Hassan
ರಾಜ್ಯ ಸರಕಾರಕ್ಕೆ ಅಭಿನಂದನೆ ತಿಳಿಸಿದ ಬಿ.ಪಿ. ಐಸಾಮಿಗೌಡ
ಹಾಸನ : ಮೊದಲ ಪ್ರಜಾಪ್ರಭುತ್ವದ ಪರಿಕಲ್ಪನೆಯ ರೂವಾರಿಗಳು ಹಾಗೂ ವಚನಕಾರರು, ಸಮಾಜದ ಸುಧಾರಕರು ಆದದಂತಹ ಬಸವೇಶ್ವರರು ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿ ಘೋಷಣೆ ಹಾಗೂ ಶಿವಮೊಗ್ಗದ ಫ್ರೀಡಂ ಪಾರ್ಕಿಗೆ ಅಲ್ಲಮ ಪ್ರಭು ದೇವರ ಹೆಸರು ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಮಾಜದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ವೀರಶೈವ ಲಿಗಾಯಿತ ಸಂಘದ ಅಧ್ಯಕ್ಷ ಬಿ.ಪಿ. ಐಸಾಮಿಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮೊದಲ ಪ್ರಜಾಪ್ರಭುತ್ವದ ಪರಿಕಲ್ಪನೆಯ ರೂವಾರಿಗಳು ಹಾಗೂ ವಚನಕಾರರು, ಸಮಾಜ ಸುಧಾರಕರು, ಅದಂತಹ ಬಸವೇಶ್ವರರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕರಾಗಿ ಘೋಷಿಸಿದಕ್ಕಾಗಿ ಸಂಘದ ಮತ್ತು ಜಿಲ್ಲೆಯ ಸಮಾಜದ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಹಾಗೂ ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ದೇವರ ಹೆಸರನ್ನು ಇಡಲು ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ನವರ ತಾಲ್ಲೂಕು ಘೋಷಣೆ ಮಾಡಿದ ನಿರ್ಣಯಕ್ಕೆ ಶ್ರೀ ವೀರಶೈವ ಲಿಂಗಾಯಿತ ಸಂಘದ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಸಂಘದ ಉಪಾಧ್ಯಕ್ಷ ಬಿ.ಎಂ. ಭುವನಾಕ್ಷ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ರಾಮನ ಪ್ರತಿಷ್ಠಾಪನೆ ಮಾಡಿದ ಪ್ರಯುಕ್ತ ಹಾಗೂ ಡಾ? ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಯವರ ಐದನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಾಸನ ನಗರದ ಅರಳೇಪೇಟೆಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಪೂಜಾ ಕಾರ್ಯವನ್ನು ಏರ್ಪಡಿಸಲಾಗಿತ್ತು. ನಂತರ ಸಂಘದ ಅಧ್ಯಕ್ಷರಾದ ಬಿ.ಪಿ. ಐಸಾಮಿಗೌಡರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಶ್ರೀ ರಾಮನ ಬಗ್ಗೆ ಶ್ರದ್ಧಾ ಭಕ್ತಿಗಳನ್ನು ಅರ್ಪಿಸಲಾಯಿತು ಎಂದು ಹೇಳಿದರು. ಶ್ರೀ ರಾಮರಾಷ್ಟ್ರದ ಶ್ರೇಷ್ಠ ಪುರುಷ ಎಂತಲೂ, ಶಿವಕುಮಾರ ಸ್ವಾಮೀಜಿಗಳಿಗೂ ನಮ್ಮ ಸಂಘಕ್ಕೂ ಇದ್ದಂತಹ ಬಾಂಧವ್ಯವನ್ನು ವಿವರಿಸಿದರು. ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಮತ್ತು ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗವನ್ನು ಯಶಸ್ವಿಯಾಗಿ ಮಾಡಲಾಯಿತು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ವೀರಶೈವ ಲಿಂಗಾಯಿತ ಸಂಘದ ಕಾರ್ಯದರ್ಶಿ ಈ.ಎಂ. ರುದ್ರಕುಮಾರ್, ಸಹ ಕಾರ್ಯದರ್ಶಿ ಹೆಚ್. ಮಲ್ಲಿಕಾರ್ಜುನ್, ಜಂಟಿ ಕಾರ್ಯದರ್ಶಿ ಬಿ.ವಿ. ಲತೇಶ್ ಕುಮಾರ್, ಸದಸ್ಯರಾದ ಬಿ.ಎ. ನಾಗೇಶ್, ಹೆಚ್.ಕೆ. ಮಿಥುನ್, ವಿಶಾಲ್ ಎಸ್. ಬಾಗೂರು ಇತರರು ಉಪಸ್ಥಿತರಿದ್ದರು.
Hassan
ಕರ್ನಾಟಕ ಪಬ್ಲಿಕ್ ಶಾಲೆಯ 75 ನೇ ವರ್ಷದ ವಜ್ರಮಹೋತ್ಸವ
ಆಲೂರು: ಪಾಠ ಹೇಳಿ, ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ ಶಾಲಾ ಶಿಕ್ಷಕರನ್ನು ಹಾಗೂ ಕಲಿತ ಶಾಲೆಯನ್ನು ಎಂದಿಗೂ ಮರೆಯಬಾರದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ಕೆಂಚಮ್ಮ ಹೊಸಕೋಟೆ ರಾಯರಕೊಪ್ಪಲು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ(ಕೆ.ಪಿ.ಎಸ್)ಯ 75 ನೇ ವರ್ಷದ ವಜ್ರಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯಕ್ಷವಾಗಿ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ, ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಹಿರಿಯ ವಿದ್ಯಾರ್ಥಿಗಳು ಹಲವು ವರ್ಷದ ನಂತರ ಒಂದೆಡೆ ಸೇರಿ ತಾವು ಕಲಿತ ಶಾಲೆಯ 75ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ದಶಕಗಳಿಂದ ಕಾಡಾನೆ ಹಾವಳಿಗೆ ಸಿಲುಕಿ ನೆಮ್ಮದಿ ಕಳೆದುಕೊಂಡಿರುವ ಈ ಭಾಗದ ಜನರಿಗೆ ನಾನು ಶಾಸಕನಾದ ನಂತರ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ.ವಿಧಾನಸಭೆಯ ಅಧಿವೇಶನದಲ್ಲಿ ಕಾಡಾನೆಗಳ ಶಾಶ್ವತ ಪರಿಹಾರ ಮಾಡಿಕೊಡುವಂತೆ ಸರ್ಕಾರದ ಗಮನ ಸೆಳೆದು ತಾತ್ಕಾಲಿಕ ಪರಿಹಾರವಾಗಿ ಕಾಡಾನೆಗಳು ಹೆಚ್ಚು ಓಡಾಡುವ ಪ್ರದೇಶಗಳಿಗೆ ರೈಲ್ವೆ ಕಂಬಿ ಅಳವಡಿಸಲು ಹಣ ಬಿಡುಗಡೆ ಮಾಡಿಸುವ ಮೂಲಕ ತಾಲ್ಲೂಕಿನ ಕೆಲವು ಭಾಗಗಳಲ್ಲಿ ರೈಲ್ವೇ ಹಳಿಗಳನ್ನು ಜೋಡಣೆ ಮಾಡಿಸಿದ್ದೇನೆ ಇನ್ನೂ ಕೆಲವು ಬಾಗಗಳಲ್ಲಿ ಜೋಡಣೆ ಕಾರ್ಯ ನಡೆಯುತ್ತಿದೆ ಇದರಿಂದ ಆಲೂರಿನ ಬಹುತೇಕ ಭಾಗಗಳಲ್ಲಿ ಕಾಡಾನೆಗಳ ಉಪಟಳ ಕಡಿಮೆಯಾಗಿದ್ದು ಜನಸಾಮಾನ್ಯರು ನಿಟ್ಟುಸಿರು ಬಿಟ್ಟಿದ್ದಾರೆ ಈ ಭಾಗದಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ಕೆಲವು ರಸ್ತೆಗಳು ಹಾಳಾಗಿರುವುದು ನನ್ನ ಗಮನಕ್ಕೆ ಬಂದಿದೆ ರಸ್ತೆಯನ್ನು ದುರಸ್ತಿ ಪಡಿಸಲು ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಸಂಬಂಧಪಟ್ಟ ಮಂತ್ರಿಗಳು ಕೂಡ ಮನವಿಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಶಾಲೆ ಹಿರಿಯ ವಿದ್ಯಾರ್ಥಿ ಹಾಗೂ ಸುಗಮ ಸಂಗೀತ ಗಾಯಕ ಮುದ್ದುಕೃಷ್ಣ ಮಾತನಾಡಿ, ಪ್ರಾಚೀನ ಕಾಲದಿಂದಲೂ ಭಾರತವು ಯಾವಾಗಲೂ ಕಲಿಕೆ ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಶ್ರೀಮಂತ ಸಂಪ್ರದಾಯವನ್ನು ಹೆಮ್ಮೆಪಡುತ್ತದೆ. ಯುರೋಪ್, ಮಧ್ಯಪ್ರಾಚ್ಯ ಮತ್ತು ಪೋರ್ಚುಗಲ್‌ನಂತಹ ಇತರ ರಾಷ್ಟ್ರಗಳ ಜನರು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಭಾರತಕ್ಕೆ ಬಂದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರಾಚೀನ ಕಾಲದಲ್ಲಿ ಭಾರತದಲ್ಲಿ ಆಚರಣೆಯಲ್ಲಿದ್ದ ಪ್ರಸಿದ್ಧ ಶಿಕ್ಷಣ ಪದ್ಧತಿಗಳಲ್ಲಿ ಗುರುಕುಲ ಪದ್ಧತಿಯೂ ಒಂದು. ಇಂದಿನ ಕಾಲದಲ್ಲಿ ವಿದ್ಯಾಭ್ಯಾಸ ಕಲಿಯಲು ಕಿತ್ತು ತಿನ್ನುವ ಬಡತನ ಎದುರಾಗಿತ್ತು ಆದ್ದರಿಂದ ಅನಕ್ಷರಸ್ಥರೇ ಹೆಚ್ಚಾಗಿದ್ದರು ಅಂತಹ ಕಷ್ಟದ ದಿನಗಳನ್ನು ನಾನು ಕೂಡ ಎದುರಿಸಿದ್ದೇನೆ ಆದರೂ ಕಲಿಕೆಯಿಂದ ಹಿಂದುಳಿಯದೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಾದ ಗಾಯನ ಸ್ಪರ್ಧೆಗಳಲ್ಲಿ ಭಾಗವಹಿಸಿ ಇಂದು ಈ ಎತ್ತರ ಸ್ಥಾನಕ್ಕೆ ಬಂದಿದ್ದೇನೆ ಈ ಶಾಲೆ ನನ್ನ ಪ್ರಾಥಮಿಕ ಅಂತದ ಶಿಕ್ಷಣಕ್ಕೆ ಕಾರಣವಾಗಿದೆ ಎಂದು ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ, ನಿವೃತ್ತ ಸಿಇಓ ಬಿ.ಎ.ಪರಮೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಕೆ ಎಸ್ ಮಂಜೇಗೌಡ, ಜಿಲ್ಲಾ ಪಂಚಾಯಿತಿಯ ಚಂದ್ರಶೇಖರ್, ಗ್ರಾಮದ ಹಿರಿಯ ವಿದ್ಯಾರ್ಥಿಗಳಾದ ಎಂ.ಬಿ ರಾಜಣ್ಣ, ಕೆ.ಎನ್ ಕಾಂತರಾಜು, ಪೂವಯ್ಯ, ಪ್ರಾಂಶುಪಾಲೆ ಶೀಲಾ, ಉಪ ಪ್ರಾಶುಪಾಲ ಮಹದೇವ್, ಸೇರಿದಂತೆ ಮುಂತಾದವರು ಹಾಜರಿದ್ದರು.
ವರದಿ : ಸತೀಶ್ ಚಿಕ್ಕಕಣಗಾಲು
Hassan
ಹಾಸನ ನಗರಪಾಲಿಕೆಗೊಂಡ ಬಗ್ಗೆ ಹಾಸನಾಂಬೆ ದೇವಸ್ಥಾನದಲ್ಲಿ ಬಹಿರಂಗವಾಗಿ ಹೇಳಿದ ಸಿಎಂ ಸಿದ್ದರಾಮಯ್ಯ
ಹಾಸನ: ಅದಿ ದೇವತೆ ಹಾಸನಾಂಬೆ ದೇವಿ ದರ್ಶನದ ಐದನೇ ದಿನದಂದು ಸೋಮವಾರದಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಆಗಮಿಸಿ ದೇವಿ ದರ್ಶನ ಪಡೆದು ಪುನಿತರಾದರು. ನಂತರ ಹಾಸನ ನಗರಪಾಲಿಕೆ ಆಗಿದೆ ಎಂದು ಬಹಿರಂಗವಾಗಿ ಹೇಳುವ ಮೂಲಕ ಎಲ್ಲಾರ ಮೊಗದಲ್ಲಿ ಸಂತೋಷ ತಂದ ಪ್ರಸಂಗ ನಡೆಯಿತು.
ಮೊದಲು ಹಾಸನಾಂಬೆ ದರ್ಶನ ಮಾಡಿ ಅಲ್ಲೆ ಇರುವ ದರ್ಭಾರ್ ಗಣಪತಿ ದೇವಸ್ಥಾನ್ಕಕೆ ತೆರಳಿದರು. ನಂತರ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನದೊಂದಿಗೆ ಗೌರವ ಸ್ವೀಕರಿಸಿದರು. ಇದೆ ವೇಳೆ ಉಪವಿಭಾಗಧಿಕಾರಿ ಮಾರುತಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಇದೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ದೇಶಿಸಿ ಮಾತನಾಡಿ, ಹಾಸನಾಂಬೆ ದೇವಿ ದರ್ಶನ ಮಾಡಿ ಗಣಪತಿಯ ದರ್ಶನ ಪಡೆದಿದ್ದೇನೆ. ಎಲ್ಲಾ ದೇವರಲ್ಲಿ ಪ್ರಾರ್ಥನೆಯನ್ನು ಮಾಡಿದಂತೆ ೨೦೨೪-೨೮ನೇ ವರ್ಷದಲ್ಲಿ ಒಳ್ಳೆಯ ಮಳೆ, ಬೆಳೆ ಆಗಲಿ. ರೈತರು ಸುಭೀಕ್ಷೆಯಿಂದ ಇರಲಿ.
ಎಂದುಕೊಂಡಂತೆ ನೆರವೇರಿದೆ. ಎಲ್ಲಾ ಜಲಾಶಯಗಳು ಕೂಡ ತುಂಬಿದೆ. ಎಲ್ಲಾ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಜನರಲ್ಲಿರುವ ಅಸಮಾನತೆ ಹೋಗಲಾಡಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು. ನೂರು ಕೋಟಿ ಜನರಿಗೆ ಒಳ್ಳೆಯದಾದರೇ ನಮಗೂ ಒಳ್ಳೆಯದಾಗುತ್ತದೆ. ನಾವೆಲ್ಲಾ ಮಾನ ಸಮಾಜದಲ್ಲಿ ಇರುವವರು. ನಾವುಗಳೆಲ್ಲಾ ಪರಸ್ಪರ ಪ್ರೀತಿಸಬೇಕೆ ಹೊರತು ಯಾವ ಕಾರಣಕ್ಕೂ ಪರಸ್ಪರ ಧ್ವೇಶಿಸ ಬಾರದು. ಧ್ವೇಷವನ್ನು ಹತ್ತಿಕ್ಕೂವ ಕೆಲಸ ಮಾಡಬೇಕು. ಯಾರೆ ಪಟ್ಟಭದ್ರ ಹಿತಾಸಕ್ತಿಗಳು ಧ್ವೇಷವನ್ನು ಬೆಳೆಸುವ ಕೆಲಸ ಮಾಡಿದರೇ ಅವರಿಗೆ ತಕ್ಕ ಶಾಸ್ತಿ ಮಾಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿರುವುದಾಗಿ ಹೇಳಿದರು.
ಹಾಸನ ನಗರಸಭೆ ಆಗಿರುವುದನ್ನು ಮೇಲ್ ದರ್ಜೆಗೆ ಏರಿಸಿ ನಗರ ಪಾಲಿಕೆಯನ್ನಾಗಿ ಮಾಡಬೇಕೆಂದು ನನಗೆ ಹೇಳಿದ್ದರು. ನಾನು ಹಾಸನಾಂಬೆ ಜಾತ್ರೆಗೆ ಬರುವ ಮುಂಚಿತವಾಗಿ ಕ್ಯಾಬಿನೆಟ್ ಇತ್ತು. ಸಭೆಯಲ್ಲಿ ಪ್ರಸ್ತಾಪ ತಂದು ನಗರಪಾಲಿಕೆಯನ್ನಾಗಿ ಹಾಸನವನ್ನು ಮಾಡಲು ತೀರ್ಮಾನಕೈಗೊಳ್ಳಲಾಗಿದೆ. ಈಗ ಹಾಸನ ನಗರ ಪಾಲಿಕೆ ಆಗಿದೆ ಎಂದು ಹಾಸನಾಂಬೆ ದೇವಸ್ಥಾನದಲ್ಲಿ ಸಿಹಿ ಸುದ್ಧಿ ಹೇಳುವ ಮೂಲಕ ನೆರೆದಿದ್ದವರಲ್ಲಿ ಸಂತೋಷ ತಂದರು. ಹಾಸನಾಂಬೆ ದೇವಿ ದರ್ಶನದ ನಂತರ ಮುಖ್ಯಮಂತ್ರಿಗಳು ಇಲ್ಲಿನ ಭಕ್ತರ ಸಂಖ್ಯೆ ನೋಡಿ, ಹಾಗೂ ಅಚ್ಚುಕಟ್ಟಾಗಿ ದೇವಾಲಯ ಇಟ್ಟಿರುವ ಜಿಲ್ಲಾಡಳಿತದ ಬಗ್ಗೆ ಮೆಚ್ಚುಗೆವ್ಯಕ್ತಪಡಿಸಿದರು.
ಇದೆ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಶಾಸಕ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಎಂ. ಪಟೇಲ್ ಇತರರು ಉಪಸ್ಥಿತರಿದ್ದರು.
Hassan
ಜಮೀನು ಗುತ್ತಿಗೆಗೆ ನೀಡಲು ಸಂಬಂಧಪಟ್ಟ ಬೆಳೆಗಾರರಿಂದ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ನಿರ್ದೇಶಿಸಿದೆ
ಸಕಲೇಶಪುರ: ಸರ್ಕಾರಿ ಜಮೀನಿನಲ್ಲಿ ತೋಟದ ಬೆಳೆಗಳನ್ನು ಬೆಳೆಯುತ್ತಿರುವ ಜಮೀನು ಗುತ್ತಿಗೆಗೆ ನೀಡಲು ಸಂಬಂಧಪಟ್ಟ ಬೆಳೆಗಾರರಿಂದ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ನಿರ್ದೇಶಿಸಿದೆ. ಇದು ಬೆಳೆಗಾರರ ಬಹುದಿನಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಪಶ್ಚಿಮಘಟ್ಟ ಮೂಲ ನಿವಾಸಿಗಳ ಹೋರಾಟ ಸಮಿತಿಯ ಅಧ್ಯಕ್ಷ ಬಾಚಿಹಳ್ಳಿ ಪ್ರತಾಪ್‌ಗೌಡ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿದ್ದ ರೈತರಿಗೆ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ತೋಟದ ಬೆಳೆಗಳನ್ನು ಬೆಳೆಯುವ ಕೆಲ ಜಿಲ್ಲೆಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ಇದರಿಂದ ಹಾಸನ ಜಿಲ್ಲೆಯ ಕಾಫಿ ಬೆಳೆಗಾರರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರಲಿಲ್ಲ ಈ ಹಿನ್ನೆಲೆಯಲ್ಲಿ ಬೆಳೆಗಾರ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ 1.01.2005ರ ಪೂರ್ವದಲ್ಲಿ ಸರ್ಕಾರಿ ಜಮೀನಿನಲ್ಲಿ ಪ್ಯಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆಗೆ ನೀಡುವ ಬಗ್ಗೆ ಇದರೊಂದಿಗೆ ಲಗತ್ತಿಸಿರುವ ನಮೂನೆ-9ರಲ್ಲಿ ಸಂಬಂಧಪಟ್ಟ ಬೆಳೆಗಾರರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 31.12.2024ರವರೆಗೆ ಕಾಲಾವಧಿಯನ್ನು ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಅರ್ಜಿಗಳನ್ನು ತಹಶೀಲ್ದಾರರು ಸ್ವೀಕರಿಸತಕ್ಕದ್ದು ಎಂದು ಸರ್ಕಾರ ಆದೇಶಿಸಿದೆ.
ಆದ್ದರಿಂದ, ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಅವರು
ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ತೋಟದ ಬೆಳೆ ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆಗೆ ನೀಡುವ ಬಗ್ಗೆ ಬೆಳೆಗಾರರಿಗೆ ವ್ಯಾಪಕ ಪ್ರಚಾರ ಮಾಡಿ ಅರ್ಜಿ ಸಲ್ಲಿಸಲು ಜಾಗೃತಿ ಮೂಡಿಸುವುದಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ. ಪ್ರಾಂಟೇಶನ್ ಭೂಮಿ ಗುತ್ತಿಗೆ ನೀಡುವ ಕುರಿತು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು ತಂತ್ರಾಂಶವನ್ನು ರಾಜ್ಯಾದ್ಯಂತ ಅಳವಡಿಸಲು ಕಂದಾಯ ಆಯುಕ್ತರು, ಕಂದಾಯ ಆಯುಕ್ತಾಲಯ ಕೂಡಲೇ ಕ್ರಮವಹಿಸತಕ್ಕದ್ದು ಮತ್ತು ಆಯುಕ್ತರು, ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಇವರು ಸರ್ಕಾರಿ ಜಮೀನುಗಳಲ್ಲಿ ಬೆಳೆಯುತ್ತಿರುವ ಪ್ಲಾಂಟೇಶನ್ ಬೆಳೆಗಳ ಎಲ್ಲಾ ಜಮೀನುಗಳ ಕುರಿತು ಸರ್ವೆ ನಡೆಸಿ, ಒಂದು ತಿಂಗಳೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಸರ್ಕಾರದ ಕಂದಾಯ ಇಲಾಖೆ ಭೂ ಮಂಜೂರಾತಿ-1ರ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್.ಹೊಸಮಠ ಆದೇಶಿಸಿದ್ದಾರೆ.
ಬಾಕ್ಸ್
ಕಾಫಿ ಬೆಳೆಯುವ ಎಲ್ಲಾ ಜಿಲ್ಲೆಗಳಿಗೆ ಅನ್ವಯವಾಗುವಂತೆ ರಾಜ್ಯ ಸರ್ಕಾರದಿಂದ ಸರ್ಕಾರಿ ಸಾಗುವಳಿ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ ಆಗಿದೆ. ಸರ್ಕಾರಿ ಜಮೀನು ಸಾಗುವಳಿದಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ರಾಜ್ಯ ಸರ್ಕಾರಕ್ಕೆ ಪಶ್ಚಿಮ ಘಟ್ಟ ಮೂಲನಿವಾಸಿಗಳ ಸಮಿತಿಯ ಅಧ್ಯಕ್ಷರು ಹಾಗೂಪದಾಧಿಕಾರಿಗಳು ಧನ್ಯವಾದ ತಿಳಿಸುತ್ತೇವೆ.
ಬಾಚಿಹಳ್ಳಿ ಪ್ರತಾಪ್‌ಗೌಡ ಅಧ್ಯಕ್ಷ, ಪಶ್ಚಿಮಘಟ್ಟ ಮೂಲ ನಿವಾಸಿಗಳ ಹೋರಾಟ ಸಮಿತಿ.
-
Mysore6 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State9 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State9 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health9 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan6 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized5 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized11 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State9 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.