State
ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತೊಂದು ಸಮೀಕ್ಷೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಫೆ. 14: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆ ಸಮಿತಿ ಸಭೆ ನಂತರ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು:

“ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ.”
ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂದು ಕೇಳಿದಾಗ, “ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ. 50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ” ಎಂದರು.
ಎಷ್ಟು ಕ್ಷೇತ್ರಗಳಲ್ಲಿ ಓರ್ವ ಆಕಾಂಕ್ಷಿಗಳಿದ್ದಾರೆ ಎಂದು ಕೇಳಿದಾಗ, “ನಾವು ಇನ್ನು ಆ ವಿಚಾರವಾಗಿ ಚರ್ಚೆ ಮಾಡಿಲ್ಲ. ನಾವು ಕೇವಲ ನಮಗೆ ಬಂದಿರುವ ವರದಿಗಳು, ಅಭಿಪ್ರಾಯದ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

ಎಐಸಿಸಿಗೆ ಕಳಿಸಲಾಗಿರುವ ಪಟ್ಟಿ ಬಗ್ಗೆ ಗೊಂದಲವಿದೆಯೇ ಎಂದು ಕೇಳಿದಾಗ, “ಇದೆಲ್ಲವೂ ಸುಳ್ಳು, ನಾವು ಎಐಸಿಸಿಗೆ ಯಾವುದೇ ಪಟ್ಟಿ ನೀಡಿಲ್ಲ. ಮುಖ್ಯಮಂತ್ರಿಗಳಿಗೆ ವಿವಿಧ ವರದಿಗಳು, ಅಭಿಪ್ರಾಯಗಳ ಕುರಿತ ಅಧಿಕೃತ ಪಟ್ಟಿಯನ್ನು ಇವತ್ತಷ್ಟೇ ನೀಡಿದ್ದೇನೆ. ನಾವು ನಮ್ಮ ಪಟ್ಟಿಯನ್ನು ಗೌಪ್ಯವಾಗಿಡಬೇಕು, ಆ ಕೆಲಸ ಮಾಡುತ್ತೇವೆ” ಎಂದರು.
ಸಚಿವರ ಸ್ಪರ್ಧೆ ಬಗ್ಗೆ ಕೇಳಿದಾಗ, “ರಾಜಕೀಯದಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಎಲ್ಲರಿಗೂ ಅವಕಾಶವಿರುತ್ತದೆ. ಪಕ್ಷ ಗೆಲ್ಲುವುದು ಮುಖ್ಯ.”
State
ಕಮಿಷನ್‌ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದಲ್ಲಿಯೇ ಕಮಿಷನ್‌ಗಾಗಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಆಡಿಯೋ ವೈರಲ್ ಆದ ಬೆನ್ನಲ್ಲೆ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಬಿ.ಜಗನ್ನಾಥ್ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಟೆಂಡರ್ ಪ್ರಕ್ರಿಯೆ ಬಿಡ್ ಗಾಗಿ ಸಣ್ಣ ಗುತ್ತಿಗೆದಾರರಿಂದ 3 ಪರ್ಸೆಂಟ್ ವರೆಗೂ ಕಮಿಷನ್ ಗೆ ಬೇಡಿಕೆ ಇಡುತ್ತಿದ್ದರು ಎಂಬ ಆಂಶ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಜಗನ್ನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂಬ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
Politics
ವಿಬಿ ಜಿ ರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರೀ ಗದ್ದಲ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್‌ಜಿ ಕಾಯ್ದೆವಿಚಾರದ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದರಿಂದ ಸದನದಲ್ಲಿ ತೀವ್ರ ಗದ್ದಲ, ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.
ವಿಧಾನಸೌಧದಲ್ಲಿ ಇಂದು ಸರ್ಕಾರದ ನಿರ್ಣಯ ಓದಿದ ಸಿಎಂ, ಈ ಸದನ ವಿಬಿ-ಜಿರಾಮ್‌ಜಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತದೆ. ವಿಬಿ ಜಿ ರಾಮ್ ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ ಕಾಯ್ದೆ ಮೂಲ ಸ್ವರೂಪದಲ್ಲಿ ಮರು ಜಾರಿ ಮಾಡಬೇಕು. ವಿಬಿ ಜಿ ರಾಮ್ ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಮನರೇಗಾ ಸಂವಿಧಾನದ ಹಕ್ಕುಗಳನ್ನು ನೀಡುವ ಯೋಜನೆ. ಕೆಲಸದ ಹಕ್ಕು ಯೋಜನೆ ನೀಡುತ್ತಿದ್ದ ಯೋಜನೆ ಮನರೇಗಾ. ನರೇಗಾ ವಾಪಸ್ ಜಾರಿ, ವಿಬಿ ಜಿ ರಾಮ್ ಜಿ ರದ್ದಿಗೆ ಈ ನಿರ್ಣಯ ಮೂಲಕ ಈ ಸದನ ಕೇಂದ್ರಕ್ಕೆ ಆಗ್ರಹಿಸುತ್ತದೆ. ಈ ನಿರ್ಣಯವನ್ನು ಈ ಸದನ ನಿರ್ಣಯ ಅಂಗೀಕರಿಸುತ್ತದೆ ಎಂದು ಗದ್ದಲದ ಮಧ್ಯೆಯೇ ಸಿಎಂ ನಿರ್ಣಯ ಓದಿದರು.

ಇದೇ ವೇಳೆ ಈ ಸದನ ಅಲ್ಲ, ನಿಮ್ಮ ಸರ್ಕಾರ ವಿರೋಧಿಸುತ್ತದೆ ಎಂದು ಹೇಳಿ ಎಂದು ಅಶೋಕ್ ಒತ್ತಾಯಿಸಿದರು. ಆಗ ಈ ಸದನ ಈ ಸದನವೆಂದು ಒತ್ತಿ ಹೇಳಿ ವಿಪಕ್ಷಗಳಿಗೆ ಸಿಎಂ ಗುದ್ದು ನೀಡಿದರು. ಇದಕ್ಕೆ ಸರ್ಕಾರ ಸರ್ಕಾರ ಈ ಸದನ ಅಲ್ಲವೆಂದು ವಿಪಕ್ಷ ಸದಸ್ಯರು ಟಾಂಗ್ ನೀಡಿದರು.
ವಿಪಕ್ಷಗಳಿಂದ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಮುಂದುವರೆಯಿತು. ಆರ್.ಬಿ. ತಿಮ್ಮಾಪೂರ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಸಿಎಂ ನಿರ್ಣಯ ಮಂಡನೆಗೆ ವಿಪಕ್ಷಗಳ ಸದಸ್ಯರು ಎದ್ದು ನಿಂತು ಅಡ್ಡಿ ಪಡಿಸಿದರು. ಈ ವೇಳೆ ವಿಪಕ್ಷಗಳ ಮೇಲೆ ಸಿಎಂ ಗರಂ ಆದರು. ಅಧ್ಯಕ್ಷರೇ ಅವರನ್ನು ಕೂರಿಸಿ, ಯಾರು ನಿಮ್ಮ ಮಾತು ಕೇಳೋದಿಲ್ಲವೋ ಅವರನ್ನು ಹೊರಗೆ ಹಾಕಿ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಸದನದಲ್ಲಿ ಗದ್ದಲ, ಕೋಲಾಹಲ, ಪರಸ್ಪರ ಆರೋಪ, ವಾಕ್ಸಮರಗಳಿಂದ ಗೊಂದಲದ ಗೂಡಾಯ್ತು. ಇದು ಲೂಟಿ ಸರ್ಕಾರವೆಂದು ಘೋಷಣೆ ವಿಪಕ್ಷ ಸದಸ್ಯರು ಘೋಷಣೆ ಕೂಗುತ್ತಲೇ ಇದ್ದರು. ವಿಪಕ್ಷಗಳ ನಡೆಗೆ ಸಿಎಂ ತೀವ್ರ ಖಂಡಿಸಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು.
ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆ ಸದನವನ್ನೇ ಸ್ಪೀಕರ್ ಮುಂದೂಡಬೇಕಾಯಿತು. ಭೋಜನದ ನಂತರ ಕಲಾಪ ಶುರುವಾದರೂ ಮತ್ತೆ ಸದನದಲ್ಲಿ ಗದ್ದಲ, ಜಟಾಪಟಿ ಮುಂದುವರೆಯಿತು.
Politics
ಪ್ರಧಾನಿ ಮೋದಿ-ಟ್ರಂಪ್ ನಡುವಿನ ಒಪ್ಪಂದ ಮಹತ್ವದ ಮೈಲಿಗಲ್ಲು: ಬಸವರಾಜ ಬೊಮ್ಮಾಯಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವಿನ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರು, ಸಣ್ಣ ಕೈಗಾರಿಕೆಗಳು ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
-
National19 hours agoದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ: ವಾಟ್ಸಪ್ಗೆ ಸುಪ್ರೀಂ ಎಚ್ಚರಿಕೆ
-
Special22 hours agoಪೋಸ್ಟ್ ಆಫೀಸ್ ಉದ್ಯೋಗ ಅವಕಾಶ: ನೇರ ನೇಮಕಾತಿ
-
Special13 hours agoಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ
-
Hassan13 hours agoಎಸ್ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್ಡಿಪಿಐ ಮುಖಂಡ
-
State13 hours agoಕಮಿಷನ್‌ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
-
Kodagu15 hours agoಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
-
Mysore14 hours agoಕಚ್ಚಾ ತಂಬಾಕು ಮೇಲಿನ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ: ಸಂಸದ ಯದುವೀರ್
-
Mysore15 hours agoಪೌರಕಾರ್ಮಿಕರೊಂದಿಗೆ ಸಹಪಂಕ್ತಿ ಭೋಜನ
