Uncategorized
ಮಾದಕ ವಸ್ತು ಮಾರಾಟ ಮಾಡುತಿದ್ದ ಇಬ್ಬರ ಬಂಧನ

ಮಡಿಕೇರಿ : ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹೆಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ನ. 19 ರಂದು ಮಡಿಕೇರಿ – ಮಂಗಳೂರು ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಕುಂಜಿಲ ನಿವಾಸಿ ನೌಫಲ್ (25), ಎಮ್ಮೆಮಾಡು ಪೈಸಾರಿ ನಿವಾಸಿ ಸಾದಿಕ್ (32) ಎಂಬುವವರನ್ನು ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.
ಸದರಿ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಜಿಲಲಾ ಪೊಲೀಸ್ ವರಿಷ್ಠಾಧಿಕಾರಿ ಶ್ಲಾಘಿಸಿದ್ದಾರೆ.
Uncategorized
ಬಿರಿಯಾನಿ ತಿಂದು ೧೭ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚಿಕ್ಕಮಗಳೂರು : ಬಿರಿಯಾನಿ ತಿಂದು 17 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.
ಒಂದು ದಿನ ಹಿಂದೆ ಮಾಡಿದ್ದ ಬಿರಿಯಾನಿ ತಿಂದಿದ್ದ ಗ್ರಾಮಸ್ಥರು ಅಸ್ವಸ್ಥರಾಗಿದ್ದು, ಬಿರಿಯಾನಿ ಸೇವಿಸಿದವರಲ್ಲಿ 17 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ಮಾಡಲಾಗಿತ್ತು. ಆದರೆ, ಬಿರಿಯಾನಿಯನ್ನು ತಿಂದ ಕೂಡಲೇ ವಾಂತಿ ಭೇದಿಯಾಗಿದೆ.
ತಕ್ಷಣ ಅಸ್ವಸ್ಥಗೊಂಡವರನ್ನು ಕಡೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕ್ಕ ಪುಟ್ಟ ಮಕ್ಕಳು ಸೇರಿದಂತೆ 17 ಜನ ಅಸ್ವಸ್ಥಗೊಂಡು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ, ಇನ್ನೂ ವಿಷಯ ತಿಳಿಯುತ್ತಿದ್ದಂತೆ ಶಾಸಕ ಕೆ.ಎಸ್.ಆನಂದ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ
Uncategorized
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೀರ್ಣೋದ್ಧಾರ ಹಾಗೂ ಕಳಸ, ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಚನ್ನರಾಯಪಟ್ಟಣ ತಾಲ್ಲೂಕು ಅತ್ತಿಹಳ್ಳಿ ಗ್ರಾಮದ
ಶ್ರೀ ದೊಡ್ಡಮ್ಮ ಚಿಕ್ಕಮ್ಮ ದೇವಸ್ಥಾನದ
ಜೀರ್ಣೋದ್ಧಾರ ಹಾಗೂ ಕಳಸ, ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜೊತೆಯಲ್ಲಿ ಕ್ಷೇತ್ರದ ಶಾಸಕರಾದ ಸಿ.ಎನ್.ಬಾಲಕೃಷ್ಣ ರವರು ಹಾಗೂ ಗ್ರಾಮಸ್ಥರು ಇದ್ದರು.
Uncategorized
ಹಾಸನ ತಹಸೀಲ್ದಾರ್ ಶ್ವೇತಾ ವರ್ಗಾವಣೆಗೆ ಕೆಎಟಿ ತಡೆ

ಹಾಸನ: ಹಾಸನ ತಹಸೀಲ್ದಾರ್ ಆಗಿದ್ದ ಶ್ವೇತಾ ಅವರ ವರ್ಗಾವಣೆಗೆ ಕೆಎಟಿ ತಡೆ ನೀಡಿದೆ.
ಶ್ವೇತಾ ಸೇರಿದಂತೆ ಮೊನ್ನೆಯಷ್ಟೇ ೧೩ ಮಂದಿ ತಹಸೀಲ್ದಾರ್‌ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಆದರೆ ತಾವು ಹಾಸನ ತಹಸೀಲ್ದಾರ್ ಆಗಿ ಕೇವಲ ೮ ತಿಂಗಳಾಗಿವೆ. ಒಂದು ವರ್ಷ ತುಂಬುವ ಮುನ್ನವೇ ವರ್ಗ ಮಾಡಲಾಗಿದೆ ಎಂದು ಶ್ವೇತಾ ಕೆಎಟಿ ಮೊರೆ ಹೋಗಿದ್ದರು.
ಈ ನಡುವೆ ಶ್ವೇತಾ ಅವರು ಗ್ರೇಡ್-೧ ತಹಸೀಲ್ದಾರ್ ಆಗಿದ್ದು, ಅವರ ಸ್ಥಾನಕ್ಕೆ ಗ್ರೇಡ್-೨ ತಹಸೀಲ್ದಾರ್‌ರನ್ನು ನಿಯೋಜನೆ ಮಾಡಿರುವುದು ಎಷ್ಟು ಸರಿ, ಇದು ಊರ್ಜಿತವೇ ಎಂದು ಶ್ವೇತಾ ಅವರ ಪರ ವಕೀಲರು ಕರ್ನಾಟಕ ನ್ಯಾಯಾಧಿಕರಣದ ಮುಂದೆ ವಾದ ಮಂಡಿಸಿದರು.ಈ ವಾದ ಹಾಗೂ ಮನವಿಯನ್ನು ಪುರಸ್ಕರಿಸಿದ ನ್ಯಾಯಮಂಡಳಿ ಶ್ವೇತಾ ಅವರ ವರ್ಗಾವಣೆಗೆ ತಡೆ ನೀಡಿದೆ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Hassan3 hours ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Mysore6 days ago
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.