Mysore
ಮಹಿಳೆಗೆ ಮಗನನ್ನು 3 ಲಕ್ಷಕ್ಕೆ ಮಾರಾಟ ಮಾಡಿದ ತಂದೆ: ತಾಲೂಕು ಕಾರ್ಮಿಕ ಇಲಾಖೆಯ ನಿರೀಕ್ಷಕರಿಂದ ಬಾಲಕನ ರಕ್ಷಣೆ

ಸಾಲಿಗ್ರಾಮ : ಗದಗ ಜಿಲ್ಲೆಯಿಂದ ತಂದೆ ತನ್ನ ಸ್ವಂತ ಮಗನನ್ನು ಮೂರು(೩) ಲಕ್ಷಕ್ಕೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದ ಮಹಿಳೆಗೆ ಮಾರಾಟಮಾಡಿದ್ದು, ಒಂಬತ್ತು ವರ್ಷದ ಬಾಲಕನ್ನು ಕೆ.ಆರ್.ನಗರ ತಾಲೂಕು ಕಾರ್ಮಿಕ ಇಲಾಖೆಯ ನಿರೀಕ್ಷಕರು ಪತ್ತೆ ಮಾಡಿ ರಕ್ಷಿಸಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಕ್ಷಿಸಿರುವ ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದ ಒಂಬತ್ತು ವರ್ಷದ ಬಸವನಗೌಡ ಶರಣಪ್ಪಗೌಡ ಎನ್ನಲಾಗಿದ್ದು ಈತನ ತಂದೆ ಶರಣಪ್ಪಗೌಡ ಕೇವಲ ಮೂರು ಲಕ್ಷಕ್ಕೆ ತನ್ನ ಸ್ವಂತ ಮಗನನ್ನು ಮಾರಾಟ ಮಾಡಿರುವುದು ಶೋಚನೀಯ ಸಂಗತಿ.
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದ ರುಕ್ಮಿಣಿ ಮತ್ತು ಮಹದೇವಮ್ಮ ಎಂಬ ಮಹಿಳೆಯರು ಕಳೆದ ಎರಡು ವರ್ಷಗಳ ಹಿಂದೆ ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದ ಶರಣಪ್ಪಗೌಡ ಎಂಬವರ ಮಗನಾದ ಬಸವನಗೌಡ ಶರಣಪ್ಪಗೌಡನನ್ನು ಮೂರು ಲಕ್ಷ ಹಣ ಕೊಟ್ಟು ಖರೀದಿ ಮಾಡಿದ್ದಾರೆ.
ಸವಡಿ ಗ್ರಾಮದಿಂದ ಬೆಟ್ಟಹಳ್ಳಿ ಗ್ರಾಮಕ್ಕೆ ಕರೆತಂದು ಕುರಿ, ಮೇಕೆ ಮೇಯಿಸಲು ಕಳುಹಿಸುತ್ತಿರುತ್ತಾರೆ. ಹಾಗೂ ಮನೆ ಕೆಲಸವನ್ನು ಕೂಡ ಮಾಡಿಸುತ್ತಿದ್ದು, ಈ ಸಂಗತಿ ಗ್ರಾಮಸ್ಥರಿಗೆ ತಿಳಿದು, ಯಾರೊಬ್ಬರು ಪ್ರಶ್ನೆ ಮಾಡಿದರು ರುಕ್ಮಿಣಿ ಹಾಗೂ ಮಹದೇವಮ್ಮ, ಸಂಬಂದಿಕರ ಹುಡುಗ ಎಂದೆಲ್ಲ ಸಬೂಬು ಹೇಳುತ್ತಿದ್ದರು. ಕೊನೆಗೂ ಗ್ರಾಮಸ್ಥರಿಗೆ ಅನುಮಾನ ಬರಲಾಗಿ ಮೈಸೂರಿನ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ದೂರು ನೀಡಲಾಗಿತ್ತು.
ತಕ್ಷಣವೇ ಕಾರ್ಯ ಪ್ರವೃತ್ತರಾದ ಮಕ್ಕಳ ಸಹಾಯವಾಣಿ ಕೇಂದ್ರದವರು ಮೈಸೂರಿನ ಪಟ್ಟಣದಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತೆ ನಾಜೀಯ ಸುಲ್ತಾನ್ ಅವರಿಗೆ ಕರೆ ಮಾಡಿ ಬಾಲಕ ಮಾರಾಟ ಆಗಿರುವ ಹಳ್ಳಿಯೊಂದರಲ್ಲಿ ಜೀತ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾರೆ.
ತಕ್ಷಣವೇ ಸಹಾಯಕ ಕಾರ್ಮೀಕ ಆಯುಕ್ತೆ ನಾಜೀಯ ಸುಲ್ತಾನ್ ಅವರು ತಮ್ಮ ಮಾರ್ಗದರ್ಶನದ ಮೂಲಕ ಕೆ.ಆರ್.ನಗರ ತಾಲೂಕು ತಹಸೀಲ್ದಾರ್ ಸಿ. ಎಸ್.ಪೂರ್ಣಿಮಾ ಹಾಗೂ ಪಟ್ಟಣದ ಕಾರ್ಮಿಕ ಇಲಾಖೆಯ ನಿರೀಕ್ಷಕ ಗೋವಿಂದರಾಜು ಅವರಿಗೆ ಮಾರಾಟವಾಗಿರುವ ಬಾಲಕನ ವಿಳಾಸ , ದೂರು ನೀಡಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಲಕನನ್ನು ರಕ್ಷಿಸುವಂತೆ ಸೂಚಿಸಿದ್ದರು.
ಕಾರ್ಮಿಕ ಇಲಾಖೆಯ ನಿರೀಕ್ಷಕ ತಮ್ಮ ಸಿಬ್ಬಂದಿಗಳೊಡನೆ ಬೆಟ್ಟಹಳ್ಳಿ ಗ್ರಾಮಕ್ಕೆ ಆಗಮಿಸಿ ದೂರು ನೀಡಿದ್ದ ಗ್ರಾಮಸ್ಥರ ಜೊತೆ ಚರ್ಚಿಸಿ, ಬಾಲಕ ವಾಸವಿದ್ದ ರುಕ್ಮಿಣಿ ಹಾಗೂ ಮಹದೇವಮ್ಮ ಅವರ ವಿರುದ್ಧ ದೂರು ಪಡೆದುಕೊಂಡು ಬಾಲಕ ಬಸವನಗೌಡ ಶರಣಪ್ಪನನ್ನು ರಕ್ಷಿಸಿದ್ದಾರೆ.
ಸಾಲಿಗ್ರಾಮ ಪೊಲೀಸ್ ಠಾಣೆಗೆ ರುಕ್ಮಿಣಿ ಹಾಗೂ ಮಹದೇವಮ್ಮ ಅವರ ವಿರುದ್ದ ದೂರು ದಾಖಲಿಸಿ ಸದ್ಯಕ್ಕೆ ಬಾಲಕ ಬಸವನಗೌಡ ಶರಣಪ್ಪನನ್ನು ಮೈಸೂರಿನ ಬಾಲ ಮಂದಿರಕ್ಕೆ ಬಿಟ್ಟಿದ್ದಾರೆ.
ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕಾನೂನು ಕ್ರಮ ಕೈ ಗೊಂಡಿರುತ್ತಾರೆ.
ರಾಜ್ಯದಲ್ಲಿ ದಿನೇ ದಿನೇ ಮಕ್ಕಳ ಮಾರಾಟ ಜಾಲ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರ ಹೆಚ್ಚಿನ ರೀತಿಯಲ್ಲಿ ಕ್ರಮವಹಿಸಿ ಇದಕ್ಕೆಲ್ಲ ಕಡಿವಾಣ ಹಾಕಲಿದೆಯೆ ಎಂಬುದು ಸಾರ್ವಜನಿಕರ ಪ್ರಶ್ನೆ ಯಾಗಿದೆ.
ವರದಿ: ಎಸ್ ಬಿ ಹರೀಶ್ ಸಾಲಿಗ್ರಾಮ
Mysore
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.
ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.
ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mysore
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರು: ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಮಲ ನೆನಪು ಸಮಾರಂಭದಲ್ಲಿ ಆರ್. ರಘು ಕೌಟಿಲ್ಯ ಅವರ ಭೂಮಿ ಪುತ್ರಿ, ಅಂಕಣಗಳ ಬೆಳಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ರಂಗಭೂಮಿ ಕಲಾವಿದೆ ಪದ್ಮಶ್ರೀ ಬಿ.ಜಯಶ್ರೀ ಅವರು ಭೂಮಿಪುತ್ರಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪುರುಷ ಸಮಾಜ ಹೆಣ್ಣನ್ನು ಪ್ರೀತಿಯಿಂದ ನೋಡುವುದಿಲ್ಲ. ನಿರ್ಲಕ್ಷ್ಯ ವಹಿಸುತ್ತಾರೆ. ಈ ಪುಸ್ತಕ ಓದಿದಾಗ ಪುರುಷ ಸಮಾಜಕ್ಕೆ ಹೆಂಡತಿಯನ್ನು ಪ್ರೀತಿಸಬೇಕು ಅನಿಸುತ್ತದೆ ಎಂದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ವೃತ್ತಿ ಹಾಗೂ ಸಮಾಜಸೇವೆಯಲ್ಲೂ ರಘು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಣ್ಣ ಸಮುದಾಯದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.
ಇಡೀ ರಾಜ್ಯದಲ್ಲಿ ಒಬಿಸಿ ಸಮುದಾಯದ ಜನಸಂಖ್ಯೆಯೇ ಬಹಳ ದೊಡ್ಡದಿದೆ. ನಮ್ಮ ರಾಜ್ಯದಲ್ಲಿ ಸಣ್ಣ ಪುಟ್ಟ ಸಮುದಾಯಗಳು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರುತ್ತವೆ. ಪ್ರಬಲ ಸಮುದಾಯಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಒಬಿಸಿ ಸಮುದಾಯದ ಸಂಖ್ಯೆಯೇ ದೊಡ್ಡದಿದೆ. ಸಣ್ಣ ಸಣ್ಣ ಸಮುದಾಯಗಳನ್ನು ಒಟ್ಟಾಗಿ ಸೇರಿಸಿದರೆ ಒಬಿಸಿ ಸಮುದಾಯಗಳ ಸಂಖ್ಯೆಯೇ ಹೆಚ್ಚಾಗಿದೆ. ನಾನು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವನಾಗಿದ್ದೇನೆ. ಸಣ್ಣ ಸಣ್ಣ ಒಬಿಸಿ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
.
ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಗಾಯಕಿ ಸಂಗೀತಾ ಕಟ್ಟಿ, ಕೋಮಲ ಹರ್ಷಕುಮಾರ ಗೌಡ, ಮಡ್ಡೀಕೆರೆ ಗೋಪಾಲ, ಮಾಜಿ ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.
Mysore
ಸಾವಿರಾರೂ ಪರಿಸರ ಪ್ರೇಮಿಗಳಿಂದ ಮೌನ ಪ್ರತಿಭಟನೆ

ಮೈಸೂರು: ಇಲ್ಲಿನ ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಮರಗಳ ಹನನ ನಡೆಸಿರುವುದನ್ನು ಖಂಡಿಸಿ ಶುಕ್ರವಾರ ಮೌನ ಪ್ರತಿಭಟಿಸಲಾಯಿತು.
ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ ವತಿಯಿಂದ ಕರ್ನಾಟಕ ಪೊಲೀಸ್ ಅಕಾಡೆಮಿ ಬಳಿ ಮರಗಳು ಹನನ ಗೊಂದ ಸ್ಥಳದಲ್ಲಿ. ಸಾವಿರಾರೂ ಪರಿಸರ ಪ್ರೇಮಿಗಳು ಸೇರಿ ಕಪ್ಪು ಪಟ್ಟಿ ಧರಿಸಿ, ಮೊಂಬತ್ತಿ ಬೆಳಗುವ ಮೂಲಕ ಅಮಾನುಷವಾಗಿ ಕಡಿಯಲ್ಪಟ್ಟ 40 ಮರಗಳಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಗಿಡಗಳನ್ನು ನೆಟ್ಟು ಬೆಳೆಸಬೇಕಾದ ಅರಣ್ಯ ಇಲಾಖೆ 40 ಮರಗಳನ್ನು ಕಡಿಯಲು ಅನುಮತಿ ನೀಡಿದೆ. ಈ ರಸ್ತೆಯ ಅಗಲೀಕರಣವೇ ಅಗತ್ಯವಿಲ್ಲ. ಅನಿವಾರ್ಯವಾಗಿದ್ದರೆ ಲಲಿತ್ ಮಹಲ್ ಹತ್ತಿರದ ಎಟಿಐ ಮುಂಭಾಗದಲ್ಲಿ ಮಾಡಿರುವಂತೆ ಮರಗಳನ್ನು ಉಳಿಸಿಕೊಂಡು ರಸ್ತೆ ಅಗಲೀಕರಣ ಮಾಡಬಹುದಿತ್ತು ಎಂಬುವುದು ಪರಿಸರ ಪ್ರೇಮಿಗಳ ಒತ್ತಾಯದ ಮಾತಾಗಿದೆ.
-
Mandya21 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar21 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Chamarajanagar21 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Kodagu13 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ