Mysore
ರಾಜಕೀಯ ಕಾರ್ಯದರ್ಶಿ ಮಾತಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್
ಮೈಸೂರು: ಅದೆಲ್ಲ ಹಣ ಬರಹ ಎಂದ ರಾಜಕೀಯ ಕಾರ್ಯದರ್ಶಿ ಮಾತಿಗೆ ವಿಜ್ಞಾನ ಓದಿ ವೈಜ್ಞಾನಿಕವಾಗಿ ಯೋಚನೆ ಮಾಡದಿರುವುದೇ ದುರಂತ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ.
ನಗರದ ಯುವರಾಜ ಕಾಲೇಜಿನ ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ತಮ್ಮ ರಾಜಕೀಯ ಬದುಕಿನ ಕುರಿತು ತಮ್ಮದೇ ಹಳ್ಳಿಗಾಡಿನ ಸೊಗಡಿನ ಭಾಷೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಿದ್ದರು, ಈ ವೇಳೆ ಆಗ ಅದಲ್ಲ ಹಣೆ ಬರಹ ಎಂದು ರಾಜಕೀಯ ಕಾರ್ಯದರ್ಶಿ ಗೋವಿಂದ್‌ರಾಜು ಪ್ರತಿಕ್ರಿಯಿಸಿದರು. ಇದಕ್ಕೆ ವೈಚಾರಿಕ ಪಾಠ ಮಾಡಿದ ಸಿದ್ದರಾಮಯ್ಯ ಅವರು, ಆಗ ದೇವರು ಬಂದು ಹಣೆ ಬರಹ ಬರೆದಿದ್ನ. ಯಾರು ಬಂದ ಅವಕಾಶಗಳನ್ನು ಬಳಸಿಕೊಳ್ಳುತ್ತಾರೋ ಅವರು ಮುಂದೆ ಬರುತ್ತಾರೆ. ನಮ್ಮ ಅಪ್ಪನಿಗೆ 6 ಜನ ಮಕ್ಕಳು .ನಾನು ಒಬ್ಬನೇ ಓದಿದವನು.
ನನ್ನೊಬ್ಬನಿಗೆ ಓದು, ಉಳಿದವರನ್ನು ಉಳುಮೆ ಮಾಡು ಅಂತ ಬರೆದಿದ್ದಾನಾ? ಎಲ್ಲಿ ತೋರಿಸಪ್ಪ ಎಂದ ಪ್ರಶ್ನಿಸಿದರು. ಹಣೆ ಬರಹ ಎನ್ನುವುದನ್ನು ಯಾರೋ ಹೇಳಿಕೊಟ್ಟಿರೊದು.
ಅದನ್ನ ನಾವು ಸುಮ್ಮನೆ ಬ್ಲೈಂಡ್ ಆಗಿ ಫಾಲೋ ಮಾಡುತ್ತಿದ್ದೇವೆ ಅಷ್ಟೇ ಎಂದು ಮಕ್ಕಳಿಗೆ ಪಾಠ ಮಾಡಿದರು.
Mysore
ಚುಂಚನಕಟ್ಟೆ ಕಾವೇರಿ ನದಿಯಲ್ಲಿ ಶ್ರೀ ರಾಮ ದೇವರ ತೆಪ್ಪೋತ್ಸವ
ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ :- ಕಿವಿತುಂಬೆಲ್ಲಾ ಪಟಾಕಿ ಸದ್ದು. . . ಇದರ ನಡುವೆ ದೇವಾಲಯದಿಂದ ಉತ್ಸವ ಮೂರ್ತಿಯನ್ನು ಹೊತ್ತು ತಂದ ಭಕ್ತಾದಿಗಳು . . . ಅಲಂಕೃತಗೊಂಡಿದ್ದ ಮಂಟಪದಲ್ಲಿ ಪ್ರತಿಷ್ಠಾಪನೆಗೊಂಡ ಸೀತಾ ರಾಮ ಲಕ್ಷ್ಮಣ. . . ನದಿಯಲ್ಲಿ ಮೂರು ಸುತ್ತು ಸುತ್ತಿದ ಉತ್ಸವ ಮೂರ್ತಿಗಳು . . . ದೇವಲೋಕವೇ ಧರೆಗೆ ಬಂದ ಅನುಭವ . . . ಈ ಇಂತಹ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದ ಸಾವಿರಾರು ಮಂದಿ. . .
ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪುರಾಣ ಪ್ರಸಿದ್ದವಾಗಿರುವ ಶ್ರೀ ರಾಮದೇವರ ತೆಪ್ಪೋತ್ಸವದಲ್ಲಿ ಕಂಡು ಬಂದ ದೃಶ್ಯಗಳು.
ರಾತ್ರಿ 7.45 ರ ನಂತರ ಇಲ್ಲಿನ ಶ್ರೀ ರಾಮದೇವರ ದೇವಾಲಯದಿಂದ ಶ್ರೀ ರಾಮ, ಲಕ್ಷಣ, ಸೀತಾಮಾತೆ ದೇವರುಗಳ ಉತ್ಸವ ಮೂರ್ತಿಗಳನ್ನು ಪಟಾಕಿ ಸಿಡಿಸುವ ಮೂಲಕ ಅದ್ದೂರಿ ಮೆರವಣಿಗೆ ಮೂಲಕ ಕಾವೇರಿ ನದಿಯ ದಡದಲ್ಲಿ ದೇವಾಲಯದ ಸಮೀಪವಿರುವ ಆಂಜನೇಯ ಗುಡಿಯ ಬಳಿ ವರ್ಣರಂಜಿತ ವಿದ್ಯುತ್ ಲೈಟ್‌ಗಳು ಮತ್ತು ಹೂವಿನ ಅಲಂಕಾರಗಳಿಂದ ಶೃಂಗಾರಗೊoಡಿದ್ದ ತೆಪ್ಪದಲ್ಲಿ ಪ್ರತಿಷ್ಠಾಪಿಸಲಾಯಿತು.
ಅನಂತರ ತೆಪ್ಪದಲ್ಲಿ ದೇವರ ಉತ್ಸವ ಮೂರ್ತಿಗಳನ್ನು ರಾತ್ರಿ 8.15ರ ಸಮಯದಲ್ಲಿ ಕಾವೇರಿ ನದಿಯ ಮಧ್ಯ ಭಾಗಕ್ಕೆ ತೆಗೆದುಕೊಂಡು ಹೋಗಿ 3 ಭಾರಿ ತಿರುಗಿಸುತ್ತಿದ್ದಂತೆಯೇ ತೆಪ್ಪದಲ್ಲಿದ್ದ ಅರ್ಚಕ ವಾಸುದೇವನ್ ಉತ್ಸವ ಮೂರ್ತಿಗಳಿಗೆ ಮಂಗಳಾರತಿಯನ್ನು ಮಾಡಿದಾಗ ನೆರೆದಿದ್ದ ಸಾವಿರಾರು ಭಕ್ತಾಧಿಗಳು ಶ್ರೀ ರಾಮನಿಗೆ ಜೈಕಾರ, ಶ್ರೀರಮಣನ ಗೋವಿಂದಾ ಗೋ..ವಿಂದಾ ಎಂಬ ಘೋಷಣೆಗಳನ್ನು ಮೊಳಗಿಸಿದಾಗ ದೇವಲೋಕವೇ ಧರೆಗೆ ಬಂದಂತೆ ಭಾಸವಾಯಿತು.
ಕಾವೇರಿ ನದಿಯಲ್ಲಿ ಸುತ್ತಿ ಬಂದ ಶ್ರೀರಾಮ, ಲಕ್ಷಣ, ಸೀತಾ ದೇವರುಗಳ ಉತ್ಸವ ಮೂರ್ತಿಗಳನ್ನು ಭಕ್ತಾಧಿಗಳು ಚಪ್ಪಾಳೆ ತಟ್ಟುವ ಮೂಲಕ ಸ್ವಾಗತಿಸಿ ಪೂಜಾ ಕೈಂಕರ್ಯಗಳನ್ನು ಕೈಗೊಂಡು ತಮ್ಮ ಇಷ್ಟಾರ್ಥವನ್ನು ಈಡೇರುವಂತೆ ಪ್ರಾರ್ಥಿಸಿಕೊಂಡರು.
ಆನಂತರ ಉತ್ಸವ ಮೂರ್ತಿಗಳನ್ನು ಮತ್ತೆ ದೇವಾಲಯಕ್ಕೆ ಒತ್ತು ತರಲಾಯಿತು. ಈ ಬಾರಿಯ ತೆಪ್ಪೋತ್ಸವಕ್ಕೆ ಗುಂಡ್ಲುಪೇಟೆ ಆನಂದ್‌ಕುಮಾರ್ ಎಂಬುವವರು ಭಾರಿ ಪಟಾಕಿಗಳನ್ನು ಸಿಡಿಸುವ ಮೂಲಕ ತೆಪ್ಪೋತ್ಸವಕ್ಕೆ ಕಳೆತಂದರು.
ಕಾರ್ಯಕ್ರಮದಲ್ಲಿ ಸಾಲಿಗ್ರಾಮ ತಸೀಲ್ದಾರ್ ನರಗುಂದ, ಉಪತಹಸೀಲ್ದಾರ್ ಕೆ.ಜೆ.ಶರತ್ , ಗ್ರಾಮ ಲೆಕ್ಕಿಗರಾದ ಮೇಘ, ಮೌನೇಶ್,ಕಾವೇರಿ,ಪ್ರಿಯಾ,
ದೇವಾಲಯದ ಇಓ ಕೆ.ರಘು, ಪಾರುಪತ್ತೆದಾರ್ ಯತೀರಾಜ್, ಸೇರಿದಂತೆ 3 ಸಾವಿರ ಭಕ್ತಾಧಿಗಳು ಹಾಜರಿದ್ದರು.
Mysore
ಇಂದು ಬೆಳ್ಳಂಬೆಳಗ್ಗೆ ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಕ್ಷೇತ್ರದ ಶಾಸಕರು ,ನಟ ಡಾಲಿ ಧನಂಜಯ
ವರದಿ : ಮಹದೇವಸ್ವಾಮಿ ಪಟೇಲ್
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕ್ಷೇತ್ರದ ಯುವ ಶಾಸಕ ದರ್ಶನ್ ಧ್ರುವನಾರಾಯಣ್, ಹಾಗೂ ಕನ್ನಡ ಚಿತ್ರರಂಗದ ನಾಯಕ ನಟ ಡಾಲಿ ಧನಂಜಯ ಅವರು, ಭೇಟಿ ನೀಡಿ ದೇವರ ದರ್ಶನ ಪಡೆದರು.
ಇಂದು ಭಾನುವಾರ ಬೆಳ್ಳಂಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಶಾಸಕರಿಗೆ ಮತ್ತು ಕನ್ನಡ ಚಿತ್ರರಂಗದ ನಾಯಕ ನಟ ಡಾಲಿ ಧನಂಜಯ ಅವರಿಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತವನ್ನು ಕೋರಿದರು.
ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ದೇವರ ಕೃಪೆಗೆ ಪಾತ್ರನಾಗಿ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು.
ಈ ವೇಳೆ ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ, ದೇವಸ್ಥಾನ ಕಾರ್ಯನಿರ್ವಾಹಕಧಿಕಾರಿ ಜಗದೀಶ್, ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಶಂಕರ್, ಕಾಂಗ್ರೆಸ್ ಪಕ್ಷದ ಯೂತ್ ಅಧ್ಯಕ್ಷ ದೇಬೂರು ಅಶೋಕ್, ಸೇರಿದಂತೆ ಹಲವಾರು ಭಾಗವಹಿಸಿದ್ದರು.
Mysore
ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ
ಮೈಸೂರು : ಮೈಸೂರು ವಿವಿ 105ನೇ ಘಟಿಕೋತ್ಸವದಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಅವರಿಗೆ ಪಿಎಚ್ ಡಿ ಪದವಿಯನ್ನು ಉನ್ನತ ಶಿಕ್ಷಣ ಸಚಿವರಾದ ಡಾ ಸುಧಾಕರ್ ಅವರು ಪ್ರದಾನ ಮಾಡಿದರು.
ಪ್ರೊ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಳವಳ್ಳಿ ತಾಲ್ಲೂಕಿನ ಸ್ಥಳನಾಮಗಳು ಸಾಂಸ್ಕೃತಿಕ ಅಧ್ಯಯನ ಪಿ.ಎಚ್.ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಪಿಎಚ್ ಡಿ ಅಂಗೀಕರಿಸಿದೆ.
-
Kodagu20 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu19 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech16 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports21 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
National - International23 hours ago
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
-
Cinema23 hours ago
ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ಪತ್ನಿ ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್!
-
Mysore20 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore19 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು