Chamarajanagar
ಬಿಳಿರಂಗನ ಬೆಟ್ಟದಲ್ಲಿ ಸಕಲ ಸಿದ್ಧತೆಗಳೊಂದಿಗೆ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು: ಶಾಸಕ ಎಆರ್ ಕೃಷ್ಣಮೂರ್ತಿ
ಬಿಳಿರಂಗನ ಬೆಟ್ಟದಲ್ಲಿ ಜನವರಿ 16ರಂದು ನಡೆಯುವ ಚಿಕ್ಕ ಜಾತ್ರೆಗೆ ಯಾವುದೇ ಮೂಲಭೂತ ಸೌಲಭ್ಯ ಕಡಿಮೆಯಾಗದಂತೆ ಸಕಲ ಸಿದ್ಧತೆಗಳೊಂದಿಗೆ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಶಾಸಕ ಎಆರ್ ಕೃಷ್ಣಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ತಾಲೂಕಿನ ಬಿಳಿಗಿರಂಗನ ಬೆಟ್ಟದ ರಾಷ್ಟ್ರಪತಿ ಭವನದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ಸಂಕ್ರಾಂತಿ ಚಿಕ್ಕ ಜಾತ್ರಾ ಅಂಗವಾಗಿ ಜಾತ್ರಾ ಸಮಯದಲ್ಲಿ ಯಳಂದೂರು ಪಟ್ಟಣದಿಂದ ಬಿಳಿಗಿರಂಗನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ದ್ವಿಚಕ್ರ ವಾಹನ ಸವಾರರು ಭಕ್ತರು ಸಾರ್ವಜನಿಕರು ಸಾರಿಗೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಜಾತ್ರಾ ಮಹೋತ್ಸವಕ್ಕೆ ಸಹಕಾರ ನೀಡಬೇಕಾಗಿದೆ.
ಜನವರಿ 14 ರಿಂದ 17ರವರೆಗೆ ಯಳಂದೂರು, ಚಾಮರಾಜನಗರ, ಮೈಸೂರು, ಗುಂಡ್ಲುಪೇಟೆ, ಕೊಳ್ಳೆಗಾಲದಿಂದ 60 ಕೆ ಎಸ್ ಆರ್ ಟಿ ಸಿ ಬಸ್ ಬಿಡಲಾಗುವುದು ಎಂದು ಕೆಎಸ್ಆರ್ಟಿಸಿ ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ. ಶಕ್ತಿ ಯೋಜನೆ ಇರುವುದರಿಂದ ಹೆಚ್ಚಾಗಿ ಮಹಿಳೆಯರೇ ಆಗಮಿಸುತ್ತಿದ್ದಾರೆ. ಆದ್ದರಿಂದ ಜನಸಂಖ್ಯೆಗೆ ಅನುಗುಣವಾಗಿ ಒಳ್ಳೆಯ ಗುಣಮಟ್ಟದ ಬಸ್ ಗಳನ್ನು ಬಿಡಬೇಕು ಎಂದು ಶಾಸಕರು ಸೂಚಿಸಿದರು. ರಸ್ತೆಯಲ್ಲಿ ಅಧಿಕ ವಾಹನ ಸಂಚಾರದಿಂದ ಅಪಘಾತಗಳು ಸಂಭವಿಸುವುದನ್ನು ತಪ್ಪಿಸಲು ಗುಂಬಳ್ಳಿ ಅರಣ್ಯ ಇಲಾಖೆ ಚೆಕ್ ಪೋಸ್ಟ್ ನಿಂದ ಬಿಳಿಗಿರಿರಂಗನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳು ತೆರಳದಂತೆ ನಿಷೇಧಿಸಲಾಗಿದೆ, ಕೋವಿಡ್ ಭೀತಿ ಇರುವುದರಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೋವಿಡ್ ನಿಯಮವನ್ನು ಎಲ್ಲರೂ ಪಾಲಿಸಬೇಕು. ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಮುಂಜಾಗ್ರತೆ ಕ್ರಮವಾಗಿ 2 ಕ್ರೈಂ ವ್ಯವಸ್ಥೆ ಮಾಡಲಾಗಿದೆ . ಚೆಕ್ ಪೋಸ್ಟ್ ನಿಂದ ಬಿಳಿಗಿರಂಗನ ಬೆಟ್ಟದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದವರೆಗೂ ರಸ್ತೆ ಎರಡು ಬದಿಯಲ್ಲೂ ಹಳ್ಳಗುಂಡಿ ಬಿದ್ದ ಹಿನ್ನೆಲೆಯಲ್ಲಿ ಎರಡು ಬದಿಗೂ ಮಣ್ಣು ಹಾಕಿಸಿ ದುರಸ್ತಿ ಮಾಡಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನೈರ್ಮಲ್ಯ ಮತ್ತು ಸ್ವಚ್ಛತೆ ಕಾಪಡಲು ತುರ್ತು ಚಿಕಿತ್ಸಾ ವಾಹನ 108 ಆಂಬುಲೆನ್ಸ್ ನಿಯೋಜಿಸುವಂತೆ ಹಾಗೂ ಪಟ್ಟಣ ಸೇರಿದಂತೆ ಬಿಳಿಗಿರಂಗನ ಬೆಟ್ಟಕ್ಕೆ ಜನವರಿ 14 ರಿಂದ 17ರ ವರೆಗೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸೂಚಿಸಿದರು. ಕಳೆದ ಬಾರಿ ಜಾತ್ರಾ ದಿನಗಳಲ್ಲಿ ಕುಡಿಯುವ ನೀರಿಗೆ ತುಂಬಾ ತೊಂದರೆ ಉಂಟಾಗಿತ್ತು ಹಾಗಾಗಿ ಅಂಗಡಿಗಳಲ್ಲಿ ನೀರು ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕರು ಅರಣ್ಯಧಿಕಾರಿಗಳಿಗೆ ತಿಳಿಸಿದರು. ಇವಳ ಅರಣ್ಯ ಅಧಿಕಾರಿಗಳು ಮಾತನಾಡಿ ಎಲಗಡೆ ಬಾಟಲಿ ಎಸೆಯುವುದನ್ನು ತಪ್ಪಿಸುವ ಉದ್ದೇಶದಿಂದ ಎರಡು ಲೀಟರ್ ಮತ್ತು 5 ಲೀಟರ್ ಬಾಟಲಿಗಳನ್ನು ಮಾತ್ರ ಅಂಗಡಿಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ ಪಿ ಪದ್ಮಿನಿ ಸಾಹೋ, ಉಪ ವಿಭಾಗಾಧಿಕಾರಿ ಮಹೇಶ್, ಡಿವೈಎಸ್ಪಿ ಸೋಮೇಗೌಡ, ತಹಶೀಲ್ದಾರ್ ಜಯಪ್ರಕಾಶ್, ಸಿಪಿಐ ಶಿವರಾಜ್ ಮುಧೋಳ್, ತಾಲೂಕು ಪಂಚಾಯಿತಿ ಇ ಓ ಶ್ರೀನಿವಾಸ್, ಬಿಳಿಗಿರಿರಂಗನ ಬೆಟ್ಟ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ್, ಲೋಕೋಪಯೋಗಿ ಇಲಾಖೆ ಪುರುಷೋತ್ತಮ್, ನಿರ್ಮಿತಿ ಕೇಂದ್ರದ ಇಂಜಿನಿಯರ್ ನಂದೀಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರದೀಪ್ ಕುಮಾರ್, ಸದಸ್ಯರುಗಳು, ಪಿಡಿಒ ಲಲಿತಾ , ದೇವಾಲಯ ವ್ಯವಸ್ಥಾಪಕ ರಾಜಣ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು
Chamarajanagar
ಜಿಲ್ಲಾ ಪರಿಶಿಷ್ಟ ಪಂಗಡ ಹಿತರಕ್ಷಣಾ ಸಮಿತಿ ಸಭೆ
ನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿ ಇಂದು ಜಿಲ್ಲಾ ಪರಿಶಿಷ್ಟ ಪಂಗಡ ಹಿತರಕ್ಷಣಾ ಸಮಿತಿ ಸಭೆ ನಡೆಯಿತು.
ಸಮುದಾಯದ ಮುಖಂಡರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಇದೇ ವೇಳೆ ಮುಖಂಡ ಸುರೇಶ್ ನಾಯಕ ಮಾತನಾಡಿ, ಕಾಳನಹುಂಡಿ ರಸ್ತೆಯಲ್ಲಿರುವ ನಾಯಕ ಜನಾಂಗಕ್ಕೆ ಸೇರಿದ ಸ್ಮಶಾನ ಜಾಗವನ್ನು ಖಾತೆ ಮಾಡಿಸಿಕೊಡಬೇಕು. ಅಲ್ಲದೇ ಇಲ್ಲಿ ಬೇರೆ ಜನಾಂಗದವರು ಹೂಳುವುದರಿಂದ ಅವರು ಘೋರಿಗಳನ್ನು ಕಟ್ಟುತ್ತಾರೆ. ಆದ್ದರಿಂದ ಘೋರಿಗಳನ್ನು ಕಟ್ಟದಂತೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ನಗರಸಭೆ ಪೌರಾಯುಕ್ತ ರಾಮದಾಸ್ ಪ್ರತಿಕ್ರಿಯಿಸಿ, ಈಗಾಗಲೇ ಸ್ಮಶಾನಕ್ಕೆ ಅಗತ್ಯವಿರುವ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ. ಉಳಿದ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.
ಸ್ಮಶಾನದಲ್ಲಿ ಘೋರಿಗಳನ್ನು ನಿರ್ಮಿಸದಂತೆ ಬೋರ್ಡ್ ಹಾಕಿ ವರದಿ ಸಲ್ಲಿಸಿ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸೂಚನೆ ನೀಡಿದರು.
ಸಭೆಯಲ್ಲಿ , ಜಿಪಂ ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
Chamarajanagar
ರಾಜ್ಯ ಮಟ್ಟದ ಫೆನ್ಸಿಂಗ್ ಚಾಂಪಿಯನ್ ಶಿಪ್ : ಸಂತೇಮರಹಳ್ಳಿಯ ಕೃತಿಕಾಗೆ ಬೆಳ್ಳಿ ಪದಕ
ಚಾಮರಾಜನಗರ : ಇತ್ತೀಚೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಫೆನ್ಸಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಫೆನ್ಸಿಂಗ್ ಚಾಂಪಿಯನ್ ಶಿಪ್ ನ ಸಬ್ ಜೂನಿಯರ್ ವಿಭಾಗದಲ್ಲಿ ಚಾಮರಾಜನಗರದ ಸಂತೇಮರಹಳ್ಳಿಯ ಖೇಲೋ ಇಂಡಿಯಾ ಸಂಸ್ಥೆಯ ವಿದ್ಯಾರ್ಥಿ ಎನ್.ಕೃತಿಕಾ ಬೆಳ್ಳಿ ಪದಕ ಪಡೆದಿದ್ದಾರೆ.
ಸಂತೇಮರಹಳ್ಳಿಯ ಬಾಲು ಹೋಟೆಲ್ ನ ಬಾಲು ಅವರ ಮೊಮ್ಮಗಳಾದ ಎನ್.ಕೃತಿಕಾ ಬೆಳ್ಳಿ ಪದಕ ಪಡೆದಿದ್ದು ಈ ಭಾರಿಯ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಂಚಿನ ಪದಕ ಕೂಡ ಪಡೆದಿದ್ದಾರೆ.
ಇದೇ ವೇಳೆ ಸಂಸ್ಥೆಯ ತರಬೇತುದಾರರಾದ ಗಜಾನಂದ್ ಹಾಗೂ ಪವನ್ ಅವರು ಅಭಿನಂದಿಸಿದರು.
Chamarajanagar
ಸಿ ಸಿ ರಸ್ತೆ ಮತ್ತು ಸಿ ಸಿ ಚರಂಡಿಗೆ ಸುಮಾರು 85 ಲಕ್ಷ
ಯಳಂದೂರು
ತಾಲೂಕಿನ ವಡಗೆರೆ ಗ್ರಾಮದಲ್ಲಿ ಒಕ್ಕಲಿಗರ ಸಮುದಾಯ ಭವನ ಮತ್ತು ಸಿ ಸಿ ರಸ್ತೆ , ಸಿಸಿ ಚರಂಡಿ ಹಾಗೂ ಪರಿಶಿಷ್ಟ ಜಾತಿ ಬೀದಿಯ ಸಿ ಸಿ ರಸ್ತೆ ಮತ್ತು ಸಿ ಸಿ ಚರಂಡಿಗೆ ಸುಮಾರು 85 ಲಕ್ಷ ಶಾಸಕ ಎ ಆರ್ ಕೃಷ್ಣಮೂರ್ತಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ವಡಗೆರೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಬೀದಿಯ ಸಿ ಸಿ ರಸ್ತೆ ಮತ್ತು ಸಿ ಸಿ ಚರಂಡಿ, ಒಕ್ಕಲಿಗರ ಸಮುದಾಯ ಭವನ ಮತ್ತು ಸಿ ಸಿ ರಸ್ತೆ , ಸಿಸಿ ಚರಂಡಿ ಸುಮಾರು 85 ಲಕ್ಷ ರೂಪಾಯಿ ಅನುದಾನ ಮಾಡಲಾಗಿದೆ ಎಂದು ತಿಳಿಸಿದರು.
ಕೊಳ್ಳೇಗಾಲ ಕ್ಷೇತ್ರದಲ್ಲಿ ಹೆಚ್ಚು ಕೆರೆಕಟ್ಟೆಗಳು ಇದ್ದು ಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆಗಳನ್ನು ಅಭಿವೃದ್ಧಿ ಪಡಿಸಲು ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಜಿಲ್ಲೆಗೆ ಕರೆಸಿ ಸಭೆ ಕರೆದು ಹೆಚ್ಚಿನ ಅನುದಾನಕ್ಕೆ ಮನವಿ ಮಾಡಲಾಗುವುದು.ಮುಖ್ಯಮಂತ್ರಿಗಳ ವಿಶೇಷ ಯೋಜನೆಯಲ್ಲಿ 25 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದರಲ್ಲಿ ಕ್ಷೇತ್ರದ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಸರ್ವ ಧರ್ಮ ಸಮುದಾಯದ ಭವನೆಗಳಿಗೆ ಬಡಾವಣೆಗಳ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್‌ವಿ ಚಂದ್ರು, ಗೌಡಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಎನ್. ಗಾಯತ್ರಿ, ಉಪಾಧ್ಯಕ್ಷೆ ಶ ಎಎಸ್. ಭಾಗ್ಯ ಕೊಳ್ಳೇಗಾಲ ಬ್ಲಾಕ್ ಅಧ್ಯಕ್ಷರಾದ ತೋಟೇಶ್, ಮಾಜಿ ಜಿ.ಪಂ ಉಪಾಧ್ಯಕ್ಷರಾದ ಜೆ. ಯೋಗೇಶ್, ಮಾಜಿ ಜಿ.ಪಂ ಸದಸ್ಯರಾದ ವಡಗೆರೆ ದಾಸ್, ಚಾಮುಲ್ ನಾಮನಿರ್ದೇಶಿತ ಸದಸ್ಯರಾದ ಕಮರವಾಡಿ ರೇವಣ್ಣ, ಯುವ ಕಾಂಗ್ರೆಸ್ ಮುಖಂಡರಾದ ಸಿ. ಯೋಗೇಂದ್ರ, ಕಂದಹಳ್ಳಿ ನಂಜುಂಡಸ್ವಾಮಿ, ಬಗರ್ ಹುಕಂ ಸಾಗುವಳಿ ಸದಸ್ಯರಾದ ಗಣಿಗನೂರು ಬಂಗರಸ್ವಾಮಿ ಡಿಸಿಸಿ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ವಿಶ್ವ ಗಣಿಗನೂರು, ಸಂತೇಮರಹಳ್ಳಿ ಪಸಿ, ಗೌಡಹಳ್ಳಿ ಗ್ರಾ.ಪಂ. ಸದಸ್ಯರುಗಳು, ವಡಗೆರೆ ಗ್ರಾಮದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು
-
Mysore6 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State9 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State9 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health9 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan6 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized5 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized11 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State9 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.