Connect with us

Hassan

ಶೇ.೬೦ ರಷ್ಟು ಕನ್ನಡ ಬಳಕೆಗೆ ಆಗ್ರಹಿಸಿ ಕರವೇಯಿಂದ ವಾಹನದ ಮೂಲಕ ಜನಜಾಗೃತಿ ಜಾಥಾ

Published

on

ಫೆ.೨೮ರ ಒಳಗೆ ಮಾತೃ ಭಾಷೆ ಬಳಕೆ ಮಾಡಿದಿದ್ರೆ ಮಸಿ ಬಳೆಯುವ ಎಚ್ಚರಿಕೆ

ಹಾಸನ: ಸರಕಾರದ ಆದೇಶದಂತೆ ಕರ್ನಾಟಕದಲ್ಲಿ ಶೇಕಡ ೬೦ ರಷ್ಟು ಕನ್ನಡ ಬಳಕೆಯ ನಾಮಪಲಕ ಇರಬೇಕು. ಆದರೇ ಅನೇಕರು ಪಾಲಿಸುತ್ತಿಲ್ಲ. ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಾಹನದ ಮೂಲಕ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಏನಾದರೂ ಫೆಬ್ರವರಿ ೨೮ರ ಒಳಗೆ ಮಾತೃ ಭಾಷೆ ಬಳಕೆ ಮಾಡಿದ್ದರೇ ನಮ್ಮ ಸಂಘಟನೆಯಿಂದ ಅಂತ ಕಡೆ ಮಸಿ ಬಳೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು ಎಚ್ಚರಿಕೆ ನೀಡಿದರು.

ಎದುರು ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ರೈಲ್ವೆ ನಿಲ್ದಾಣದ ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಮೊದಲು ಪೂಜೆ ಸಲ್ಲಿಸಿ ಶೇಕಡ ೬೦ ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎನ್ನುವ ಬೃಹತ್ ಜನಜಾಗೃತಿ ಜಾಥಕ್ಕೆ ಚಾಲನೆ ನೀಡಿದ ಕರವೇ ಕಾರ್ಯಕರ್ತರು, ನಂತರ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮವಾಗಬೇಕು., ಕನ್ನಡಿಗನಿಗೆ ಮೊದಲ ಆಧ್ಯತೆ ಕೊಡಬೇಕು. ಯಾವುದೇ ಅನ್ಯಭಾಷೆಗಳು ಕರ್ನಾಟಕಕ್ಕೆ ಬಂದರೂ ಸಹ ಇಲ್ಲಿ ಕನ್ನಡದ ಭಾಷೆಯಲ್ಲಿ ವ್ಯವಹರಿಸಬೇಕು. ನಮ್ಮ ತಾಯಿಯನ್ನು ಗೌರವಿದಾಗೆ ತಾಯಿ ಭುವನೇಶ್ವರಿ ಕನ್ನಡ ಭಾಷೆಯನ್ನು ಗೌರವಿಸಬೇಕು. ಕನ್ನಡಕ್ಕೆ ಏನಾದರೂ ದಕ್ಕೆ ಬಂದಾಗ ನಮ್ಮ ವೇದಿಕೆ ಹೋರಾಟದಲ್ಲಿ ತೊಡಗಿದ್ದು, ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಲ್ಲಿ ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದು ಯಶಸ್ವಿಗೊಂಡಿದ್ದೇವು ಎಂದರು. ಈ ಹೋರಾಟಕ್ಕೆ ಕರ್ನಾಟಕ ಸರಕಾರ ಎಚ್ಚೆತ್ತುಕೊಂಡು ಒಳ್ಳೆ ನಿರ್ಧಾರಕ್ಕೆ ಬಂದಿದೆ. ರಾಜ್ಯದಲ್ಲಿ ಇರುವ ಅಂಗಡಿ, ಮಾಲ್ ಸೇರಿದಂತೆ ಎಲ್ಲಾ ಕಡೆ ಶೇಕಡ ನೂರಕ್ಕೆ ಶೇಕಡ ೬೦ ರಷ್ಟು ಕನ್ನಡ ನಾಮಫಲಕಗಳಿರಬೇಕು ಎಂಬುದನ್ನು ಘೋಷಣೆ ಮಾಡಿದೆ. ಈಗಾಗಲೇ ಕರ್ನಾಟಕ ಸುಗ್ರಿವ್ ಆಜ್ಞೆ ಮಾಡಲಾಗಿತ್ತು. ವಿಧಾನಸೌದದಲ್ಲೂ ಕೂಡ ಕನ್ನಡ ಭಾಷೆ ಕುರಿತು ಶೇಕಡ ೬೦ ರಷ್ಟು ಅಳವಡಿಕೆಗೆ ಮಂಡನೆ ಮಾಡಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಸನ ಜಿಲ್ಲಾ ಘಟಕವತಿಯಿಂದ ಈ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕರವೇ ಯುವ ಘಟಕದ ಜಿಲ್ಲಾಧ್ಯಕ್ಷ ಪ್ರೀತಂ ರಾಜ್ ಮಾಧ್ಯಮದೊಂದಿಗೆ ಮಾತನಾಡಿ, ಕನ್ನಡ ಭಾಷೆ ವಿಚಾರದಲ್ಲಿ ಏನಾದರೂ ದಕ್ಕೆಯಾದಗ ಕರವೇ ಸಂಘಟನೆ ಮುಂಚೂಣಿಯಲ್ಲಿ ನಿಂತು ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ಮಾಡಿದೆ. ರಾಜ್ಯ ಯಾವ ಭಾಗದಲ್ಲಿ ಆಗಿರಲಿ ಕಡ್ಡಾಯವಾಗಿ ಶೇಕಡ ೬೦ ರಷ್ಟು ನಾಮಫಳಕ ಇತರೆ ಎಲ್ಲಾ ಕಡೆ ಕನ್ನಡ ಬಳಕೆ ಇರಬೇಕು ಎಂದು ಆದೇಶವಿದ್ದರೂ ಕೂಡ ಅನೇಕರು ಅನುಸಿರುತ್ತಿಲ್ಲ. ಆಘ್ಲ ಪದವನ್ನೆ ಬಳಕೆ ಮಾಡುತ್ತಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು. ಈ ಹಿಂದೆ ಕನ್ನಡ ಭಾಷೆ ಬಳಕೆ ಮಾಡುವಂತೆ ಪ್ರತಿ ಅಂಗಡಿ ಮುಂಗಟ್ಟು ಬಳಿ ಹೋಗಿ ಗುಲಾಬಿ ನೀಡುವುದರ ಮೂಲಕ ಮನವಿ ಮಾಡಿಕೊಂಡಿದ್ದು, ಆದರೇ ಇದುವರೆಗೂ ಇಂಗ್ಲೀಷ್ ಪದವನ್ನು ಬದಲಾಯಿಸಿರುವುದಿಲ್ಲ ಎಂದರು. ಈ ರ‍್ಯಾಲಿ ಮೂಲಕ ಮನವಿ ಮಾಡಲಾಗುತ್ತಿದ್ದು, ಫೆಬ್ರವರಿ. ೨೭ರ ಒಳಗೆ ಕನ್ನಡ ನಾಮಫಲಕ ಹಾಕುವಂತೆ ಸರಕಾರವೇ ಗಡುವು ಕೊಡಲಾಗಿದ್ದು, ಫೆಬ್ರವರಿ ೨೮ ತಾರೀಖು ಪ್ರತಿ ಕಡೆಯೂ ಶೇಕಡ ೬೦ ರಷ್ಟು ಕನ್ನಡ ಬಳಕೆ ಇರಲೇಬೇಕೆಂದು ಸೂಚನೆ ನೀಡಿದ್ದು, ಏನಾದರೂ ನಮ್ಮ ಭಾಷೆ ಬಳಕೆ ಮಾಡದಿದ್ದರೇ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬಂದು ಹೋರಾಟದ ಮೂಲಕ ಯಾರಾರು ಇಂಗ್ಲೀಷ್ ನಾಮಫಲಕ ಹಾಕಿದ್ದಾರೆ ಅದಕ್ಕೆ ಮಸಿ ಬಳೆಯುವ ಕೆಲಸ ಮಾಡಲಾಗುವುದು. ಈಗಲೇ ಎಚ್ಚೆತ್ತುಕೊಂಡು ಸಂಬಂಧಪಟ್ಟ ಅಧಿಕಾರಿಗಳು, ನಗರಸಭೆ ಆಯುಕ್ತರು ಇರಬಹುದು ಕೂಡಲೆ ಗಮನ ನೀಡಿ ಯಾರಾರು ಕನ್ನಡ ಭಾಷೆಯನ್ನು ಕಡೆಗಣಿಸುತ್ತಿದ್ದಾರೆ ಅವರ ವಿರುದ್ಧ ಕ್ರಮ ಜರುಗಿಸಬೇಕು. ಜೊತೆಗೆ ಅವರ ವ್ಯವಹಾರಕ್ಕೆ ನೀಡಲಾಗಿರುವ ಲೇಸೇನ್ಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತನುಗೌಡ, ನಗರ ಅಧ್ಯಕ್ಷ ಶಿವಕುಮಾರ್, ತಾಲೂಕು ಅಧ್ಯಕ್ಷ ಶಿವಣ್ಣಗೌಡ, ಅಭಿಗೌಡ, ತೋಫಿಕ್, ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ, ಸಮೀರ್ ಅಹಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Hassan

ಜಾಲತಾಣದಲ್ಲಿ ಪೋಸ್ಟ್ ಹಾಕಿದ ನಾಗೇಶ್ ಗೆ ಕಠಿಣ ಶಿಕ್ಷೆ ವಿಧಿಸುವಂತೆ ಬನವಾಸೆ ರಂಗಸ್ವಾಮಿ ಆಗ್ರಹ

Published

on

ಹಾಸನ: ಹಿಂದುಳಿದ ವರ್ಗಗಳ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂರುವ ಬಿಜೆಪಿ ಪಕ್ಷದ ನಾಗೇಶ್ ಎಂಬವನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಆಗ್ರಹಿಸಿ ಎಸ್ಪಿ ಅವರಲ್ಲಿ ಮನವಿ ಮಾಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಿಡಿಗೇಡಿ ಬಿಜೆಪಿ ಕಾರ್ಯಕರ್ತನೋರ್ವ ಮುಸ್ಲಿಂ, ಕ್ರಿಶ್ಚನ್ ಹಾಗೂ ಅಲ್ಪಸಂಖ್ಯಾತರು ಸೇರಿ ಕಾಂಗ್ರೆಸ್ ಗೆ ಸಹಕಾರ ಕೊಡುತ್ತಿದ್ದಾರೆ. ದೇಶದ್ರೋಹಿಗಳು ಎಂದು ಜಾಲತಾಣಗಳಲ್ಲಿ ಪೋಸ್ಟರ್ ಹಾಕಲಾಗಿದ್ದು, ಕೂಡಲೇ ಆತನನ್ನು ಈ ಕ್ಷಣದಲ್ಲಿ ಬಂಧಿಸಿ ಶಿಕ್ಷೆ ಕೊಡಬೇಕೆಂದು ಮನವಿ ಮಾಡುತ್ತಿದ್ದೇವೆ. ಕಠಿಣ ಶಿಕ್ಷೆ ಏನಾದರೂ ಕೊಡದಿದ್ದರೇ ಕಾಂಗ್ರೆಸ್ ಪಕ್ದವತಿಯಿಂದ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ದೇಶದಲ್ಲಿರುವ ಎಲ್ಲಾರೂ ಕೂಡ ಅಣ್ಣ ತಮ್ಮಂದಿರಂತೆ ಹಿಂದೂ, ಮುಸ್ಲಿಂ, ಕ್ರಿಶ್ಚನ್ ಬಾಳಿ ಬದುಕುತ್ತಿದ್ದೇವೆ. ಆದರೇ ಇದಕ್ಕೆ ಹುಳಿ ಇಂಡುವ ಕೆಲಸ ಬಿಜೆಪಿಯ ಕೆಲ ಚೇಲಗಳು ಮಾಡುತ್ತಿದ್ದಾರೆ. ಕೂಡಲೇ ನಾಗೇಶ್ ಎನ್ನುವ ವ್ಯಕ್ತಿಯನ್ನ ಗಡಿಪಾರು ಮಾಡಿ ಶಿಕ್ಷೆ ವಿಧಿಸುವಂತೆ ಆಗ್ರಹವ್ಯಕ್ತಪಡಿಸಿದರು.

Continue Reading

Hassan

ಪ್ರಜ್ವಲ್ ಲೈಂಗಿಕ ಪ್ರಕರಣ : ಬಂಧನಕ್ಕೆ ಆಗ್ರಹಿಸಿ ಮೇ. 30 ರಂದು ಹಾಸನ ಚಲೋ

Published

on

ಮಂಡ್ಯ: ಸಂಸದ ಪ್ರಜ್ವಲ್ ರೇವಣ್ಣ ಅವರ ಡಿಪ್ಲೋಮೆಟಿಕ್ ಪಾಸ್ಪೋರ್ಟ್ ರದ್ದುಪಡಿಸಿ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ, ಇದೇ ಮೇ 30ರಂದು ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮಿ ತಿಳಿಸಿದರು .

ವರ್ಗಾವಣೆ, ಬಡ್ತಿ ಸೇರಿದಂತೆ ಇನ್ನಿತರ ವಿಚಾರವಾಗಿ ಸಹಾಯ ಬಯಸಿ ಹೋದ ಹೆಣ್ಣನ್ನು ಸಂಸದ ಪ್ರಜ್ವಲ್ ರೇವಣ್ಣ ಈ ರೀತಿ ಬಳಸಿಕೊಂಡಿರುವುದು ಖಂಡನನಯ ಎಂದರು .

ಇಂತಹ ಘಟನೆಗಳು ನಡೆದಾಗ ಜನಪ್ರತಿನಿಧಿಗಳ ಹತ್ತಿರ ಮಾತನಾಡಲು ಆಗುವುದಿಲ್ಲ. ಈ ವಿಚಾರದಲ್ಲಿ ಎಲ್ಲಾ ಪಕ್ಷಗಳು ರಾಜಕಾರಣ ಮಾಡುತ್ತಿದ್ದು , ತಪ್ಪಿತಸ್ಥರಿಗೆ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೋರಾಡಬೇಕು ಎಂದರು.

ಎಸ್ಐಟಿ ರಚನೆಯಾದ ನಂತರ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ಪರಾರಿಯಾಗಿದ್ದಾರೆ. ಈ ವಿಚಾರ ಕೇಂದ್ರ ಸರ್ಕಾರ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಗೊತ್ತಿದೆ. ಆದರೆ ಇದುವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ನೇಹ ವಿಚಾರದಲ್ಲಿ ಬಿಜೆಪಿ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದು ಹೋರಾಟ ಮಾಡುತ್ತಿದೆ. ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣರ ಮೂಲ ವಿಚಾರದ ಬಗ್ಗೆ ಮಾತನಾಡುತ್ತಿಲ್ಲ. ದೇವೇಗೌಡರು ಈ ವಿಚಾರ ನನಗೆ ನೋವು ತಂದಿದೆ ಎನ್ನುತ್ತಿದ್ದು, ಆದರೆ ಹೆಣ್ಣು ಮಕ್ಕಳಿಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿಲ್ಲ ಎಂದು ದೂರಿದರು.

ಈಗ ನಡೆದಿರುವ ಘಟನೆ ಹೆಣ್ಣಿನ ಘನತೆ ವಿಚಾರವಾಗಿದೆ. ರಾಜಕೀಯ ಪಕ್ಷಗಳು ರಾಜಕೀಯವನ್ನು ಬದಿಗಿಟ್ಟು ಹೆಣ್ಣಿನ ಘನತೆ ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಸಿಐಟಿಯು ವತಿಯಿಂದ ಮೇ 30ರಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸಿ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಹಾಸನ ಚಲೋ ನಡೆಸಲಾಗುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಂ.ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಜಿಲ್ಲಾ ಖಜಾಂಚಿ ಮಹದೇವಮ್ಮ, ಬಿಸಿಯೂಟ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಉಪಸ್ಥಿತರಿದ್ದರು.

Continue Reading

Hassan

ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು

Published

on

||ರಾಜ್ಯ ಸರಕಾರ ವಿರುದ್ಧ ಜೆಡಿಎಸ್ ನೇರ ಆರೋಪ||

||ಡಿಕೆಶಿ ಸ್ಲೀಪರ್ ಸೆಲ್ ನಿಂದ 4 ಸಂಚು||

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ಅಲ್ಲದೆ; ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದಿರುವ ಜೆಡಿಎಸ್; ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುರುತರ ಆರೋಪಗಳನ್ನು ಮಾಡಿದೆ.

ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.


ಕಳಚಿ ಬಿದ್ದ ಕಾಂಗ್ರೆಸ್ ಅಸಲಿ ಮುಖ:

ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ… ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CDಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.


ಡಿಕೆಶಿಯಿಂದ ನಾಲ್ಕು ಸಂಚು:

CDಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ ಎಂದಿರುವ ಜೆಡಿಎಸ್, ಡಿ.ಕೆ.ಶಿವಕುಮಾರ್ ಹೂಡಿರುವ ಸಂಚುಗಳನ್ನು ಪಟ್ಟಿ ಮಾಡಿದೆ.

•ಸಂಚು ನಂ.1: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು.
•ಸಂಚು ನಂ.2: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.
•ಸಂಚು ನಂ.3: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು.
•ಸಂಚು ನಂ.4: ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು.

ಡಿಕೆಶಿ ಸ್ಲೀಪರ್ ಸೆಲ್ ಟೂಲ್ ಕಿಟ್ ಏನು?


ಈ ಸಂಚು ಜಾರಿಗೆ CDಶಿವಕುಮಾರ್ ಸ್ಲೀಪರ್ ಸೆಲ್ ನ ಟೂಲ್ ಕಿಟ್ ವ್ಯವಹಾರದ ಬಗ್ಗೆ ಜೆಡಿಎಸ್ ಎಳೆಎಳೆಯಾಗಿ ವಿವರಿಸಿದೆ.

•ಈ ಮಹಾಸಂಚು ಸಾಕಾರಕ್ಕೆ CDಶಿವಕುಮಾರ್ ಹೂಡಲಿದ್ದ ಬಂಡವಾಳ ಬರೋಬ್ಬರಿ ₹100 ಕೋಟಿ!!
•ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ ₹100 ಕೋಟಿ ಆಫರ್!!
•ಅಡ್ವಾನ್ಸ್ ಆಗಿ ₹5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನೆ.
•ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರೆಡಿ ಮಾಡಿದ್ದೇ CDಶಿವಕುಮಾರ್.
•ಮೋದಿ, ಕುಮಾರಸ್ವಾಮಿ ಅವರುಗಳ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ CDಶಿವಕುಮಾರ್.
•ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ನ ಮಹಾನ್ ಟಾರ್ಗೆಟ್!!

ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ಜೆಡಿಎಸ್ ಕಿಡಿಕಾರಿದೆ.

ಅಲ್ಲದೆ; ನೂರುಕೋಟಿ CDಶಿವಕುಮಾರ್, CDಶಿವಕುಮಾರ್, ಪೆನ್ ಡ್ರೈವ್ ಗ್ಯಾಂಗ್, CDಶಿವಕುಮಾರ್ ಸ್ಲೀಪರ್ ಸೆಲ್, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದೆಲ್ಲಾ ಡಿಕೆಶಿಯನ್ನು ಕುಟುಕಿದೆ ಜೆಡಿಎಸ್.

Continue Reading

Trending

error: Content is protected !!