Connect with us

Chamarajanagar

ಯಳಂದೂರು ಸಮೀಪದ ಇರಸವಾಡಿ ಗ್ರಾಮದಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಜನ ಸಂಪರ್ಕ ಸಭೆ ನಡೆಯಿತು.

Published

on

ಜನಸಂಪರ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಜನಸಂಪರ್ಕ ಸಭೆಯನ್ನು ಕೇವಲ ಕಾಟಾಚಾರಕ್ಕೆ ಮಾಡುತ್ತಿಲ್ಲ, ಬದಲಾಗಿ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾಡಲಾಗುತ್ತಿದೆ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಜನ ಸಂಪರ್ಕ ಸಭೆಗಳಲ್ಲಿ ಬಂದಿರುವ ಅರ್ಜಿಗಳನ್ನು ಆಯಾಯ ಇಲಾಖೆಗಳಿಗೆ ನೀಡಲಾಗಿದ್ದು, ಅದರ ಸ್ಥಿತಿಗತಿಗಳನ್ನು ತಿಳಿದುಕೊಳ್ಳಲು ಆಯಾಯ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇರಸವಾಡಿ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸ್ಥಳದಲ್ಲೇ ಕೆಲವು ಅರ್ಜಿಗಳನ್ನು ಇತ್ಯರ್ಥ ಮಾಡಲಾಯಿತು . ಮತ್ತು ಕೆಲವು ಅರ್ಜಿಗಳಲ್ಲಿ ನಮಗೆ ಮನೆ ಮಂಜೂರಾತಿ ಆಗಿಲ್ಲ, ನಿರ್ಮಾಣ ಹಂತದ ಮನೆಗಳ ಬಿಲ್ ಆಗಿಲ್ಲ, ನರೇಗಾ ಯೋಜನೆಯ ಕೆಲಸದ ದಿನಕೂಲಿ ಸರಿಯಾಗಿ ಬಂದಿಲ್ಲ, ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿಯನ್ನು ನಿರ್ಮಿಸಿ ಕೊಡುವಂತೆ ಮನವಿ ಪತ್ರ ನೀಡಲಾಯಿತು.

ಅಂಬೇಡ್ಕರ್ ಸಮುದಾಯ ಭವನವನ್ನು ಮತ್ತು ಅಂಬೇಡ್ಕರ್ ಸ್ಟ್ಯಾಚು ವನ್ನು ನಿರ್ಮಿಸಿ ಕೊಡುವಂತೆ ಗ್ರಾಮಸ್ಥರು ಕೇಳಿಕೊಂಡರು, ಅದಕ್ಕೆ ಶಾಸಕರು ಸಕರಾತ್ಮಕವಾಗಿ ಸ್ಪಂದಿಸಿ ಮುಂದಿನ ದಿನಗಳಲ್ಲಿ ನಿರ್ಮಾಣ ಮಾಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಉಜ್ವಲ ಯೋಜನೆ ಅಡಿ ಗ್ಯಾಸ್ ಸಂಪರ್ಕ ನೀಡಬೇಕೆಂದು ಅರ್ಜಿಯನ್ನು ನೀಡಲಾಗಿದೆ. ಆದಷ್ಟು ಬೇಗ ಸಂಬಂಧ ಪಟ್ಟ ಇಲಾಖೆಗೆ ಮಾಹಿತಿ ನೀಡಿ ಗ್ಯಾಸ್ ಸಂಪರ್ಕವನ್ನು ಒದಗಿಸಲಾಗುವುದು ಎಂದು ತಿಳಿಸಿದರು. ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಕೃಷಿ ಇಲಾಖೆ ಅಧಿಕಾರಿಗಳು ನಮಗೆ ಯಾವ ಸೌಲಭ್ಯವನ್ನು ನೀಡುತ್ತಿಲ್ಲ, ಪಿಎಂ ಕಿಸಾನ್ ಯೋಜನೆ ಸಹ ನಮಗೆ ಸರಿಯಾಗಿ ಲಭಿಸುತ್ತಿಲ್ಲ, ಆದ್ದರಿಂದ ವಾರಕ್ಕೊಮ್ಮೆ ಕೃಷಿ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸರ್ಕಾರದಿಂದ ಬರುತ್ತಿರುವ ಸೌಲಭ್ಯಗಳನ್ನು ರೈತರಿಗೆ ಮುಟ್ಟುವಂತೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಚಿನ್ನಮ್ಮ ರಂಗಸ್ವಾಮಿ, ಉಪಾಧ್ಯಕ್ಷ ಮಾಲಾಂಬಿಕ ಮಹದೇವಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಒ ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರು,
ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಮತ್ತು ಕಾಂಗ್ರೆಸ್ ಮುಖಂಡರುಗಳು ಸಾರ್ವಜನಿಕರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಚೇರ್ ನೀಡಿದ ಗ್ರಾಪಂ ಸದಸ್ಯ ಗುರುಲಿಂಗಯ್ಯ

Published

on

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-2 ಗೆ ಗ್ರಾಮ ಪಂಚಾಯತಿ ಸದಸ್ಯ ಗುರುಲಿಂಗಯ್ಯ ಕೆಸ್ತೂರು ಗ್ರಾಮ ಪಂಚಾಯತಿ 15 ನೇ ಹಣಕಾಸಿನಲ್ಲಿ 30 ಚೇರ್ ಗಳನ್ನು ಒದಗಿಸಿಕೊಟ್ಟಿದ್ದಾರೆ.

ವಿದ್ಯಾರ್ಥಿಗಳು ಚೇರ್ ನಲ್ಲಿ ಕೂತು ಅಧ್ಯಾಯನ ಮಾಡಲಿ. ವಿದ್ಯಾರ್ಥಿಗಳ ಹಿತಾ ದೃಷ್ಟಿಯಿಂದ ಚೇರ್ ಗಳನ್ನು ಪಂಚಾಯತಿ ಅನುದಾನದಲ್ಲಿ ನೀಡಲಾಗಿದೆ ಎಂದರು.

ಈ ಶಾಲೆಯು ಪರಿಶಿಷ್ಟರ ಕಾಲೋನಿಯಲ್ಲಿದ್ದು ಶೋಷಿತರ ಮಕ್ಕಳು ಚೆನ್ನಾಗಿ ಓದಬೇಕು ಅವರಿಗೆ ಯಾವುದೇ ಮೂಲಭೂತ ಸಮಸ್ಯೆಗಳು ಇರಬಾರದು ಡಾ ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ನಾವೆಲ್ಲರೂ ಅವರ ಮಾರ್ಗದಲ್ಲಿ ನಡೆಯಬೇಕಿದೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಂತ ಭಿನ್ನವಾಗಿರಬೇಕು.‌ ಪೋಷಕರು ದಯವಿಟ್ಟು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಯಲ್ಲಿಯೇ ಗುಣಮಟ್ಟ ಶಿಕ್ಷಣವನ್ನು ನೀಡಲಾಗುತ್ತದೆ.

ನಮಗೆ ಸಹಕಾರ ನೀಡಿದ ಗ್ರಾಮಪಂಚಾಯತಿ ಅಧ್ಯಕ್ಷಕರಿಗೆ, ಎಲ್ಲಾ ಸದಸ್ಯರಿಗೆ ಹಾಗೂ ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ ಸಹಕಾರದಿಂದ ಈ ಶಾಲೆಗೆ ಚೇರ್ ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಕೆ.ಚಿನ್ನಸ್ವಾಮಿ, ಮುಖ್ಯೋಪಾಧ್ಯಾಯರಾದ ಸಿದ್ದರಾಜು, ಶಿಕ್ಷಕರಾದ ನಂಜಯ್ಯ, ರಾಜೇಶ್, ಯುವ ಮುಖಂಡ ಮನೋಹರ್ ಹಾಗೂ ಇತರರು ಹಾಜರಿದ್ದರು.

Continue Reading

Chamarajanagar

ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗ ವ್ಯಾಪ್ತಿಯ ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 23ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಂತೇಮರಹಳ್ಳಿ ರಸ್ತೆ, ಆದಿಶಕ್ತಿ ದೇವಸ್ಥಾನ ಸುತ್ತಮುತ್ತ, ಪುಟ್ಟಮಣಿ ಪಾರ್ಕ್, ರೈಲ್ವೆ ಬಡಾವಣೆ, ಮೈಸೂರು ನಂಜನಗೂಡು ರಸ್ತೆ, ನಂದಿಭವನ ರಸ್ತೆ, ಹೊಸ ಖಾಸಗಿ ಬಸ್ ನಿಲ್ದಾಣ ಸುತ್ತಮುತ್ತ, ಪೊಲೀಸ್ ಕ್ವಾಟ್ರಸ್ ಮತ್ತು ಕೆ.ಹೆಚ್.ಬಿ ಕಾಲೋನಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳ ನಿರ್ದೇಶಕರಾಗಿ ಲಿಂಗರಾಜು ಆಯ್ಕೆ

Published

on

ಯಳಂದೂರು ಜ 22

ತಾಲೂಕಿನ ವಿವಿಧ ಮುಖಂಡರಿಂದ ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳ ನಿರ್ದೇಶಕರಾಗಿ ಆಯ್ಕೆಯಾದ ಅಗರ ಕೆ ಲಿಂಗರಾಜು ಅವರನ್ನು ಪಟ್ಟಣದ ಅಂಬೇಡ್ಕರ್ ಭವನದಲ್ಲಿರುವ ಬುದ್ಧ ಕೇಂದ್ರದಲ್ಲಿ ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಗರ ಕೆ ಲಿಂಗರಾಜು ಜಿಲ್ಲೆಯ ಮೀನುಗಾರರಿಗೆ ಸರ್ಕಾರದಿಂದ ದೊರಕುವ ಸವಲತ್ತುಗಳನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ. ಇಲಾಖೆ ವತಿಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ರಾಜ್ಯದಲ್ಲಿ ಮೀನುಗಾರರ ಸಮಸ್ಯೆ ಹೆಚ್ಚಾಗಿದೆ ಇವರ ಅಭಿವೃದ್ಧಿಗೆ ಹಲವಾರು ಯೋಜನೆಗಳಿವೆ. ಸರ್ಕಾರ ಮಟ್ಟದಲ್ಲಿ ಸಂಬಂಧಪಟ್ಟ ಸಚಿವರ ಗಮನ ಸೆಳೆದು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಮೀನುಗಾರರ ಮಕ್ಕಳಿಗೆ ಶಿಕ್ಷಣ ಸಿಗುವುದರ ಜೊತೆಗೆ ಅವರ ಆರ್ಥಿಕ ಮಟ್ಟವನ್ನು ಸುಧಾರಿಸಲಾಗುವುದು. ರಾಜ್ಯದ ಮೀನುಗಾರರು ಸೇರಿದಂತೆ ಜಿಲ್ಲೆಯ ಮೀನುಗಾರರಿಗೆ ಸರ್ಕಾರದಿಂದ ದೊರಕುವ ಸೌಲತ್ತುಗಳನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಮುಖಂಡ ಕಿನಕಹಳ್ಳಿ ರಾಚಯ್ಯ ಮಾತನಾಡಿ ಸತತವಾಗಿ ಎರಡನೇ ಬಾರಿಗೆ ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗುವುದು ಸುಲಭವಾದ ಮಾತಲ್ಲ, ಅಗರ ಕೆ ಲಿಂಗರಾಜು ಅವರು ಸರಳ ಜೀವಿಯಾಗಿದ್ದು ಅವರು ಸತತವಾಗಿ ಎರಡನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರಾಮಾಣಿಕತೆ, ಪ್ರಬುದ್ಧತೆ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ .ಮುಂದಿನ ದಿನಗಳಲ್ಲಿ ಮಹಾಮಂಡಲದ ಅಧ್ಯಕ್ಷರಾಗಬೇಕು ಎಂದು ಹಾರೈಸಿದರು.

ಗುತ್ತಿಗೆದಾರ ಮದ್ದೂರು ನಾರಾಯಣಸ್ವಾಮಿ, ಮುಖಂಡರಾದ ಜನಾರ್ಧನ ,ಗೌಡಳ್ಳಿ ಚಂದ್ರು, ಚಕ್ರವರ್ತಿ, ಇರಿಸವಾಡಿ ಶಿವಪ್ರಕಾಶ್, ರೇವಣ್ಣ, ಜಯರಾಮ, ಪರಿಶಿವ ,ಟೌನ್ ನಂಜುಂಡಸ್ವಾಮಿ, ನಟರಾಜು ಸೇರಿದಂತೆ ಇತರರು ಹಾಜರಿದ್ದರು

Continue Reading

Trending

error: Content is protected !!