Connect with us

Kodagu

ರೈತ ಸಂಘದ ಕೊಡಗು ಘಟಕದಿಂದ ಮಡಿಕೇರಿಯ ಸೆಸ್ಕ್ ಕಚೇರಿ ಎದುರು ಪ್ರತಿಭಟನೆ

Published

on

ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ರೈತರ ಜಮೀನುಗಳಿಗೆ ತೆರಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಘಟಕದಿಂದ ಮಡಿಕೇರಿಯ ಸೆಸ್ಕ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು,
ರೈತರ 10 ಹೆಚ್‌ಪಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸುವುದಾಗಿ ಈ ಹಿಂದಿನ ಸರ್ಕಾರಗಳು ಘೋಷಣೆ ಮಾಡಿದ್ದವು. ಆದರೆ ಅವುಗಳು ಕಾರ್ಯಗತವಾಗಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗಿಗೆ ಆಗಮಿಸಿದ ಸಂದರ್ಭ ಉಚಿತ ವಿದ್ಯುತ್ ಕುರಿತು ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ್ದರು.

ಈ ನಡುವೆ ವಿದ್ಯುತ್ ಇಲಾಖೆ ಸಿಬ್ಬಂದಿಗಳು ಸರ್ಕಾರಿ ಆದೇಶದ ಪ್ರತಿ ಇಲ್ಲದೆ, ಕೊಡಗಿನ ಸಣ್ಣ ರೈತರ ಜಮೀನುಗಳಿಗೆ ಅತಿಕ್ರಮ ಪ್ರವೇಶ ಮಾಡಿ ಮೋಟರ್‌ನ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರ ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ಸೆಸ್ಕ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಂಘದ ವಿರಾಜಪೇಟೆ ಹೋಬಳಿ ಅಧ್ಯಕ್ಷ ಪ್ರವೀಣ್ ಬೋಪಯ್ಯ ಹಾಗೂ ರೈತ ಪರ ಹೋರಾಟಗಾರ ಚಂದ್ರಶೇಖರ್ ಹೆರೂರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘದ ಸದಸ್ಯರಾದ ಗೌತಮ್, ಅರುಣ್ ಕುಮಾರ್, ಶಾಶ್ವತ್, ಅಯ್ಯಣ್ಣ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Continue Reading
Click to comment

Leave a Reply

Your email address will not be published. Required fields are marked *

Kodagu

ನಾಲ್ ನಾಡ್ ಹಾಕಿ ಪಂದ್ಯಾವಳಿ ಮುಂದೂಡಿಕೆ

Published

on

ನಾಪೋಕ್ಲು: ನಾಲ್ ನಾಡ್ ಹಾಕಿ ಕ್ಲಬ್ ವತಿಯಿಂದ ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಮೆ 22 ರಿಂದ ನಾಪೋಕ್ಲು ಬಳಿಯ ಬಲ್ಲಮಾವಟಿ ನೇತಾಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ನಾಲ್ ನಾಡ್ ವ್ಯಾಪ್ತಿಯ ಅಂತರಗ್ರಾಮ ಹಾಕಿ ಪಂದ್ಯಾಟ ಮತ್ತು ಮಹಿಳೆಯರ ಹಗ್ಗಜಗ್ಗಾಟವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ.


ಪಂದ್ಯಾಟಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕ್ರೀಡಾಭಿಮಾನಿಗಳು ಮತ್ತು ನೋಂದಾಯಿತ ತಂಡಗಳು ಬದಲಿಸಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ನಾಲ್’ನಾಡ್ ಹಾಕಿ ಕ್ಲಬ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Kodagu

ಕೊಡಗಿನಲ್ಲಿ ಬೃಹತ್ ಗಾತ್ರದ ಕಾಡುಕೋಣ(ಕಾಟಿ) ಭೇಟೆ

Published

on

ಕೊಡಗಿನಲ್ಲಿ ಬೃಹತ್ ಗಾತ್ರದ ಕಾಡುಕೋಣ(ಕಾಟಿ) ಭೇಟೆ

539 ಕೆ.ಜಿ ಕಾಡುಕೋಣ ಮಾಂಸ ಸೇರಿ ಓರ್ವನ ಬಂಧನ.

ಎಮ್ಮೆಮಾಡು ನಿವಾಸಿ ಹ್ಯಾರಿಸ್(42) ಬಂಧಿತ ಆರೋಪಿ

ಬೆನ್ನಟ್ಟುವ ಸಂಧರ್ಭ ಜೊತೆಗಿದ್ದ ಮತ್ತೊಬ್ಬ ಆರೋಪಿ ಮೂಸ ಪರಾರಿ.

ಕೊಡಗು ಜಿಲ್ಲೆ ಮಾದಪುರ ಸಮೀಪದ ನಂದಿಮೊಟ್ಟೆಯಲ್ಲಿ ನಡೆದ ಘಟನೆ‌.

ಮಡಿಕೇರಿ ವಲಯ ಅರಣ್ಯ ಅಧಿಕಾರಿಗಳಿಂದ ನಡೆದ ಕಾರ್ಯಚರಣೆ.

ತಡರಾತ್ರಿ ಅಪ್ಪಂಗಳದಲ್ಲಿ ವಾಹನವನ್ನ ಬೆನ್ನಟಿ ಹಿಡಿದ ಅರಣ್ಯ ಅಧಿಕಾರಿಗಳು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು .

ಬಂಧಿತರಿಂದ ಎರಡು ಕತ್ತಿ ಹಾಗೂ ಪಿಕಪ್ ವಾಹನ ವಶಕ್ಕೆ.

Continue Reading

Kodagu

ಕೊಡಗು ಜಿಲ್ಲೆಯ ಮಳೆ ವಿವರ

Published

on

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 17.21 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 198.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 122.89 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.25 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 296.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 179.33 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 122.85 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 74.11 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 23.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 176.89 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 76.94 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 172.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 96.66 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 222 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 187.40 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 5.20, ನಾಪೋಕ್ಲು 9.20, ಸಂಪಾಜೆ 71, ಭಾಗಮಂಡಲ 55.60, ವಿರಾಜಪೇಟೆ ಕಸಬಾ 6.80, ಅಮ್ಮತ್ತಿ 10, ಹುದಿಕೇರಿ 1.30, ಶ್ರೀಮಂಗಲ 0.20, ಪೊನ್ನಂಪೇಟೆ 2, ಬಾಳೆಲೆ 90.10, ಸೋಮವಾರಪೇಟೆ ಕಸಬಾ 6.60, ಶನಿವಾರಸಂತೆ 11.20, ಶಾಂತಳ್ಳಿ 17.40, ಕೊಡ್ಲಿಪೇಟೆ 14, ಕುಶಾಲನಗರ 8.40, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (20-05-2024) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2823.09 ಅಡಿಗಳು. ಕಳೆದ ವರ್ಷ ಇದೇ ದಿನ 2819.78 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 31.40 ಮಿ.ಮೀ., ಇಂದಿನ ನೀರಿನ ಒಳಹರಿವು 287 ಕ್ಯುಸೆಕ್, ಕಳೆದ ವರ್ಷ ಇದೇ ದಿನ 89 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

Continue Reading

Trending

error: Content is protected !!