Cultural
ರಾಮಮಂದಿರ ಉದ್ಘಾಟನೆಗೆ ಸೀತಾಮಾತೆಯ ತವರಾದ ನೇಪಾಳದಿಂದ ಉಡುಗೊರೆಗಳ ಸುರಿಮಳೆ!
ಮುಂದಿನ ತಿಂಗಳು ಅಂದರೆ ಜನವರಿಯಲ್ಲಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಆಗಲಿದೆ. ಭರಿದಿಂದ ಸಿದ್ಧತೆ ಕೂಡ ನಡೆಯುತ್ತಿದೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ಅಯೋಧ್ಯೆ ವಿಶೇಷ ಉಡುಗೊರೆ ನೀಡಿ ವಿಶ್ ಮಾಡಲು ನೆರೆ ರಾಷ್ಟ್ರ ನೇಪಾಳ ಸಿದ್ಧತೆ ಮಾಡಿಕೊಂಡಿದೆ ಎಂದು ಎಲ್ಲೆಲ್ಲೂ ವಿಷಯ ಹರಿದಾಡುತ್ತಿದೆ.
ಹೌದು, ನೇಪಾಳದಿಂದ ಅಯೋಧ್ಯೆಗೆ ವಿವಿಧ ರೀತಿಯ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳನ್ನು ಒಳಗೊಂಡ ವಿಶೇಷ ಸ್ಮಾರಕಗಳನ್ನು ಕಳುಹಿಸಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ರಾಷ್ಟ್ಪೀಯ ಮಾಧ್ಯಮಗಳು ವರದಿ ಮಾಡಿದ್ದು, ಸ್ಮರಣಿಕೆಗಳನ್ನು ವಿತರಿಸಲು ಜನಕಪುರಧಾಮ-ಅಯೋಧ್ಯಧಾಮ ಪ್ರಯಾಣವನ್ನು ಕೈಗೊಳ್ಳಲಾಗುವುದು ಎಂದು ಮೈ ರಿಪಬ್ಲಿಕಾ ಪತ್ರಿಕೆ ವರದಿ ಮಾಡಿದೆ.

ಜನವರಿ 18 ರಂದು ಪ್ರಾರಂಭವಾಗುವ ಪ್ರಯಾಣವು ಜನವರಿ 20 ರಂದು ಅಯೋಧ್ಯೆಯಲ್ಲಿ ಮುಕ್ತಾಯಗೊಳ್ಳಲಿದೆ ಮತ್ತು ಅದೇ ದಿನ ಸ್ಮಾರಕಗಳನ್ನು ಶ್ರೀ ರಾಮ ಜನ್ಮಭೂಮಿ ರಾಮಮಂದಿರ ಟ್ರಸ್ಟ್‌ಗೆ ಹಸ್ತಾಂತರಿಸಲಾಗುವುದು ಎಂದು ಜಾನಕಿ ದೇವಸ್ಥಾನದ ಜಂಟಿ ಮಹಾಂತ ರಾಮರೋಷನ್ ದಾಸ್ ವೈಷ್ಣವ್ ತಿಳಿಸಿದ್ದಾರೆ.
ಜನವರಿ 22 ರಂದು ಪ್ರತಿಷ್ಠಾಪನೆ ಸಮಾರಂಭ ನಡೆಯಲಿದ್ದು, ಜನಕ್‌ಪುರಧಾಮ್‌ನಿಂದ ಜಲೇಶ್ವರ ನಾಥ್, ಮಲಂಗ್ವಾ, ಸಿಮ್ರೌಂಗಧ್, ಗಧಿಮಾಯಿ, ಬಿರ್‌ಗುಂಜ್ ಮೂಲಕ ಬೇಟಿಯಾ, ಕುಶಿನಗರ, ಸಿದ್ಧಾರ್ಥನಗರ, ಗೋರಖ್‌ಪುರ ಮಾರ್ಗವಾಗಿ ಉತ್ತರ ಪ್ರದೇಶದ ಅಯೋಧ್ಯೆ ತಲುಪಲಿದೆ.
ಇದಕ್ಕೂ ಮುನ್ನ ನೇಪಾಳದ ಕಾಳಿಗಂಡಕಿ ನದಿ ದಡದಿಂದ ಸಂಗ್ರಹಿಸಿದ ಶಾಲಿಗ್ರಾಮ ಕಲ್ಲುಗಳನ್ನು ಶ್ರೀರಾಮನ ಪ್ರತಿಮೆ ಮಾಡಲು ಅಯೋಧ್ಯೆಗೆ ಕಳುಹಿಸಲಾಗಿದ್ದು, ಉದ್ಘಾಟನಾ ದಿನದಂದು ಅದನ್ನು ದೇವಾಲಯದಲ್ಲಿ ಸ್ಥಾಪಿಸಲಾಗುವುದು ಎಂದು ಪತ್ರಿಕೆ ತಿಳಿಸಿದೆ.
ಇದರ ಜೊತೆಗೆ ಜನವರಿ 22 ರಂದು ಪ್ರತಿಷ್ಠಾಪನೆಗೊಳ್ಳಲಿರುವ ರಾಮ ಮಂದಿರಕ್ಕೆ ಹಲವಾರು ಸೆಲೆಬ್ರಿಟೀಸ್ಗಳಿಗೂ ಇನ್ವಿಟೇಷನ್ ಬಂದಿದೆ ಅಂತೆ. ಯಶ್, ರಿಶಭ್ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಇಲ್ಲಿಗೆ ಭೇಟಿ ನೀಡಲಿದ್ದಾರೆ.
Cultural
ಪಾಕಿಸ್ತಾನಿಯರನ್ನು ದೇಶದಿಂದ ಹೊರಗೆ ಕಳುಹಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು : ಡಾ.ಇಂದ್ರೇಶ್
ಮಂಡ್ಯ: ಕೇಂದ್ರ ಸರ್ಕಾರ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹೊರ ಹೋಗಲು, ದೇಶದ ರಾಜ್ಯ ಸರ್ಕಾರಗಳು ಗಡಿಪಾರು ಮಾಡುವಂತೆ ಆದೇಶಿಸಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ಪಾಕಿಸ್ತಾನಕ್ಕೆ ಮರಳಲು ಕ್ರಮ ವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ತಲೆ ತಗ್ಗಿಸುವ ರೀತಿ ಪಹಲ್ಗಾಮ್ ಹತ್ಯಾಕಾಂಡ ನಡೆದ ಹಿನ್ನಲೆ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು ಮಾಡಿದೆ . ದೇಶದ ಬಿಜೆಪಿ ಸರ್ಕಾರ ಇರುವ ಎಲ್ಲ ರಾಜ್ಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹಿಂದಿರುಗಿಸಲು ಕ್ರಮವಹಿಸಿದ್ದು, ರಾಜ್ಯದಲ್ಲಿ ಮಾತ್ರ ಸದರಿ ಕೆಲಸ ಆಗುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಓಟ್ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರ ಓಲೈಕೆಯಿಂದಾಗಿ ಅವರ ಮೇಲಿನ ಪ್ರಕರಣಗಳ ಕುಲಾಸೆ ಮಾಡಿ, ಬಿಡುಗಡೆ ಮಾಡಿದ್ದರಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿದ್ದು, ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಎಲ್ಲಿದ್ದಾರೆ, ಯಾವ ಸಂಘಟನೆಯಲ್ಲಿದ್ದಾರೆ, ಯಾವ ಕೃತ್ಯವೆಸಗುತ್ತಿದ್ದಾರೆ ಇದರ ಬಗ್ಗೆ ಕ್ರಮ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಅಂತೆಯೇ ದೇಶದಿಂದ ಪಾಕಿಸ್ತಾನಿ ಪ್ರಜೆಗಳನ್ನು ಹಿಂದಿರುಗಿಸುವಂತೆ ಕ್ರಮ ವಹಿಸಲು ನಾಳೆ(ಬುಧವಾರ) ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದರ ಜೊತೆಗೆ ಸಿದ್ದರಾಮಯ್ಯ ಅವರನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕ್, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ವಕ್ತಾರ ನಾಗಾನಂದ್, ಚಂದ್ರು ಇದ್ದರು.
Cultural
ಶ್ರೀರಾಮನ ಚರಿತ್ರೆ ವಿಶ್ವಕ್ಕೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ — ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು ನ.15
ಶ್ರೀ ರಾಮನ ಚರಿತ್ರೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ನಾಯಕ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳು ಪ್ರಜಾಪ್ರಭುತ್ವಕ್ಕೆ ಬಹು ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಪಡೆದುಕೊಳ್ಳುವ ಮೂಲಕ ಆರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುತ್ತೆನೆ ಎಂದರು.
ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಜಾತಿಭೇದ ಮಾಡಬೇಡಿ ಸಮಾಜಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ವಾಲ್ಮೀಕಿ ಸಮುದಾಯ ಸಾರಬೇಕು.ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಗ್ರಾಮದ ಎಲ್ಲ ನಾಯಕ ಸಮಾಜದವರನ್ನು ಒಟ್ಟಾಗಿ ಕರೆದೊಯ್ಯುವ ಜವಾಬ್ದಾರಿ ಇರಬೇಕು.ಶ್ರೀ ಮಹರ್ಷಿ ವಾಲ್ಮೀಕಿ ಅವರ ರಾಮಾಯಣದಲ್ಲಿ ಹೆಚ್ಚು ರೂಪಕ ಅಲಂಕಾರ ಬಳಕೆಯಾಗಿರುವುದ್ದರಿಂದ ಕಾಳಿದಾಸ ಕವಿ ಮಹರ್ಷಿ ವಾಲ್ಮೀಕಿ ಅವರನ್ನು ಕವಿಕುಲ ಚಕ್ರವರ್ತಿ ಎಂಬುದಾಗಿಯೋ ವರ್ಣಿಸಿದ್ದಾರೆ ಅಲ್ಲದೇ ಜಗತ್ತಿನ ಶ್ರೇಷ್ಠ ವಿಮಾರ್ಶಕ ಥಾಮಸ್ ಪ್ರಕಾರ ವಾಲ್ಮೀಕಿ ರಾಮಾಯಣ ಜಗತ್ತಿನ ಶ್ರೇಷ್ಠ ಕಾವ್ಯ ಸಂಪತ್ತು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀ ಕಂಠನಾಯಕ,ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ನಾಯಕ ಸಂಘದ ತಾಲ್ಲೂಕು ಅದ್ಯಕ್ಷ ಬಂಗಾರನಾಯಕ, ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ ದೇಬೂರು ಆಶೋಕ್,ಗ್ರಾ ಪಂ ಅದ್ಯಕ್ಷೆ ತಾಯಮ್ಮ,
ದೊರೆಸ್ವಾಮಿನಾಯಕ,ಅಭಿನಂದನ್ ಪಾಟೀಲ್,ಗ್ರಾ ಪಂ ಸದಸ್ಯದೇವನಾಯಕ,ನಾಗನಾಯ್ಕ,ಶ್ರೀಕಂಠಸ್ವಾಮಿ,ಶಿವರಾಜು,ಪ್ರಕಾಶ್,ನಂಜುಂಡಸ್ವಾಮಿ, ಸಿದ್ದು,ಮಹೇಶ್, ಮಹೇಂದ್ರ, ಹಾಗೂ ಕಿಚ್ಚಿನ ಅಭಿಮಾನಿ ಬಳಗದವರು ಹಾಜರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.
Cultural
ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ
ಆಲೂರು : ನೂರಾರು ವರ್ಷಗಳ ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.ತಾಲ್ಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಗಿ ವಿವಿಧ ಅಭಿಷೇಕ ಸೇರಿದಂತೆ ಅಲಂಕಾರ ಮಹಾ ಮಂಗಳಾರತಿ ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.

ಆಲೂರು ತಾಲೂಕು ಸೇರಿದಂತೆ ಹಲವೆಡೆಗಳಿಂದ ನೂರಾರು ಭಕ್ತರ ದಂಡು ಅಗಮಿಸಿ ಪೂಜಾ ಕಾರ‍್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.ವಿಶೇಷ ಎಂದರೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಕೋರಿಕೆಗಾಗಿ ಹರಕೆ ಹೊರುತ್ತಿದ್ದು. ಕೋರಿಕೆಗಳು ಈಡೇರಿದ ನಂತರ ಭಕ್ತರು ಪ್ರತಿ ಸೋಮವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಾಧಿಗಳೇ ಸ್ವಯಂ ಪ್ರೇರಿತರಾಗಿ ಹಮ್ಮಿಕೊಳ್ಳುತ್ತ ಬಂದಿದ್ದಾರೆ ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಈರಣ್ಣಯ್ಯ ತಿಳಿಸಿದ್ದಾರೆ.
-
Special21 hours agoKVAFSU ನೇಮಕಾತಿ 2026: 96 ಬೋಧನಾ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Mandya23 hours agoಶಿಕ್ಷಕರು ಶಿಕ್ಷಿಸಿದ ಪರಿಣಾಮ ಇಂದು ಉನ್ನತ ಹುದ್ದೆ ಸಾಧ್ಯವಾಯಿತು : ಬಿ.ಜಿ.ಕುಮಾರ್
-
Mysore14 hours agoಹೊಲದಲ್ಲಿ ಕಳೆ ಕೀಳುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆ ಸಾ*ವು
-
Kodagu15 hours agoರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ
-
Kodagu15 hours agoವರ್ಕ್ಶಾಪ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಮಣಿಕಂಠನ್ ಆಯ್ಕೆ
-
Kodagu15 hours agoಬ್ಯಾಡಗೊಟ್ಟ, ದೊಡ್ಡಕುಂದ ಸೇರಿದಂತೆ ವಿವಿಧೆಡೆ ಮೇ.30 ರಂದು ವಿದ್ಯುತ್ ವ್ಯತ್ಯಯ
-
Chamarajanagar15 hours agoಕೋಡಿಮೋಳೆ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
-
Kodagu16 hours agoಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ
