Connect with us

State

ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ – ಸಿಎಂ ರಾಜೀನಾಮೆ ನೀಡಬೇಕು, ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Published

on

ಸಿಎಂ ರಾಜೀನಾಮೆ ನೀಡಬೇಕು, ತಪ್ಪಿದರೆ ಅವರನ್ನು ವಜಾ ಮಾಡಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ, ರಾಷ್ಟ್ರಪತಿ ಹುದ್ದೆ, ಸಂವಿಧಾನಕ್ಕೆ ಮುಖ್ಯಮಂತ್ರಿಯಿಂದ ಅಪಚಾರ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧನೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ರಾಷ್ಟ್ರಪತಿಗಳಿಗೆ ಅಪಚಾರ ಎಸಗಿರುವ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಇಲ್ಲವೇ ಅವರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಜ್ಯಪಾಲರನ್ನು ಒತ್ತಾಯ ಮಾಡಿದ್ದಾರೆ.

ಆಚಾರಗೆಟ್ಟ ಮುಖ್ಯಮಂತ್ರಿ:

ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದಿರುವ ಕುಮಾರಸ್ವಾಮಿ ಅವರು, ಸಿಎಂ ಬಳಸಿರುವ ಪದವನ್ನು ಬರೆಯಲಾರೆ ಎಂದು ಎಂದಿದ್ದಾರಲ್ಲದೆ, ಸಿದ್ದರಾಮಯ್ಯ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಈ ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಮಾನ್ಯ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು. ಇದು ನನ್ನ ಆಗ್ರಹ ಎಂದಿದ್ದಾರೆ ಕುಮಾರಸ್ವಾಮಿ ಅವರು.

ಶೋಷಿತರ ಜಾಗೃತಿ ಸಮಾವೇಶದಲ್ಲೇ ಅಪಮಾನ:

ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ.. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಕೀಲರಂತೆ, ಸ್ವಯಂಘೋಷಿತ ಸಂವಿಧಾನ ತಜ್ಞರಂತೆ.. ನಾಚಿಕೆಯಾಗಬೇಕು ಇವರಿಗೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯನವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಶನಿವಾರದಂದು ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಮಾತೆದ್ದಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

State

ಸುಳ್ಳು – ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖ: ಡಾ. ಸಿ.ಟಿ.ರವಿ 

Published

on

ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮೆಟ್ರೋ ದರ ಏರಿಕೆ ಕುರಿತು ಬಿಜೆಪಿ ಹೋರಾಟ ಮಾಡಲಿದೆ ಎಂದು ಎಂಎಲ್‌ಸಿ ಡಾ. ಸಿ.ಟಿ ರವಿ  ತಿಳಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಇಂದು  ಮೆಟ್ರೋ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಳ್ಳು ಹೇಳೋದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸುಳ್ಳು ಹಾಗೂ ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖ. ಸುಳ್ಳು ಬೆಳಗ್ಗೆ ಪ್ರಾರಂಭ ಮಾಡಿ‌ ಅಂತ್ಯ ಮಾಡೋದು ಸುಳ್ಳಿನಿಂದಲೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೆಟ್ರೋ ದರ ಏರಿಕೆ ಸಂಬಂಧ ಪಿ.ಸಿ ಮೋಹನ್ ವಿವರವಾಗಿ ಪತ್ರ ಬರೆದಿದ್ದರು. ಮೆಟ್ರೋ ಲಾಭದಲ್ಲಿ ನಿಮಗೆ ಪಾಲು ಇಲ್ಲವಾ ಸಿದ್ದರಾಮಯ್ಯ ಅವರೇ? ಸಮಿತಿ ಅಧ್ಯಕ್ಷ ಯಾರ್ ಆಗಬೇಕು ಎಂದು ಶಿಫಾರಸು ಮಾಡೋರು ಯಾರು? ಸಂಸದರು ಹೇಳಿದ ಹಾಗೆ ಮೆಟ್ರೋ ದರ ಏರಿಕೆ ಬಗ್ಗೆ ಬಿಜೆಪಿ ಹೋರಾಟ ಮಾಡುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Continue Reading

State

ಜಿಬಿಎ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ: ಬಿ.ವೈ.ವಿಜಯೇಂದ್ರ 

Published

on

ಬೆಂಗಳೂರು: ಜಿಬಿಎ ಚುನಾವಣೆ ಯಾವಾಗಲೇ ನಡೆದರೂ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಇಂದು ಜಿಬಿಎ ಚುನಾವಣೆ ವಿಚಾರವಾಗಿ ಚುನಾವಣೆ ಉಸ್ತುವಾರಿ ರಾಮ್ ಮಾಧವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವಿಜಯೇಂದ್ರ, ಜಿಬಿಎ ಚುನಾವಣೆ ಯಾವತ್ತೇ ನಡೆದರೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಚರ್ಚೆ ಮಾಡಿದ್ದೇವೆ. 5 ಮಹಾನಗರ ಪಾಲಿಕೆಗಳಲ್ಲಿ ಗೆಲ್ಲುವ ಅವಕಾಶ ಇದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಹಿರಿಯ ನಾಯಕರ ತಂಡ ಮಾಡಿ ಜೆಡಿಎಸ್ ಜೊತೆ ಮಾತುಕತೆ ಮಾಡಿ ಸಜ್ಜಾಗಬೇಕು ಎಂದು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಫೆ.28 ಮತ್ತು ಮಾ.1 ರಂದು 5 ಮಹಾನಗರ ಪಾಲಿಕೆಗಳ ಪ್ರತ್ಯೇಕ ಸಭೆ ಮಾಡಲು ತೀರ್ಮಾನ ಮಾಡಲಾಗಿದೆ. ಬೆಂಗಳೂರು ಮಹಾನಗರಕ್ಕೆ ಕಾಂಗ್ರೆಸ್ ಸರ್ಕಾರ ಮತ್ತು ಉಸ್ತುವಾರಿ ಸಚಿವರು ಆದ್ಯತೆ ನೀಡದಿರುವುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ‌. ಟನಲ್ ರೋಡ್ ಬಗ್ಗೆ ಮಾತಾಡುವ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಗುಂಡಿ ಮುಚ್ಚುವ ಯೋಗ್ಯತೆ ಇಲ್ಲ. ಡಿ.ಕೆ. ಶಿವಕುಮಾರ್ ಅವರ ನಡವಳಿಕೆಯನ್ನು ಜನ ಗಮನಿಸುತ್ತಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ‌ ಸಿಎಂ ಆಗಿದ್ದಾಗ ಬೆಂಗಳೂರಿನ ಅಭಿವೃದ್ಧಿ ಏನಾಗಿತ್ತು ಎಂದು ಜನರ ಮುಂದೆ ತೆಗೆದುಕೊಂಡು ಹೋಗಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಜನರಿಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಜಿಬಿಎನಲ್ಲಿ ಜೆಡಿಎಸ್‌ಗೆ ಸೀಟು ಬಿಟ್ಟು ಕೊಡುವ ಬಗ್ಗೆ ಹಿರಿಯರ ತಂಡ ಮಾಡಿ ಚರ್ಚೆ ತೀರ್ಮಾನ ಮಾಡುತ್ತೇವೆ. ದೇವೇಗೌಡರು ಕೂಡಾ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಬೇರೆ ಬೇರೆ ನಾಯಕರು ಸಹ ಮಾತಾಡಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರು ಹೇಳಿದಂತೆ ನಾವು ನಡೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

Continue Reading

Politics

ಪ್ರಧಾನಿ ಮೋದಿ, ಅಮೆರಿಕಾ ಅಧ್ಯಕ್ಷ ಟ್ರಂಪ್‌ ಹೇಳಿದಂತೆ ಕೇಳುವ ಪರಿಸ್ಥಿತಿ ಬಂದಿದೆ: ಸಂತೋಷ್‌ ಲಾಡ್‌

Published

on

ಹುಬ್ಬಳ್ಳಿ: ಭಾರತ ಮತ್ತು ಅಮೆರಿಕಾ  ನಡುವಿನ ವ್ಯಾಪಾರ ಒಪ್ಪಂದ  ವಿಚಾರದಲ್ಲಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದಂತೆ ಕೇಳುವ ಪರಿಸ್ಥಿತಿ ಬಂದಿದೆ. ಟ್ರಂಪ್ ಬಾಬಾ ಹೇಳಿದ್ದನ್ನು ಮೋದಿ ಬಾಬಾ ಕೇಳಬೇಕೆನ್ನುವ ಪರಿಸ್ಥಿತಿ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವ್ಯಂಗ್ಯ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು,  ಅಮೆರಿಕಾದಿಂದ ಯಾವುದೇ ವಸ್ತು ಬಂದರೆ ತೆರಿಗೆ ಇಲ್ಲ. ಆದರೆ ನಮ್ಮ ರೈತರ ಉತ್ಪನ್ನಗಳಿಗೆ ತೆರಿಗೆ ಹಾಕುತ್ತಾರೆ. ಕೇಂದ್ರದ ಈ  ತೀರ್ಮಾನದಿಂದ ರೈತರಿಗೆ ತೊಂದರೆ  ಆಗಲಿದೆ. ಅಮೆರಿಕಾ ಭಾರತ ನಡುವಿನ  ಒಪ್ಪಂದದಿಂದ ಯಾರಿಗೆ ಲಾಭ  ಆಗುತ್ತದೆ. ಟ್ರಂಪ್‌ ಬಾಬಾ ಹೇಳಿದ್ದನ್ನು ಮೋದಿ ಬಾಬಾ ಕೇಳಬೇಕು ಎಂದು ಟೀಕಿಸಿದ್ದಾರೆ.

ಇದೇ ಸಂದರ್ಭದಲ್ಲಿ ಭಾರತ್ ಪಾಕ್ ಯುದ್ದ ನಿಲ್ಲಿಸಿದ್ದು  ನಾನೇ ಎಂದು ಟ್ರಂಪ್ ಹೇಳುತ್ತಾರೆ  ಟ್ರಂಪ್ ಹೇಳಿಕೆ ವಿಚಾರವಾಗಿ ಬಿಜೆಪಿಯ ಒಬ್ಬರೂ ಸಹ ಮಾತನಾಡಲ್ಲ.  ಬಾಂಗ್ಲಾ ವಲಸಿಗರ ವಿಚಾರದಲ್ಲಿ ಮಾತನಾಡುತ್ತಾರೆ ಎಷ್ಟು ಬಾಂಗ್ಲಾ ವಲಸಿಗರನ್ನು ದೇಶದಿಂದ ಗಡಿಪಾರು ಮಾಡಿದ್ದಾರೆ.   ದೇಶದ ಗಡಿಗಳನ್ನು ಕಾಪಾಡೋದು ರಾಜ್ಯಗಳಲ್ಲ ಕೇಂದ್ರ ಸರ್ಕಾರ.  ಆದರೆ ಅವರೇ  ಬಾಂಗ್ಲಾ ವಲಸಿಗರು ಒಳಗೆ ಬರ್ತಾರೆ ಅಂತಾರೆ  ಹಾಗಾದರೆ ಇದರ ಹೊಣೆ ಹೊತ್ತು ಯಾರು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

Continue Reading

Trending

error: Content is protected !!