State
ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಿಜವಾದ ಕೋಮುವಾದಿ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲೀ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಸರ್ಕಾರ ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ದ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ದ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು.
ಶ್ರೀಕಾಂತ ಪೂಜಾರಿ ಅವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿಗಳು ಕ್ಷಮೆ ಕೇಳಲಿಲ್ಲ. ಇದನ್ನು ಜನರು ಗಮನಸುತ್ತಿದ್ದಾರೆ. ಏಳೇ ತಿಂಗಳಲ್ಲಿ ಈ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ. ಸರ್ಕಾರದ ದಾಷ್ಟ್ಯ ಹೆಚ್ಚಾಗಿದೆ. ಈ ಸರ್ಕಾರದ ವಿರುದ್ದ ನಾವು ಹೋರಾಟ ಮಾಡುತ್ತೇವೆ ಎಂದರು.
ನಾಳೆ (ಸೋಮವಾರ) ಪಕ್ಷದ ಚಿಂತನ ಮಂಥನ ಇದೆ, ಅಲ್ಲಿ ಪಕ್ಷದ ಎಲ್ಲ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ನವರಿಗೆ ರಾಮ ಮಂದಿರ ಆಗಬಾರದು ಅನ್ನುವ ಆಸೆ ಇತ್ತು. ಆದರೆ, ಭವ್ಯವಾದ ರಾಮಮಂದಿರ ನಿರ್ಮಾಣವಾಗಿದೆ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗೋಧ್ರಾ ಮಾದರಿಯ ಗಲಾಟೆ ನಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ. ಅದೇ, ರೀತಿ ಇಂಡಿಯಾ ಒಕ್ಕೂಟದ ನಾಯಕರೂ ರೈಲಿನಲ್ಲಿ ಪ್ರಯಾಣ ಮಾಡಬೇಡಿ ಎಂದು ಜನರಿಗೆ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿಯವರು ಪ್ರಧಾನಿಯಾಗಿದ್ದಾರೆ. ಯಾವುದೇ ರೀತಿಯ ಸಣ್ಣ ಗಲಭೆಗೂ ಅವಕಾಶ ಕೊಡುವುದಿಲ್ಲ. ಸುರಕ್ಷಿತವಾಗಿ, ಬ
ವೈಭವಯುತವಾಗಿ ರಾಮಮಂದಿರ ಉದ್ಘಾಟನೆಯಾಗಲಿದೆ ಎಂದರು.
ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಂದರ್ಭ ಬಂದರೆ ಹರಿಪ್ರಸಾದ್ ಅವರಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಗಲಭೆಯಾದ ಮೇಲೆ ಮಾಹಿತಿ ಪಡೆದುಕೊಳ್ಳುತ್ತಾರಾ ಇವರು ಎಂದು ಪ್ರಶ್ನಿಸಿದರು. ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎರಡು ಪೊಲಿಸ್ ಠಾಣೆಗಳಿಗೆ ಬೆಂಕಿ ಹಚ್ಚಿದವರನ್ನು ಅಮಾಯಕರು ಎಂದು ಬಿಂಬಿಸುತ್ತಿದ್ದಾರೆ. ಈ ಪ್ರಕರಣ ತನಿಖಾ ವರದಿಯನ್ನು ಕಾಂಗ್ರೆಸ್ ನವರೇ ಒಪ್ಪಿಕೊಂಡಿದ್ದಾರೆ. ಈಗ ಅವರನ್ನು ಅಮಾಯಕರು ಎಂದು ಹೇಳುತ್ತಿದ್ದಾರೆ. ಈ ಮೂಲಕ ಅಲ್ಪಸಂಖ್ಯಾತರನ್ನು ಮತ್ತು ರಾಜ್ಯದ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದಲ್ಲಿ ಅಕಸ್ಮಾತ್ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದರು
ಪುನೀತ್ ಕೆರಹಳ್ಳಿ ಬಳಸಿ ಕೋಮು ಗಲಭೆಗೆ ಬಿಜೆಪಿ ಪತ್ವಾ ಹೊರಡಿಸಿದೆ ಎಂದು ಆರೋಪಿಸಿರುವ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಪುನಿತ್ ಕೆರೆ ಹಳ್ಳಿ ಸೇರಿದಂತೆ ಯಾರದೇ ಪ್ರಕರಣದಲ್ಲಿ ಕಾಂಗ್ರೆಸ್ ಜನರಲ್ಲಿ ಕೋಮು ಭಾವನೆ ಹುಟ್ಟು ಹಾಕುವ ಕೆಲಸ ಮಾಡುತ್ತಿದೆ. ಬಿಜೆಪಿ ಯನ್ನು ಕೋಮುವಾದಿ ಎಂದು ಆರೋಪಿಸುವ ಕಾಂಗ್ರೆಸ್ ನಿಜವಾದಿ ಕೋಮುವಾದಿ ಎಂದು ಆರೋಪಿಸಿದರು.
State
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಎ1 ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ನ ಏಕಸದಸ್ಯ ಪೀಠವೂ ಆದೇಶ ಹೊರಡಿಸಿದೆ.
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾರಾವ್ ಹಾಗೂ ಆಪ್ತ ತರುಣ್ ರಾಜ್ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್.26) ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠವೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.
ನಟಿ ರನ್ಯಾರಾವ್ ಅವರ ಜಾಮೀನು ಅರ್ಜಿ ಇಲ್ಲಿಯವರೆಗೆ 2 ಬಾರಿ ವಜಾ ಆಗಿದೆ. ಹೀಗಾಗಿ ಇನ್ನೂ ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗುತ್ತದೆ.
State
ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಅವರು ನಿಧನರಾಗಿದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ ಎಂದಿದ್ದಾರೆ.
ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.
ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
State
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ಪ್ರಕರಣ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಆರ್.ಅಶೋಕ್

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಏಪ್ರಿಲ್.23 ರಂದು, ರಾಜ್ಯಾದ್ಯಂತ ಹಲವಾರು ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಭಯಭೀತ ಧಾರ್ಮಿಕ ಚಿಹ್ನೆಗಳಾದ ಜನಿವಾರ (ಯಜ್ಞೋಪವೀತ), ಶಿವದಾರ ಇತ್ಯಾದಿಗಳನ್ನು ತೆಗೆದುಹಾಕಲು ಒತ್ತಾಯಿಸಿ ಕರ್ನಾಟಕ ಸರ್ಕಾರವು ವೈಯಕ್ತಿಕ ನಂಬಿಕೆಗಳ ಉಲ್ಲಂಘನೆಯ ಘಟನೆಗಳ ಬಗ್ಗೆ ನಾನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.
ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು ಎಂದು ನಾಗರಿಕರ, ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
-
State10 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized6 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Mysore11 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Hassan5 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Hassan3 hours ago
ಜಮೀನು ವಿಚಾಕ್ಕೆ ಕೊಲೆ
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Kodagu6 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ