Connect with us

Mysore

ಮುಡಾ ಮಾಜಿ ಅಧ್ಯಕ್ಷ ವಿಜಿ  ರವರ ತಂದೆ ನಿಧನ 

Published

on

ಸಾಲಿಗ್ರಾಮ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ಹರದನಹಳ್ಳಿಯಎಚ್.ಎನ್.ವಿಜಯ್ ಅವರ ತಂದೆ  ನರಸಿಂಹೇಗೌಡ (74) ರವರು ಗುರುವಾರ ರಾತ್ರಿ ನಿಧನರಾಗಿದ್ದರು.

ಮೃತರು ಪತ್ನಿ ಭಾಗ್ಯಮ್ಮ, ಪುತ್ರರಾದ ಉದ್ಯಮಿಗಳಾದ ಎಚ್.ಎನ್.ವಿಜಯ್, ಎಚ್.ಎನ್.ರವಿ, ಪುತ್ರಿ ಗೀತಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇವರು ಮೂಲ ಕೃಷಿಕರಾಗಿದ್ದರು. ಇವರ ಅಂತ್ಯಕ್ರಿಯೆಯು ಅವರ ಸ್ವ-ಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನೆರವೇರಿತು.

ಅಂತ್ಯಕ್ರಿಯೆಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಮಾಜಿ ಶಾಸಕ ಕೆ.ಮಹದೇವ್, ಜಿ.ಪಂ. ಮಾಜಿ ಅಧ್ಯಕ್ಷ  ಸಾ.ರಾ.ನಂದೀಶ್, ಮಾಜಿ ಸದಸ್ಯರಾದ ಎಂ.ಟಿ.ಕುಮಾರ್ ಚಂದ್ರಿಕಾಸುರೇಶ್, ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ  ಕೆ.ಎನ್.ಬಸಂತ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ.ರಾಮೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಕೆಡಗ ನಟರಾಜ್, ಕುಪ್ಪಳ್ಳಿ ಸೋಮ, ತಾ.ಪಂ. ಮಾಜಿ ಅಧ್ಯಕ್ಷರಾದ ಹೆಚ್.ಟಿ.ಮಂಜಪ್ಪ, ಹಾಡ್ಯ ಮಹದೇವಸ್ವಾಮಿ, ಚಂದ್ರಶೇಖರ್, ಮಾಜಿ ಸದಸ್ಯರಾದ ಎ.ಟಿ.ಗೋವಿಂದೇಗೌಡ, ಗಾಂಧಿ ಶಿವಣ್ಣ, ಹೆಚ್.ಟಿ.ಲೋಕೇಶ್, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಪರ ಆಯುಕ್ತ ಜಗನ್ನಾಥ್ ಸಾಗರ್, ವಕೀಲ ಪಾಲಾಕ್ಷ,   ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ದೊಡ್ಡಕೊಪ್ಪಲು ವಿನಯ್, ನಿಕಟ ಪೂರ್ವ ಅಧ್ಯಕ್ಷ ವಡ್ಡರ ಕೊಪ್ಪಲು ಶಿವರಾಮ್, ಮಾಜಿ ಉಪಾಧ್ಯಕ್ಷ ಸಾಲಿಗ್ರಾಮ ಎಸ್ ಬಿ ಹರೀಶ್, ನಿರ್ದೇಶಕ ಚುಂಚನಕಟ್ಟೆ ಮಧು, ಜಿಲ್ಲಾ ಕಾಂಗ್ರೆಸ್ ಹಿರಿಯ ಕಾರ್ಯದರ್ಶಿ ಮಿರ್ಲೆ ನಂದೀಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಮೆಡಿಕಲ್ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ್,  ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್,  ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೀಶ್ ಉಪ್ಪಾರ್, ತಾಲೂಕು ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಕಾಟ್ನಾಳು ಮಹದೇವ, ಮಾಜಿ ಅಧ್ಯಕ್ಷ ಡಿ.ತಮ್ಮಯ್ಯ, ತಾಲೂಕು ಹಾಲಿನ ಡೇರಿಗಳ ನೌಕರರ ಸಂಘದ ಅಧ್ಯಕ್ಷ ಜಿ.ಕೆ.ಮಹದೇವ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾರಾ ಪ್ರಕಾಶ್  ಸೇರಿದಂತೆ ಅಪಾರ ಬಂಧುಗಳು ಪಾಲ್ಗೊಂಡಿದ್ದರು.

ಸಂತಾಪ: ಮೃತರ ನಿಧನಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾ ಸ್ವಾಮೀಜಿ, ಕರ್ಪೂರವಳ್ಳಿ  ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿ.ಡಿ.ಹರೀಶ್ ಗೌಡ, ಎ.ಮಂಜು, ಅನಿಲ್ ಚಿಕ್ಕಮಾದು, ಮಾಜಿ ಶಾಸಕರಾದ ಸಾ.ರಾ.ಮಹೇಶ್, ಎಚ್.ಪಿ.ಮಂಜುನಾಥ್, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮಿಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಘು ಕೌಟಿಲ್ಯ, ದೇವರಾಜ ಅರಸು ಟ್ರಕ್ ಟರ್ಮಿನಲ್ ಕಾರ್ಖಾನೆ ಮಾಜಿ ಅಧ್ಯಕ್ಷ ಹನುಮಂತಶೆಟ್ಟಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಜಿ.ಕೆ.ಗಿರೀಶ್ ಉಪ್ಪಾರ್, ಶಿವಕುಮಾರ್, ಉದ್ಯಮಿ ಸುಧಾಕರಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷರಾದ ಲತಾ ಸಿದ್ಧಶೆಟ್ಟಿ, ವಿಶಾಲಾಕ್ಷಿ ನಟರಾಜ್, ಮಾಜಿ ಸದಸ್ಯರಾದ ಕೆ.ಬಿ.ಸ್ವಾಮಿ, ಅಮಿತ್ ವಿ.ದೇವರಹಟ್ಟಿ, ಅಚ್ಯುತಾನಂದ, ಬಿಜೆಪಿ ಮುಖಂಡರಾದ ಮಂಗಲಶಿವಕುಮಾರ್, ಹೊಸಹಳ್ಳಿ ವೆಂಕಟೇಶ್  ಸೇರಿದಂತೆ ಹಲವು ಗಣ್ಯರುಗಳು ಸಂತಾಪ ಸೂಚಿಸಿದ್ದಾರೆ.

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ತಾಲ್ಲೂಕಿನ ತಗಡೂರಿನಲ್ಲಿ ವಾಂತಿ-ಭೇದಿ ಪ್ರಕರಣ — ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಭೇಟಿ

Published

on

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ಸುಮಾರು 120ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದಾಗಿ ಕಾಲರಾ ರೋಗವು ಆವರಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಗಡೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.


ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಗ್ರಾಮಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀತಿ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಬಂದಿದ್ದೇನೆ. ಮಳೆಗಾಲ ಇನ್ನು ಕಡಿಮೆಯಾಗಿಲ್ಲ ಕೂಡಲೇ ಅಧಿಕಾರಿಗಳು ಗ್ರಾಮದ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೇಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮಸ್ಥರಿಗೆ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಬೇಕು. ಸ್ಥಗಿತಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು. ಈಗಾಗಲೇ ಮೂರು ಟ್ಯಾಂಕರ್ ಗಳಿಂದ ಶುದ್ಧ ಕುಡಿಯುವ ನೀರನ್ನು ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದೆ. ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆ ಆಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಪಂ ಸಿಇಒ ಗಾಯಿತ್ರಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ಗ್ರಾಪಂ ಅಧ್ಯಕ್ಷೆ ಚಂದ್ರವತಿ ಬಸವರಾಜು, ಉಪಾಧ್ಯಕ್ಷ ಗುರುಮಲ್ಲೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಕುಮಾರಸ್ವಾಮಿ, ಯುವ ಮುಖಂಡರಾದ ಗಾರ್ಡನ್ ಮಹೇಶ್, ಶಿವರಾಂ, ಆಸ್ಪತ್ರೆಯ ವೈದ್ಯಾಧಿಕಾರಿ ಪ್ರಭು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Mysore

ವೃತ್ತಿನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯ

Published

on

ವೃತ್ತಿನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯ

 

ಸಾಲಿಗ್ರಾಮ  : ಬೆಂಗಳೂರಿನಲ್ಲಿ ವೃತ್ತಿ ನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆಸಿದ ಪುಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೃಷ್ಣರಾಜನಗರ ತಾಲೂಕು ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯಿಸಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮುಂಭಾಗ ಧರಣಿ ಕೈಗೊಂಡು ಗ್ರೇಡ್-೨ ತಹಸೀಲ್ದಾರ್ ಬಾಲಸುಬ್ರಮಣ್ಯ ಹಾಗೂ ಶಿರಸ್ತೆದಾರ್ ಅಕ್ರಂ ಭಾಷ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅಧ್ಯಕ್ಷರು ಮೇ.೧೮ ರಂದು ಬೆಂಗಳೂರಿನ ಶಿವಾಜಿನಗರದ ಶಮ್ಸ್ ಕಲ್ಯಾಣ ಮಂಟಪದಲ್ಲಿ

ನಡೆಯುತ್ತಿದ್ದ ಮದುವೆ ಕಾರ್ಯಕ್ರಮದ ವಿಡಿಯೋ ಚಿತ್ರೀಕರಣಕ್ಕೆ ಹೋಗಿದ್ದ ಛಾಯಾಗ್ರಾಹಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಮದುವೆ ಸಮಾರಂಭದಲ್ಲಿದ್ದ ಕೆಲವು ಪುಂಡರು ಮನಬಂದoತೆ ಹಲ್ಲೆ ನಡೆಸಿದವರ ವಿರುದ್ಧ ಸಂಘದ ಪದಾಧಿಕಾರಿಗಳು ನಿರ್ದೇಶಕರು ಹಾಗೂ ಸದಸ್ಯರು ತಾಲೂಕು ಆಡಳಿತ ಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರಿಗೆ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಹೊಟ್ಟೆಪಾಡಿಗಾಗಿ ವಿಡಿಯೋ ಚಿತ್ರೀಕರಣ ಮಾಡುವ ಛಾಯಾಗ್ರಾ ಹಕನ ಮೇಲೆ ಹಲ್ಲೆ ಮಾಡಿರುವುದು ಅಮಾನವೀಯ ಘಟನೆ ಯಾಗಿದ್ದು, ಇದರಿಂದ ಛಾಯಾಗ್ರಹಕರಿಗೆ ಯಾವುದೇ ರಕ್ಷಣೆ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.


ಈ ಕೃತ್ಯವನ್ನು ಖಂಡಿಸಿ ರಾಜ್ಯ ಛಾಯಾಗ್ರಹಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಲ್ಲೆ ನಡೆಸಿದ ಪುಂಡರ ಮೇಲೆ ಪೊಲೀಸರಿಗೆ ದೂರು ನೀಡಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಹಲ್ಲೆ ಮಾಡಿದ ಪುಂಡರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಛಾಯಾಗ್ರಹಕರಿಗೆ ಸೂಕ್ತ ರಕ್ಷಣೆ ದೊರಕಿಸಿಕೊಡಬೇಕು ಹಾಗೂ ಹಲ್ಲೆಗೊಳಾಗಿರುವ ಛಾಯಾಗ್ರಹಕನಿಗೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಸಿದರು.
ಈ ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷರುಗಳಾದ ಎಂ.ಪಿ.ಮಹದೇವ, ಸಂತೋಷ್, ಕಾರ್ಯದರ್ಶಿ ಶ್ರೀನಿವಾಸ್‌ಗೌಡ, ಪದಾಧಿಕಾರಿಗಳಾದ ಯೋಗೇಶ್, ಜಯರಾಜ್, ಚೀರನಹಳ್ಳಿ ರವಿ, ನಿರ್ದೇಶಕರುಗಳಾದ ಉಮಾಶಂಕರ್, ಶುಭಂರವಿ, ಮಂಜುನಾಥ್, ರಘುಚಂದಗಾಲು, ವಿಜಯ್, ಸದಸ್ಯರಾದ ಶಿಲ್ಪಶ್ರೀನಿವಾಸ್, ತಿಪ್ಪೂರುರವಿ, ಶ್ರೀನಿವಾಸ್, ಸಾರಾ.ನಾಗೇಶ್, ಮಧುವನಹಳ್ಳಿ ರಘು, ದಯನಂದ್, ರಕ್ಷಿತ್, ಸುನೀಲ್, ಶರತ್, ಸುನೀಲ್ ಮೊದಲಿಯರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Continue Reading

Mysore

ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ.ಹೆಚ್.ಸಿ.ಮಹದೇವಪ್ಪ

Published

on

ಮೈಸೂರು,ಮೇ.22: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಯರಗನಹಳ್ಳಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ವಿಷಯ ತಿಳಿದು ಇಂದು ಜೆಎಸ್ಎಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು‌.

ಈ ವೇಳೆ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದ ಮೃತದೇಹಗಳನ್ನು ವೀಕ್ಷಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವರು, ಘಟನೆ ಕುರಿತು ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸರ್ಕಾರದ ವತಿಯಿಂದ ತಲಾ ಮೂರು ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಸ್ಥಳದಲ್ಲಿಯೇ ಘೋಷಿಸಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಮರಿಗೌಡ ಅವರು ಸೇರಿದಂತೆ ಮುಂತಾದವರು ಇದ್ದರು.

Continue Reading

Trending

error: Content is protected !!