National - International
ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ರಕ್ತ ವಾಂತಿ ಮಾಡಿ ಪ್ರಯಾಣಿಕ ಸಾವು

ನವದೆಹಲಿ: ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಕ್ತ ವಾಂತಿ ಮಾಡಿಕೊಂಡು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮುಂಬೈನಿಂದ ರಾಂಚಿಗೆ ಹೊರಟಿದ್ದ ಇಂಡಿಗೋ ವಿಮಾನವು, ಪ್ರಯಾಣಿಕರೊಬ್ಬರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿ ಪ್ರಯಾಣಿಕ ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಮುಂಬೈನಿಂದ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ದೇವಾನಂದ್ ತಿವಾರಿ ರಕ್ತ ವಾಂತಿ ಮಾಡಿಕೊಂಡರು. ವಿಮಾನ ತುರ್ತು ಭೂಸ್ಪರ್ಶದ ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ನಾಗ್ಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
62 ವಯಸ್ಸಿನ ಈ ವ್ಯಕ್ತಿ ಕ್ಷಯರೋಗದಿಂದ ಬಳಲುತ್ತಿದ್ದರು. ಅಗತ್ಯ ವೈದ್ಯಕೀಯ ವಿಧಾನಗಳು ಮತ್ತು ಕ್ಲಿಯರೆನ್ಸ್ ನಂತರ ವಿಮಾನವು ನಾಗ್ಪುರ ಮತ್ತು ರಾಂಚಿಗೆ ತನ್ನ ಪ್ರಯಾಣವನ್ನು ಯಶಸ್ವಿಯಾಗಿ ಪುನರಾರಂಭಿಸಿತು.
National - International
ಹನಿಟ್ರ್ಯಾಪ್ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್ ರಾಜ್ಯದ ವಕೀಲ ವಿನಯ್ ಕುಮಾರ್ ಸಿಂಗ್ ಎಂಬುವವರು ಸುಪ್ರೀಂಕೋರ್ಟ್ ಪಿಐಎಲ್ ಸಲ್ಲಿಕೆ ಮಾಡಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನೀವು ಜಾರ್ಖಂಡ್ ರಾಜ್ಯದವರು. ಇದರ ಬಗ್ಗೆ ನಿಮಗೇನು ಸಂಬಂಧ. ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್‌ಗೆ ಒಳಗಾಗುತ್ತಾರೆ. ಅದನ್ನು ಜಡ್ಜ್‌ಗಳು ನೋಡಿಕೊಳ್ಳುತ್ತಾರೆ ಎಂದು ವಕೀಲ ವಿನಯ್ ಕುಮಾರ್ ಸಿಂಗ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಈ ಮೂಲಕ ಹನಿಟ್ರ್ಯಾಪ್ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದ ವಕೀಲ ವಿನಯ್ ಕುಮಾರ್‌ರಿಗೆ ತೀವ್ರ ಮುಖಭಂಗವಾಗಿದೆ.
National - International
ಸುಪ್ರೀಂ ಕೋರ್ಟ್ ಅಂಗಳಕ್ಕೆ ಹನಿಟ್ರ್ಯಾಪ್ ಪ್ರಕರಣ

ನವದೆಹಲಿ: ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್ ಪ್ರಕರಣವು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಕರ್ನಾಟಕದಲ್ಲಿ ಸಚಿವರು, ಶಾಸಕರ ವಿರುದ್ಧ ಹನಿಟ್ರ್ಯಾಪ್ ನಡೆದಿದೆ ಎನ್ನಲಾದ ಪ್ರಕರಣ ಕುರಿತು ತನಿಖೆ ನಡೆಸುವಂತೆ ವಿನಯ್‌ಕುಮಾರ್ ಸಿಂಗ್ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ (ಪಿಐಎಲ್) ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನದ ವೇಳೆ ಸ್ವತಃ ಸಚಿವರೇ ತಮ್ಮ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ವಿಶ್ವಾಸದ ದೃಷ್ಠಿಯಿಂದ ಕೋರ್ಟ್ ನಿಗಾದಲ್ಲಿ ಕೂಡಲೇ ತನಿಖೆ ನಡೆಸಬೇಕು ಎಂದು ವಿನಯ್‌ಕುಮಾರ್ ಸಿಂಗ್ ಮುಖ್ಯ ನಾಯಾಮೂರ್ತಿ ಬಳಿ ಮನವಿ ಮಾಡಿದ್ದಾರೆ.
ಇದಕ್ಕೆ ಶೀಘ್ರವೇ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದ್ದು, ಹನಿಟ್ರ್ಯಾಪ್ ವಿಚಾರಣೆಯನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.
National - International
ಅಣ್ಣಾಮಲೈ ಒಬ್ಬ ಪುವರ್ ಮ್ಯಾನ್: ಡಿಕೆ ಶಿವಕುಮಾರ್ ಹೀಗೇಳಿದ್ದೇಕೆ?

ತಮಿಳುನಾಡು: ಜನಸಂಖ್ಯಾ ಆಧಾರಿತ ಲೋಕಸಭಾ ಕ್ಷೇತ್ರಗಳ ಮರು ವಿಂಗಡನೆ ಕುರಿತಂತೆ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಐಎನ್‌ಡಿಐಎ ಮೈತ್ತಿ ಪಕ್ಷಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಿತು.
ಈ ಸಭೆಯಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕರ್ನಾಟಕದಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.
ಈ ಸಭೆ ವಿರುದ್ಧ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಮೇಕೆದಾಟು ಯೋಜನೆಗೆ ಮುಂದಾಗಿ ತಮಿಳುನಾಡು ರಾಜ್ಯದ ಜನರಿಗೆ ಅನ್ಯಾಯ ಮಾಡಿ, ಕ್ಷೇತ್ರ ಮರುವಿಂಗಡಣೆ ಸಭೆಗೆ ಹಾಜರಾಗಿದ್ದಾರೆ ಎಂದು ವಿರೋಧಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದರು.
ಇನ್ನು ತಮ್ಮ ಎಕ್ಸ್ ಖಾತೆಯಲ್ಲಿ ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆದ, ನಮ್ಮ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳನ್ನು ಶೋಷಿಸುತ್ತಿರುವ ಮತ್ತು ತಮಿಳುನಾಡು ಗಡಿ ಜಿಲ್ಲೆಗಳನ್ನು ಕೇರಳದ ವೈದ್ಯಕೀಯ ತ್ಯಾಜ್ಯವನ್ನು ಸುರಿಯುವ ಸ್ಥಳವನ್ನಾಗಿ ಪರಿವರ್ತಿಸುತ್ತಿರುವ ತಮ್ಮ INDIA ಮೈತ್ರಿಕೂಟದ ಪಾಲುದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಸಹೋದರ ಸಹೋದರಿಯರು ತಮ್ಮ ಮನೆಗಳ ಮುಂದೆ ಕಪ್ಪು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬರೆದುಕೊಂಡದ್ದರು.
ಈ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಅಣ್ಣಾಮಲೈ ಒಬ್ಬ ಪುವರ್ ಮ್ಯಾನ್, ಕರ್ನಾಟಕದಲ್ಲಿ ಕೆಲಸ ನಿರ್ವಹಿಸುವ ವೇಳೆ ನನ್ನ ಶಕ್ತಿ ಬಗ್ಗೆ ಆತನಿಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಆತನಿಗೆ ಶುಭವಾಗಲಿ ಎಂದು ನಸುನಕ್ಕರು.
https://x.com/annamalai_k/status/1903348499267326152
ಡಿಕೆ ರಿಯಾಕ್ಷನ್‌ಗೆ ಮತ್ತೊಂದು ಪೋಸ್ಟ್ ಮಾಡಿರುವ ಅಣ್ಣಾಮಲೈ, ಹೌದು, ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಗಮನಾರ್ಹ ಉಲ್ಲೇಖಕ್ಕಾಗಿ ಧನ್ಯವಾದಗಳು ಡಿಸಿಎಂ ಡಿಕೆ ಶಿವಕುಮಾರ್ ಅವರೇ.
ಅಲ್ಲದೆ, ಈ ಬಡವನಿಗೆ ಶುಭ ಹಾರೈಸಿದ್ದಕ್ಕಾಗಿ ಧನ್ಯವಾದಗಳು ಮತ್ತು ಸಿದ್ದರಾಮಯ್ಯ ಅವರನ್ನು ಅವರ ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಲ್ಲಿ ನಿಮಗೆ ನನ್ನ ಶುಭಾಶಯಗಳು! ಎಂದು ಬರೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
-
Special11 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State7 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan8 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State8 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
State6 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
Kodagu4 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan5 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Mysore9 hours ago
ಸತೀಶ್ ಜಾರಕಿಹೊಳಿ ಸಿಎಂ ಆಗಲು ಎಚ್ಡಿಕೆ ಅವರನ್ನು ಭೇಟಿಯಾಗಿದ್ದಾರೆ: ಜಿಟಿ ದೇವೇಗೌಡ