Connect with us

Hassan

ವಿಧಾನಸೌದದಲ್ಲಿ ಪಾಕಿಸ್ತಾನ ಜಿಂದಾಬಾದ್ ಖಂಡಿಸಿ ಡಿಸಿ ಕಛೇರಿ ಮುಂದೆ ಬಿಜೆಪಿ ಪ್ರತಿಭಟನೆ, ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ರು

Published

on

ಹಾಸನ: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ಖಂಡಿಸಿ ಉಗ್ರ ಸಿದ್ದರಾಮಯ್ಯ ಮತ್ತು ಭಯೋತ್ಪಾದಕ ನಾಸೀರ್ ಹುಸೇನ್ ಗೆ ದಿಕ್ಕಾರ ಹಾಗೂ ಕಾಂಗ್ರೆಸ್ ಸರಕಾರ ತೊಲಗಲಿ ಎಂದು ಘೋಷಣೆ ಕೂಗಿ ಬಿಜೆಪಿಯಿಂದ ಡಿಸಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಗ ಮುನ್ನೇಚ್ಚರಿಕ ಕ್ರಮವಾಗಿ ವೇಣುಗೋಪಾಲ್ ಇತರರನ್ನು ಪೊಲೀಸರು ಬಂಧಿಸಿ ತಮ್ಮ ವಾಹನದಲ್ಲಿ ಕರೆದೊಯ್ದರು.

ಬಿಜೆಪಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೇಣುಗೋಪಾಲ್ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಜಯಗಳಿಸಿದ ನಂತರ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಭಾರತ ಮಾತಗೆ ಜೈಕಾರ ಕೂಗಿದ್ದರೆ. ಆದರೇ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಇದೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ವ್ಯತ್ಯಾಸ ಕಳೆದ ಕೆಲವು ದಿನಗಳ ಹಿಂದೆ ಡಿ.ಕೆ. ಸುರೇಶ್ ಭಾರತದ ವಿಭಜನೆ ಬಗ್ಗೆ ಮಾತನಾಡಿದರು. ಅಲ್ಲಿ ಅವರ ನಾಯಕ ಭಾರತ ಜೋಡೋ ಯಾತ್ರೆ ನಡೆಸಿದ್ದರೆ ಇಲ್ಲಿನ ಅವರ ಅವರ ಸಂಸದರು ಭಾರದತದ ವಿಭಜನೆ ಮಾತನಾಡುತ್ತಾರೆ. ಮೊನ್ನೆ ನಡೆದ ಬಜೇಟ್ ನಲ್ಲಿ ಅಲ್ಪಸಂಖ್ಯಾರಿಗೆ ಸಾವಿರಾರು ಕೋಟಿ ಹಣ ಕೊಟ್ಟಿದ್ದಾರೆ. ದೇವಾಲಯದ ಹಣ ಬಳಸಿ ವಕ್ಪ್ ಆಸ್ತಿ ರಕ್ಷಣೆ ಮಾಡುತ್ತಿದ್ದಾರೆ ಎಂದು ದೂರಿದರು. ಕಾಂಗ್ರೆಸ್ ರಾಷ್ಟ್ರೀಯತೆ ಪಾಕಿಸ್ತಾನಕ್ಕೆ ಇದೆ. ಭಾರತಕ್ಕೆ ಇಲ್ಲ ಕಾಂಗ್ರೆಸ್ ಪಕ್ಷದವರು ಪಾಕಿಸ್ತಾನಕ್ಕೆ ಹೋಗಿ ನೆಲಸಲಿ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದ ಪಿ.ಎಫ್.ಐ. ಕಾರ್ಯಕರ್ತರನ್ನು ಬಿಡುಗಡೆ ಮಾಡಿದ್ದರು. ಬಿಡುಗಡೆಯಾದ ಆರೋಪಿಗಳು ಮತ್ತೆ ಅಪರಾಧಿ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು. ನಂತರ ಮೆರವಣಿಗೆ ಮೂಲಕ ತೆರಳಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಹಿನ್ನಲೆಯಲ್ಲಿ ಮುನೇಚ್ಚರಿಕ ಕ್ರಮವಾಗಿ ವೇಣುಗೋಪಾಲ್ ಸೇರಿದಂತೆ ಅನೇಕರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಆರ್. ಮೋಹನ್, ನಾರಾಯಣಗೌಡ, ರತ್ನ ಪ್ರಕಾಶ್, ಅನ್ನಪೂರ್ಣ, ರಾಕೇಶ್, ಎಸ್.ಡಿ. ಚಂದ್ರು, ಚನ್ನಕೇಶವ, ಅರುಣ್ ಕುಮಾರ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ವಿಶ್ವ ಪರಿಸರ ದಿನಾಚರಣೆ ಆಚರಿಸಿದ ಪೋದಾರ್ ಪರಿಸರ ಸ್ನೇಹಿಗಳು

Published

on

ಹಾಸನ: ಬಿ. ಕಾಟಿಹಳ್ಳಿ ದೂರವಾಣಿ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಪಂಚಮುಖಿ ಪಾರ್ಕ್ ಉದ್ಯಾನದಲ್ಲಿ “ವಿಶ್ವ ಪರಿಸರ ದಿನಾಚರಣೆ”ಯ ಅಂಗವಾಗಿ ಪೋದಾರ್ ಪರಿಸರ ಸ್ನೇಹಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಗಣ್ಯರು ಭಾಗಿಯಾಗಿ ಗಿಡ ನೆಟ್ಟು ಸಸ್ಯೋತ್ಸವ ಆಚರಣೆ ಅರ್ಥ ಪೂರ್ಣವಾಗಿ ಆಚರಿಸಲಾಯಿತು.

Continue Reading

Hassan

ಬಿರುಗಾಳಿ ಸಹಿತ ಮಳೆಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ

Published

on

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಭಾರೀ  ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ.

ಈ ಘಟನೆ ಸಕಲೇಶಪುರ ತಾಲ್ಲೂಕಿನ, ಹೆಗ್ಗದ್ದೆ ಗ್ರಾಮದ ಬಳಿ ಶಿರಾಡಿಘಾಟ್ ರಸ್ತೆ ಎನ್‌ಎಚ್‌- 75 ರಲ್ಲಿ ನಡೆದಿದೆ. ಮೊದಲೇ ಭೂಕುಸಿತವಾಗಿದ್ದರಿಂದ ಒಂದು ಬದಿ ರಸ್ತೆ ಸಂಚಾರ ಬಂದ್ ಮಾಡಿದ್ದ ಅಧಿಕಾರಿಗಳು ಇಟಾಚಿ ಮೂಲಕ ನಡೆಯುತ್ತಿದ್ದ ಮಣ್ಣು ತೆರವು ಕಾರ್ಯಾಚರಣೆ ಮಾಡುತ್ತಿದ್ದರು. ಹೀಗಾಗಿ  ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು.

ಈ ವೇಳೆ ಮತ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದ ಭೂಮಿ ಮರಗಳ ಸಮೇತ ಕುಸಿದು ರಸ್ತೆ ಪೂರ್ತಿ ಜಖಂಗೊಂಡಿದೆ. ಇನ್ನೂ ವಾಹನಗಳ ಸಂಚಾರವನ್ನು ಬಂದ್  ಮಾಡಿದ್ದರಿಂದ  ದೊಡ್ಡ ಅನಾಹುತ ತಪ್ಪಿದೆ.

Continue Reading

Hassan

ಮರಿ ಸತ್ತು ಮೂರು ದಿನವಾದರೂ ಸ್ಥಳ ಬಿಟ್ಟು ಕದಲದ ತಾಯಿಯಾನೆ

Published

on

ಅರೇಹಳ್ಳಿ: ತನ್ನ ಮರಿ ಸತ್ತು ಮೂರು ದಿನ ಕಳೆದರೂ ತಾಯಿಯಾನೆ ತಾನು ಹೋದಲೆಲ್ಲಾ ಮೃತ ಮರಿಯಾನೆಯನ್ನು ತನ್ನೊಂದಿಗೆ ಎಳೆದುಕೊಂಡು ಹೋಗುತ್ತಿರುವ ಮನಕಲಕುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕ್‌ನಳ್ಳಿ ಎಸ್ಟೇಟ್ ಬಳಿ ನಡೆದಿದೆ.

ಘಟನೆ ಹಿನ್ನೆಲೆ:

ಕಳೆದ ಶನಿವಾರ ಗರ್ಭಿಣಿ ಹೆಣ್ಣಾನೆ ಮರಿಯಾನೆಗೆ ಜನ್ಮ ನೀಡಿದೆ. ಆದರೆ ಹುಟ್ಟುವ ವೇಳೆ ಮರಿಯು ಸ್ಥಳದಲ್ಲೆ ಮೃತಪಟ್ಟಿದೆ. ತಾಯಿ ಆನೆ ತನ್ನ ಮರಿ ಜೀವಂತವಾಗಿದೆ ಎಂದು ತಿಳಿದು ಕಾಲಿನಿಂದ ಒದ್ದು ಬದುಕಿಸುವ ಪ್ರಯತ್ನ ಮಾಡಿದರೂ ಸಹ ಮೃತ ಮರಿ ಮೇಲೇಳದಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.

ಜೋರು ಮಳೆ ಸುರಿಯುತ್ತಿರುವುದರ ಜೊತೆಗೆ ಸತ್ತ ಮರಿಯನ್ನು ಎಳೆದುಕೊಂಡು ಹೋಗುತ್ತಿರುವುದು ಎಂಥ ಕಲ್ಲು ಮನಸ್ಸಿನವರಿಗೂ ಕರುಳು ಚುರುಕ್ ಎನ್ನುವಂತಿದೆ ಈ ದೃಶ್ಯಾವಳಿ. ತನ್ನ ಕರುಳ ಕುಡಿ ಇನ್ನೂ ಬದುಕಿದೆ ಎಂಬ ಭ್ರಮೆಯಲ್ಲಿರುವ ಮಾತೃ ಹೃದಯ ಯಾರನ್ನೂ ಕೂಡ ಹತ್ತಿರ ಹೋಗಲು ಬಿಡುತ್ತಿಲ್ಲ. ಭಾನುವಾರವಷ್ಟೆ ಅರೇಹಳ್ಳಿ ಸಮೀಪದ ಕೆಸಗುಲಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮರಿಯೊಂದಿಗೆ ತಾಯಿಯಾನೆಯೂ ಸಹ ಮೃತಪಟ್ಟಿತ್ತು. ಈ ಘಟನೆ ಜನಮಾನಸದಲ್ಲಿ ಮಾಸುವ ಮುನ್ನವೇ ಮತ್ತೊಂದು ಮರಿ ಮೃತಪಟ್ಟಿರುವುದು ಪ್ರಾಣಿ ಪ್ರಿಯರಿಗೆ ಅತೀವ ನೋವನ್ನುಂಟುಮಾಡಿದೆ.

“ಕಳೆದೆರಡು ದಿನಗಳ ಹಿಂದೆ ಮೃತಪಟ್ಟ ಮರಿಯೊಂದಿಗೆ ತಾಯಿಯಾನೆ ತೆರಳುತ್ತಿರುವುದು ಬೇಸರ ತಂದಿದೆ. ಹೀಗಾಗಿ ಸಿಬ್ಬಂದಿಗಳನ್ನು ಹತ್ತಿರ ಹೋಗಲು ಬಿಡುತ್ತಿಲ್ಲ. ಮರಿ ವಾಸನೆ ಬಂದರೆ ತಾಯಿಯಾನೆ ತನ್ನಿಂತಾನೆ ಬೇರೆಯಾಗುತ್ತದೆ” ಎಂದು
ಬೇಲೂರಿನ ಆರ್‌ಎಫ್‌ಒ ಅಧಿಕಾರಿ ಯತೀಶ್ ತಿಳಿಸಿದ್ದಾರೆ.

Continue Reading

Trending

error: Content is protected !!