Connect with us

Chamarajanagar

ಯಳಂದೂರು ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಾಡಿದ ಶಾಸಕ ಎ. ಆರ್. ಕೃಷ್ಣಮೂರ್ತಿ…

Published

on

ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ನಡೆಸಲಾಯಿತು.
ಪಟ್ಟಣದ ನೌಕರರ ಭವನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ರವರು ಉದ್ಘಾಟನೆ ನಡೆಸಿ
ಮಾತನಾಡಿ,ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವುದರಿಂದ ಅವರ ವ್ಯಾಸಂಗಕ್ಕೆ ಉತ್ತೇಜನ ನೀಡಿದಂತಾಗುತ್ತದೆ.ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕಾರ್ಯ ನಿರಂತರವಾಗಿ ನಡೆಯಬೇಕು.ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಶಿಕ್ಷಣ ಪಡೆದಂತೆ ಗೌರವಾನ್ವಿತ ಸ್ಥಾನಮಾನ,ಪುರಸ್ಕಾರ ಮತ್ತು ಸಂಸ್ಕಾರ ದಕ್ಕುತ್ತದೆ. ಈಗಾಗಲೇ ಎನ್. ಪಿ. ಎಸ್ ಹಾಗೂ ಓ. ಪಿ. ಎಸ್. ಬಗ್ಗೆ ಮಾತನಾಡಲು ಮನವಿ ನೀಡಿದ್ದೀರಾ ಅದನ್ನ ಸ್ವಾಗತಿಸುತ್ತೇನೆ ಹಾಗೇ ಯಳಂದೂರಿನಲ್ಲಿ ಶಿಕ್ಷಕರ ಭವನ, ಪತ್ರಿಕಾ ಭವನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಭವನಗಳಿಗೆ ಜಾಗ ನೀಡಲು ಪಟ್ಟಣ ಪಂಚಾಯತಿ ಮುಖ್ಯಧಿಕಾರಿಗಳ ಜೊತೆ ಮಾತನಾಡಿದ್ದೇನೆ ಸದ್ಯದಲ್ಲೇ ಅದು ನಡೆಯುತ್ತದೆ ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ರವರು ಮಾತನಾಡಿ 7 ನೇ ವೇತನ ಆಯೋಗದ ಶಿಫಾರಸು, ಹಳೆ ಪಿಂಚಣಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ
ಜೂನ್‌ 2004ರ ನಂತರ ನೇಮಕವಾದ ರಾಜ್ಯ ಸರ್ಕಾರಿ ನೌಕರರಿಗೆ ನೀಡಿರುವ ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಿ, ಹಳೇ ಪಿಂಚಣಿ ಪದ್ಧತಿ ಮುಂದುವರಿಸಬೇಕು,ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು.ನೌಕರ ಭವನಕ್ಕೆ ಸುತ್ತುಗೋಡೆ ಹಾಗೂ ಶಿಕ್ಷಕರ ಭವನವನ್ನು ನಿರ್ಮಾಣ ಮಾಡಬೇಕು ಈ ಎಲ್ಲಾ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವೈ. ಎಂ.ಮಂಜುನಾಥ್, ಕಾರ್ಯದರ್ಶಿ ಅಮ್ಮನಪುರ ಮಹೇಶ್, ಗೌರವ ಅಧ್ಯಕ್ಷ ಸೋಮಣ್ಣ, ಖಜಾಂಚಿ ರಮೇಶ್,ರಾಜ್ಯ ಪರಿಷತ್ ಸದಸ್ಯರಾದ ಗೋವಿಂದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಣ್ಣ, ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ, ತಹಸಿಲ್ದಾರ್ ಜಯಪ್ರಕಾಶ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರಾದ ರಾಜೇಶ್, ಯಳಂದೂರು ಉಪಾಖಜನೆಯ ಪಾಂಡುರಂಗಪ್ಪ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್,ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ಮತ್ತು ಎಲ್ಲಾ ಇಲಾಖೆ ವೃಂದ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿವೃತ್ತ ನೌಕರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ ಸೈಯದ್ ಮುಷರಫ್

Continue Reading
Click to comment

Leave a Reply

Your email address will not be published. Required fields are marked *

Chamarajanagar

ಮುತ್ತಿಗೆ ಗ್ರಾಮದಲ್ಲಿ ಹಾವು ಪತ್ತೆ: ಸ್ನೇಕ್ ಚಾಂಪು ತಂಡದಿಂದ ಸುರಕ್ಷಿತವಾಗಿ ಹಿಡಿತ

Published

on

ಚಾಮರಾಜನಗರ: ತಾಲೂಕಿನ ಮುತ್ತಿಗೆ ಗ್ರಾಮದ ಕೆಂಪೇಗೌಡ ಅವರ ಮನೆಯಲ್ಲಿ ಹಾವು ಕಾಣಿಸಿಕೊಂಡ ಘಟನೆ ಇಂದು ಸಂಭವಿಸಿದೆ.

ಮನೆಯೊಳಗೆ ಹಾವು ಇರುವುದನ್ನು ಗಮನಿಸಿದ ಕುಟುಂಬದವರು ಆತಂಕಗೊಂಡು ತಕ್ಷಣ ಚಾಮರಾಜನಗರದ ಸ್ನೇಕ್ ಚಾಂಪು ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಸ್ನೇಕ್ ಚಾಂಪು ತಂಡದವರು ಸ್ಥಳಕ್ಕೆ ಧಾವಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಈ ಕಾರ್ಯಾಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಗೋ ಮಹದೇವಸ್ವಾಮಿ ಮಾತನಾಡಿ, ನಮ್ಮ ಗ್ರಾಮದೊಳಗೆ ಅಥವಾ ಸುತ್ತಮುತ್ತ ಎಲ್ಲಿಯಾದರೂ ಹಾವು ಕಂಡುಬಂದರೆ ಭಯಪಡದೇ ತಕ್ಷಣ ತಿಳಿಸಿ. ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಜನರ ಪ್ರಾಣ ರಕ್ಷಿಸುವುದು ನಮ್ಮ ಸಮಾಜ ಸೇವೆಯ ಭಾಗ ಎಂದು ತಿಳಿಸಿದರು.

Continue Reading

Chamarajanagar

ಕೌಶಲ್ಯಾಧಾರಿತ ತರಬೇತಿಗೆ ಹೆಚ್ಚು ಆದ್ಯತೆ ನೀಡಿ: ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ

Published

on

ಸಿಇಟಿ ಆನ್‌ಲೈನ್‌ ಉಚಿತ ತರಬೇತಿ, ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

ಚಾಮರಾಜನಗರ: ಪ್ರಸ್ತುತ ದಿನಮಾನಗಳಲ್ಲಿ ಸಮಾಜದಲ್ಲಿ ಏನಾದರೂ, ಬದಲಾವಣೆ ಕಾಣುವಂತಾಗಿದ್ದರೆ ಅದು ಶಿಕ್ಷಣದಿಂದ ಮಾತ್ರ ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಸಿಇಟಿ ಉಚಿತ ಆನ್‌ಲೈನ್ ತರಬೇತಿ ಹಾಗೂ ಎಂಎಸ್‌ಐಎಲ್ ವತಿಯಿಂದ ಸಿಇಟಿ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಮ್ಮ ಕುಟುಂಬದಲ್ಲಿ ಸಹೋದರರು ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ, ನಾನು ಮಾತ್ರ ಓದಲೇಬೇಕು ಎಂಬ ಹಠತೊಟ್ಟು, ಉನ್ನತ ಶಿಕ್ಷಣ ಪಡೆಯುವ ಮೂಲಕ ಇಂದು ಉನ್ನತಮಟ್ಟದಲ್ಲಿ ನಿಂತಿದ್ದೇನೆ. ಇದಕ್ಕೆಲ್ಲ ಶಿಕ್ಷಣ ಕಾರಣ ಎಂದರು. ಇಂದು ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್ ಪ್ರವೇಶ ಪಡೆಯಬೇಕಾದರೆ ಸಿಇಟಿ. ನೀಟ್, ಜೆಇಇ ತರಬೇತಿ ಪಡೆಯಲೇಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಕೇವಲ ಶಿಕ್ಷಣ ಪಡೆದರೆ ಸಾಲದು, ವಿವಿಧ ಕೌಶಲ್ಯಾಧಾರಿತ ತರಬೇತಿ ಪಡೆಯಬೇಕು, ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾವಸಾಹತು ಪ್ರದೇ಼ಶ಼ದಲ್ಲಿ ವಿವಿಧ ಪ್ರತಿಷ್ಠಿತ ಕೈಗಾರಿಕೆಗಳು ಸ್ಥಾಪನೆಯಾಗಿದ್ದು, ತರಬೇತಿಗೆ ತಕ್ಕ ಉದ್ಯೋಗಪಡೆಯಬಹುದಾಗಿದೆ ಎಂದರು.

ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಹುತೇಕ ವ್ಯಾಸಂಗ ಮಾಡುವವರು ಬಡವರ್ಗದ ವಿದ್ಯಾರ್ಥಿಗಳೇ ಆಗಿದ್ದಾರೆ, ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು, ತಾವು ಅಂದುಕೊಂಡ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜಯಕುಮಾರ್, ನಾರಾಯಣ, ಕೇಶವನ್, ನಿವೃತ್ತ ಪ್ರಾಂಶುಪಾಲ ಸೋಮಣ್ಣ, ಸಂಪನ್ಮೂಲವ್ಯಕ್ತಿಗಳಾದ ಮಾದೇಶ್, ದೀಪಕ್, ಮಲ್ಲಿಕಾರ್ಜುನ್, ಚೂಡಾ ಸದಸ್ಯ ರಾಜೇಂದ್ರ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Chamarajanagar

ಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ

Published

on

ಚಾಮರಾಜನಗರ: ತಾಲೂಕಿನ ಇರಸವಾಡಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿರುವ ಘಟನೆ ಸಂಭವಿಸಿದೆ.

ಭಾನುವಾರ ತಡ ರಾತ್ರಿಯಲ್ಲಿ ಗ್ರಾಮದ ರಂಗಸ್ವಾಮಿ ಶೆಟ್ಟಿ ಅವರ ಕೊಟ್ಟಿಗೆಗೆ ನುಗ್ಗಿದ ಚಿರತೆ, ಹಸುವಿನ ಹಿಂದಿನ ಭಾಗವನ್ನು ಸಂಪೂರ್ಣವಾಗಿ ತಿಂದು ಬಲಿ ಪಡೆದಿದೆ.

ಬೆಳಗಿನ ಜಾವ ವಿಷಯ ತಿಳಿದು ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ಉಂಟಾಗಿದೆ. ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಚಿರತೆ ಮರುದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಗಸ್ತು ಹೆಚ್ಚಿಸಬೇಕು ಹಾಗೂ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Continue Reading

Trending

error: Content is protected !!