Kodagu
ಮರದ ಕೊಂಬೆ ಬಿದ್ದು ಕಾರ್ಮಿಕ ದುರ್ಮರಣ

ಸೋಮವಾರಪೇಟೆ : ಮರ ಕಡಿಯುತ್ತಿದ್ದ ವೇಳೆ ಕಾರ್ಮಿಕನ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಕಾರ್ಮಿಕ ಸಾವನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ ಬಾಣೆಯಲ್ಲಿ ನಡೆದಿದೆ.
ಸೋಮವಾರಪೇಟೆ ತಾಲೂಕು ಎಡವಾರ ಗ್ರಾಮದ ನಿವಾಸಿ ನಿತ್ರೇಶ್ (43) ಸಾವನ್ನಪ್ಪಿದ ದುರ್ದೈವಿ.
ಭಾನುವಾರ 12.30ರ ಸಮಯದಲ್ಲಿ ಘಟನಾ ಸ್ಥಳದಲ್ಲಿ ಮರ ಕಡಿಯುತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಿಯಂತ್ರಣವನ್ನು ಕಳೆದುಕೊಂಡು ಮತ್ತೊಂದು ಮರಕ್ಕೆ ಕಟ್ಟಿದ ಹಗ್ಗವು ಜಾರಿ ಮರದ ಕೊಂಬೆಯು ಇವರ ಮೇಲೆ ಅಪ್ಪಳಿಸಿದೆ. ಘಟನೆಯಿಂದ ನಿತ್ರೇಶ್ ಗೆ ತೀವ್ರ ರೀತಿಯಾದ ಗಾಯಗಳಾಗಿದ್ದು ಸ್ಥಳದಲ್ಲಿಯೇ ಅಸುನೀಗಿರುತ್ತಾರೆ. ಘಟನೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Kodagu
ಭಗವತಿ ದೇವಸ್ಥಾನ ಅಭಿವೃದ್ಧಿ ಪಡಿಸಲು ಸಹಕರಿಸಲಾಗುವುದು: ಪೊನ್ನಣ್ಣ

ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಗ್ರಾಮಗಳಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಪೂರ್ಣಗೊಂಡ ರಸ್ತೆಯ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಅವರು ನೆರವೇರಿಸಿದರು.
ನರಿಯಂದಡ ಪಂಚಾಯಿತಿ ವ್ಯಾಪ್ತಿಯ ಕರಡ ಸಮೀಪದ ಮಲೆತೀರಿಕೆ ದೇವಸ್ಥಾನಕ್ಕೆ ತೆರಳುವ ರಸ್ತೆಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಶಾಸಕರ ಅನುದಾನದ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ ಕಾಂಕ್ರೆಟ್ ರಸ್ತೆಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ಬಳಿಕ ಕಡಂಗ ಅರಪಟ್ಟು ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನ ಅಭಿವೃದ್ಧಿ ಪಡಿಸಲು ಸಹಕರಿಸುವ ಭರವಸೆ ನೀಡಿದರು.
ಎಡಪಾಲ ಗ್ರಾಮದಲ್ಲಿ ಅಲ್ಪಸಂಖ್ಯಾತ ಇಲಾಖೆಯಿಂದ 20 ಲಕ್ಷ ರೂ ವೆಚ್ಚದ 3 ಕಾಮಗಾರಿಗಳಲ್ಲಿ 2 ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಕುರಿಕಡೆಗೆ ತೆರಳುವ ನೂತನವಾಗಿ ನಿರ್ಮಿಸಿದ ಕಾಂಗ್ರೆಟ್ ರಸ್ತೆಯನ್ನು ಶಾಸಕರು ಉದ್ಘಾಟಿಸಿ ಮತಾನಾಡಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪ ಇರುವ ನಿರಂತರ ಅಪಘಾತ ಸಂಭವಿಸುವ ಸೇತುವೆಯನ್ನು ವೀಕ್ಷಣೆ ಮಾಡಿದ ಶಾಸಕರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಚೆಯ್ಯಂಡಾಣೆ,ಬಾವಲಿ,ಪಾರಾಣೆ ಸಂಪರ್ಕ ಕಲ್ಪಿಸುವ ಕಾಕೆತೋಡು ಸೇತುವೆ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ಅಂದಾಜು 62ಲಕ್ಷ ಅನುದಾನದಲ್ಲಿ ಮೀಸಲು ಉದ್ದೇಶಿಸಿರುವ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ನಂತರ ಪುನರ್ ನಿರ್ಮಾಣ ಗೊಳ್ಳುತ್ತಿರುವ ಅಯ್ಯಪ್ಪ ದೇವಸ್ಥಾನ ಹಾಗೂ ಮುತ್ತಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರು.ಬಳಿಕ ತಟ್ಟಮಕ್ಕಿ ಪೈಸಾರಿಗೆ ತೆರಳುವ ರಸ್ತೆಗಳನ್ನು ವೀಕ್ಷಿಸಿದ ಶಾಸಕರು ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಭರವಸೆ ನೀಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷ ವಿನೋದ್ ನಾಣಯ್ಯ,ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ನಾಪೋಕ್ಲು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಮ್ಮರ್, ಡಿಸಿಸಿ ಸದಸ್ಯರಾದ ಮಣಿ ಅಯ್ಯಮ್ಮ, ಶಾಫಿ, ದೇವಸ್ಥಾನ ಅಧ್ಯಕ್ಷ ಸೊಮ್ಮಯ್ಯ, ಕೆಡಿಪಿ ಸದಸ್ಯ ಲವ ಚಿಣ್ಣಪ್ಪ, ಮಾಳೆಟೀರ ಪ್ರಶಾಂತ್, ಐತಿಚಂಡ ಪ್ರಕಾಶ್, ಬೀಮಯ್ಯ, ಮೇದುರ ಗಣು ಕುಶಾಲಪ್ಪ, ಬಿದ್ದಪ್ಪ, ವಿರಾಜಪೇಟೆ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಸದಸ್ಯ ನಾಸರ್, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
Kodagu
ಮಹಿಳೆ ಬಲಿ ಪಡೆದಿದ್ದ ಕಾಡಾನೆ ಸೆರೆ: ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರ

ಗೋಣಿಕೊಪ್ಪ: ಚನ್ನಂಗೊಲ್ಲಿಯಲ್ಲಿ ಎರಡು ದಿನಗಳ ಹಿಂದೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ದಾಳಿ ನಡೆಸಿ ಮಹಿಳೆಯನ್ನು ಬಲಿಪಡಿದಿದ್ದ ಕಾಡಾನೆಯನ್ನು ಸೆರೆ ಹಿಡಿಯಲು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಎ. ಎಸ್. ಪೊನ್ನಣ್ಣ ಅವರು ಅರಣ್ಯ ಸಚಿವ ಈಶ್ವರ ಕಂಡ್ರೆ ಅವರೊಂದಿಗೆ ಮಾತನಾಡಿ ಕೂಡಲೇ ಕಾರ್ಯಚರಣೆ ಅನುಮತಿ ನೀಡಿ ಪುಂಡಾಣೆಯನ್ನು ಸೆರೆ ಹಿಡಿಯಲು ಮನವಿ ಮಾಡಿದ ಬೆನ್ನಲ್ಲೇ ಶನಿವಾರ ಕಾರ್ಯಚರಣೆ ಆರಂಭಿಸಲಾಯಿತು.
ಕಾರ್ಯಚರಣೆಯನ್ನು ಡಿ ಸಿ ಎಫ್ ಜಗನ್ನಾಥ್ ನೇತೃತ್ವದಲ್ಲಿ ಅರಣ್ಯ ಇಲಾಖೆ ನಡೆಸಿ ಸಂಜೆ 3 ಗಂಟೆ ಅಂದಾಜಿಗೆ ಕಾಡಾನೆಗೆ ಅರವಳಿಕೆಯ ಮದ್ದನ್ನು ನೀಡಿ ಪ್ರಜ್ಞೆ ತಪ್ಪಿಸಿ ಆನೆಯನ್ನು ಸೆರೆ ಹಿಡಿಯಲಾಯಿತು. ನಂತರ ದುಬಾರೆ ಆನೆ ಶಿಬಿರಕ್ಕೆ ಈ ಆನೆಯನ್ನು ಸ್ಥಳಾಂತರ ಮಾಡಲಾಯಿತು.
ಮತ್ತಿಗೋಡು, ದುಬಾರೆ, ಹಾರಂಗಿ ಶಿಬಿರದಿಂದ ಆರು ಸಾಕಾನೆಗಳು ಆಗಮಿಸಿ, ಅರವಳಿಕೆ ನೀಡುವ ಮೂಲಕ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಾಡಾನೆಗೆ ಯಾವುದೇ ಸಮಸ್ಯೆಯಾಗದಂತೆ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರು ತಿಳಿಸಿದ್ದಾರೆ.
Kodagu
ಕೊಡಗು ವಿವಿ ಮುಚ್ಚುವ ಪ್ರಸ್ತಾಪಕ್ಕೆ ವಿರಾಜಪೇಟೆ ಬಿಜೆಪಿ ತೀವ್ರ ವಿರೋಧ

ಮಡಿಕೇರಿ : ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರಾಜಪೇಟೆ ಬಿಜೆಪಿ ಮಂಡಲ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು, ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ಎಂಬ ಗುರಿಯೊಂದಿಗೆ ಕೊಡಗು ಸೇರಿದಂತೆ ೯ ಜಿಲ್ಲೆಗಳಲ್ಲಿ ನೂತನ ವಿವಿಯನ್ನು ಸ್ಥಾಪಿಸಿತು. ಆದರೆ ಇದೀಗ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯವನ್ನು ಕಡೆಗಣಿಸಿ ವಿವಿಗಳನ್ನು ಮುಚ್ಚುವ ನಿರ್ಧಾರ ಮಾಡಿರುವುದು ಖಂಡನೀಯವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಮಹತ್ವಾಕಾಂಕ್ಷೆಯಿಂದ ಬಡ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಂದಿನ ಬಿಜೆಪಿ ಸರ್ಕಾರ ನೂತನ ವಿವಿಯನ್ನು ಸ್ಥಾಪಿಸಿತು. ಈ ಹಂತದಲ್ಲೇ ವಿಧಾನಸಭಾ ಚುನಾವಣೆಯೂ ಘೋಷಣೆಯಾದ ಹಿನ್ನೆಲೆ ವಿವಿಗಳಿಗೆ ನೀಡಬೇಕಾದ ಅನುದಾನ ಮತ್ತು ಸೌಲಭ್ಯಗಳನ್ನು ಪೂರೈಸಲು ಸಾಧ್ಯವಾಗಿರಲಿಲ್ಲ. ಒಂದು ವೇಳೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೆ ವಿವಿಗಳಿಗೆ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಿ ಸದೃಢಗೊಳಿಸಲಾಗುತ್ತಿತ್ತು. ಆದರೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಖಜಾನೆ ಖಾಲಿ ಮಾಡಿಕೊಂಡು ಕುಳಿತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಇದೀಗ ಖರ್ಚು ವೆಚ್ಚವನ್ನು ಕುಗ್ಗಿಸುವ ಸಲುವಾಗಿ ಶಿಕ್ಷಣ ಮಂದಿರಕ್ಕೆ ಕೈಹಾಕಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವೇ ಕಳೆದಿದೆ. ಆದರೆ ನೂತನ ವಿವಿಗಳಿಗೆ ಬೇಕಾದ ಅನುದಾನ ಮತ್ತು ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಇದೇ ಕಾರಣದಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ವಿವಿಗಳಿಗೆ ಅಗತ್ಯ ಅನುದಾನ ನೀಡಲು ಸರ್ಕಾರ ಮುಂದಾಗಬೇಕು. ಯುವ ಸಮೂಹ ಶಿಕ್ಷಣದ ಮೂಲಕ ದೇಶ ಕಟ್ಟಬೇಕಾಗಿದೆ. ಕೊಡಗು ವಿವಿ ಮುಚ್ಚುವುದಕ್ಕೆ ಬಿಜೆಪಿ ಎಂದಿಗೂ ಬಿಡುವುದಿಲ್ಲ, ಒಂದು ವೇಳೆ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಹೋರಾಟ ಹಾದಿ ಹಿಡಿಯಬೇಕಾಗುತ್ತದೆ ಎಂದು ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ.
-
Mysore19 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu20 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Kodagu22 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Mysore19 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Mandya19 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Mandya21 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Tech12 hours ago
ಅತ್ಯಂತ ಶಕ್ತಿಶಾಲಿ ಕ್ಯಾಮೆರಾ ಹೊಂದಿರುವ ಮಧ್ಯಮ ಬೆಲೆಯ ವಿವೋ ಕಂಪನಿಯ Vivo V50 ಹೊಸ ಫೋನ್ ಬಿಡುಗಡೆ : ಬೆಲೆ ಎಷ್ಟು?
-
Hassan17 hours ago
ಹಾಸನ ವಿಮಾನ ನಿಲ್ದಾಣದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ: ಎಚ್ಡಿ ಕುಮಾರಸ್ವಾಮಿ