Connect with us

Chikmagalur

ಬೇಸತ್ತ ಜನ ಕಾಂಗ್ರೆಸ್‍ನತ್ತ ಮುಖ – ಉತ್ತಮವಾದ ಬೆಳವಣಿಗೆ : ಡಾ.ಕೆ.ಪಿ.ಅಂಶುಮಂತ್

Published

on

ಚಿಕ್ಕಮಗಳೂರು : ಬಿಜೆಪಿ ಜನ ವಿರೋಧಿ ನೀತಿಯಿಂದ ಬೇಸತ್ತ ಜನರು ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡುತ್ತಿರುವುದು ಉತ್ತಮವಾದ ಬೆಳವಣಿಗೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹೇಳಿದರು.
ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದ ಮುಖಂಡರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ಶಾಲನ್ನು ಹಾಕುವ
ಮೂಲಕ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ನಿಂತ ನೀರಾಗದೆ ಹರಿಯುವ ನೀರಾಗಬೇಕು. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ಬಲ
ಬಂದಿದೆ. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿದ್ದು, ಮುಂದೆ ನಡೆಯುವ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ಏಳಿಗೆಗೆ ಎಲ್ಲರೂ ಪಣ ತೊಡಬೇಕೆಂದು ಕಿವಿ ಮಾತು ಹೇಳಿದರು.
ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಿಸಿದಂತೆ ಗ್ಯಾರಂಟಿಗಳನ್ನು ಕಾರ್ಯಗತ ಮಾಡುತ್ತಿದ್ದರೂ ಸಹ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುವುದರ ಜೊತೆಗೆ ಜನ ಸಾಮಾನ್ಯರ ಬದುಕಿನಲ್ಲಿ
ಚೆಲ್ಲಾಟವಾಡುವುದನ್ನು ನಿತ್ಯ ಕಾಯಕವಾಗಿ ಮಾಡಿಕೊಂಡಿದೆ ಎಂದರು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಬೇಸತ್ತು ಬಿಜೆಪಿ ಪಕ್ಷವನ್ನು ದೂರ ಮಾಡಿದ್ದರೂ ಸಹ ಅಧಿಕಾರದ ಅಹಂ ಅವರಿಗೆ ಇನ್ನೂ ಕಡಿಮೆಯಾಗಿಲ್ಲ. ಇಂದು ಕಾಂಗ್ರೆಸ್‍ನ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆ
ಬೆಂಗಳೂರಿನಲ್ಲಿ ಜಾರಿಗೊಳ್ಳಲಿದೆ ಎಂದು ತಿಳಿಸಿದರು. ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್
ಪಕ್ಷ ಅಧಿಕಾರ ಹಿಡಿಯಲಿದ್ದು, ಎಲ್ಲರೂ ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಜನಸಾಮಾನ್ಯರಿಗೆ ಮನಮುಟ್ಟುವಂತೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು. ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ರಾಜ್ಯದಲ್ಲಿ
ಜನಸಾಮಾನ್ಯರ ಬದುಕನ್ನು ಹಸನು ಮಾಡಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಕ್ಷ ಘೋಷಿಸಿರುವ ಯೋಜನೆಗಳನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಹಕಾರ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಆಲ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಮುದಾಬೀರ್, ಅಂಬಳೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಆರ್.ಎಂ.ಬಸವರಾಜು, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ರಸೂಲ್‍ಖಾನ್, ಆಲ್ದೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿರೂಪಾಕ್ಷ, ಮುಖಂಡರಾದ ಲಕ್ಷ್ಮಣ್, ಧರ್ಮಪಾಲ್, ಕೆ.ಎಸ್.ಪ್ರಕಾಶ್ ಸೇರಿದಂತೆ ಮರ್ಲೆ
ಮತ್ತು ನಾಗರಹಳ್ಳಿ ಗ್ರಾಮದ ಮುಖಂಡರು ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Chikmagalur

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ

Published

on

ಚಿಕ್ಕಮಗಳೂರು : ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ

ನಾಯಿ ಮಾಲೀಕರ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆಯವರು

ಸಾಕಿದ ನಾಯಿ ಬೊಗಳಿದ್ದಕ್ಕೆ ಯಜಮಾನ ಸುಂದರನಿಂದ ನಾಯಿಗೆ ಬೈಗುಳ

ನಮಗೆ ಬೈಯುತ್ತಿದ್ದಾನೆ ಎಂದು ತಿಳಿದು ಆಸಿಡ್ ದಾಳಿ

ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ಘಟನೆ

ಸುಂದರ್ ರಾಜ್ ಎಂಬುವರ ಮೇಲೆ ಆಸಿಡ್ ದಾಳಿ

ಆಸಿಡ್ ದಾಳಿಗೊಳಗಾದ ಬಳಿಕ ಸುಂದರರಾಜ್ ಪರಿಸ್ಥಿತಿ ಗಂಭೀರ

ಎಡಗಣ್ಣಿಗೆ ಗಂಭೀರ ಗಾಯ, ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚನೆ

ಗಾಯಾಳು ಸುಂದರ್ ರಾಜ್ ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲು

ಜೇಮ್ಸ್, ಸುಂದರ್ ರಾಜ್ ಮೇಲೆ ಆಸಿಡ್ ದಾಳಿದ ವ್ಯಕ್ತಿ

ನಾಯಿ ಹೆಸರಿನಲ್ಲಿ ಜೇಮ್ಸ್ ಗೆ ಬೈಯುತ್ತಿರುವ ಆರೋಪ

ಸುಂದರಾಜ್ ಮೇಲಿನ ಸಿಟ್ಟಿನಿಂದ ಆಸಿಡ್ ನಿಂದ ದಾಳಿ ಮಾಡಿದ ಜೇಮ್ಸ್

ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲು

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು

Continue Reading

Chikmagalur

ಚಿಕ್ಕಮಗಳೂರು ನಗರ ವ್ಯಾಪ್ತಿಯ ಎಲ್ಲ ಠಾಣೆಯ ಸಿಬ್ಬಂದಿಗಳಿಂದ ಠಾಣೆಯಲ್ಲೇ ಮಾಹಿತಿ ಪಡೆಯಲಾಗುವುದು : ಐಜಿಪಿ ಚಂದ್ರಗುಪ್ತ

Published

on

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಎಸ್ ಪಿ ವರದಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳಿಗೆ ಯಾವ ರೀತಿ ಸಮಸ್ಯೆಯಾಗುತ್ತಿದೆ ಎಂಬ ಬಗ್ಗೆ ಎಲ್ಲಾ ಸಿಬ್ಬಂದಿಗಳ ಜೊತೆ ಠಾಣೆಗಳಲ್ಲಿಯೇ ಮಾಹಿತಿ ಪಡೆಯುತ್ತೇವೆ ಎಂದು ಐಜಿಪಿ ಚಂದ್ರಗುಪ್ತ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ನಗರ ವ್ಯಾಪ್ತಿಯ 6 ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಗಳಿಂದ ಈಗಾಗಲೇ ಮಾಹಿತಿ ಪಡೆಯಲಾಗಿದೆ ಎಂದರು.
ಪೊಲೀಸ್ ಇಲಾಖೆಗೆ ಹೆಚ್ಚಿನ ಜವಾಬ್ದಾರಿಯಿದೆ. ನಮ್ಮ ತೊಂದರೆಯ ಜೊತೆಗೆ ಬೇರೆಯವರ ತೊಂದರೆಯನ್ನು ನಾವು ನೋಡಬೇಕಿದೆ. ಹೀಗಾಗಿ ಸಿಬ್ಬಂದಿಗಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದೇವೆ. ಎಲ್ಲರೂ ಅವರವರ ಕೆಲಸ ಮಾಡಿಕೊಂಡು ಹೋದರೆ ಸಮಸ್ಯೆ ಬರುವುದಿಲ್ಲ. ಶನಿವಾರ ನಡೆದ ಘಟನೆಯ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ವಕೀಲರು ಹಾಗೂ ಪೊಲೀಸ್ ಸಿಬ್ಬಂದಿ ಮೇಲಿನ ಕೇಸ್ ಗಳ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Continue Reading

Chikmagalur

ಕೊನೆಗೂ ಪ್ರತಿಭಟನೆ ಕೈಬಿಟ್ಟ ಪೊಲೀಸರು

Published

on

ವಕೀಲರ ಮೇಲೆ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲು

ಚಿಕ್ಕಮಗಳೂರು: ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದ ಪೊಲೀಸರು ಭಾನುವಾರ ಬೆಳಗಿನ ಜಾವ ಪ್ರತಿಭಟನೆ ಕೈಬಿಟ್ಟಿದ್ದಾರೆ.
ಐ ಜಿ ಪಿ ಶನಿವಾರ ರಾತ್ರಿ ಬಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದ ಕೆಲವೇ ಕ್ಷಣಗಳಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ್ದ ಪೊಲೀಸರು ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸಲಾರಂಭಿಸಿದ್ದರು. ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪೊಲೀಸರು ಪ್ರತಿಭಟನೆಗೆ ಸಾಥ್ ನೀಡಿದ್ದರು. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮುಂದುವರಿಸಿದ್ದ ಪೊಲೀಸರು. ಕೊನೆಗೂ ಪೊಲೀಸರ ಬೇಡಿಕೆಗೆ ಸ್ಪಂದಿಸಿದ ಹಿರಿಯ ಅಧಿಕಾರಿಗಳು. ಹೀಗಾಗಿ ಭಾನುವಾರ ಬೆಳಗ್ಗೆ ಐದು ಮೂವತ್ತಕ್ಕೆ ಪ್ರತಿಭಟನೆ ಹಿಂಪಡೆದ ಪೊಲೀಸರು.


ಪೊಲೀಸರ ಪ್ರತಿಭಟನೆ ಹಿನ್ನೆಲೆಯಲ್ಲಿ ವಕೀಲರ ಮೇಲೆ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಗಳು. ಇದರ ಜೊತೆಗೆ ಈಗಾಗಲೇ ಅಮಾನತ್ತಾಗಿರುವ ಪೊಲೀಸರ ಅಮಾನತು ಆದೇಶ ಹಿಂಪಡೆಯಲು ಸಮಯವಕಾಶ ಕೇಳಿದ ಎಸ್ ಪಿ. ಬೆಳಗಿನ ಜಾವ ದೂರವಾಣಿ ಕರೆಯಲ್ಲಿ ಸಿಬ್ಬಂದಿಗಳ ಜೊತೆ ಮಾತನಾಡಿದ ಎಸ್ ಪಿ. ಹೀಗಾಗಿ ಪ್ರತಿಭಟನೆ ಹಿಂಪಡೆದ ಪೊಲೀಸ್ ಸಿಬ್ಬಂದಿಗಳು. ಮಂಗಳವಾರ ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದು ಇಲಾಖೆಗೆ ಸಹಕಾರ ನೀಡಿರುವ ಪೊಲೀಸ್ ಸಿಬ್ಬಂದಿ

Continue Reading

Trending