Connect with us

Hassan

ರಾಜ್ಯ ಕಾಂಗ್ರೆಸ್ ಸರಕಾರದ ದಲಿತ ವಿರೋಧಿ ನೀತಿ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

Published

on

ಎನ್.ಆರ್. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿಯ ವಿರುದ್ದ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದಲ್ಲದೇ ಎನ್.ಆರ್. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು.

ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮತ್ತು ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ. ಚುನಾವಣೆಯಲ್ಲಿ ತಮ್ಮ ಗೆಲ್ಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ೧೧,೧೪೪ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತರನ್ನು ಬಲಿಕೊಟ್ಟು ತಮ್ಮ ಸ್ವಾರ್ಥ ಸಾಧನೆ ಪೂರೈಸಿಕೊಂಡು ಇವರ ಡೋಂಗಿ ದಲಿತ ಕಾಳಜಿಯನ್ನು ಬಯಲು ಮಾಡಿದ್ದಾರೆ. ದಲಿತರ ಹಿತದ ರಕ್ಷಣೆ ಮಾಡಬೇಕಿದ್ದ ಸಮಾಜಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪನವರು ಈ ಅನ್ಯಾಯದ ವಿರುದ್ಧ ಸೊಲ್ಲೆತ್ತದೆ ಕಾಂಗ್ರೆಸ್ ಪಾರ್ಟಿಯ ಹಿತಕ್ಕೆ ದಲಿತ ಸಮುದಾಯದ ಹಿತವನ್ನು ರಾಜಿ ಮಾಡಿಕೊಂಡಿದ್ದಾರೆ ಎಂದು ದೂರಿದರು. ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ ೧೦ ಸಾವಿರ ಕೋಟಿ ಹಣವನ್ನು ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡ ಬಂದಿಲ್ಲ. ಇವರಿಗೆ ದಲಿತರ ಹಿತಾಸಕ್ತಿಗಿಂತ ಓಟು ಬ್ಯಾಂಕ್ ರಾಜಕಾರಣವು ಸರ್ಕಾರಕ್ಕೆ ಆದ್ಯತೆಯಾಗಿರುವುದು ಶೋಚನೀಯ ಸಂಗತಿ ಎಂದರು.

ಮೊರಾರ್ಜಿ ಶಾಲೆಯ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಾದ ಹಣವು ಇತರ ಯೋಜನೆಗಳಿಗೆ ಬಳಕೆಯಾಗಿ ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚಲ್ಲಾಟವಾಡುತ್ತಿದ್ದಾರೆ. ಇದಲ್ಲದೆ ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವು ಕೂಡಾ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ದಲಿತ ವಿದ್ಯಾರ್ಥಿಗಳನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಸಲುವಾಗಿ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದ್ದಾರೆ. ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದವರ ಗೃಹ ನಿರ್ಮಾಣ ಯೋಜನೆಯು ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿರ್ಮಿಸಿ ಹಂಚುತ್ತಿದ್ದರೆ. ರಾಜ್ಯ ಸರಕಾರದ ಯೋಜನೆಯು ಕೋಮಾ ಸ್ಥಿತಿಗೆ ತಲುಪಿದೆ ಎಂದು ಟೀಕಿಸಿದರು. ರೈತ ನಿಧಿ ಯೋಜನೆಯಲ್ಲಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವು ಸ್ಥಗಿತಗೊಂಡಿದೆ. ಹಾಗೂ ಕಿಸಾನ್ ಸಮ್ಮಾನ್ ಯೋಜನೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದ ೪ ಸಾವಿರ ಗಳಿಗೂ ಕತ್ತರಿ ಪ್ರಯೋಗವಾಗಿದೆ. ಸಿದ್ದರಾಮಯ್ಯನವರು ಬಾಯಿ ತೆಗೆದರೆ ದಲಿತ ಮತ್ತು ಆದಿವಾಸಿಗಳ ಕಲ್ಯಾಣದ ಬಗ್ಗೆ ಮಾತನಾಡುವುದಕ್ಕೆ ಮಾತ್ರ ಅವರ ಹಿತಾಸಕ್ತಿಯನ್ನು ಸಿಮೀತಗೊಳಿಸಿದ್ದಾರೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಲ್ಲಿ ಉದ್ಯಮಶೀಲತೆ ಉತ್ತೇಜಿಸುವ ಯೋಜನೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಸಕ್ತಿಯಿಲ್ಲದಂತಾಗಿದೆ. ರಸ್ತೆಬದಿಯ ವ್ಯಾಪಾರಿಗಳಿಗೆ ಕೇಂದ್ರ ಸರಕಾರದ ಸ್ವ- ನಿಧಿ ಯೋಜನೆಗೆ ರಾಜ್ಯ ಸರ್ಕಾರವು ದಲಿತ ಉದ್ಯಮಿಗಳಿಗೆ ಪ್ರೋತ್ಸಹಾಧನವಾಗಿ ಬಡ್ಡಿಯಲ್ಲಿ ಪಾಲು ಕೊಡಬಹುದಿತ್ತು, ಆದರೆ ಅದರ ಕಡೆ ಗಮನವೇ ಕೊಟ್ಟಿಲ್ಲ ಎಂದರು. ಕೇಂದ್ರ ಸರ್ಕಾರದ ಮುದ್ರಾ ಯೋಜನೆಯಲ್ಲಿ ದಲಿತರಿಗೆ ಸ್ವಯಂ ಉದ್ಯೋಗ ನೀಡಲು ಉತ್ತೇಜನ ಕೊಡುತ್ತಿದೆ. ಆದರೆ ರಾಜ್ಯ ಸರಕಾರ ದಲಿತ ಉದ್ಯಮದಾರರನ್ನು ರೂಪಿಸಲು ಮತ್ತು ಉತ್ತೇಜಿಸಲು

ಯಾವುದೇ ಆಸಕ್ತಿವಹಿಸಿಲ್ಲ ಮತ್ತು ಯಾವುದೇ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಿಯೂ ಇಲ್ಲ. ಗ್ಯಾರಂಟಿಗೆ ಹಣ ನೀಡಬೇಕಾದ ಕಾರಣ ೨೦೨೪-೨೫ ಮುಂಗಡ ಪತ್ರದಲ್ಲಿ ಮತ್ತೆ ಹನ್ನೊಂದು ಸಾವಿರ ಕೋಟಿ ಅನುದಾನ ಕಡಿತವಾಗಿದೆ. ಸಂವಿಧಾನ ಜಾಥಾ ಮಾಡುತ್ತಿರುವ ಸರಕಾರ ಸಂವಿಧಾನದ

ಆಶಯಕ್ಕೆ ವಿರುದ್ಧವಾಗಿ ದಲಿತರಿಗೆ ಸೇರಬೇಕಾದ ಅನುದಾನವನ್ನು ನಿರಾಕರಿಸಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಇವರ ಸಂವಿಧಾನದ ಬದ್ಧತೆಯು ಕೇವಲ ಪ್ರಚಾರದಲ್ಲಿ ಉಳಿದು ಆಚರಣೆಯಲ್ಲಿ ಶೂನ್ಯವಾಗಿದೆ. ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರಕಾರದ ದಲಿತ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಪರ್ವತಯ್ಯ, ವೇಣುಗೋಪಾಲ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಮಿತ್ ಶೆಟ್ಟಿ, ರತ್ನ ಪ್ರಕಾಶ್, ಶ್ರೀಕಾಂತ್, ಎಸ್.ಡಿ. ಚಂದ್ರು, ರಾಮೇಗೌಡ, ಚನ್ನಕೇಶವ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Published

on

ಹಾಸನ : ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ

ಡಿಡಿಪಿಯು ಮಹಾಲಿಂಗಯ್ಯ ಆದೇಶ

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಳಿದ ತಾಲ್ಲೂಕುಗಳಲ್ಲಿ ಹೆಚ್ಚಿನ ಮಳೆಯಾದರೆ ರಜೆ ನೀಡುವ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ

ಡಿಸಿ ಅನುಮತಿ ಪಡೆದು ರಜೆ ಘೋಷಣೆ ಮಾಡಿದ ಡಿಡಿಪಿಯು

Continue Reading

Hassan

ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

Published

on

ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ರಾಜೇಶ್ (9) ಸಾವನ್ನಪ್ಪಿದ ಬಾಲಕ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮಾಡಾಳು ಗ್ರಾಮದಲ್ಲಿ ಘಟನೆ

ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಜೇಶ್

ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್

ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್

ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಹಿಮ್ಸ್‌ಗೆ ದಾಖಲಾಗಿದ್ದ ರಾಜೇಶ್

ಚಿಕಿತ್ಸೆ ಫಲಕಾರಿಯಾಗದೆ ಇಂದು ರಾಜೇಶ್ ಸಾವು

Continue Reading

Hassan

2 ತಿಂಗಳ ಮಗುವಿಗೆ ಅನಾರೋಗ್ಯ ಬೇಸೆತ್ತ ಅಪ್ಪ ಆತ್ಮಹತ್ಯೆಗೆ ಯತ್ನ

Published

on

ಹಾಸನ: ಮಗುವಿನ ಆರೋಗ್ಯವು ಸುಧಾರಿಸದೇ ದಿನೆ ದಿನೆ ಹೆಚ್ಚಾದ ಹಿನ್ನಲೆಯಲ್ಲಿ ಮನಸ್ಸಿಗೆ ನೋವುಂಟು ಮಾಡಿದ ಹಿನ್ನಲೆಯಲ್ಲಿ ಏನು ಮಾಡುವುದು ಎಂಬುದು ತೋಚದೇ ಹಾಸನ ಜಿಲ್ಲಾ ಸರಕಾರಿ ಆಸ್ಪತ್ರೆ ಕಟ್ಟಡದ ಮೇಲೆ ಹೋಗಿ ತುದಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕೊನೆಗೆ ಆಸ್ಪತ್ರೆ ಸಿಬ್ಬಂದಿಗಳು ಆತನ ಮನವೊಲಿಸುವಲ್ಲಿ ಯಶಸ್ವಿಯಾಗಿ ಬದುಕಿಸಿದ ಘಟನೆ ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಎಂಬುವರ ಎರಡು ತಿಂಗಳ ಮಗುವಿನ ಅನಾರೋಗ್ಯವು ಹೆಚ್ಚಾಗುತ್ತಿರುವ ಬಗ್ಗೆ ತಿಳಿದು ಬೇಸರದಿಂದ ಆತ್ಮಹತ್ಯೆ ಯತ್ನಿಸಿರುವುದಾಗಿ ಹೇಳಲಾಗಿದೆ. ಮಗುವಿನ ಅನಾರೋಗ್ಯದಿಂದ ತಂದೆ ಮನನೊಂದಿದ್ದು, ಹಾಸನದ ಜಿಲ್ಲಾ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ಸಾಯುವ ಹೈಡ್ರಾಮ ಮಾಡಲಾಗಿದೆ. ಕಟ್ಟಡದ ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹೊಡ್ಡಿದ್ದು,

ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆ ಯತ್ನ ಮಾಡಲಾಗಿದೆ ಎನ್ನಲಾಗಿದೆ. ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದಂತಾಗಿದೆ. ಗಂಗಸ್ವಾಮಿಯನ್ನ ಆಸ್ಪತ್ರೆ ಕಟ್ಟಡದಿಂದ ಕೆಳಗಿಳಿಸಿ ನಂತರ ಪೊಲಿಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಈ ದೃಶ್ಯವನ್ನು ರಸ್ತೆಯಲ್ಲಿ ಸಾರ್ವಜನಿಕರು ನೋಡಿದ್ದು, ವಿಡಿಯೋ ಸೆರೆ ಹಿಡಿದಿದ್ದಾರೆ.

Continue Reading

Trending

error: Content is protected !!