Connect with us

Crime

ಮನೆ ಕಳವು – ಆರೋಪಿ ಬಂಧನ

Published

on

ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿರಾಜಪೇಟೆ ಮಾಗೋಳ್ಳಿ ಗ್ರಾಮದ ನಿವಾಸಿ ವಿರೇಶ್ ಕುಮಾರ (32) ಬಂಧಿತ ಆರೋಪಿ.

ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಗರಹಳ್ಳಿ ಗ್ರಾಮ ನಿವಾಸಿ ತಿಮ್ಮಯ್ಯ.ಬಿ.ಸಿ ರವರ ಕೂರ್ಗ್ ಹಳ್ಳಿ ಎಸ್ಟೇಟ್ ನಲ್ಲಿನ ಮನೆಗೆ ಜನವರಿ 7 ರಂದು ಅಪರಿಚಿತ ವ್ಯಕ್ತಿಗಳು ಬೀಗ ಮುರಿದು ಅಕ್ರಮವಾಗಿ ಪ್ರವೇಶಿಸಿ ಗಾಡೇಜ್‌ನಲ್ಲಿದ್ದ, ಬೆಳ್ಳಿ ಚೆಂಬು, ಒಂದು ಮೊಬೈಲ್ ಮತ್ತು ಒಂದು ವಾಚ್ ಗಳನ್ನು ಕಳವು ಮಾಡಿರುವ ಕುರಿತು ದೂರು ಸ್ವೀಕರಿಸಿದ್ದರು. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸುಂಟಿಕೊಪ್ಪ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ದೂರುದಾರರು ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಕೈಗೊಂಡು, ಆರೋಪಿಯನ್ನ ಬಂಧಿಸಿದ್ದಾರೆ.

ಸದರಿ ಪ್ರಕರಣದ ಆರೋಪಿಗಳು ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಆರ್.ವಿ.ಗಂಗಾಧರಪ್ಪ, ಡಿಎಪಿ, ಸೋಮವಾರಪೇಟೆ ಉಪವಿಭಾಗ, ಶ್ರೀ ರಾಜೇಶ್.ಕೆ. ಸಿಪಿಐ, ಕುಶಾಲನಗರ ವೃತ್ತ, ಶ್ರೀ ಶ್ರೀಧರ್.ಎಂ.ಸಿ, ಪಿಎಸ್‌ಐ ಸುಂಟಿಕೊಪ್ಪ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಅಪರಾಧ ಪತ್ತೆ ಸಿಬ್ಬಂದಿಗಳು ಒಳಗೊಂಡಂತೆ ಉಪವಿಭಾಗಮಟ್ಟದಲ್ಲಿ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಅರೊಪಿಯನ್ನ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಸದರಿ ಆರೋಪಿಯ ಮೇಲೆ ಜಿಲ್ಲೆಯ 5 ಠಾಣೆಗಳಲ್ಲಿ ಒಟ್ಟು 09 ಕಳವು ಪ್ರಕರಣಗಳು ದಾಖಲಾಗಿದೆ.

ವಿಶೇಷ ಸೂಚನೆ: ಮನೆಯ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ – 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ನೀಡುವವರ ವಿವರವನ್ನು ಬಹಿರಂಗ ಪಡಿಸುವುದಿಲ್ಲ.

Continue Reading
Click to comment

Leave a Reply

Your email address will not be published. Required fields are marked *

Crime

ಕಟ್ಟಿನಮನೆ ಬಳಿ ಗಾಳಿ ಮಳೆಯಿಂದ ಮರ ಬಿದ್ದು ಓರ್ವ ಮಹಿಳೆ ಭೀಕರ ದುರ್ಮರಣ..ಮೂವರಿಗೆ ಗಾಯ

Published

on

ನರಸಿಂಹರಾಜಪುರ ತಾಲೂಕಿನ ಕಾನೂರು ಪಂಚಾಯತ್ ವ್ಯಾಪ್ತಿಯ ಕಟ್ಟಿನಮನೆ ಗ್ರಾಮದಲ್ಲಿ ಪೂಜೆ ಮುಗಿಸಿ ಮನೆಗೆ ತೆರುಳುವ ಸಂದರ್ಭದಲ್ಲಿ ಭಾರಿ ಗಾಳಿಯಿಂದಾಗಿ ಮರ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ.

Continue Reading

Crime

ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ | ಬೇಸರಗೊಂಡು ಪತಿ ಆತ್ಮಹತ್ಯೆ

Published

on

ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ.
ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್‌ ಸಿಂಗ್‌, ರಸೂಲ್‌ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್‌ ಹಾಲ್ಟರ್‌ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗೋಪಾಲ್‌ ಸಿಂಗ್‌ ಬೇನತ್‌ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ಹೋಗಿದ್ದರು. ಈ ವೇಳೆ ಸಂಭ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡು ಗೋಪಾಲ್‌ ಆಕೆಯನ್ನು ತಡೆದಿದ್ದಾನೆ.
ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್‌ ಡಾನ್ಸ್‌ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದನು. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ನಡೆದಿದೆ.
ಆಗ ಬಾವ-ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಇದರಿಂದ ತೀರ ಬೇಸರಗೊಂಡಿದ್ದ ಗೋಪಾಲ್‌, ರೈಲು ಬರುತ್ತಿದ್ದ ಸಮಯ ನೋಡಿಕೊಂಡು ಹಳಿಗೆ ಹಾರಿಗೆ ಪ್ರಾಣ ಬಿಟ್ಟಿದ್ದಾನೆ. ಪ್ರಕರಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Continue Reading

Crime

ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ

Published

on

*ಮದುವೆಗೆ ಬಂದ ಮಹಿಳೆ ಸ್ಮಶಾನ ಸೇರಿದರು.

ಸಂಬಂಧಿಕರ ಮದುವೆಗೆಂದು ಬಂದಿದ್ದ ಮಹಿಳೆಯೊಬ್ಬರು ಮಾರುತಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಸು ನೀಗಿರುವ ಘಟನೆ ಇಂದು ಮಧ್ಯಾಹ್ನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಕಾಸರಗೋಡುವಿನ ರಾಬಿಯ ಎಂಬುವವರು ಮೃತ ದುರ್ದೈವಿ. 7ನೇ ಹೊಸಕೋಟೆಯಲ್ಲಿರುವ ಇವರ ಸಂಬಂಧಿಯ ವಿವಾಹ ಗದ್ದೆಹಳ್ಳದಲ್ಲಿ ನಡೆಯುತ್ತಿತ್ತು. ಮದುವೆಯಲ್ಲಿ ಪಾಲ್ಗೊಂಡಿದ್ದ ರಾಬಿಯ ರಸ್ತೆ ಬದಿಯಲ್ಲಿ ನಿಂತಿದ್ದರು.

ಈ ಸಂದರ್ಭ ಗಿರಿಯಪ್ಪ ಮನೆ ಗದ್ದೆ ನಿವಾಸಿ ಪೊನ್ನಪ್ಪ ಎಂಬುವವರ ಪುತ್ರ ಶರತ್ ಎಂಬಾತ ವೇಗವಾಗಿ ಚಲಾಯಿಸಿಕೊಂಡು ಬಂದ ಮಾರುತಿ ಕಾರು ಮೂವರು ಮಹಿಳೆಯರಿಗೆ ಡಿಕ್ಕಿಪಡಿಸಿ ಗಾಯಗೊಳಿಸಿದೆ. ಅಲ್ಲಿಯೂ ನಿಯಂತ್ರಣಕ್ಕೆ ಬಾರದ ಕಾರು ಮುಂದಕ್ಕೆ ಚಲಿಸಿ ರಾಬಿಯ ಅವರಿಗೆ ಗುದ್ದಿ ಅವರೊಂದಿಗೆ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಬಿಯ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ. ಕಾರು ಡಿಕ್ಕಿಯಾಗಿ ಗಾಯಗೊಂಡಿರುವ ಇನ್ನುಳಿದ ಮೂವರು ಮಹಿಳೆಯರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

Trending

error: Content is protected !!