Politics
ಬಿಜೆಪಿ ಸೇರ್ಪಡೆ ವಿಚಾರ- ಬಿಗ್ ಅಪ್ಡೇಟ್ ಕೊಟ್ಟ ಲಕ್ಷ್ಮಣ ಸವದಿ !!
Lakshmana savadi: ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ(Lakshmana savadi)ಯವರು ಮರಳಿ ಬಿಜೆಪಿ ಸೇರುತ್ತಾರೆ, ಲೋಕಸಭಾ ಟಿಕೆಟ್ ಪಡೆದು ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ಸೇರ್ಪಡೆ ಕುರಿತು ಸವದಿಯವರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ, ಅದು ಮುಗಿದ ಅಧ್ಯಾಯ ಎಂದಿದ್ದಾರೆ.

ಹೌದು, ನವದೆಹಲಿ(New Delhi)ಯಲ್ಲೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡುವಾಗ ಬಿಜೆಪಿ ನನ್ನ ಪಾಲಿಗೆ ಮುಗಿದ ಅಧ್ಯಾಯವಾಗಿದೆ. ಈಗ ಅವರಿಗೆ ನಾನು ಬೇಕಾಗಿರಬಹುದು. ಆದರೆ ನಾನು ಹೋಗುವುದಿಲ್ಲ. ಅವರು ನನ್ನನ್ನು ನಡೆಸಿಕೊಂಡ ರೀತಿಗೆ ನಾನು ಬಿಜೆಪಿಗೆ ಹಿಂದಿರುಗಿ ಹೋಗಲ್ಲ ಬಿಜೆಪಿ ಗಾಳಕ್ಕೆ ಬೀಳುವ ಆಸಾಮಿ ನಾನಲ್ಲ. ಕಾಂಗ್ರೆಸ್ ನನ್ನನ್ನು ಗೌರವದಿಂದ ಬರ ಮಾಡಿಕೊಂಡಿದೆ. ನನಗೆ ಆಶ್ರಯ ನೀಡಿದೆ . ನಾನು ಬಿಜೆಪಿ(BJP)ಗೆ ಹೋಗೋನಿದ್ದರೆ ಯಾಕೆ ಈ ಪ್ರತಿಭಟನೆಗೆ ಬರಬೇಕಿತ್ತು. ಬಿಜೆಪಿ ಮುಗಿದ ಅಧ್ಯಾಯ. ಅದರ ಬಗ್ಗೆ ಇನ್ನು ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಅಂದಹಾಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ(Lakshmana savadi) ಬಿಜೆಪಿ ತೊರೆದು ಕಾಂಗ್ರೆಸ್ ತೊರೆದಿದ್ದರು. ಆದರೆ ಅಚ್ಚರಿ ಎಂಬಂತೆ ಕೆಲವು ದಿನಗಳ ಹಿಂದಷ್ಟೇ ಜಗದೀಶ್ ಶೆಟ್ಟರ್(Jagadish shetter) ಮರಳಿ ಬಿಜೆಪಿ ಸೇರಿ ಮತ್ತೆ ತಮ್ಮ ಮನೆ ಸೇರಿಕೊಂಡರು. ಈ ಬೆನ್ನಲ್ಲೇ ಸವದಿ ಕೂಡ ಮರಳುತ್ತಾರೆ ಎಂಬ ಚರ್ಚೆ ಜೋರಾಗಿದ. ಆದರೆ ಸವದಿ ಈ ವಿಚಾರವನ್ನು ತಳ್ಳಿಹಾಕಿದ್ದಾರೆ. ಜಗದೀಶ್ ಶೆಟ್ಟರ್ ಕೂಡ ಹೀಗೆ ಹೇಳುತ್ತಲೇ ಸಡನ್ ಆಗಿ ಘರ್ ವಾಪ್ಸಿ ಆದರು. ಸವದಿಯವರೂ ಹೀಗೆ ಆದರೂ ಅಚ್ಚರಿ ಏನಿಲ್ಲ. ರಾಜಕೀಯ ಆಟ ಬಲ್ಲವರಾರು ಅಲ್ಲವೇ?
National
ರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯದ ಬಗ್ಗೆ ಪುನಃ ಧ್ವನಿ ಎತ್ತಿದ ಮಾಜಿ ಪ್ರಧಾನಿ ಎಚ್‌ಡಿಡಿ
ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಮೂರು ಪ್ರಮುಖ ಬಂದರುಗಳನ್ನು ಜೋಡಿಸುವ ಬೆಂಗಳೂರಿನಿಂದ – ಮಂಗಳೂರಿನವರೆಗೆ ಕೈಗಾರಿಕಾ ಕಾರಿಡಾರ್ ವಿಸ್ತರಣೆ ಮತ್ತು ಹಲಸು, ಹುಣಸೆ, ನೇರಳೆ ಮಂಡಳಿ ರಚನೆ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈಗಾಗಲೇ ಚೆನ್ನೈನಿಂದ ಬೆಂಗಳೂರು ಮತ್ತು ಹೈದರಾಬಾದ್‌ನಿಂದ ಬೆಂಗಳೂರು ನಡುವಿನ ಪ್ರಮುಖ ಬಂದರುಗಳನ್ನು ಹೊಂದಿರುವ ಕೈಗಾರಿಕಾ ಕಾರಿಡಾರ್ ಯೋಜನೆಗಳಿಗೆ ಅನುಮೋದನೆ ನೀಡುವ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಅದೇ ರೀತಿ, ಬೆಂಗಳೂರಿನಿಂದ ಮಂಗಳೂರಿನವರೆಗೆ ಈ ಕೈಗಾರಿಕಾ ಕಾರಿಡಾರ್ ವಿಸ್ತರಿಸಿದರೆ ಕೈಗಾರಿಕಾ ಅಭಿವೃದ್ಧಿಗೆ ಬಹಳಷ್ಟು ಅನುಕೂಲ ಆಗುತ್ತದೆ. ಮಂಗಳೂರು ಸಹ ಮುಖ್ಯ ಬಂದರು ಆಗಿದೆ. ಅಲ್ಲದೇ ವಿಶಾಖಪಟ್ಟಣ, ಚೆನ್ನೈ ಮತ್ತು ಮಂಗಳೂರು ಬಂದರುಗಳನ್ನು ಜೋಡಿಸಿದರೆ ರಾಷ್ಟ್ರದ ಕೈಗಾರಿಕಾಭಿವೃದ್ಧಿಗೆ ಪರಿವರ್ತನಾತ್ಮಕ ವೇಗ ಬರುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕವೂ ಸೇರಿ ತಮಿಳುನಾಡು, ಕೇರಳ ಮುಂತಾದ ರಾಜ್ಯಗಳಲ್ಲಿ ಬೆಳೆಯಲಾಗುವ ಹಲಸು, ಹುಣಸೆ, ನೇರಳೆಗೆ ಉತ್ತೇಜನ ನೀಡಲು ಮಕಾನ ಮಂಡಳಿಯಂತೆ ಪ್ರತ್ಯೇಕ ಮಂಡಳಿಯನ್ನು ರಚನೆ ಮಾಡಬೇಕು. ಈ ಮೂರು ಬೆಳೆಗಳು ಔಷಧೀಯ ಗುಣಗಳನ್ನು ಹೊಂದಿದ್ದು, ದಕ್ಷಿಣದ ಭಾಗದಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತಿದೆ. ಕಡಿಮೆ ಮಳೆ ಅಗತ್ಯವಿರುವ ಬೆಳೆಗಳು ಎಂದು ಮಾಜಿ ಪ್ರಧಾನಿ ದೇವೇಗೌಡರು ಮನವಿ ಮಾಡಿದ್ದಾರೆ.

ಈ ಕುರಿತು ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಮಂಡಳಿ ರಚನೆ ಬಗ್ಗೆ ಕ್ರಮ ವಹಿಸುತ್ತಾರೆ ಎಂಬ ನಂಬಿಕೆ ಹೊಂದಿದ್ದೇನೆ ಎಂದು ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಬಜೆಟ್ ಅನ್ನು ಎನ್ಡಿಎ ಮೈತ್ರಿಪಕ್ಷವಾಗಿ ಮುಕ್ತ ಕಂಠದಿಂದ ಸ್ವಾಗತಿಸಿವೆ ಎಚ್‌ಡಿಡಿ
ಬಜೆಟ್ನಲ್ಲಿ ಅಡಗಿರುವ ಹಲವು ಉತ್ತಮ ಅಂಶಗಳನ್ನು ಪಟ್ಟಿ ಮಾಡಿದ್ದು, ಉತ್ಪಾದನೆ, ಎಂಎಸ್ಎಂಇಗಳು, ಕೈಗಾರಿಕಾ ಮೂಲಸೌಕರ್ಯ ಮತ್ತು ರಫ್ತು ವಹಿವಾಟಿಗೆ ಉತ್ತೇಜನ ನೀಡುವುದು ಸೇರಿದಂತೆ ಅನಿಶ್ಚಿತತೆಯನ್ನು ಕಡಿಮೆ ಮಾಡುವ ಹಾಗೂ ದೀರ್ಘಾವಧಿಯ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶವನ್ನು ಮುಂಗಡಪತ್ರದಲ್ಲಿ ಒತ್ತಿ ಹೇಳಲಾಗಿದೆ. ಇದು ಜಾಗತಿಕ ಮೌಲಿಕ ಸರಪಳಿಗಳಲ್ಲಿ ಭಾರತದ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ದೃಷ್ಟಿಕೋನವನ್ನು ದೃಢವಾಗಿ ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲ ಆಗುವಂತೆ ತೆರಿಗೆ ವ್ಯವಸ್ಥೆಯಲ್ಲಿ ಸರಳೀಕರಣ ಮಾಡಿರುವುದು ಸ್ವಾಗತಾರ್ಹ. ತೆರಿಗೆದಾರರ ವಿಶ್ವಾಸವು ಅಷ್ಟೇ ಮುಖ್ಯವಾಗಿದೆ. ಸರ್ಕಾರವೂ ಕರ್ನಾಟಕದ ಕರಾವಳಿ ಸೇರಿ ಇತರ ಪ್ರದೇಶಗಳಲ್ಲಿ ಯಥೇಚ್ಛವಾಗಿ ಬೆಳೆಯಲಾಗುವ ತೆಂಗಿನಕಾಯಿ, ಶ್ರೀಗಂಧ, ಕೋಕೋ ಹಾಗೂ ಗೋಡಂಬಿಯಂತಹ ವಾಣಿಜ್ಯ ಬೆಳೆಗಳಿಗೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ನೀಡಿರುವುದು ಉತ್ತಮವಾದ ಹೆಜ್ಜೆ ಎಂದಿದ್ದಾರೆ.
ತೆಂಗು ಕಲ್ಪವೃಕ್ಷ ಎಂದು ಜನಪ್ರಿಯವಾಗಿದೆ. ಇದು ಎಲ್ಲಾ ವಯಸ್ಸಿನ ಜನರಿಗೆ ಬಹುವಿಧದಲ್ಲಿ ಆರೋಗ್ಯ ಪ್ರಯೋಜನಗಳೊಂದಿಗೆ ಪೋಷಣೆ ಒದಗಿಸುತ್ತದೆ. ಹೆಚ್ಚಿನ ಪ್ರದೇಶಗಳಲ್ಲಿ ತೆಂಗು ಜೀವನಾಡಿಯಾಗಿದೆ. ಕೃಷಿಗೆ ಉತ್ತಮ ಬೆಂಬಲ ಕೊಡಲಾಗಿದೆ. ಒಟ್ಟು ಬಜೆಟ್ ನಲ್ಲಿ ಒಟ್ಟು ಬಜೆಟ್ನ ಶೇ. 3% ರಷ್ಟು ಹಂಚಿಕೆ ನೀಡಲಾಗಿದ್ದು, ಈ ಪ್ರಮಾಣವನ್ನು ಶೇ.5% ಗೆ ಕೃಷಿ ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.
National
ಕೆಪಿಎಸ್ ಶಾಲೆ ತೆರೆಯುವ ಮೂಲಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ: ಬಸವರಾಜ ಬೊಮ್ಮಾಯಿ
ನವದೆಹಲಿ: ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್ ಯೋಜನೆ ಜಾರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಸರ್ಕಾರದ ಈ ನಿರ್ಧಾರ ಖಂಡನೀಯ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದ್ದು, ಸರ್ಕಾರದ ನಡೆ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಶಿಕ್ಷಕರ ನೇಮಕಾತಿ ಹಾಗೂ ಶಿಕ್ಷಕರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ..
Politics
ಶೀಘ್ರದಲ್ಲಿಯೇ ಬಜೆಟ್ ದಿನಾಂಕ ನಿಗದಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಬಜೆಟ್ ದಿನಾಂಕವನ್ನು ಶೀಘ್ರದಲ್ಲಿಯೇ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಂಎಲ್‌ಎಗಳು ಮತ್ತು ಎಂಎಲ್‌ಸಿಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಪತ್ರಕರ್ತರು ಪದೇ ಪದೇ ಒಂದೇ ವಿಚಾರವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ನಿರ್ಧರಿಸಿದರೆ ಅದರಂತೆ ನಾನು ಹಾಗೂ ಡಿಸಿಎಂಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
-
Mandya20 hours agoನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ : ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿ ಬಿಡುವುದು ಸಂಪೂರ್ಣ ನಿಷೇಧ – ಡಿಸಿ
-
Special12 hours agoಉಚಿತ PSI ಕೋಚಿಂಗ್: ಪರೀಕ್ಷೆ ಇಲ್ಲದೆ ಆಯ್ಕೆ!!
-
State13 hours agoಲೈಂಗಿಕ ದೌರ್ಜನ್ಯ ಕೇಸ್: ಮಂಡ್ಯ ರಮೇಶ್, ಸಾಧು ಕೋಕಿಲ ವಿರುದ್ದದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್
-
Hassan14 hours agoಗೋಮಾತೆ ಎಂದಿಗೂ ಕೈ ಬಿಡುವುದಿಲ್ಲ: ಸದಾಶಿವ ಶಿವಾಚಾರ್ಯ ಸ್ವಾಮೀಜಿ
-
Mysore24 hours agoಯಾತ್ರಿಕರಿಂದ ಮಹದೇಶ್ವರ ಬೆಟ್ಟದ ಸ್ವಚ್ಛತೆಗೆ ಧಕ್ಕೆ ಆಗದಂತೆ ಕ್ರಮಕ್ಕೆ ಮನವಿ
-
Chamarajanagar18 hours agoಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರೆಗೆ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧ: ಡಿಸಿ ಆದೇಶ
-
Mandya14 hours agoಮೂಲ ಸೌಕಾರ್ಯಗಳನ್ನು ಕಲ್ಪಿಸುವಂತೆ ಕೆ.ಎಂ.ಉದಯ್ಗೆ ಮನವಿ ಸಲ್ಲಿಸಿದ ಮಹಿಳೆಯರು
-
Mandya16 hours agoಫೆ.15ಕ್ಕೆ ಭೈರವೈಕ್ಯ ಶ್ರೀಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿಯವರ ಅಭಿನಂದನಾ ಗ್ರಂಥ ಲೋಕಾರ್ಪಣೆ : ಬಸವರಾಜ್
