಾರ ಗ್ರಾಮೀಣ ಭಾಗದಲ್ಲಿ ಕೃಷಿ ಮಾಡೋ ಯುವಕರಿಗೆ ವಿಶೇಷ ಯೋಜನೆ ರೂಪಿಸಬೇಕು. ಕನಿಷ್ಠ 10 ರಿಂದ 25 ಲಕ್ಷ ರೂ. ಮದುವೆ ಆಗದ ಯುವಕರಿಗೆ ಸರ್ಕಾರ ಸಹಾಯಧನ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

ಇದಕ್ಕೆ ಸಭಾನಾಯಕ ಬೋಸರಾಜು ಸಿಎಂ ಅವರಿಂದ ಉತ್ತರ ಕೊಡಿಸುವ ಭರವಸೆ ನೀಡಿದ್ದಾರೆ.

Continue Reading

Trending

error: Content is protected !!