Mysore
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು
ಮೈಸೂರು ಡಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು.
ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ಅವರು ವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Mysore
ತಾವೇ ಹೆಚ್ಚಿಸಿದ್ದ ಜಿಎಸ್‌ಟಿಯನ್ನು ಕಡಿತಗೊಳಿಸಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಎಸ್‌ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.

ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ
ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉತ್ತರಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ , ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು. ಆಯೋಗದ ಶಿಫಾರಸ್ಸಿನಂತೆ 5490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ 3000 ಕೋಟಿ, ರಸ್ತೆ ನಿರ್ಮಾಣಕ್ಕೆ 3000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೊಟಿ ರೂ.ಗಳ ಅನುದಾನವನ್ನು ನಮಗೆ ನೀಡಲಾಗಿಲ್ಲ. ಒಟ್ಟಾರೆ 17000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದರು.
ಬಿಜೆಪಿ ಸಂಸದರಿಗೆ ರಾಜ್ಯದ ಹಿತ ಬೇಕಾಗಿಲ್ಲ
ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್ ಟಿ ಸರಳೀಕರಣದಿಂದ ರಾಜ್ಯಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ನಷ್ಟವಾಗಲಿದೆ. ಕೇಂದ್ರಸರ್ಕಾರ , ಎನ್ ಡಿ ಎ ಗೆ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್ ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದರು.
ಅಕ್ಟೋಬರ್. 7 ರೊಳಗೆ ಸಮೀಕ್ಷೆ ಪೂರ್ಣಗೊಳ್ಳುವ ಭರವಸೆಯಿದೆ
ರಾಜ್ಯದಲ್ಲಿ ಜಾತಿಸಮೀಕ್ಷೆ ಕಾರ್ಯದ ಪ್ರಗತಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್. 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಮೀಕ್ಷೆಯಲ್ಲಿ ಜಾತಿವಿವರ- ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ
ಮತಾಂತರ ಹಾಗೂ ಜಾತಿಒಡೆಯುವ ದೃಷ್ಠಿಯಿಂದ ಸಮೀಕ್ಷೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ. ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ ಆಯೋಗ, ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.
ರಾಜಕಾರಣಕ್ಕಾಗಿ ಆರೋಪ
ವಿಪಕ್ಷ ನಾಯಕ ಅಶೋಕ್ ರವರು ರೈತರ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರ ಇದ್ದರೂ ಸತ್ತಂತೆಯೇ ಎಂದು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ, ಅಶೋಕ್ ಅವರು ವಿಪಕ್ಷದ ನಾಯಕರಾಗಿದ್ದರೂ, ಆರ್ ಎಸ್ ಎಸ್ ನವರ ನಿರ್ದೇಶನದಂತೆ ಮಾತನಾಡುತ್ತಾರೆ. ಅಶೋಕ್ ರವರು ರಾಜಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ ಎಂದರು.
Mysore
ಪಯಣೋತ್ಸವಕ್ಕೆ ಅದ್ದೂರಿ ತೆರೆ: 170 ವಿದ್ಯಾರ್ಥಿಗಳಿಂದ ಶ್ರೀ ರಾಮಾಯಣ ದರ್ಶನಂ ನೃತ್ಯ ರೂಪಕ
ಮೈಸೂರು: ಮೈಸೂರು ದಸರಾ ನಾಡಿನ ಹೆಮ್ಮೆ, ಸಂಸ್ಕೃತಿಯ ಉತ್ಸವ, ಹಾಗೂ ಪರಂಪರೆಯ ಪ್ರತೀಕ. ಈ ಮಹೋತ್ಸವವು ವರ್ಷಕ್ಕೊಮ್ಮೆ ನಾಡಿನ ನಾನಾ ಭಾಗಗಳಿಂದ ಜನರನ್ನು ಸೆಳೆಯುವ, ಸಂಸ್ಕೃತಿಯ ಸೌಂದರ್ಯವನ್ನು ಅನಾವರಣಗೊಳಿಸುವ ವಿಶಿಷ್ಟ ವೇದಿಕೆಯಾಗಿದ್ದು, ಈ ವರ್ಷವೂ ಅದೇ ಉತ್ಸಾಹದೊಂದಿಗೆ ಸಮಾಪ್ತಿಗೊಂಡಿದೆ .

ಮೈಸೂರು ದಸರಾ ಪ್ರಯುಕ್ತ ಪಯಣ ಕಾರು ಸಂಗ್ರಹಾಲಯದಲ್ಲಿ 11 ದಿನಗಳ ಕಾಲ “ಪಯಣೋತ್ಸವ” ವನ್ನು ಆಯೋಜನೆ ಮಾಡಲಾಗಿತ್ತು. ಸೆ. 22 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮೊದಲೆರಡು ದಿನಗಳು ರಂಗ- ಗೀತ ವೈಭವ , ಉಳಿದ 6 ದಿನಗಳು ಸಂಗ್ರಹಾಲಯದ ಒಳಭಾಗದಲ್ಲಿ ಸಿತಾರ್, ವಯೊಲಿನ್, ಕೊಳಲು, ವೀಣೆ, ಶಹನಾಯಿ ಸೇರಿದಂತೆ ವಿವಿಧ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಗಳು ಪಯಣಿಗರ ಮನಸೂರೆಗೊಂಡಿತು.
ಕೊನೆಯ ಈ
ಎರಡು ದಿನದ ಕಾರ್ಯಕ್ರಮದಲ್ಲಿ ಉಜಿರೆಯ ಎಸ್.ಡಿ .ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳು ” ಎಸ್.ಡಿ.ಎಂ ಕಲಾವೈಭವ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಸೆ. 30 ಮತ್ತು ಅ.1 ರಂದು ನೀಡಿ ಎಲ್ಲಾ ವೀಕ್ಷಕರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಮೋಹಿನಿಯಾಟ್ಟಮ್, ಭರತನಾಟ್ಯ, ಫ್ಲೆಮಿಂಕೋ, ಗಾರ್ಭದಾಂಡ್ಯ, ಕಥಕ್, ತೈಯಂ, ಕಲಿಂಕ, ಜೊತೆಗೆ ವಿವಿಧ ರಾಜ್ಯಗಳ ಸಂಸ್ಕೃತಿಯನ್ನು ಬಿಂಬಿಸುವ ಫ್ಯೂಷನ್ ನೃತ್ಯ ಮತ್ತು
20 ನಿಮಿಷಗಳ ವಿವಿಧ ರಾಷ್ಟೀಯ ಹಾಗೂ ಅಂತರಾಷ್ಟ್ರೀಯ ವಿವಿಧ ಪ್ರಕಾರಗಳನ್ನೊಳಗೊಂಡ ಶ್ರೀ ರಾಮ ಪಟ್ಟಾಭಿಷೇಕ ಮೂಲಕ ಸಂಪೂರ್ಣ ರಾಮಾಯಣವನ್ನು ಒಟ್ಟು 170 ವಿದ್ಯಾರ್ಥಿಗಳು ಪ್ರದರ್ಶನ ನೀಡಿದ್ದು, ಎಲ್ಲಾ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
Mysore
ಅರಮನೆ ಅಂಗಳದಲ್ಲೂ ನೂಕುನುಗ್ಗಲು
ಮೈಸೂರು: ಜಂಬೂ ಸವಾರಿ ವೀಕ್ಷಣೆಗಾಗಿ ಮೈಸೂರು ಅರಮನೆ ಆವರಣದಲ್ಲಿ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ವಿವಿಐಪಿ, ವಿಐಪಿ ಪಾಸ್‌ಗಳ ಜತೆಗೆ ಸಾವಿರಾರು ರೂ. ಖುರ್ಚು ಮಾಡಿ ಗೋಲ್ಡ್ ಪಾಸ್ ಪಡೆದವರೂ ಮೆರವಣಿಗೆ ವೀಕ್ಷಿಸಲು ಪರದಾಡುವಂತಾಗಿತ್ತು.
ಕೆಲ ಗ್ಯಾಲರಿಗಳನ್ನು ಹೊರತುಪಡಿಸಿ ಮುಂಜಾಗೃತೆಯ ನಡುವೆಯೂ ಅರಮನೆ ಅಂಗಳದಲ್ಲಿ ಕುಳಿತಿದ್ದವರು ಅಂಬಾರಿ ವೀಕ್ಷಿಸಲು ಕಷ್ಟಪಟ್ಟರು.

ಪಾಸ್ ಇದ್ದವರಿಗೆ ಮಾತ್ರ ಅರಮನೆಗೆ ಪ್ರವೇಶ ಕಲ್ಪಿಸಲಾಗಿತ್ತು. ಮುಖ್ಯಮಂತ್ರಿ, ಸಂಪುಟ ಸಚಿವರು, ಸ್ಪೀಕರ್, ಶಾಸಕರಿಗೆ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ಹೈಕೋರ್ಟ್, ಸುಪ್ರೀಕೋರ್ಟ್ ನ್ಯಾಯಮೂರ್ತಿಗಳಿಗೂ ಅವಕಾಶ ಕಲ್ಪಿಸಲಾಗಿತ್ತು.
ಬೃಹತ್ ಪ್ರಮಾಣದಲ್ಲಿ ಶಾಮಿಯಾನ ಹಾಕುವ ಮೂಲಕ ಕೆಲ ಗ್ಯಾಲರಿಗಳಿಗೆ ಜಿಲ್ಲಾಡಳಿತ ನೆರಳಿನ ವ್ಯವಸ್ಥೆ ಮಾಡಿತ್ತು. ಅರಮನೆಯಲ್ಲಿ ಕುಳಿತವರಿಗೆ ಮೆರವಣಿಗೆಯ ಆರಂಭಿಕ ದೃಶ್ಯಗಳನ್ನು ಕಣ್ತುಂಬಿಕೊAಡರು. ರಾಜವಂಶಸ್ಥರು ಅರಮನೆಯ ಗ್ಯಾಲರಿಗಳಲ್ಲೇ ಕುಳಿತು ಮೆರವಣಿಗೆ ವೀಕ್ಷಿಸಿದರು.
8ನೇ ಬಾರಿ ಸಿದ್ದರಾಮಯ್ಯ ಪುಷ್ಪಾರ್ಚನೆ
ಮೈಸೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 8ನೇ ಬಾರಿ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿದರು. ಇದರೊಂದಿಗೆ ಅತಿಹೆಚ್ಚು ಬಾರಿ ಜಂಬಾ ಸವಾರಿಗೆ ಪುಷ್ಪಾರ್ಚನೆ ಮಾಡಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.
ಮೊದಲ ಅವಧಿಯಲ್ಲಿ ಸತತ ಐದು ಬಾರಿ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದ ಸಿದ್ದರಾಮಯ್ಯ, ಎರಡನೇ ಅವಧಿಯಲ್ಲಿ ಮೂರನೇ ಬಾರಿಗೆ ಪುಷ್ಪಾರ್ಚನೆ ಮಾಡಿದರು.
ಕುಡಿಯುವ ನೀರು, ಬಿಸ್ಕತ್ತು ವಿತರಣೆ
ಮೈಸೂರು: ನಗರದ ಹಲವು ಸಂಘ-ಸAಸ್ಥೆಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರದರ್ಶಿಸುತ್ತ ಸಾಗಿದ ಕಲಾವಿದರು, ಪೊಲೀಸರು, ಸ್ವಯಂ ಸೇವಕರಿಗೆ ಕುಡಿಯುವ ನೀರು ಮತ್ತು ಬಿಸ್ಕತ್ತು ವಿತರಿಸಿದವು.
ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ಕೆ ಪೌರಕಾರ್ಮಿಕರ ನಿಯೋಜನೆ ಮಾಡಲಾಗಿತ್ತು. ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಮನವಿ ಮಾಡಿದ್ದರೂ ಸಾರ್ವಜನಿಕರು ಸ್ಪಂದಿಸಲಿಲ್ಲ. ಮೆರವಣಿಗೆಯ ಜತೆಯಲ್ಲೇ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ಪೌರಕಾರ್ಮಿಕರು ಮಜ್ಜಿಗೆ ಕುಡಿದು ದಣಿವು ನೀಗಿಸಿಕೊಂಡರು.
ಮರ ಹತ್ತಿದರು, ಕಟ್ಟಡ ಏರಿದರು
ಮೈಸೂರು: ರಾಜಮಾರ್ಗದಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು ಮತ್ತು ಮರಗಳ ಮೇಲೆ ಕುಳಿತು ಸಾವಿರಾರು ಜನರು ಜಂಬೂ ಸವಾರಿ ವೀಕ್ಷಿಸಿದರು.
ಪಾರಂಪರಿಕ ಕಟ್ಟಡಗಳು ಕುಸಿಯುವ ಹಂತದಲ್ಲಿದ್ದು, ಅವುಗಳ ಮೇಲೆ ಕುಳಿತು ಜಂಬೂ ಸವಾರಿ ವೀಕ್ಷಿಸುವುದನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಮತ್ತು ನಗರ ಪೊಲೀಸ್ ಆಯುಕ್ತರು ನಿಷೇಧಿಸಿದ್ದರು. ಅದಾಗ್ಯೂ ಸಾವಿರಾರು ಜನರು ಪಾರಂಪರಿಕ ಕಟ್ಟಡಗಳನ್ನು ಏರಿದ್ದರು. ಪೊಲೀಸ್ ಸಿಬ್ಬಂದಿಯನ್ನು ಕಟ್ಟಡಗಳ ಮೇಲೆ ನಿಯೋಜಿಸಿದ್ದರೂ ಪ್ರೇಕ್ಷಕರನ್ನು ತಡೆಯಲು ಸಾಧ್ಯವಾಗಿಲ್ಲ. ಕೆಲ ಯುವಕರು ಮರದ ರಂಬೆ- ಕೊಂಬೆಗಳ ಮೇಲೆ ಕುಳಿತು ಚಿನ್ನದ ಅಂಬಾರಿಯನ್ನು ಕಣ್ತುಂಬಿಕೊAಡರು.
-
Chamarajanagar5 hours agoಬಫರ್ ವಲಯ ವ್ಯಾಪ್ತಿಯಲ್ಲಿ ಹುಲಿ ಕಳೇಬರ ಪತ್ತೆ
-
State1 hour agoಹೆಸರು ಹೇಳದೆ ಡಿಸಿಎಂ ಡಿಕೆಶಿ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಎಚ್ಡಿಡಿ
-
Mysore55 minutes agoತಾವೇ ಹೆಚ್ಚಿಸಿದ್ದ ಜಿಎಸ್‌ಟಿಯನ್ನು ಕಡಿತಗೊಳಿಸಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ದರಾಮಯ್ಯ
-
Kodagu20 hours agoನಾಪೋಕ್ಲು :ವಿಷ ಸೇವಿಸಿ ಕಾಲೇಜು ವಿದ್ಯಾರ್ಥಿಗಳಿಬ್ಬರು ಆತ್ಮಹ*ತ್ಯೆ
-
Hassan25 minutes agoಕಾಡಾನೆ ಹಾವಳಿಗೆ ಮುಕ್ತಿ ಕೊಡಿಸುವಂತೆ ಮಲೆನಾಡಿಗರ ಆಗ್ರಹ
-
Kodagu38 minutes agoಬಹುಮುಖ ಪ್ರತಿಭೆಯ ಬಾಳೆಯಡ ಕಿಶನ್ ಪೂವಯ್ಯ
-
Chamarajanagar52 minutes agoಎಂಎಂ ಹಿಲ್ಸ್ ಮತ್ತೊಂದು ಹುಲಿ ಹತ್ಯೆ: ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ
-
Kodagu1 hour agoಸೈನಿಕ ಶಾಲೆ ಕೊಡಗು – 23 ವಿದ್ಯಾರ್ಥಿಗಳು ಯುಪಿಎಸ್ಸಿ ಎನ್ಡಿಎ ಪರೀಕ್ಷೆಯಲ್ಲಿ ಉತ್ತೀರ್ಣ
