Connect with us

State

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು

Published

on

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:

* ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಉನ್ನತ ಮಟ್ಟದ ಸಭೆ ನಡೆಸಲಾಯಿತು.

• ಕೋವಿಡ್‌ 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಅದರಲ್ಲೂ JN.1 ಎಂಬ ಹೊಸ ತಳಿಯ ವೈರಸ್‌ ಪತ್ತೆಯಾಗಿದೆ.

• ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ.

• ಕರ್ನಾಟಕದಲ್ಲಿ ಪ್ರಸ್ತುತ 92 Active COVID Cases ವರದಿಯಾಗಿವೆ. ಕೇರಳದಲ್ಲಿ 2041, ತಮಿಳು ನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 Active cases ಇವೆ.

• ರಾಜ್ಯದಲ್ಲಿರುವ ಒಟ್ಟು 92 Active COVID Case ಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.

• ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. (Home Isolation). 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.

• ರಾಜ್ಯದಲ್ಲಿ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 5000 ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 Rapid Antigen Test ಹಾಗೂ 3500 RTPCR ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ 1000 ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು.

• ಕರ್ನಾಟಕದಲ್ಲಿ ಡಿಸೆಂಬರ್‌ 15 ರಂದು ಒಂದು ಹಾಗೂ ಡಿಸೆಂಬರ್‌ 20 ರಂದು ಎರಡು ಸಾವುಗಳು ಸಂಭವಿಸಿವೆ. ಈ ಮೂರು ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ (Co-Morbidity) ಬಳಲುತ್ತಿದ್ದರು.

• ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ. ಕೋವಿಡ್‌ 19 ಈಗ Pandemic ಆಗಿ ಉಳಿದಿಲ್ಲ. Endemic ಆಗಿದೆ.

• ಸರ್ಕಾರವೂ ಸಹ ಎಲ್ಲ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ.

• ಮೃತರಾದವರು, Co-morbidity ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್‌ ಸಿಕ್ವೆನ್ಸಿಂಗ್‌ ಮಾಡಲಾಗುತ್ತಿದೆ.

ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅದರಂತೆ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು:

• ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್‌ ಲಭ್ಯತೆಯನ್ನು ಖಾತರಿ ಪಡಿಸಬೇಕು.

• ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಇವು ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು.

• ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.

• ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು.
• ಕೋವಿಡ್‌ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
• ಎಲ್ಲ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.
ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳು ಹಾಗೂ ರಾಜ್ಯದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು
• 60 ವರ್ಷ ಮೇಲ್ಪಟ್ಟ ಎಲ್ಲರೂ, ಕಿಡ್ನಿ, ಹೃದಯ, ಲಿವರ್‌ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್‌ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡದೆ ಇರುವುದು.
• ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್‌ ಧರಿಸುವುದು.
• ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ.
• ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್‌ ಧರಿಸುವುದು ಉತ್ತಮ.
• ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು.
• ಭಾರತ ಸರ್ಕಾರವೂ ಮಾರ್ಗಸೂಚಿಗಳನ್ನು ಹೊರಡಿಸಿದೆ.
• ರಾಜ್ಯವೂ ಕೇರಳ ಮತ್ತು ತಮಿಳು ನಾಡು ಗಡಿ ಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.
• ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20 ರಲ್ಲಿ 1 ಜ್ವರ (ILI) ದ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ.

Continue Reading
Click to comment

Leave a Reply

Your email address will not be published. Required fields are marked *

State

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ದೂರುದಾರನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು SIT ಸಿದ್ಧತೆ

Published

on

ಬೆಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ  ಸಂಬಂಧಿಸಿದಂತೆ ದೂರುದಾರನ  ಹಿಂದಿರುವ ವ್ಯಕ್ತಿಗಳಿಗೆ ವಿಶೇಷ ತನಿಖಾ ತಂಡ  ನೋಟಿಸ್‌ ನೀಡಲು ಸಿದ್ಧತೆ ನಡೆಸಿದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ  ಪ್ರಕರಣ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ ನಡೆಸಿತ್ತು. 15 ದಿನಗಳ ಕಾಲ ಭಾರೀ ಮಳೆಯ ಮಧ್ಯೆಯೂ 17 ಪಾಯಿಂಟ್‌ಗಳಲ್ಲಿ ಉತ್ಖನನ ನಡೆಸಿದರೂ ದೂರುದಾರ ಮಾಸ್ಕ್ ಮ್ಯಾನ್ ಹೇಳಿದ್ದ ಪಾಯಿಂಟ್‌ 6 ಬಿಟ್ಟು ಬೇರೆ ಕಡೆ ಮೂಳೆಗಳು ಹೂತಿದ್ದ ಮೂಳೆಗಳು ದೊರೆತಿಲ್ಲ.

ಮೂಳೆಗಳು ಸಿಗದ ಕಾರಣ ಉತ್ಖನನ ಕಾರ್ಯವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿದೆ. ದೂರುದಾರ ವ್ಯಕ್ತಿ ಇನ್ನೂ 13 ಪಾಯಿಂಟ್ ತೋರಿಸುತ್ತೇನೆ. ಅಲ್ಲೂ ಉತ್ಖನನ ಮಾಡಿ ಎಂದು ಒತ್ತಾಯಿಸಿದರೂ ಅಧಿಕಾರಿಗಳು ಆತನನ್ನೇ ಎಸ್‌ಐಟಿ ಕಚೇರಿಯಲ್ಲಿ ಕೂರಿಸಿ 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಎಸ್‌ಐಟಿ ಅಧಿಕಾರಿಗಳು, ಬುರುಡೆ ಕಥೆ ಹೇಳಿರುವ ದೂರುದಾರನ ಬಾಯಿ ಬಿಡಿಸುವ ಪ್ರಯತ್ನ ನಡೆಸಿದ್ದಾರೆ. ಆತ ನೀಡಿರುವ ದೂರು ಸುಳ್ಳು ಅನ್ನೋ ನಿರ್ಧಾರಕ್ಕೆ ಬಂದ ಎಸ್‌ಐಟಿ ಅಧಿಕಾರಿಗಳು ಆತನನ್ನೇ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪ್ಲಾನ್ ಮಾಡಿದ್ದಾರೆ. ಆತನ ಹಿಂದೆ ಯಾರೋ ಇದ್ದು ಇದನ್ನೆಲ್ಲ ಮಾಡಿಸಿದ್ದಾರೆ ಎಂಬ ಶಂಕೆ ಮೂಡಿದ್ದು, ಅನೇಕ ವ್ಯಕ್ತಿಗಳಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಲಿದ್ದಾರೆ.

ಈ ಮಧ್ಯೆ ದೂರುದಾರ ವ್ಯಕ್ತಿ ಪ್ರಾರಂಭದಲ್ಲಿ ನ್ಯಾಯಾಲಯಕ್ಕೆ ಹಾಜರುಡಿಸಿದ ತಲೆ ಬುರುಡೆಯ ತನಿಖೆಯನ್ನೂ ಅಧಿಕಾರಿಗಳು ಮುಂದುವರಿಸಿದ್ದಾರೆ. ಈ ತಲೆ ಬುರುಡೆ ಪುರುಷನದ್ದು ಅನ್ನೋದು ತನಿಖೆ ವೇಳೆ ಬಹಿರಂಗಗೊಂಡಿದ್ದು ಈಗ ಆ ತಲೆ ಬುರುಡೆಯ ಮಹಜರು ನಡೆಸಲು ಎಸ್‌ಐಟಿ ತಯಾರಿ ನಡೆಸಿದೆ.
Continue Reading

State

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ*

Published

on

ಬೆಂಗಳೂರು : ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ತಾನೆ ಉಪಮುಖ್ಯಮಂತ್ರಿ, ಡಿಕೆ ಶಿವಕುಮಾ‌ರ್ ಅವರು ಕಲ್ಬುರ್ಗಿಯಲ್ಲಿ ಶರಣಬಸವಪ್ಪ ಅಪ್ಪಾಜಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳಿದ್ದರು.

ಡಿಸಿಎಂ ಡಿಕೆ ಶಿವಕುಮಾ‌ರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಇದೀಗ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈಗ ಅವರು ಇಂದು ಇಹಲೋಕಾ ತ್ಯಜಿಸಿದ್ದಾರೆ. ವಕ್ಸ್ ಬೋರ್ಡ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, “ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು” ಎಂದು ಹೇಳಿದ್ದರು. ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರೂ ಇರುವ ವೇದಿಕೆಯಲ್ಲಿ, “ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೆ ಡಿ ಕೆ ಶಿವಕುಮಾ‌ರ್ ಅವರು ಸಿಎಂ ಆಗ್ತಾರೆ. ಸಿಎಂ ಕುರ್ಚಿ ಬಿಟ್ಟುಕೊಡಬೇಕು” ಎಂಬ ಹೇಳಿಕೆ ನೀಡಿ ಮುಜುಗರ ಉಂಟು ಮಾಡಿದ್ದರು.

Continue Reading

Politics

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ: ಎಚ್‌.ಕೆ.ಪಾಟೀಲ್‌

Published

on

ಗದಗ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಎಂದು ನೋಡಲು ಪ್ರಯತ್ನ ಮಾಡುತ್ತಿದ್ದು, ಈ ವಿಚಾರದಲ್ಲಿ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಗದಗದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳದ ವಿಚಾರ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ ತನಿಖೆ ನಡೆದಿದೆ. ತನಿಖೆಯು ಯಾವ ಹಂತದಲ್ಲಿದೆ ಎಂಬ ಕೆಲವು ಭಾಗ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಬಗ್ಗೆ ಬಹುಶಃ ಸೋಮವಾರ ಇನ್ನು ಹೆಚ್ಚಿನ ಮಾಹಿತಿಯನ್ನು ಗೃಹ ಸಚಿವರು ನೀಡುತ್ತಾರೆ ಎಂದಿದ್ದಾರೆ ಎಂದು ಹೇಳಿದರು.

ಶಾಸನ ಸಭೆಯಲ್ಲಿ ಚರ್ಚೆ ಮಾಡಿದ್ದರಿಂದ ಸೋಮವಾರ ಸರ್ಕಾರ ತನ್ನ ಉತ್ತರ ನೀಡಲಿದೆ. ನಾವು ಧರ್ಮಸ್ಥಳ ಮಂಜುನಾಥನ ಸನ್ನಿಧಾನ ಬಗ್ಗೆ ವಿಶೇಷ ಭಕ್ತಿ, ಗೌರವ, ಅಭಿಮಾನ ಹೊಂದಿದವರು. ಆದ್ದರಿಂದ ಸರ್ಕಾರದ ಬಗ್ಗೆ ಯಾರು ಅನುಮಾನದ ಮಾತುಗಳನ್ನಾಡುತ್ತಿದ್ದಾರೆ. ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುತ್ತಿದ್ದಾರೆ. ಇವತ್ತು ಮಾತನಾಡುವವರು 10 ದಿನಗಳ ಹಿಂದೆ ಯಾಕೆ ಮಾತನಾಡಲಿಲ್ಲ? ಸಮಯದ ಉಪಯೋಗ ಮಾಡಿಕೊಂಡು ಏನಾದ್ರು ಮಾಡುವ ಪ್ರಯತ್ನಿಸಿದರೆ ಅದರಿಂದ ಏನು ಲಾಭ ಆಗುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ  ಒಳಮೀಸಲಾತಿ ಬಗ್ಗೆ ಮಾತನಾಡಿದ ಅವರು, ಒಳಮೀಸಲಾತಿಗೆ ಸಂಬಂಧಪಟ್ಟಂತೆ ಆ.16 ರಂದು ವಿಶೇಷ ಸಚಿವ ಸಂಪುಟ ಕರೆಯಲಾಗಿತ್ತು. ಆದರೆ ಈ ಬಗ್ಗೆ ಕೆಲವು ಸಚಿವರು, ಸಿಎಂ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳನ್ನು ಚರ್ಚೆ ಮಾಡ್ತಿದ್ದಾರೆ. ಅದಕ್ಕೆ ಒಂದೆರಡು ದಿನ ಹೆಚ್ಚಿಗೆ ಸಮಯ ತೆಗೆದುಕೊಂಡಿದ್ದಾರೆ. ಆದ್ದರಿಂದ ಆ.19ರಂದು ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ. ಅದರೊಳಗೆ ನಾಗಮೋಹನ್‌ದಾಸ್ ವರದಿ ಬಗ್ಗೆ ಅಂತಿಮವಾಗಿ ಚರ್ಚೆ ಹಾಗೂ ನಿರ್ಣಯ ಆಗುತ್ತದೆ ಎಂದು ಹೇಳಿದರು.

Continue Reading

Trending

error: Content is protected !!