State
ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಘುಪತಿ ರಾಘವ ರಾಜಾರಾಮ್ ಗಾಂಧಿ ಅವರಿಗೆ ಪ್ರಿಯವಾಗಿತ್ತು. ಇದು ಕಾಂಗ್ರೆಸ್ಸಿಗರಿಗೆಲ್ಲಾ ಇಷ್ಟವಾದ ಭಜನೆ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು, ಜನವರಿ 30: ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದು ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆ ಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್ ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದರು.
ಶ್ರೀರಾಮನ ಮೇಲೆ ಗಾಂಧಿಯವರಿಗೆ ಅಪಾರ ಭಕ್ತಿ:
ಅವರು ತಮ್ಮ ಕೊನೆಯುಸಿರೆಳೆದಾಗಲೂ ‘ಹೇ ರಾಮ್’ ಎಂದು ಉಚ್ಛರಿಸಿದ್ದರು. ಶ್ರೀ ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ‘ರಘುಪತಿ ರಾಘವ ರಾಜಾರಾಮ್ ’ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದರು. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈಯುತ್ತಾರೆ. ಅವರ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂಧೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ. ರಾಜ್ಯದ ಜನತೆ ಹಾಗೂ ಸರ್ಕಾರದ ಪರವಾಗಿ ಮಹಾತ್ಮಾ ಗಾಂಧೀಜಿಯವರಿಗೆ ನಮ್ಮ ನಮನಗಳನ್ನು ಸಲ್ಲಿಸುತ್ತೇನೆ ಎಂದರು.
ಸಮಾಜದಲ್ಲಿ ಶಾಂತಿ ನೆಲೆಸಬೇಕು.
ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು ಎಂದರು.
ಮಂಡ್ಯ ಘಟನೆ: ರಾಜಕೀಯ ದುರುದ್ದೇಶದಿಂದ ಕೂಡಿದೆ:
ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ದೂಷಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧರ್ಮ ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ.
ಫೆಬ್ರವರಿ 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದರು.
State
ಕೇಂದ್ರದ ಬಜೆಟ್ ಮಂಡನೆ
Chandrababu Naidu: ಕೇಂದ್ರದ ಬಜೆಟ್ ಮಂಡನೆ – ಚಂದ್ರಬಾಬು ನಾಯ್ಡು ಇಟ್ಟ ಈ ಪ್ರಮುಖ ಬೇಡಿಕೆಗಳ ಮೇಲೆಯೇ ಎಲ್ಲರ ಕಣ್ಣು !!
Chandrababu Naidu: ಪ್ರಧಾನಿ ಮೋದಿ 3 ನೇ ಅವಧಿಗೆ ಪ್ರಧಾನಿ ಆಗುವ ಮೂಲಕ NDA ಸರ್ಕಾರದ ರಚನೆಗೆ ಪ್ರಮುಖ ಕಾರಣ ಆಗಿರೋ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ತಮ್ಮ ರಾಜ್ಯಕ್ಕೆ ಹಲವು ಬೇಡಿಕೆಗಳನ್ನಟ್ಟಿದ್ದಾರೆ.
ಹೌದು, NDA ಸರ್ಕಾರ ರಚನೆಯಾಗುವಾಗ ಬೆಂಬಲ ಘೋಷಿಸಿದ್ದ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು(Chandrababu Naidu) ಅವರು ಯಾವುದೇ ಷರತ್ತುಗಳಿಲ್ಲದೆ, ನಗುನಗುತ್ತಾ ಬಂದು ಮೋದಿ ಕೈ ಕುಲುಕಿ ನಮ್ಮ ಬೆಂಬಲ ನಿಮಗೆ, ಯಾವತ್ತೂ ಯಾವುದಕ್ಕೂ ಹಸ್ತಕ್ಷೇಪ ಮಾಡಲ್ಲ ಎಂದು ಹೇಳಿದ್ದರು. ಅಂತೆಯೇ ಇದೀಗ ಎಲ್ಲವೂ ಸುಸೂತ್ರವಾಗಿ ಸಾಗುತ್ತಿವೆ. ಆದರೆ ಮುಂದೇನು ಎಂಬುದು ಬಲ್ಲವರು ಯಾರು ಅಲ್ಲವೇ? ಆದರೀಗ ಇಂದು NDA ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿದ್ದು, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಮೋದಿ ಎದುರು ಈ ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ ಇವುಗಳಿಗೆ ನಿರ್ಮಲಾ ಸೀತಾರಾಮನ್ ಅವರು ಹೇಗೆ ಸ್ಪಂದಿಸಿದ್ದಾರೆ ಎಂದು ನೋಡಬೇಕಿದೆ.
ನಾಯ್ಡು ಇಟ್ಟ ಬೇಡಿಕೆಗಳು:
* ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ವ್ಯಾಪಿಸಿರುವ ಬುಂಧೇಲ್ ಖಂಡ್ ರೀತಿಯಲ್ಲಿ ವಿಶೇಷ ಪ್ಯಾಕೇಜ್
* ಕೈಗಾರಿಕಾ ಪ್ರೋತ್ಸಾಹಧನ, ರಾಜಧಾನಿಯಾಗಿ ಅಮರಾವತಿ ನಗರವನ್ನು ನಿರ್ಮಿಸಲು ಪ್ಯಾಕೇಜ್
* ಪೋಲಾವರಂ ವಿವಿಧೋದ್ದೇಶ ಯೋಜನೆಗೆ ಹಣ ಬಿಡುಗಡೆ
ರಾಜ್ಯ ಆರ್ಥಿಕ ವ್ಯವಹಾರಗಳ ಮೇಲೆ ತಾತ್ಕಾಲಿಕ ಹಿಡಿತ ಸಾಧಿಸಲು ಅಲ್ಪಾವಧಿಯ ಸಹಾಯ
* ವಿಶೇಷ ನೆರವಿನ ಯೋಜನೆಯಡಿಯಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚುವರಿ ಆರ್ಥಿಕ ಸಹಾಯ
* ರಸ್ತೆ, ಸೇತುವೆ, ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಂತಹ ಅಗತ್ಯ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್
* ಬಿಪಿಸಿಎಲ್ ( Bharat Petroleum Corporation Limited) ರಿಫೈನರಿ ಹೊಸ ಘಟಕ ಆಂಧ್ರ ಪ್ರದೇಶದಲ್ಲಿ ಸ್ಥಾಪನೆ
State
ವಿಧಾನಸೌಧದ ಗುಮ್ಮಟದಲ್ಲಿ ಬಿರುಕು – ಸಿಎಂ ಗಮನಕ್ಕೆ ತರ್ತೀನಿ ಎಂದ ಸ್ಪೀಕರ್
ಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಸ್ಪೀಕರ್ ಯುಟಿ ಖಾದರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಿಎಂ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ.
ಗುಮ್ಮಟದಲ್ಲಿ ಸಣ್ಣ ಮಟ್ಟದ ಬಿರುಕು ಕಾಣಿಸಿದ್ದು. ಜೋರು ಮಳೆ ಬಂದಾಗ ನೀರು ಸಹ ಲೀಕೇಜ್ ಆಗುತ್ತಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಖುದ್ದು ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧ ರಾಜಕೀಯ ನಾಯಕರ ಕಟ್ಟಡವಾಗಿರದೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವೂ ಆಗಿದೆ. ಆದ್ರೆ ದೊಡ್ಡ ಕಟ್ಟಡಗಳನ್ನು ಸರಿಪಡಿಸುವಾಗ ಮತ್ತೊಂದು ಕಡೆ ಸ್ವಲ್ಪ ಹೆಚ್ಚು-ಕಡಿಮೆ ಆಗಬಹುದು. ಗುಮ್ಮಟ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಫ್ಲೋರ್‌ಗಳು ಮಾತ್ರ ವ್ಯಾಪ್ತಿಗೆ ಬರುತ್ತದೆ. ಆದರೂ ಈ ವಿಚಾರವನ್ನ ಸಿಎಂ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.
ನಮ್ಮ ವ್ಯಾಪ್ತಿಯಲ್ಲಿನ ಫ್ಲೋರ್‌ಗಳನ್ನು ಸರಿಪಡಿಸಿದ್ದೇನೆ. ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ವ್ಯಾಪ್ತಿಗೆ ಗುಮ್ಮಟ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ಇದು ಬಹಳ ವರ್ಷಗಳ ಹಳೆಯ ಕಟ್ಟಡ. ಕೆಲವೊಂದು ಲೋಪದೋಷ ಆಗಿರಬಹುದು, ಆದಷ್ಟು ಬೇಗ ಸಿಎಂಗೆ ವಿಚಾರ ತಿಳಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.
State
ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತ
ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಐವರು ಅದರಡಿ ಸಿಲುಕಿರುವ ಶಂಕೆ ಇದೆ. ಈ ವೇಳೆ ಹೆದ್ದಾರಿ ಬದಿಯಲ್ಲಿ ಕ್ಯಾಂಟೀನ್ ವೊಂದರ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಮಣ್ಣಿನ ರಭಸಕ್ಕೆ ಗಂಗಾವಳಿ ನದಿಗೆ ಕೊಚ್ಚಿಹೋಗಿದೆ. ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸಹ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.