Connect with us

State

ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು, ಜನವರಿ 11: ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ ಎಂದರು.

ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಎಂದರು.

ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು.

ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ

ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿ ಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಲ್ಲಿಯೂ ಪೂಜೆ ನಡೆಯಲಿದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

State

ವಾಲ್ಮೀಕಿ ಹಗರಣದ ತನಿಖೆ ಚುರುಕುಗೊಳಿಸಿದ ಸಿಬಿಐ

Published

on

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದಾರೆ.

ಈ ಸಂಬಂಧ ಪ್ರಕರಣದ ಮೂವರು ಆರೋಪಿಗಳಿಗೆ ಸಿಬಿಐ ಅಧಿಕಾರಿಗಳು ಗುರುವಾರ ನೋಟಿಸ್‌ ನೀಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್‌ ಮತ್ತು ಕುಟುಂಬಸ್ಥರಿಗೆ ನೋಟಿಸ್‌ ಜಾರಿಗೊಳಿಸಿದೆ.

ಈ ಹಿಂದೆ ಚಂದ್ರಮೋಹನ್‌ ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ನಕಲಿ ಆಕೌಂಟ್‌ಗಳನ್ನು ಸೃಷ್ಠಿಮಾಡಿ 89 ಕೋಟಿ ರೂ ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.

ಸಿಬಿಐ ಈಗಾಗಲೇ ಪ್ರಕರಣದ ಆರೋಪಿಗಳಾದ ಪರಶುರಾಮ್‌, ಸತ್ಯನಾರಾಯಣ ಇಟಕಾರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸುತ್ತಿದೆ.

Continue Reading

State

ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

Published

on

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ‌.
ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ‌. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು‌.
ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

Continue Reading

State

ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಮಾಡಿದವರು & ಮುಂದೆ ಮಾಡುವವರು ಈ ವಿಷಯಗಳನ್ನು ತಿಳಿದುಕೊಳ್ಳಿ

Published

on

ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್ವರ್ಕ್ – Microfinance Industry Network : ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳ, ಹಲವು ಬಡ ಜನರ ಜೀವ ಬಳಿ ತೆಗೆದುಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ.

ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದು, ಇದರ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು. ಇದರಿಂದ ಮುಂದೆ ನಿಮಗೆ ಆಗುವಂತಹ ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದು.

ಮಧ್ಯಮ ವರ್ಗದ ಅಥವಾ ಬಡಜನರ ಅತಿಯಾದ ಅವಶ್ಯಕತೆಯನ್ನು ಅವಕಾಶವಾಗಿ ಮಾಡಿಕೊಂಡು ಬಂಡವಾಳ ಮಾಡಿಕೊಳ್ಳುವ ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳು, ವ್ಯಕ್ತಿಗಳು, ಅನಧಿಕೃತ ಲೇವಾದೇವಿದಾರರು ಬಡ ಜನರಿಗೆ ಜನರ ತುರ್ತು ಸಮಯದಲ್ಲಿ ಸಾಲದ ರೂಪದಲ್ಲಿ ಹಣ ನೀಡಿ, ಅದಕ್ಕೆ ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಿರುವದರ ಕುರಿತು ಸರ್ಕಾರದ ಮಾರ್ಗಸೂಚಿಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಸಾಲ ಮರುಪಾವತಿ ಮಾಡದೇ ಇರುವುದು ಅಪರಾಧವೆ?

ಹಲವು ವೈಯಕ್ತಿಕ ಕಾರಣಗಳಿಂದಾಗಿ ಪಡೆದಂತಹ ವೈಯಕ್ತಿಕ ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡದಿರುವುದು ಕ್ರಿಮಿನಲ್ ಅಪರಾಧ ಆಗಿರುವುದಿಲ್ಲ. ಒಂದು ವೇಳೆ ನೀವು ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದಿದ್ದಲ್ಲಿ, ಮೈಕ್ರೋ ಫೈನಾನ್ಸ್ ಕಂಪನಿಯವರು ನಿಮಗೆ ಅತಿಯಾದ ಕಿರುಕುಳ ಅಥವಾ ತೊಂದರೆ ನೀಡಿದ್ದಲ್ಲಿ ಈ ಕೆಳಗಿನ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ.

• RBI ನಿಯಮಗಳ ಅನುಸಾರ, ಸಾಲ ವಸೂಲು ಮಾಡುವವರು ಪರಸ್ಪರ ನಿರ್ಧರಿಸಿದ ಅಥವಾ ಗೊಟ್ಟುಪಡಿಸಿದ ಸ್ಥಳದಲ್ಲಿ ಮಾತ್ರ ವಸೂಲಾತಿ ಮಾಡಲು ಅವಕಾಶವಿದೆ. ಒಂದು ವೇಳೆ ಸಾಲ ಪಡೆದ ಅಭ್ಯರ್ಥಿಯು ಎರಡು ಅಥವಾ ಹೆಚ್ಚಿನ ಸಂದರ್ಭದಲ್ಲಿ ಗೊತ್ತು ಪಡಿಸಿದ ಸ್ಥಳಕ್ಕೆ ಬರಲು ವಿಫಲವಾದಲ್ಲಿ ಮಾತ್ರ ಅವರ ಮನೆಗೆ ಹೋಗಲು ಅವಕಾಶವಿರುತ್ತದೆ.

• ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಅಥವಾ ಇತರೆ ಸಾಲ ನೀಡುವವರು ಹಣ ವಸೂಲಾತಿಗಾಗಿ ಯಾವುದೇ ರೀತಿಯ ಕಠಿಣ ವಿಧಾನಗಳನ್ನು ಬಳಸಲು ಅವಕಾಶವಿರುವುದಿಲ್ಲ.
• ಸಾಲಗಾರರಿಗೆ ಸಾಲ ವಸೂಲಾತಿ ಮಾಡಲು ನಿರಂತರ ಕರೆ ಮಾಡುವುದು ಅಥವಾ, ಬೆಳಿಗ್ಗೆ 9:00 ಗಂಟೆಯ ಮುಂಚೆ ಮತ್ತು ಸಾಯಂಕಾಲ 6:00 ನಂತರ ಕರೆ ಮಾಡಲು ಅನುಮತಿ ಇರುವುದಿಲ್ಲ.

 

ಒಂದು ವೇಳೆ ನಿಮಗೆ ಮೈಕ್ರೋಫೈನಾನ್ಸ್ ನವರು ಅಥವಾ ಇತರೆ ಅನಧಿಕೃತ ಸಾಲದಾರರು ಯಾವುದೇ ರೀತಿಯಲ್ಲಿ ಕಿರುಕುಳ ಕೊಟ್ಟರೆ ಸರ್ಕಾರದ 24×7 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.

24×7 ಟೋಲ್ ಫ್ರೀ ಸಂಖ್ಯೆ – 112 ಅಥವಾ 1902

Continue Reading

Trending

error: Content is protected !!