Hassan
ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ
ಹಾಸನ : ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ
ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಅಡಗೂರು ಗ್ರಾಮದ ಬಳಿ ಇಂದು ಮುಂಜಾನೆ ಘಟನೆ
ಚನ್ನರಾಯಪಟ್ಟಣ್ಣ ತಾಲ್ಲೂಕಿನ ಚಿಕ್ಕತಾರಹಳ್ಳಿ ಗ್ರಾಮದ ಪವನ್ (24), ಟಿ.ನರಸೀಪುರ ಮೂಲದ ಸಂತೋಷ್ (30) ಮೃತರು
ಪವನ್ ಅವರ ಎರಡು ವರ್ಷದ ಮಗುವಿಗೆ ಚೇಳು ಕಡಿದಿತ್ತು

KA-01-ED-1114 ನಂಬರ್‌ನ ಹೀರೋ ಹೋಂಡಾ ಸ್ಲೆಂಡರ್ ಬೈಕ್‌ನಲ್ಲಿ ಪತ್ನಿ ರಂಜಿತಾ, ಎರಡು ವರ್ಷದ ಮಗುವಿನ ಜೊತೆ ಚನ್ನರಾಯಪಟ್ಟಣದ ಆಸ್ಪತ್ರೆಗೆ ತೆರಳಿ ಚಿಕ್ಕತಾರಹಳ್ಳಿ ಗ್ರಾಮಕ್ಕೆ ವಾಪಾಸ್ ಆಗುತ್ತಿದ್ದ ಪವನ್
ತಂಗಿಯ ಮದುವೆಯ ಲಗ್ನಪತ್ರಿಕೆ ಕೊಡಲು ಮೈಸೂರು ಕಡೆಯಿಂದ
KA-55-EC-7935 ಹೀರೋ ಹೋಂಡಾ ಸ್ಲೆಂಡರ್ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ಸ್ನೇಹಿತ ದೇವರಾಜು ಜೊತೆ ಬರುತ್ತಿದ್ದ ಸಂತೋಷ್
ಅಡಗೂರು ಬಳಿ ಎರಡು ಬೈಕ್‌ಗಳ ನಡುವೆ ನಡೆದ ಅಪಘಾತ
ಗಾಯಾಳುಗಳಿಗೆ ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Hassan
ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು/ಹಾಸನ: ಹಾಸನ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಎರಡು ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಎರಡೂ ಯೋಜನೆಗಳು ನೀರಾವರಿ ಇಲಾಖೆಯಡಿ ಕೈಗೆತ್ತಿಕೊಳ್ಳಲಾಗಲಿದ್ದು, ಜಿಲ್ಲೆಯ ಬರಪೀಡಿತ ಪ್ರದೇಶಗಳ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶ ಹೊಂದಿವೆ.
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕೆಂಕೆರೆ ಸೇರಿ 20ಕ್ಕೂ ಹೆಚ್ಚು ಕೆರೆಗಳಿಗೆ ಹೇಮಾವತಿ ನದಿಯಿಂದ ಲಿಫ್ಟ್ ನೀರಾವರಿ ಮೂಲಕ ನೀರು ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ವಿಷಯವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದ್ದರು. ಅದರಂತೆ, ಬರಪ್ರದೇಶದ ನೀರಿನ ಸಮಸ್ಯೆ ನಿವಾರಣೆಗೆ 32 ಕೋಟಿ ರೂ. ವೆಚ್ಚದ ಈ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಇನ್ನೊಂದೆಡೆ, ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಲಿಫ್ಟ್ ನೀರಾವರಿ ಯೋಜನೆಯ ಪುನಶ್ಚೇತನಕ್ಕೂ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈಗಿರುವ ಈ ಯೋಜನೆ ನಿರಂತರ ತಾಂತ್ರಿಕ ದೋಷ, ಪಂಪುಗಳ ವೈಫಲ್ಯ, ರೈಜಿಂಗ್ ಮೇನ್ ಹಾಗೂ ಕಾಲುವೆಗಳ ಹಾನಿಯಿಂದ ಬಳಲುತ್ತಿತ್ತು. ಹೀಗಾಗಿ ಹೊಸ ಪಂಪುಗಳು, ಮೋಟಾರ್‌ಗಳು, ಪೈಪ್‌ಲೈನ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 11.50 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಈ ಮೂಲಕ ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಒಟ್ಟಾರೆ 43.50 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದಂತಾಗಿದೆ.

ಹಾಸನ ಜಿಲ್ಲೆಯ ಪರವಾಗಿ, ಜಿಲ್ಲೆಯ ಜನತೆಯ ಅಗತ್ಯಗಳಿಗೆ ಸ್ಪಂದಿಸಿ ಈ ಮಹತ್ವದ ಯೋಜನೆಗಳನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕೃತಜ್ಞತೆ
ಸಲ್ಲಿಸಿದ್ದಾರೆ.
Hassan
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಫೇಸ್ ಬುಕ್ ಹ್ಯಾಕ್
ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಭಾವಚಿತ್ರವಿರುವ ಫೇಸ್ ಬುಕ್ ಐಡಿಯಿಂದ ಸಂದೇಶಗಳು ಬೇರೆಯವರ ಮೊಬೈಲ್‌ಗಳಿಗೆ ರವಾನೆಯಾಗುತ್ತಿರುವುದು ಕಂಡು ಬಂದಿದ್ದು, ಫೇಸ್ ಬುಕ್ ಐಡಿಯಿಂದ ಯಾವುದೇ ಸಂದೇಶ ಜಿಲ್ಲಾಧಿಕಾರಿ ಕಳುಹಿಸುತ್ತಿಲ್ಲ.

ಫೇಸ್ ಬುಕ್ ಐಡಿ ನಕಲಿ ಖಾತೆಯನ್ನು ಬಳಸುತ್ತಿರುವುದು ಕಂಡು ಬಂದಿದೆ. ನಕಲಿ ಖಾತೆಯಿಂದ ಬರುವ ಮೇಸೆಜ್‌ಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಹಾಗೂ ಯಾವುದೇ ದೂರುಗಳು ಇದ್ದರೆ ಕಚೇರಿ ವೇಳೆಯಲ್ಲಿ ಭೇಟಿ ಮಾಡಿ ದೂರು ನೀಡಬಹುದಾಗಿದೆ. ಸೈಬರ್ ಅಪರಾಧದ ಬಗ್ಗೆ ಜಾಗೃತರಾಗುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ.
Hassan
ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ರೈತ ಆತ್ಮಹ*ತ್ಯೆ
ಹಾಸನ : ಜಿಲ್ಲೆಯ, ಚನ್ನರಾಯಪಟ್ಟಣ ತಾಲೂಕಿನ, ಶ್ರವಣಬೆಳಗೊಳ ಹೋಬಳಿ ಕೊತ್ತನಘಟ್ಟ ಗ್ರಾಮದಲ್ಲಿ ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಯೋಗೇಶ್ (50) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ.

ಚನ್ನರಾಯಪಟ್ಟಣದ ಶ್ರೀರಾಮ ಫೈನಾನ್ಸ್‌ನಲ್ಲಿ ಏಳು ಲಕ್ಷ ಸಾಲ ಪಡೆದಿದ್ದ ಯೋಗೇಶ್ ಅವರು ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದರು. ಹೀಗಾಗಿ ಶ್ರೀರಾಮ ಫೈನಾನ್ಸ್‌ನ ಇಬ್ಬರು ಸಿಬ್ಬಂದಿಗಳು ನಿನ್ನೆ ರಾತ್ರಿ ಮನೆಗೆ ಬಂದು ಗಲಾಟೆ ಮಾಡಿ, ಮನೆ ಸೀಜ಼್ ಮಾಡುವುದಾಗಿ ಬೆದರಿಕೆ ಹಾಕಿದ್ದರು.
ಇದರಿಂದ ಮಾನಕ್ಕೆ ಅಂಜಿ ರಾತ್ರಿ ಎರಡು ಗಂಟೆ ಸಮಯದಲ್ಲಿ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನೂ ಫೈನಾನ್ಸ್ ವಿರುದ್ಧ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. . ಈ ಘಟನೆ ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
-
Special9 hours agoಕೊನೆಗೂ ಬಂತು ಯುಪಿಎಸ್ಸಿ ನೇಮಕಾತಿ: 933 ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಸಲ್ಲಿಸುವಿಕೆ ಆರಂಭ!
-
Special19 hours agoBSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Sports6 hours agoWPL Champions| ಸತತ 2ನೇ ಆರ್ಸಿಬಿಗೆ ಚಾಂಪಿಯನ್ ಕಿರೀಟ: RCB ಹ್ಯಾಟ್ರಿಕ್ ಸಾಧನೆ!
-
Mysore10 hours agoಮನರೇಗಾ ಹೆಸರು ಬದಲಾವಣೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
-
Kodagu14 hours agoಫೆ. 7ಕ್ಕೆ ಕೆಎಸ್ಆರ್ಟಿಸಿ ನೂತನ ಬಸ್ಸು ನಿಲ್ದಾಣ ಉದ್ಘಾಟನೆ
-
National17 hours agoಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್
-
National13 hours agoಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಎಚ್ಡಿಕೆ ಮನವಿ: ಅಶ್ವಿನಿ ವೈಷ್ಣವ್ರಿಂದ ಸಕರಾತ್ಮಕ ಪ್ರತಿಕ್ರಿಯೆ
-
Mysore15 hours agoಪಾರಂಪರಿಕ ತಾಣದಲ್ಲಿ ಧೂಮಪಾನ: ಬಿಗ್ಬಾಸ್ ಸ್ಪರ್ಧಿ ರಜತ್ ವಿರುದ್ಧ ದೂರು
