Connect with us

Kodagu

ಮದ್ಯವರ್ಜನ ಶಿಬಿರ ಮುಕ್ತಾಯ ಸಮಾರೋಪ ಕಾರ್ಯಕ್ರಮ

Published

on

ಶನಿವಾರಸಂತೆ : ಮನಪರಿರ್ವನೆ ಮೂಲಕ ಮದ್ಯಪಾನದಂತಹ ದುಶ್ಚಟದಿಂದ ಮುಕ್ತಿ ಹೊಂದಿದ ನಂತರ ದುಶ್ಚಟ ಅಂಟಿಸಿಕೊಳ್ಳುವ ಇತರರ ಮನಪರಿವರ್ತನೆ ಮಾಡಲು ಯತ್ನಿಸಬೇಕು ಎಂದು ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯ ಪಟ್ಟರು.
ಶನಿವಾರಸಂತೆ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಸೋಮವಾರಪೇಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ
ಮಂಡಳಿ, ಬೆಂಗಳೂರು, ಶನಿವಾರಸಂತೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶನಿವಾರಸಂತೆ, ಪ್ರಗತಿಬಂದು ಸ್ವ- ಸಹಾಯ ಸಂಘಗಳ ಒಕ್ಕೂಟ, ಶನಿವಾರಸಂತೆ ಮತ್ತು ವಿವಿಧ ಗ್ರಾ.ಪಂ.ಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ
ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 1687ನೇ ಮದ್ಯವರ್ಜನ ಶಿಬಿರದ ಮುಕ್ತಾಯ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕುಡಿತದ ಚಟದಿಂದ ಸಮಾಜದಲ್ಲಿ ಗೌರವ ಸಿಗುವುದಿಲ್ಲ ಅಷ್ಟೆ ಅಲ್ಲದೆ ಆತನ ಕುಟುಂಬ ಬೀದಿಗೆ ಬರುತ್ತದೆ ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಮದ್ಯವರ್ಜನ ಶಿಬಿರವನ್ನು ಹಮ್ಮಿಕೊಳ್ಳುತ್ತಿರುವ ಮೂಲಕ ಕುಡಿತ
ಚಟಕ್ಕೆ ಒಳಗಾದ ಲಕ್ಷಾಂತರ ಜನರ ಕತ್ತಲೆಯ ಬಾಳಿಗೆ ಬೆಳಕಾಗಿದ್ದಾರೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃಧ್ದಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಎಚ್.ರೋಹಿತ್ ಮಾತನಾಡಿ, ಶಿಬಿರದಲ್ಲಿ ಪಾಲ್ಗೊಂಡು

ಮದ್ಯಪಾನದಿಂದ ಮುಕ್ತಿ ಪಡೆದ ನಂತರ ನವಜೀವನ ನಡೆಸುವ ಫಲಾನುಭವಿಗಳು ಗ್ರಾಮಾಭಿವೃದ್ದಿ ಯೋಜನೆ  ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ನಿರ್ದೇಶಕ ಗಣೇಶ್ ಆಚಾರ್ಯ, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಕ್ಷಿತ್ ಗೌಡ, ಗೌರವ ದಿವಾಕರ್, ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಅಭಿಮನ್ಯುಕುಮಾರ್
ಮಾತನಾಡಿದರು.
ಸಮಾರಂಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ಭಗವಾನ್, ಪ್ರಮುಖರಾದ ಸಿ.ಜೆ.ಗಿರೀಶ್, ಭುವನೇಶ್ವರಿ, ಬಿ.ಬಿ.ನಾಗರಾಜ್, ಎ.ಡಿ.ಮೋಹನ್, ಸುರೇಶ್ ಮಸಗೋಡು, ವಲಯ ಮೇಲ್ವಿಚಾರಕ ನಾಗರಾಜ್, ನವಜೀವನ ಸಮಿತಿ ಸದಸ್ಯರು,
ಧರ್ಮಸ್ಥಳ ಸಂಘದ ಸೇವಾ ನಿರತರು ಹಾಜರಿದ್ದರು. ಶಿಬಿರಾರ್ಥಿಗಳು ಅನಿಸಿಕೆ ಹಂಚಿಕೊಂಡರು.

Continue Reading
Click to comment

Leave a Reply

Your email address will not be published. Required fields are marked *

Kodagu

ಜುಲೈ 16 ರಂದು ಹಳ್ಳಿಗಟ್ಟು ಮಾರಿಗುಡಿ ನಮ್ಮೆ

Published

on

ಪೊನ್ನಂಪೇಟೆ : ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವ ಜುಲೈ -16ರಂದು ಮಂಗಳವಾರ ನಡೆಯಲಿದೆ ಎಂದು ಶ್ರೀ ಗುಂಡಿಯತ್ ಅಯ್ಯಪ್ಪ, ಭದ್ರಕಾಳಿ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿವರ್ಷದಂತೆ ಈ ಬಾರಿಯೂ ಕಕ್ಕಡ ಮಾಸಕ್ಕೆ ಒಂದು ದಿನ ಮುಂಚೆ ನಡೆಯುವ ಮಾರಮ್ಮ ದೇವರ ವಾರ್ಷಿಕ ಹಬ್ಬ “ಮಾರಿಗುಡಿ” ಜುಲೈ -16ರಂದು ಮಂಗಳವಾರ ಬೆಳಿಗ್ಗೆ 9ಗಂಟೆಯಿಂದ ಸಂಜೆ 3-00 ಗಂಟೆಯವರೆಗೆ ನಡೆಯಲಿದ್ದು ಒಂದು ವಾರಗಳ ನಂತರ ಕೊಕ್ಕಡ ಮಾಸದಲ್ಲಿ ನಡೆಯುವ ಮತ್ತೊಂದು ಮಾರಿಗುಡಿ ಹಬ್ಬ ಜುಲೈ-22ನೇ ಸೋಮವಾರ ನಡೆಯಲಿದೆ. ಹರಕೆ ಕಾಣಿಕೆ ಸಲ್ಲಿಸುವವರು ಈ ಎರಡು ದಿನಗಳಲ್ಲಿ ಯಾವ ದಿವಸ ಬೇಕಾದರೂ ಸಲ್ಲಿಸಬಹುದಾಗಿದೆ. ಊರಿನವರು ಮಾತ್ರವಲ್ಲದೆ ಯಾರು ಬೇಕಾದರೂ ಹಬ್ಬದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಜೋಡುಬೀಟಿಯಿಂದ ಮೂಕಳೇರ ಹಾಗೂ ಮಚ್ಚಿಯಂಡ ಬಲ್ಯಮನೆಗೆ ಹೋಗುವ ರಸ್ತೆಯಲ್ಲಿರುವ ಈ ದೇವಸ್ಥಾನಕ್ಕೆ ಪುರಾತನ ಕಾಲದ ಇತಿಹಾಸವಿದ್ದು ವರ್ಷಕ್ಕೆ ಎರಡು ಬಾರಿ ಮಾತ್ರ ಇಲ್ಲಿ ಪೂಜೆ ಪುನಸ್ಕಾರ ಹಾಗೂ ಹಬ್ಬ ನಡೆಯುತ್ತದೆ.


ಮಚ್ಚಿಯಂಡ ಕುಟುಂಬದ ಮುಂದಾಳತ್ವದಲ್ಲಿ ಇಲ್ಲಿ ಹಬ್ಬ ನಡೆಯಲಿದ್ದು, ಈ ಕುಟುಂಬದವರೇ ಇಲ್ಲಿ ಪೂಜಾರಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಇಲ್ಲಿಗೆ ಬ್ರಾಹ್ಮಣರ ಪೂಜೆ ನಿಷೇಧವಾಗಿದ್ದು ಕೊಡವ ಜನಾಂಗದವರೇ ಇಲ್ಲಿ ಪೂಜಾರಿಗಳಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ಚಮ್ಮಟೀರ ಪ್ರವೀಣ್ ಉತ್ತಪ್ಪ, ಅಧ್ಯಕ್ಷರು-9880967573 ಅಥವಾ ಮೂಕಳೇರ ರಮೇಶ್, ಗೌರವ ಕಾರ್ಯದರ್ಶಿ-94838 15430 ಸಂಪರ್ಕಿಸಬಹುದಾಗಿದೆ.

Continue Reading

Kodagu

ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ

Published

on

ಮಡಿಕೇರಿ ಜು.15(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 58.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.87 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1188.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 575.20 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 88.25 ಮಿ.ಮೀ. ಕಳೆದ ವರ್ಷ ಇದೇ ದಿನ 15.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1739.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1089.11 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1221.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 464.71 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.02 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1132.69 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 394.44 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1036.01 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 484.81 ಮಿ.ಮೀ. ಮಳೆಯಾಗಿತ್ತು.


ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 811.20 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 442.95 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 88.80, ನಾಪೋಕ್ಲು 55.20, ಸಂಪಾಜೆ 89, ಭಾಗಮಂಡಲ 120, ವಿರಾಜಪೇಟೆ 48, ಅಮ್ಮತ್ತಿ 48.50, ಹುದಿಕೇರಿ 34, ಶ್ರೀಮಂಗಲ 38, ಪೊನ್ನಂಪೇಟೆ 42, ಬಾಳೆಲೆ 18.09, ಸೋಮವಾರಪೇಟೆ ಕಸಬಾ 94.40, ಶನಿವಾರಸಂತೆ 46, ಶಾಂತಳ್ಳಿ 140, ಕೊಡ್ಲಿಪೇಟೆ 27, ಕುಶಾಲನಗರ 29.60, ಸುಂಟಿಕೊಪ್ಪ 66.20 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (15-07-2024) ವರದಿ
**************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.77 ಅಡಿಗಳು. ಕಳೆದ ವರ್ಷ ಇದೇ ದಿನ 2842.74 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 37.40 ಮಿ.ಮೀ., ಕಳೆದ ವರ್ಷ ಇದೇ ದಿನ 5.60 ಮಿ.ಮೀ., ಇಂದಿನ ನೀರಿನ ಒಳಹರಿವು 8666 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1162 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 5933 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.

Continue Reading

Kodagu

ಭೂಪರಿವರ್ತನೆ ವಿರುದ್ಧ ಜು.15 ರಂದು ಸಿಎನ್‌ಸಿಯಿಂದ ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ

Published

on

ಮಡಿಕೇರಿ : ಸಿದ್ದಾಪುರದ ಭೂತಪೂರ್ವ ಬಿಬಿಟಿಸಿಯ 2400 ಎಕರೆ ಕಾಫಿ ತೋಟಗಳು, ಇದೀಗ ಆರೆಂಜ್ ಕೌಂಟಿ ರೆಸಾರ್ಟ್ ಒಡೆತನದ ಪುನರ್ ನಾಮಕರಣಗೊಂಡ “ರಾಮಪುರಂ ಹೋಲ್ಡ್ಡಿಂಗ್ಸ್ ಇವಾಲ್ವ್ ಬ್ಯಾಕ್ ಎಲ್ಖಿಲ್” ಮತ್ತು ಬೀಟಿಕಾಡ್ ಬ್ಲಾಕ್ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು

ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜು.15 ರಂದು ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಪೊನ್ನಂಪೇಟೆ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹಾಗೂ ಕೊಡವ ಲ್ಯಾಂಡ್ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.


ಆದಿಮ ಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ನ್ನು ಸಂರಕ್ಷಿಸಿಕೊಳ್ಳಲು ಜಿಲ್ಲೆಯಾದ್ಯಂತ ಸಿಎನ್‌ಸಿ ವತಿಯಿಂದ ನಿರಂತರ ಜನಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದು, ಕೊಡವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ರಾಜಕೀಯ ನಂಟು ಮತ್ತು ಕಪ್ಪು ಹಣ ಹೊಂದಿರುವ ಭೂಮಾಫಿಯಾಗಳು, ರೆಸಾರ್ಟ್ ದೊರೆಗಳು, ಕಾರ್ಪೋರೇಟ್ ವಲಯಗಳು, ಬಹುರಾಷ್ಟ್ರೀಯ ಕಂಪೆನಿಗಳು, ಅನಿವಾಸಿ ಭಾರತೀಯ ಉದ್ಯಮಪತಿಗಳು, ಆಂಧ್ರ, ತೆಲಂಗಾಣ, ತಿರುಪತಿ ತಿರುಮಲ ದೇವಸ್ಥಾನದ ಸಾಫ್ಟ್ ಮನಿ ಫಲಾನುಭವಿಗಳು, ವಿಶ್ವದಾದ್ಯಂತ ಇರುವ ಆರ್ಥಿಕ ಅಪರಾಧಿಗಳು ಹಾಗೂ ಕಾಳಸಂತೆಕೋರರು ಕಪ್ಪು ಹಣವನ್ನು

ಬಿಳಿ ಮಾಡಲು ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಡಗಿನಲ್ಲಿ ರೆಸಾರ್ಟ್ ವ್ಯವಹಾರ ದೊಡ್ಡ ಮಟ್ಟದಲ್ಲಿ ನಡೆಯದಿದ್ದರೂ ಕಾಫಿ ತೋಟಗಳ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಮಾಡಲಾಗುತ್ತಿದೆ. ನಷ್ಟವನ್ನು ತೋರಿಸಿ ಕಪ್ಪು ಹಣದ ಚಲಾವಣೆಗೆ ಸಂಚು ರೂಪಿಸಲಾಗುತ್ತಿದೆ. ಭೂಮಾಫಿಯಾಗಳಿಂದ ಕೊಡವ ಲ್ಯಾಂಡ್ ನ ಕಾವೇರಿ ಒಡಲು ನಾಶವಾಗುತ್ತಿದೆ ಎಂದು ನಾಚಪ್ಪ ಆರೋಪಿಸಿದ್ದಾರೆ.
ಪವಿತ್ರ ಕೊಡವ ಲ್ಯಾಂಡ್ ನ್ನು ಸಂರಕ್ಷಿಕೊಳ್ಳಲು ಜನ ಜಾಗೃತಿ ಮತ್ತು ಶಾಂತಿಯುತ ಹೋರಾಟದ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.

Continue Reading

Trending

error: Content is protected !!