Chikmagalur
ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಗೆ 14 ದಿನಗಳ ಕಾಲ ಜಿಲ್ಲೆಗೆ ಪ್ರವೇಶ ನಿರ್ಬಂಧ

ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಗೆ 14 ದಿನಗಳ ಕಾಲ ಜಿಲ್ಲೆಗೆ ಪ್ರವೇಶ ನಿರ್ಬಂಧ
ಚಿಕ್ಕಮಗಳೂರು : ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಗೆ 14 ದಿನಗಳ ಕಾಲ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ.
ಮುಸ್ಲಿಮರು ನಮ್ಮ ದತ್ತಪೀಠದಲ್ಲಿ ಉರುಸ್ ಆಚರಣೆ ಮಾಡುತ್ತಾರೆ. ನಾವು ನಾಗೇನಹಳ್ಳಿ ದರ್ಗಾದಲ್ಲಿ ಡಿ.26 ರಂದು ದತ್ತಜಯಂತಿ ಆಚರಣೆ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಹೇಳಿದ್ದರು.
ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯು ಕೋಮು ಹಾಗೂ ಮತೀಯ ಸೂಕ್ಷ್ಮ ಜಿಲ್ಲೆಯಾಗಿರುವುದರಿಂದ ಪ್ರಮೋದ್ ಮುತಾಲಿಕ್ ಮತ್ತು ಗಂಗಾಧರ ಮಹಾದೇವ್ ರಾವ್ ಕುಲಕರ್ಣಿ ಇವರುಗಳು ದತ್ತ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದಲ್ಲಿ ಪ್ರಚೋದನಾಕಾರಿ ಭಾಷಣಗಳನ್ನು ಮಾಡುವ ಸಾಧ್ಯತೆಗಳಿದ್ದು, 23-12-2023 ರಿಂದ 05-01-2024 ಮಧ್ಯರಾತ್ರಿ ಯವರೆಗೆ ಚಿಕ್ಕಮಗಳೂರು ಜಿಲ್ಲೆಗೆ ಪ್ರವೇಶಿಸದಂತೆ ನಿರ್ಭಂದಿಸಿ ಜಿಲ್ಲಾಡಾಳಿತ ಆದೇಶ ಹೊರಡಿಸಿದೆ.
Chikmagalur
ಮುಳ್ಳಯ್ಯನ ಗಿರಿ ರಸ್ತೆಯಲ್ಲಿ ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್,

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ನಡುವೆಯೂ ಸಾವಿರಾರು ಪ್ರವಾಸಿಗರ ದಂಡು ಚಂದ್ರದ್ರೋಣ ಪರ್ವತ ಶ್ರೇಣಿಯ ಪ್ರವಾಸಿ ತಾಣಗಳಿಗೆ ಹರಿದು ಬಂದಿದೆ.
ಕಾರು-ಬೈಕ್-ಟಿಟಿ ಸೇರಿದಂತೆ ಇಂದು 1850 ವಾಹನಗಳು ಗಿರಿಭಾಗಕ್ಕೆ ಭೇಟಿ ನೀಡಿವೆ. ಇದರ ನಡುವೆ ಚಾಲಕನ ನಿಯಂತ್ರಣ ತಪ್ಪಿ ಕಾರು-ಜೀಪ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರು-ಜೀಪಿನ ಮುಂಭಾಗ ಜಖಂಗೊಂಡಿದೆ. ಕಾರು ಮುಳ್ಳಯ್ಯನಗಿರಿಯಿಂದ ವಾಪಸ್ ಆಗುವಾಗ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ, ಅಪಘಾತ ಸಂಭವಿಸಿದ ಪರಿಣಾಮ ಗಿರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ನಿಯಂತ್ರಿಸಲು ಪೊಲೀಸರು ಹಾಗೂ ಪ್ರವಾಸಿ ಮಿತ್ರರು ಹರಸಾಹಸ ಪಡುವಂತಾಯಿತು.
ಟ್ರಾಫಿಕ್ ಕಂಟ್ರೋಲ್ ಮಾಡಲಾಗದೆ 2 ಗಂಟೆಗಳ ಕಾಲ ವಾಹನಗಳನ್ನ ಕೈಮರ ಚಕ್ ಪೋಸ್ಟ್ ನಲ್ಲಿ ನಿಲ್ಲಿಸಲಾಗಿತ್ತು. ಗಿರಿ ಪ್ರದೇಶದಲ್ಲಿ ವಾಹನಗಳು ಕಡಿಮೆಯಾದ ಬಳಿಕ ಮತ್ತೆ ವಾಹನಗಳನ್ನ ಬಿಡಲಾಯಿತು.
Chikmagalur
ಭಿಕ್ಷೆ ಬೇಡಿ ಕುರ್ಚಿ ದಾನ ಕೊಟ್ಟ ದಲಿತ ಸಂಘಟನೆಗಳು

ಚಿಕ್ಕಮಗಳೂರು : ತಾಲೂಕು ಕಚೇರಿಯಲ್ಲಿ ಕೂರಲು ಚೇರ್ ಇಲ್ಲ ಎಂದು ಭಿಕ್ಷೆ ಎತ್ತಿ ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದ ವಿಲಕ್ಷಣ ಘಟನೆ ನಡೆದಿದೆ.
ಅಜ್ಜಂಪುರ ತಾಲೂಕಿನ ತಾಲೂಕು ಕಚೇರಿಗೆ 3500ರೂ. ಭಿಕ್ಷೆ ಎತ್ತಿ ಅದರಲ್ಲಿ 2500 ರೂ. ಕೊಟ್ಟು ದಲಿತ ಸಂಘಟನೆ ಕಾರ್ಯಕರ್ತರು ಕುರ್ಚಿ ತಂದಿದ್ದಾರೆ ಉಳಿದ ಹಣವನ್ನು ಸರ್ಕಾರಕ್ಕೆ ನೀಡಿವೆ .
ಅಜ್ಜಂಪುರ ಪಟ್ಟಣದ ಬಸ್ ಸ್ಟ್ಯಾಂಡ್, ಬಿ.ಎಚ್.ರಸ್ತೆ, ಹೋಟೆಲ್, ಅಂಗಡಿಗಳಲ್ಲಿ ಭಿಕ್ಷೆ ಎತ್ತಿದ ಹಣದಲ್ಲಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆಂದೇ 8 ಚೇರ್ ನೀಡಿದ್ದಾರೆ.
ಮಳೆ ಸುರಿಯುತ್ತಿದ್ದರೂ ರಸ್ತೆ-ರಸ್ತೆಯಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಭಿಕ್ಷೆ ಎತ್ತಲಾಯಿತು.
Chikmagalur
ದತ್ತು ಕೇಂದ್ರದ ಸಿಬ್ಬಂದಿ ನಿರ್ಲಕ್ಷ್ಯ, ಮೈ ಸುಟ್ಟುಕೊಂಡು ನರಳುತ್ತಿರುವ ಕಂದಮ್ಮ

ಚಿಕ್ಕಮಗಳೂರು : ನಗರದ ದತ್ತು ಸಂಸ್ಥೆಯಲ್ಲಿ ಹೆಣ್ಣು ಮಗುವಿನ ಮೇಲೆ ಆರೈಕಾ ಸಿಬ್ಬಂದಿ ಕುದಿಯುವ ನೀರು ಸುರಿದ ಘಟನೆ ನಡೆದಿದೆ. ಮಗುವಿನ ಸೊಂಟದ ಕೆಳಭಾಗ ಸಂಪೂರ್ಣ ಸುಟ್ಟಿದೆ. ಮಲ ವಿಸರ್ಜನೆ ಮಾಡಿದ್ದ ಮಗುವನ್ನು ಸ್ವಚ್ಛ ಮಾಡುವಾಗ ಘಟನೆ ಸಂಭವಿಸಿದೆ.
ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವಿನ ಮೇಲೆ ಸಿಬ್ಬಂದಿ ಯಡವಟ್ಟಿನಿಂದ ಕುದಿಯುವ ಬಿಸಿ ನೀರು ಸುರಿದ ಪರಿಣಾಮ ಸೊಂಟದ ಕೆಳಭಾಗ ಸಂಪೂರ್ಣ ಸುಟ್ಟು ಹೋಗಿದೆ. ಮಲ ವಿಸರ್ಜನೆ ಮಾಡಿದ್ದ ಮಗುವನ್ನು ಸ್ವಚ್ಛ ಮಾಡುವಾಗ ದುರ್ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ನಗರದ ಗಾಂಧಿನಾಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಬರಲಿದೆ. ಅನಾಥ ಮಕ್ಕಳನ್ನು ರಕ್ಷಣೆ ಮಾಡಿ ಆರೈಕೆ ಮಾಡುವ ಜವಾಬ್ದಾರಿ ಹೊಂದಿದೆ. ಆದರೆ ಸಿಬ್ಬಂದಿಗಳ ಬೇಜವಾಬ್ದಾರಿಗೆ ಮಗು ನರಳಾಡುವಂತಾಗಿದೆ. ಜುಲೈ 09 ರಂದು ಘಟನೆ ನಡೆದಿದ್ದು, ಇಡೀ ಪ್ರಕರಣ ಮೇಲಧಿಕಾರಿಗಳಿಗೆ ತಿಳಿಯದಂತೆ ಸಿಬ್ಬಂದಿ ಮುಚ್ಚಿಟ್ಟಿದ್ದಾರೆ.
ಸದ್ಯ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದತ್ತು ಸಂಸ್ಥೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
-
State15 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya11 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar17 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar11 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore13 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special16 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu11 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
Chamarajanagar11 hours ago
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು