Chamarajanagar
ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಏಡ್ಸ್ ಕುರಿತಾದ ಜಾಗೃತಿಯನ್ನು ಮೂಡಿಸುವ ಜಾಥ ಕಾರ್ಯಕ್ರಮ

ಯಳಂದೂರು ಪಟ್ಟಣದ ಶ್ರೀ ವೈ ಎಂ ಮಲ್ಲಿಕಾರ್ಜುನ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಾಮರಾಜನಗರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಯಳಂದೂರು ಹಾಗೂ ವಿವಿಧ NGOಗಳ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಏಡ್ಸ್ ಕುರಿತಾದ ಜಾಗೃತಿಯನ್ನು ಮೂಡಿಸುವ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಾಥದಲ್ಲಿ ಭಾಗವಹಿಸಿದ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಸಮಿತಿಗಳ ಕಾರ್ಯಕರ್ತರು ಯಳಂದೂರು ಪಟ್ಟಣದ ಬೀದಿಗಳಲ್ಲಿ ಸಂಚರಿಸಿ ಏಡ್ಸ್ ಕುರಿತಾದ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ನಂತರ ಕಾಲೇಜು ಆವರಣದಲ್ಲಿ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಯುತ ಮಹದೇವ ಪ್ರಸಾದ್ ರವರು ಜಿಲ್ಲಾ ಮೇಲ್ವಿಚಾರಕರು ಏಡ್ಸ್ ನಿಯಂತ್ರಣ ಘಟಕ ಚಾಮರಾಜನಗರ ಇವರು ಮಾತನಾಡಿ ಆಧುನಿಕ ಜಗತ್ತಿನ ವೇಗದ ಭರಾಟೆಯಲ್ಲಿ ಯುವ ಜನತೆ ಜಾಗೃತರಾಗಿರಬೇಕು ಏಡ್ಸ್ ಮತ್ತು ಹೆಚ್ಐವಿ ಕುರಿತಂತೆ ಸದಾ ಎಚ್ಚರದಿಂದಿರಬೇಕು ಎಂದು ಕಿವಿಮಾತು ಹೇಳಿದರು. ಹಾಗೆ ಮುಖ್ಯ ಅತಿಥಿಗಳಾಗಿದ್ದ ಶ್ರೀ ಮಹೇಶ್ ರವರು ಆಪ್ತ ಸಮಾಲೋಚಕರು ಯಳಂದೂರು ಇವರು ರಕ್ತದಾನದ ಮಹತ್ವವನ್ನು ಕುರಿದಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ವಿಜಯ ರವರು ಮಾತನಾಡಿ ವಿದ್ಯಾರ್ಥಿಗಳು ಕಾರ್ಯಕ್ರಮದ ಆಶಯವನ್ನು ಅರಿತು ಅಳವಡಿಸಿಕೊಳ್ಳಬೇಕು. ಅಲ್ಲದೆ ಏಡ್ಸ್ ಬಗ್ಗೆ ಇರುವ ತಪ್ಪು ಕಲ್ಪನೆಗಳ ಬಗ್ಗೆ ಸಾಧ್ಯವಾದಷ್ಟು ಜನರಲ್ಲಿ ಅರಿವು ಮೂಡಿಸಲು ಸಕ್ರಿಯ ರಾಗಿರಬೇಕು ಎಂದು ಹಿತನುಡಿದರು. ಇದೇ ಸಂದರ್ಭದಲ್ಲಿ ಏಡ್ಸ್ ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಗಿರಿಜ. ಎಂ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಎಲ್ಲಾ ಅಧ್ಯಾಪಕರಾದ ಲಿಖಿತ ಎಸ್ ಅನುರಾಧ, ಶ್ವೇತಾ ಕೆ ವಿಕಾಸ್ ಎಂ, ಮಹಂತೇಶ್ ಟಿ, ದಾಕ್ಷಾಯಿಣಿ ಬಿ. ವಿ, ಪದ್ಮ. ಹೆ. ಎಸ್ ಹಾಗೂ ಇತರ ಅಧ್ಯಾಪಕರು, ಅಧ್ಯಾಪಕೇತರರು ಮತ್ತು ವಿದ್ಯಾರ್ಥಿಗಳು ಹಾಜರಾಗಿದ್ದರು
Chamarajanagar
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಏ.19ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ:- ಚಾಮರಾಜನಗರ ವಿಭಾಗ ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮವು ವಿವಿಉಧ ಕಾಮಗಾರಿ ನಿರ್ವಹಿಸಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 19ರಂದು (ನಾಳೆ) ಚಾಮರಾಜನಗರ, ಹರದನಹಳ್ಳಿ ಮತ್ತು ಸಂತೇಮರಹಳ್ಳಿ ಉಪವಿಭಾಗಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ
5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕೋಡಿಮೋಳೆ, ಮಾದಾಪುರ, ಕಾಗಲವಾಡಿ, ಹರದನಹಳ್ಳಿ, ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಗೂಳಿಪುರ, ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟಿಯಲ್ ಏರಿಯಾ, ಕೆಇಡಿಪಿ 10 ಮತ್ತು 11, ಮುತ್ತಿಗೆ, ಹೆಗ್ಗೋಠಾರ, ಉಮ್ಮತ್ತೂರು, ಬಾಗಳಿ, ಲಿಂಗಣಾಪುರ, ಜನ್ನೂರು, ಜನ್ನೂರು ಹೊಸೂರು, ಹಳ್ಳಿಕೆರೆಹುಂಡಿ, ಗಣಗನೂರು, ಗಣಗನೂರುಪುರ, ನವಿಲೂರು, ಆಲ್ದೂರು, ಬಿಎಂಕೆ ಹುಂಡಿ, ಗೊದ್ದಲಹುಂಡಿ, ಕೊತ್ತಲವಾಡಿ, ಅರಕಲವಾಡಿ, ಯರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಬಿಸಿಲವಾಡಿ, ಪುಣಜನೂರು, ಡೊಳ್ಳಿಪುರ, ಚನ್ನಪನಪುರ, ಅಮಚವಾಡಿ, ಮಾದಲವಾಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಕರೆ ಮಾಡುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.
Chamarajanagar
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ

ಯಳಂದೂರು ತಾಲೂಕಿನ ಅಂಬ್ರೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನವೀನ್ ಅವಿರೋಧವಾಗಿ ಆಯ್ಕೆಯಾದರು,
ಮಾತನಾಡಿ ಬೆಳೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಇನ್ನಷ್ಟು ಜವಾಬ್ದಾರಿ ಹೆಚ್ಚಾಗಿದೆ. ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು,
ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿ ಆದ ಚಂದ್ರಶೇಖರ್ ಮೂರ್ತಿ, ಉಪಾಧ್ಯಕ್ಷೆ ಮಾದೇವಮ್ಮ, ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಾವ್ಯ ಕಾರ್ಯದರ್ಶಿ ಪುಟ್ಟರಾಜು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು
Chamarajanagar
ಬೋನಿಗೆ ಬಿದ್ದ 3 ನೇ ಚಿರತೆ

ವರದಿ. ಮಂಜುಕುಮಾರ್ ಪಿ.
ಗುಂಡ್ಲುಪೇಟೆ: ತಾಲೂಕಿನ ಅಕ್ಕಲಪುರ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ
ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಈ ಚಿರತೆ ಅಕ್ಕಲಪುರ ಹಾಗೂ ಸುತ್ತ ಮುತ್ತಲಿನ ಗ್ರಾಮದ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿತ್ತು. ಇದನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಅದರಂತೆ ಅಕ್ಕಲಪುರ ಗ್ರಾಮದ BS ಸ್ವಾಮಿ ಎಂಬುವರ ಜಮೀನಿನಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಬಂಧಿಯಾಗಿದೆ. ಈ ಹಿಂದೆ ಎರಡೂ ಚಿರತೆಗಳು ಬೋನಿಗೆ ಬಿದ್ದಿವೆ. ಈವಾಗ ಮೂರನೇ ಚಿರತೆ ಸೇರಿಯಾಗಿದೆ
ಸುಮಾರು ದಿನಗಳಿಂದ ಅಕ್ಕಲಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಪ್ರಾಣಿಗಳ ಬೇಟೆಗೆ ಸಂಚಾರ ಮಾಡುತ್ತಿದ್ದ ಚಿರತೆ ಬೋನಿಗೆ ಸರೆಯಾಗಿರುವುದರಿಂದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore11 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ