Connect with us

Hassan

ಮಧ್ವನವಮಿ ಆರಾಧನಾ, ಭಾವಚಿತ್ರದೊಂದಿಗೆ ಬೆಳ್ಳಿ ಸಾರೋಟದಲ್ಲಿ ಮೆರವಣಿಗೆ

Published

on

ಹಾಸನ: ಶ್ರೀ ಮಧ್ವನವಮಿ ಸ್ವಾಮಿಗಳ ಆರಾಧನಾ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ಮನ್ನದ್ವ ಸಂಘದವತಿಯಿಂದ ಮಧ್ವ ಅವರ ಭಾವಚಿತ್ರದೊಂದಿಗೆ ಬೆಳ್ಳಿ ಸಾರೋಟದೊಂದಿಗೆ ಮೆರವಣಿಗೆ ನಡೆಸಲಾಯಿತು.

ನಗರದ ರವೀಂದ್ರನಗರ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಮಠದ ಮುಂದೆ ಬೆಳ್ಳಿ ಸಾರೋಟದಲ್ಲಿ ಮಧ್ವಾಚಾರ್ಯರ ಭಾವಚಿತ್ರದ ಉತ್ಸವ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಇದೆ ವೇಳೆ ಭಕ್ತರು ದೇವರ ನಾಮಗಳನ್ನು ಹಾಡಿಕೊಂಡು ಭಜನೆ ಪಟಿಸಿದರು. ಇದಕ್ಕೆ ಮೊದಲು ಬೆಳಿಗ್ಗೆ ೭:೩೦ಕ್ಕೆ ಶ್ರೀ ಹರಿವಾಯುಸ್ತುತಿ ಹಾಗೂ ಸುಮಧ್ವವಿಜಯ ಪಾರಾಯಣ ಜರುಗಿತು. ಇದಾದ ನಂತರ ಶ್ರೀ ಮಧ್ವಾಚಾರ್ಯರ ಉತ್ಸವ ಜರುಗಿತು. ಕೊನೆಯಲ್ಲಿ ಭಜನಾ ಕಾರ್ಯಕ್ರಮ ತದನಂತರ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.

ಇದೆ ವೇಳೆ ಮನ್ನದ್ವ ಸಂಘದ ಉಪಾಧ್ಯಕ್ಷ ಎನ್. ಅನಂತಮೂರ್ತಿ ಮಾಧ್ಯಮದೊಂದಿಗೆ ಮಾತನಾಡಿ, ಮಧ್ವಾ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಮಧ್ವಾಚಾರ್ಯರು ಕರ್ನಾಟಕದವರಾಗಿದ್ದು, ಮಧ್ವಾಚಾರ್ಯರು ಉಡುಪಿಯ ಹತ್ತಿರದಲ್ಲಿರುವ ಪಾಜಕ ಗ್ರಾಮದಲ್ಲಿ ತಂದೆ ಮಧ್ಯಗೇಹ ಭಟ್ಟ ಮತ್ತು ತಾಯಿ ವೇದವತಿಗೆ ಜನಿಸಿದರು. ತಂದೆ ತಾಯಿ ವಾಸುದೇವನೆಂದು ಹೆಸರಿಟ್ಟಿದ್ದರು. ಬಾಲ್ಯದಲ್ಲೆ ಅಸಾಧಾರಣ ಪ್ರತಿಭೆ ತೋರಿದ ವಾಸುದೇವ, ತನ್ನ ಹನ್ನೆರಡೆನೆಯ ವಯಸ್ಸಿನಲ್ಲಿ ವಿಧ್ಯಾಭ್ಯಾಸ ಮತ್ತು ವೇದಾಭ್ಯಾಸಗಳೆರಡನ್ನು ಮುಗಿಸಿ ಗುರು ಅಚ್ಯುತ ಪ್ರಜ್ಞ ಸನ್ಯಾಸವನ್ನು ಪಡೆದು ಪೂರ್ಣಪ್ರಜ್ಞರೆಂಬ ಹೆಸರು ಪಡೆದರು. ಅವರ ಅನುಯಾಯಿ ಭಕ್ತರು, ಸರ್ವೊತ್ತಮನಾದ ಶ್ರೀಪತಿಯಾದ ಪರಮಾತ್ಮನ ಅದೇಶವನ್ನು ಪಾಲಿಸಲು ಜೀವೋತ್ತಮನಾದ ಪವಮಾನನು ಶ್ರೀಮದಾನಂದತೀರ್ಥರಾಗಿ ಜನಿಸಿದರು ಎಂದು ಭಾವಿಸುತ್ತಾರೆ. ಶ್ರೀಮದಾಚಾರ್ಯರಿಗೆ ಗುರುಗಳು ವೈದಿಕ ಕ್ರಮದಲ್ಲಿ ಪಟ್ಟಾಭಿಶೇಕ ನೆರವೆರಿಸಿ ಇಟ್ಟ ನಾಮ ಆನಂದತೀರ್ಥ ಎಂದರು. ತಮ್ಮ ಹನ್ನೊಂದನೇ ವರ್ಷದಲ್ಲಿ ಉಡುಪಿಯಲ್ಲಿದ್ದ ಅಚ್ಯುತ ಪ್ರೇಕ್ಷರಿಂದ ಸಂನ್ಯಾಸ ದೀಕ್ಷೆಯನ್ನು ಸ್ವೀಕರಿಸಿದನು. ಅವರು ಅವನಿಗೆ ಸಂನ್ಯಾಸ ದೀಕ್ಷೆ ಕೊಡುವಾಗ ಪೂರ್ಣಪ್ರಜ್ಞರೆಂದು ನಾಮಕರಣ ಮಾಡಿದರು. ಅವರು ಸಂನ್ಯಾಸ ದೀಕ್ಷೆಯನ್ನು ತೆಗೆದುಕೊಂಡ ಒಂದು ತಿಂಗಳ ನಂತರ ಪಂಡಿತೋತ್ತಮರನ್ನು ವೇದಾಂತ ತರ್ಕದಲ್ಲಿ ಸೋಲಿಸಿದರು. ಅದನ್ನು ನೋಡಿ ಅಚ್ಯುತಪ್ರೇಕ್ಷರು ಅವರಿಗೆ ವೇದಾಂತ ಸಾಮ್ರಾಜ್ಯದ ಚಕ್ರವರ್ತಿಯೆಂದು ಹೇಳಿ ಆನಂದತೀರ್ಥ ರೆಂಬ ಬಿರುದನ್ನು ಕೊಟ್ಟರು. ನಂತರ ಅವರು ವೇದದ ಬಲಿಷ್ಟ ಸೂಕ್ತದಲ್ಲಿ ಇರುವ ಮಧ್ವ ಹೆಸರನ್ನು ಆಯ್ದುಕೊಂಡು ಆ ಹೆಸರಿನಲ್ಲಿ ಗ್ರಂಥ ರಚಿಸಿ, ಮಧ್ವಾಚಾರ್ಯರೆಂದು ಪ್ರಸಿದ್ಧರಾದರು. ಅವರು ಪ್ರಚುರಪಡಿಸಿದ ದ್ವೈತ ಸಿದ್ಧಾಂತ ತತ್ವವಾದ ಅಥವಾ ದ್ವೈತ ಮತವೆಂದು ಪ್ರಸಿದ್ಧವಾಗಿದೆ ಎಂದು ಹೇಳಿದರು.

ಮೆರವಣಿಗೆಯಲ್ಲಿ ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಕೆ.ಪಿ.ಎಸ್. ಪ್ರಮೋದ್, ಕಾರ್ಯದರ್ಶಿ ಎನ್. ಸುಧೀಂದ್ರ, ಸಹಕಾರ್ಯದರ್ಶಿ ಆರ್. ಪೂರ್ಣಿಮ ನಾಗರಾಜು, ಖಜಾಂಚಿ ನರಹರಿ ಶೇಷು ನಾಯಿಕ, ದುರ್ಗಾಪ್ರಸಾದ್ ಕೆದಿಲಾಯ, ಎಸ್. ವೆಂಕಟೇಶ್, ಪ್ರಭಂಜನ್, ಬಿ.ವಿ. ಗುರುರಾಜು ರಾವ್, ಮುರುಳೀಧರ್ ಪೂಜಾರ್, ಆರ್. ವಸುಂಧರಾ ಕೇಶವಮೂರ್ತಿ, ಮಮತ ಸುರೇಶ್ ಬಾಬು, ಜಯಂತಿ ಪ್ರಸಾದ್, ವಿ.ಸಿ. ಕವಿತ, ರಾಧಿಕಾ ಮೂರ್ತಿ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಯಾರು ಆತಂಕಪಡಬೇಕಾಗಿಲ್ಲ ಕಾಲವೇ ಉತ್ತರ ಕೊಡಲಿದೆ ಜೆಡಿಎಸ್ ಕಾರ್ಯಕರ್ತರಿಗೆ ದೈರ್ಯ ತುಂಬಿದ ಹೆಚ್.ಡಿ. ರೇವಣ್ಣ

Published

on

ಹಾಸನ : ಯಾರು ಆತಂಕಪಡಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕಾಗುತ್ತದೆ ಅಷ್ಟೇ. ನಮ್ಮ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಲ್ಲಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ದೈರ್ಯ ತುಂಬಿದರು.

ನಗರದ ಕುವೆಂಪು ಬಡಾವಣೆಯಲ್ಲಿರುವ ಡಿ.ಟಿ. ಪರಮೇಶ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡುವುದಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಕೆಲಸ ಮಾಡ್ತಿವಿ, ೪೮ ಗಂಟೆಗಳಲ್ಲಿ ಪ್ರಜ್ವಲ್ ರೇವಣ್ಣ ಬಾ ಎಂಬ ಕುಮಾರಸ್ವಾಮಿ ಮನವಿ ಮಾಡಿದ ವಿಚಾರವಾಗಿ ಮಾತನಾಡಿ, ಕೋರ್ಟ್‌ನಲ್ಲಿ ಕೇಸ್ ಇದ್ದಾಗ ನಾನು ಮಾತನಾಡುವುದಿಲ್ಲ. ಹೇಸಿಗೆಯಂತಹ ವಿಚಾರವವು ರಾಜ್ಯಕ್ಕೆ, ನಮಗೆ ಗೌರವ ತಂದುಕೊಡುವುದಿಲ್ಲ. ಈ ವಿಚಾರವನ್ನು ರಾಜಕೀಯವಾಗಿ ತೆಗದುಕೊಂಡು ಹೋಗಲಾಗುತ್ತಿದೆ. ಈದಕ್ಕೆಲ್ಲಾ ಮೂಲ ಯಾರಿದ್ದಾರೆ ಅವರನ್ನು ಬಂಧಿಸಿ ಶಿಕ್ಷೆ ವಿಧಿಸಲಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿದರು. ತಮ್ಮ ಮೇಲೆ ಎರಡು ಪ್ರಕರಣ ದಾಖಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ರೇವಣ್ಣ ಅವರು, ಯಾರು ಆತಂಕಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕು ಅಷ್ಟೇ. ನಮ್ಮ ಜಿಲ್ಲೆಯ ಜನರನ್ನು ಅರವತ್ತು ವರ್ಷ ದೇವೇಗೌಡರು ಕಾಪಾಡಿದ್ದಾರೆ. ನಾನೀದ್ದೀನಿ, ಎ.ಮಂಜು, ಸ್ವರೂಪ್ ಪ್ರಕಾಶ್ ಇದ್ದಾರೆ. ಕಾರ್ಯಕರ್ತರು ಯಾರು ಭಯಪಡುವ, ಆತಂಕಪಡುವ ಅಗತ್ಯವಿಲ್ಲ. ನನಗೂ ಜಿಲ್ಲೆಯ ಜನ ಇಪ್ಪತ್ತೈದು ವರ್ಷ ಆಶೀರ್ವಾದ ಮಾಡಿದ್ದಾರೆ ಎಂದು ಕಾರ್ಯಕರ್ತರಿಗೆ ದೈರ್ಯ ತುಂಬಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷ ಆಗಿದ್ದು, ಈ ಸರ್ಕಾರದ ವೇಳೆ ಯಾವುದಾದರೂ ರಸ್ತೆ ಗುಂಡಿ ಮುಚ್ಚಿಲ್ಲ. ಶಿಕ್ಷಕರ ಹುದ್ದೆ ಭರ್ತಿ ಮಾಡಿಲ್ಲ. ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿದರು. ರಾಜ್ಯ ಸರ್ಕಾರದ ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ. ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲಾ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಹಾಸನ ಜಿಲ್ಲೆಗೆ ಏನು ಕೊಡುಗೆ ಕೊಡಿಸಿದ್ದಾರೆ ಎಂದು ಪ್ರಶ್ನೆ ಮಾಡಿದರು. ನಮ್ಮ ಆಡಳಿತದಲ್ಲಿ ನಾವು ಶಾಲಾ, ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟು ತೋರಿಸಿದ್ದೇವೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಈ ಬಾರಿ ಹದಿನೈದನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರ ಇದ್ದಾಗ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈ ರೀತಿಯಾಗಲೂ ಕಾರಣ ಯಾರು ಕಾರಣ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರೆ ಅದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾತ್ರ. ಕುಮಾರಸ್ವಾಮಿ ಆಡಳಿತದಲ್ಲಿ ರಾಜ್ಯದಲ್ಲಿ ೧೫೦೦ ಹೈಸ್ಕೂಲ್, ೨೪೦ ಪ್ರಥಮ ದರ್ಜೆ ಕಾಲೇಜು ತೆರೆದರು. ಖಾಲಿ ಇದ್ದ ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದು ಎಚ್.ಡಿ.ಕುಮಾರಸ್ವಾಮಿ ಎಂದರು. ಐವತ್ತು ವರ್ಷ ಆಡಳಿತದ ಕಾಂಗ್ರೆಸ್ ಕೈಯಲ್ಲೂ ಆಗಿರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ಇಡೀ ಇಂಡಿಯಾ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದು ದೇವೇಗೌಡರು. ದೇವೇಗೌಡರ ಕುಟುಂಬ ಯಾವುದೇ ಖಾಸಗಿ ಶಾಲೆ ಮಾಡಿಲ್ಲ. ಆದರೇ ಶಿಕ್ಷಕರ ಮಕ್ಕಳಿಗೆ ಉದ್ಯೋಗದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಕೊಡಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಾಸನ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್, ಅರಕಲಗೂಡು ಶಾಸಕ ಎ. ಮಂಜು.ಸ್ವರೂಪ ಪ್ರಕಾಶ್. ಮಾಜಿ ಸಚಿವರಾದ ಎಚ್.ಕೆ. ಕುಮಾರಸ್ವಾಮಿ. ಮಾಜಿ ಶಾಸಕರಾದ ಕೆ.ಎಸ್. ಲಿಂಗೇಶ್ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಿವೇಕಾನಂದ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!