Politics
ಲೋಕಸಭಾ ಚುನಾವಣೆ- ಕಾಂಗ್ರೆಸ್’ನಿಂದ 15 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!

Congress : ಲೋಕಸಭಾ ಚುನಾವಣೆಯಲ್ಲೂ(Parliament election)ವಿಧಾನಸಭೆ ಚುನಾವಣೆಯಲ್ಲಿ ದೊರಕಿದ ಪ್ರತಿಷ್ಠೆಯನ್ನು ಮರಳಿ ಪಡೆಯಬೇಕೆಂದು ರಾಜ್ಯ ಕಾಂಗ್ರೆಸ್(Congress) ಹರಸಾಹಸ ಪಡುತ್ತಿದೆ. ಹೀಗಾಗಿ ಅಳೆದು, ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು, 15 ಕ್ಷೇತ್ರಗಳಿಗೆ ಒಬ್ಬ ಅಭ್ಯರ್ಥಿಯ ಹೆಸರನ್ನು ಮಾತ್ರ ಫೈನಲ್ ಮಾಡುತ್ತಿದೆ. ಇದೀಗ ಈ ಪಟ್ಟಿ ವೈರಲ್ ಆಗುತ್ತಿದೆ.
ಹೌದು, ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಪಡೆಯಲು ಆಕಾಂಕ್ಷಿಗಳು ತೀವ್ರ ಪೈಪೋಟಿ ನಡೆಸಿದ್ದಾರೆ. ಆದರೆ ಚಾಣಕ್ಯ ನಡೆ ಅನುಸರಿಸಿರುವ ಕಾಂಗ್ರೆಸ್ 15 ಕ್ಷೇತ್ರಗಳಿಗೆ ಒಂಟಿ ಹೆಸರು ಅಂತಿಮಗೊಳಿಸಿದೆ. ಅದರ ಪಟ್ಟಿ ಇಲ್ಲಿದೆ ನೋಡಿ.

• ಕೋಲಾರ – ಕೆ.ಎಚ್.ಮುನಿಯಪ್ಪ ಚಾಮರಾಜನಗರ- ಡಾ.ಎಚ್.ಸಿ.ಮಹದೇವಪ್ಪ
• ಬೆಳಗಾವಿ- ಸತೀಶ್ ಜಾರಕಿಹೊಳಿ
• ತುಮಕೂರು- ಮುದ್ದಹನುಮೇಗೌಡ
• ಚಿತ್ರದುರ್ಗ -ಬಿ.ಎನ್. ಚಂದ್ರಪ್ಪ
• ಬೆಂಗಳೂರು ಗ್ರಾಮಾಂತರ- ಡಿ.ಕೆ. ಸುರೇಶ್
• ಹಾಸನ- ಶ್ರೇಯಸ್ ಪಟೇಲ್
• ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
• ಚಿಕ್ಕೋಡಿ- ರಮೇಶ್ ಕತ್ತಿ
• ಉಡುಪಿ-ಚಿಕ್ಕಮಗಳೂರು- ಜಯಪ್ರಕಾಶ್ ಹೆಗ್ಡೆ
• ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ್
• ಬೀದರ್ -ರಾಜಶೇಖರ್ ಪಾಟೀಲ್
• ವಿಜಾಪುರ- ರಾಜು ಅಲಗೂರು
• ರಾಯಚೂರು- ಕುಮಾರನಾಯ್ಕ್
ಅಂದಹಾಗೆ ರಾಜ್ಯ ನಾಯಕರು ಶಿಫಾರಸು ಮಾಡಿ ಹೈಕಮಾಂಡ್ ಕೂಡ ಬಹುತೇಕ ಒಪ್ಪಿದೆ ಎನ್ನಲಾಗಿದೆ. ಅಲ್ಲದೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ನಾಲ್ಕು ಮಂದಿ ಸಚಿವರೂ ಸ್ಪರ್ಧೆಗೆ ಸಂಪೂರ್ಣ ಹಿಂದೇಟು ಹಾಕುತ್ತಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ, ಇನ್ನೂ ಕಾಂಗ್ರೆಸ್ ಸೇರದ ಇಬ್ಬರ ಹೆಸರು ಅಂತಿಮ ಪಟ್ಟಿಯಲ್ಲಿದೆ.
Politics
ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಎಚ್.ಡಿ. ಕುಮಾರಸ್ವಾಮಿ

✅ ಗೃಹ ಸಚಿವ ಪರಮೇಶ್ವರ್ ವಿರುದ್ಧ ಚಿನ್ನದ ಷಡ್ಯಂತ್ರ!!
✅ ಸಿದ್ದರಾಮಯ್ಯ ಅವರನ್ನು ಇಳಿಸಿ ಸಿಎಂ ಆಗಲು ಹೊರಟಿರುವ ನಾಯಕನದ್ದೇ ಕುತಂತ್ರ ಎಂದ ಕೇಂದ್ರ ಸಚಿವರು
ನವದೆಹಲಿ: ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.
ದಲಿತ, ಹಿಂದುಳಿದ ವರ್ಗಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಸಚಿವ ಪರಮೇಶ್ವರ್ ಅವರು ಇಂಥ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್ ಪಕ್ಷದ ಆ ಪ್ರಭಾವೀ ನಾಯಕನೇ ಕಾರಣ ಎಂದು ನೇರ ಆರೋಪ ಮಾಡಿದರು.
ಸಚಿವ ರಾಜಣ್ಣ ವಿಧಾನಸಭೆಯಲ್ಲಿ ಹೇಳಿದರಲ್ಲ, ರಾಜ್ಯದಲ್ಲಿ ಸಿಡಿ, ಪೆನ್ ಡ್ರೈವ್ ಫ್ಯಾಕ್ಟರಿ ಇಟ್ಟುಕೊಂಡಿರುವ ಪ್ರಭಾವೀ ನಾಯಕನ ಬಗ್ಗೆ ನೇರವಾಗಿ ಹೇಳಿದ್ದರು ಅವರು. ಅವರು ಹೇಳಿದ್ದ ನಾಯಕನೇ ಇವತ್ತು ಪರಮೇಶ್ವರ್ ಅವರನ್ನು ಮುಗಿಸಲು ಹೊರಟಿದ್ದಾನೆ. ಪರಮೇಶ್ವರ್ ಅವರು ದಲಿತ ನಾಯಕರ ಸಭೆ ಮಾಡಲು ಹೊರಟಿದ್ದು, ದೆಹಲಿ ನಾಯಕರನ್ನು ಭೇಟಿ ಮಾಡಿದ್ದೇ ಅವರ ವಿರುದ್ಧ ಕುತಂತ್ರ ನಡೆಯಲು ಕಾರಣ ಎಂದು ಕೇಂದ್ರ ಸಚಿವರು ದೂರಿದರು.
ರಾಜ್ಯದಲ್ಲಿ ಏನೇನಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೇಲಾಗಿ ಕಾಂಗ್ರೆಸ್ ಪಕ್ಷದಲ್ಲಿ ಯಾರು ಯಾರಿಗೆ ಗುನ್ನ ಹೊಡೆಯುತ್ತಿದ್ದಾರೆ ಎನ್ನುವ ಮಾಹಿತಿಯೂ ಎಲ್ಲರಿಗೂ ತಿಳಿದಿದೆ. ದುಬೈನಿಂದ ಸಿಕ್ಕಿಬಿದ್ದಿರುವ ಆ ಮಹಿಳೆ ಚಿನ್ನ ತರುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಸೋರಿಕೆ ಮಾಡಿದ್ದೇ ಈ ಪ್ರಭಾವೀ ನಾಯಕ. ಆಕೆ ದುಬೈನಿಂದ ಚಿನ್ನ ಸ್ಮಗ್ಲಿಂಗ್ ಮಾಡುತ್ತಿದ್ದಾಳೆ ಎನ್ನುವ ವಿಚಾರ ಈ ಪ್ರಭಾವೀ ನಾಯಕನಿಗೆ ಹೇಗೆ ಗೊತ್ತು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ ಅವರ ಬಳಿಯೇ ಗುಪ್ತಚರ ವಿಭಾಗ ಇದೆಯಲ್ಲ. ಅವರಿಗೆ ಈ ವಿಷಯ ಗೊತ್ತಿಲ್ಲವೇ? ಆ ಮಹಿಳೆ ವಿಮಾನ ನಿಲ್ದಾಣದ ಮೂಲಕ ಚಿನ್ನ ತರುತ್ತಿರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷದ ಈ ಪ್ರಭಾವಿ ನಾಯಕ. ಈ ವಿಷಯ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿಲ್ಲವೇ? ಸಚಿವ ಪರಮೇಶ್ವರ್ ಅವರು ದಲಿತರ ಸಮಾವೇಶ ಮಾಡಲು ಹೊರಟರು. ತಾವು ಕೂಡ ಸಿಎಂ ಪದವಿಯ ಆಕಾಂಕ್ಷಿ ಎಂದು ಹೇಳಿದರು. ತಮ್ಮ ದಾರಿಗೆ ಅಡ್ಡ ಬರುತ್ತಾರೆ ಎಂದು ಕಾಂಗ್ರೆಸ್ ಪ್ರಭಾವೀ ನಾಯಕನೇ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಕುತಂತ್ರ ಹೂಡಿದರು. ಇಷ್ಟೆಲ್ಲಾ ಗಂಭೀರ ವಿಚಾರಗಳು ಸಿಎಂಗೆ ಗೊತ್ತಿಲವೆಂದರೆ ಹೇಗೆ? ಸಿದ್ದರಾಮಯ್ಯ ಅವರನ್ನು ಇಳಿಸಿ ನಾನು ಸಿಎಂ ಆಗಬೇಕು ಎಂದು ಕುರ್ಚಿಯ ಮೇಲೆ ಟವೆಲ್ ಹಾಕಿಕೊಂಡು ಕೂತಿರುವವರೆ ಚಿನ್ನದ ರಹಸ್ಯ ಬಹಿರಂಗ ಮಾಡಿದ್ದಾರೆ ಎಂಬ ಸ್ಫೋಟಕ ಅಂಶಗಳನ್ನು ವಿಷಯವನ್ನು ಕುಮಾರಸ್ವಾಮಿ ಅವರು ಬಹಿರಂಗಪಡಿಸಿದರು.
ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಇಷ್ಟೆಲ್ಲಾ ರಾಜಕೀಯ ಮೇಲಾಟ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ವ್ಯರ್ಥ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಭಾವೀ ನಾಯಕನಿಂದಲೇ ಇದೆಲ್ಲಾ ನಡೆದಿದೆ. ಅದೆಷ್ಟೋ ಎಸ್ ಐಟಿ, ಕಮಿಟಿ, ಸಮಿತಿ ಎಲ್ಲಾ ಮಾಡಿದ್ದಿರಲ್ಲ? ಅವೆಲ್ಲವೂ ಏನಾದವು? ಬಾಯಿ ಬಿಟ್ಟರೆ ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಾರೆ. ಆದರೆ, ನುಡಿದಂತೆ ನಡೆಯಲು ಎಷ್ಟು ತೆರಿಗೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
Mandya
ಸಿಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಕ.ದ.ಸಂ.ಸ ಕಾರ್ಯಕರ್ತರ ಬಂಧನ

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ ಬೇಟಿ ನೀಡುತ್ರಿರುವ ಹಿನ್ನಲೆಯಲ್ಲಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಬಿಸುತ್ತ ಮುಖ್ಯಮಂತ್ರಿ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಎಚ್ಚೆತ್ತ ಪೊಲೀಸರು ಮುಖ್ಯಮಂತ್ರಿ ಆಗಮನಕ್ಕೆ ಮುನ್ನ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಕೆ ಎಂ ಅನಿಲ್ ಕುಮಾರ್, ಬಿ ಆನಂದ್, ಮಹದೇವು, ಕರಿಯಪ್ಪ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ಸಮುದಾಯಗಳನ್ನು ನಿರಂತರ ವಂಚಿಸುತ್ತಾ ಬಂದಿದ್ದಾರೆ. ರಾಜ್ಯದ ದಲಿತ, ಹಿಂದುಳಿದ ಅಲ್ಪಸಂಖ್ಯಾತ, ಬಹುಜನ ತಳ ಸಮುದಾಯಗಳ ಅಭಿವೃದ್ಧಿಗಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡುವುದಾಗಿ ನುಡಿದ ಸಿದ್ದರಾಮಯ್ಯ, ನುಡಿದಂತೆ ನಡೆಯಲಿಲ್ಲ ಏಕೆ ಎಂದು ಪ್ರಶ್ನಿಸಿದರು.
ಶೋಷಿತ ತಳ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿಯ ಹೆಚ್.ಕಾಂತರಾಜು ಆಯೋಗದ ವರದಿಯನ್ನು ಆರು ತಿಂಗಳ ಕಾಲಮಿತಿಯೊಳಗೆ ಜಾರಿಗೊಳಿಸದೆ 10 ವರ್ಷಗಳಿಂದಲೂ ಸ್ವಾರ್ಥ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಅಧಿಕಾರ ಉಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಮುದಾಯಗಳಿಗೆ ಮಾಡಿದ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೋಷಿತ ತಳ ಸಮುದಾಯಗಳ ಹೆಸರಲ್ಲಿ ಅಧಿಕಾರಕ್ಕೇರಲು ತಾತ್ಕಾಲಿಕ ಪರಿಹಾರಗಳಾಗಿ ಐದು ಗ್ಯಾರಂಟಿಗಳನ್ನು ನೀಡಿದರೇ ಹೊರತು ತಳ ಸಮುದಾಯಗಳಿಗೆ ಭೂಮಿ, ಮನೆ, ಉದ್ಯೋಗ, ಶಿಕ್ಷಣ, ಕಂಪನಿ ಸ್ಥಾಪನೆಯಂತಹ ಅವಕಾಶಗಳನ್ನು ನೀಡಿ ಆಮೂಲಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವಾಗಲಿಲ್ಲ ಎಂದು ಕಿಡಿಕಾರಿದರು.
,ಶೋಷಿತ ತಳ ಸಮುದಾಯಗಳ ಹೆಸರಿಗೊಂದು ಅಭಿವೃದ್ಧಿ ನಿಗಮ ಮಾಡಿದರೇ ಹೊರತು ಆ ನಿಗಮಗಳಿಗೆ ಸಮರ್ಪಕ ಅನುದಾನ ಕಲ್ಪಿಸಿ ನೇರಸಾಲ, ಸ್ವಯಂ ಉದ್ಯೋಗ ಸೃಷ್ಟಿಸಲಿಲ್ಲ. ಅಷ್ಟೇ ಅಲ್ಲದೆ ನಿಗಮಗಳಿಗೆ ನೀಡಿದ ಅಲ್ಪ ಅನುದಾನವನ್ನು ಚುನಾವಣೆಯಲ್ಲಿ ಹೆಂಡ ಹಂಚಲು ಅಕ್ರಮ ಬಳಕೆಗೆ ಅವಕಾಶ ಕೊಟ್ಟು, ಸಮುದಾಯಗಳ ನಿರುದ್ಯೋಗಿಗಳಿಗೆ ಘೋರ ಅನ್ಯಾಯ ಮಾಡಿದ್ದು ಜನರ ಕಣ್ಣ ಮುಂದೆ ಇಲ್ಲವೇ ಎಂದು ಆಕ್ರೋಷ ವ್ಯಕ್ತಪಡಿಸಿದರು.
Politics
ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗೂ ಮತ್ತು ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಇಂದು(ಏಪ್ರಿಲ್.28) AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತೀದ್ದೀರಿ. ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದನ್ನು ಬಿಟ್ಟರೆ ಬೇರೆ ಏನು ಮಾಡಿದ್ದೀರೆಂದು ಜನರಿಗೆ ತೋರಿಸಿ ಎಂದು ಸವಾಲು ಹಾಕಿದರು.
ಭಾರತೀಯರು ಬ್ರಿಟಿಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು ಕಡೆದು ಕಟ್ಟೆ ಹಾಕಿದ್ದೀರಾ ? ಸ್ವಾತಂತ್ರ್ಯ ಹೋರಾಟಕ್ಕೆ ಏಕೆ ಬರಲಿಲ್ಲ ? ಏನ್ ಮಾಡುತ್ತಾ ಕೂತ್ತಿದ್ದೀರಿ ಎಂದು ಪ್ರಶ್ನಿಸಿದರು.
ಮೊನ್ನೆ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ರಾಜಾರೋಷವಾಗಿ ಗನ್‌ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ ಇದು ಕೇಂದ್ರ ಸರ್ಕಾರದ ಲೋಪ ಅಲ್ಲವಾ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದಾ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುತ್ತೀರಾ ಎಂದು ಪ್ರಶ್ನಿಸಿದರು.
ಭಾರತಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳ ಕಾಲ ಆಗಿದೆ. RSS ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ ನೀವು. ನಾಚಿಕೆ ಆಗುವುದಿಲ್ಲವೇ ನಿಮಗೆ ಎಂದು ಕಿಡಿಕಾರಿದರು.
ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತಾಡ್ತೀರಾ. ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳ ನಿಮ್ಮ ಕೊಡುಗೆ ಭಾರತಕ್ಕೆ ಏನು ಕೊಟ್ಟಿದ್ದೀರಿ ಎಂದು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.
ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ಟ್ಯಾಕ್ಸ್ ಇತ್ತು. ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತರ ಮೇಲಿನ ತೆರಿಗೆಯನ್ನು ಶೇ25 ಇಳಿಸಿದಿರಿ. ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿದಿರಿ. ನಾಚಿಕೆ ಆಗುತ್ತಿಲ್ಲ ನಿಮಗೆ. ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ ? ಭಾರತೀಯರನ್ನು ನಿರಂತರ ಸುಳ್ಳುಗಳಲ್ಲಿ ಇನ್ನೂ ಎಷ್ಟು ವರ್ಷ ಮರಳು ಮಾಡ್ತೀರಿ. ಸತ್ಯ ಹೇಳಿ ಎಂದು ಸವಾಲು ಹಾಕಿದರು.
ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ. ಬ್ರಿಟೀಷರನ್ನೇ ಒದ್ದೋಡಿಸಿದ ನಮಗೆ ನೀವು ಬಿಜೆಪಿ-RSS ನ್ನೂ ಎದುರಿಸಿ ನಿಲ್ಲುವ ಶಕ್ತಿ ಇದೆ ಎಂದರು.
ನಾವು ಹಾಲಿನ ದರ 4 ರೂ ಹೆಚ್ಚಿಸಿ, ಇಡೀ 4 ರೂಪಾಯಿಯನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ. ನಾವು 4 ರೂ ಹೆಚ್ಚಿಸಿದರೂ ಹಾಲಿನ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ, ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ತೀವಿ. ಕಾಂಗ್ರೆಸ್ ಸರ್ಕಾರಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.
ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ ಎಂದರು.
ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜವನ್ನು ಬಿರುಕಿ ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ. ನಾವು ಉತ್ತರ ಕೊಡ್ತೀವಿ ಎಂದು ಹೇಳಿದರು.
-
Hassan12 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
Kodagu10 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya6 hours ago
ಕೆ.ಆರ್.ಪೇಟೆ ದೇವಿರಮ್ಮಣ್ಣಿ ಕೆರೆಯಲ್ಲಿ ಬಲೆಗೆ ಬಿದ್ದ ಬಂಗಾರ ಬಣ್ಣದ ಗೌರಿ ಮೀನು
-
Chikmagalur13 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu13 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ
-
Kodagu13 hours ago
ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೊಡವ ಸಮಾಜ
-
Chikmagalur10 hours ago
ಮರ ಬಿದ್ದು ಬೈಕ್ ಸವಾರ ದು*ರ್ಮರಣ
-
Mysore10 hours ago
ಜಾತಿಗಣತಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು ?