Connect with us

Hassan

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು

Published

on

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಶ್ರೀಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಾಗೂ ಸಿಬ್ಬಂದಿ ವರ್ಗದವರು ಪೂರ್ಣ ಕುಂಬ ಸ್ವಾಗತದೊಂದಿಗೆ ಬರಮಾಡಿಕೊಂಡರು. ಈ ವೇಳೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿದರು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ರವರು ಮಹದೇಶ್ವರ ಸ್ವಾಮಿ ದರ್ಶನ ಪಡೆದು ಬಿಲ್ವಾರ್ಚನೆ, ಮಹಾಮಂಗಳಾರತಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ನಂತರ ಪ್ರಾಧಿಕಾರದ ಕಚೇರಿಗೆ ಆಗಮಿಸಿದ ಶ್ರೀಗಳು ಮಲೆಮಾದೇಶ್ವರ ಬೆಟ್ಟದ ಪ್ರಾಧಿಕಾರದ ವತಿಯಿಂದ ಆಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ಬೆಂಗಳೂರಿನಲ್ಲಿ ನಡೆದ 15ನೇ ಪ್ರಾಧಿಕಾರದ ಸಭೆಯ ಸಂಪೂರ್ಣ ಮಾಹಿತಿ ನೀಡಿ, ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನೂತನ ದಾಸೋಹ ಭವನ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಸ್ಥಳ ಗುರುತಿಸಬೇಕು, ದೀಪದ ಗಿರಿ ಒಡ್ಡುವಿನಲ್ಲಿ ನಿರ್ಮಾಣ ಮಾಡಿರುವ 108 ಅಡಿ ಪ್ರತಿಮೆಯ ತಳಭಾಗದಲ್ಲಿ ಲೀಲೆಗಳ ಕಾಮಗಾರಿ ನಡೆಯುತ್ತಿದ್ದು ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಈ ವೇಳೆ ಶ್ರೀಗಳು ಮಾತನಾಡಿ ಶಿರಡಿ ಸಾಯಿಬಾಬಾ, ಧರ್ಮಸ್ಥಳ ಮಂಜುನಾಥ, ಬೆಂಗಳೂರಿನ ಇಸ್ಕಾನ್ ದೇವಾಲಯ ಹಾಗೂ ತಿರುಪತಿಯಲ್ಲಿ ನಿರ್ಮಾಣ ಮಾಡಿರುವ ದಾಸೋಹ ಭವನಗಳನ್ನು ಒಮ್ಮೆ ನೋಡಿಕೊಂಡು ವೈಜ್ಞಾನಿಕ ರೀತಿಯಲ್ಲಿ ದಾಸೋಹ ಭವನ ನಿರ್ಮಾಣ ಮಾಡಿ, ದಾಸೋಹಕ್ಕೆ ಬರುವ ಭಕ್ತಾದಿಗಳು ಈಗ ನಡೆಯುತ್ತಿರುವ ದಾಸೋಹದಲ್ಲಿ ಕೂರಲು ಸೂಕ್ತ ವ್ಯವಸ್ಥೆ ಇಲ್ಲದಿರುವುದರಿಂದ ಹೆಚ್ಚಿನ ಸಮಯ ನಿಂತುಕೊಂಡಿರಬೇಕು. ಹಾಗಾಗಿ ಹೊಸದಾಗಿ ನಿರ್ಮಾಣ ಮಾಡುವ ದಾಸೋಹ ಭವನ ದಲ್ಲಿ ಕುಳಿತುಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಮಾಡಿ, ಹೈಟೆಕ್ ದಾಸೋಹ ಭವನ ನಿರ್ಮಾಣ ಮಾಡುವಂತೆ ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಮಲೆ ಮಾದೇಶ್ವರ ಬೆಟ್ಟದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದನ್ನೇ ಮುಂದುವರೆಸಿಕೊಂಡು ಪಾವಿತ್ರ್ಯತೆಗೆ ದಕ್ಕೆ ಬಾರದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಿ ಎಂದರಲ್ಲದೆ ಭಕ್ತರ ಅನುಕೂಲಕ್ಕೆ ತಕ್ಕಂತೆ ವ್ಯವಸ್ಥೆಗಳನ್ನು ಮಾಡುತ್ತಿರುವುದಕ್ಕೆ ಕಾರ್ಯದರ್ಶಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಸವದತ್ತಿ ತಾಲೂಕಿನ ಮಹಾಂತ ದುರ್ದುಂಡೇಶ್ವರ ಮಠ ಶ್ರೀ ಮ.ನಿ.ಪ್ರ. ನೀಲಕಂಠ ಮಹಾಸ್ವಾಮಿಗಳು, ಕುಂದೂರು ಮಠದ ಶರತ್ ಚಂದ್ರ ಸ್ವಾಮೀಜಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ದೇವಾಲಯದ ಆಗಮಿಕ ಕರವೀರ ಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಕೊಡ್ಲಿಪೇಟೆ ರಾಜ್ಯ ಹೆದ್ದಾರಿ ಚನ್ನಾಪುರದ ಬಳಿ ತಡೆಗೋಡೆ ಕುಸಿತ

Published

on

ವರದಿ ಸತೀಶ್ ಚಿಕ್ಕಕಣಗಾಲು

ಆಲೂರು: ಪ್ರಸಕ್ತ ವರ್ಷ ಸುರಿದ ಭಾರಿ ಮಳೆಗೆ ತಾಲೂಕಿನ ಬೇಲೂರು, ಕೊಡ್ಲಿಪೇಟೆ ರಾಜ್ಯ ಹೆದ್ದಾರಿ ಚನ್ನಾಪುರದ ಬಳಿ ತಡೆಗೋಡೆ ಕುಸಿದಿದ್ದು ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಬೈರಾಪುರ-ಚನ್ನಾಪುರ- ಮಗ್ಗೆ ಸಂಪರ್ಕಿಸುವ ರಸ್ತೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮುರುಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇಲೂರು ಕೊಡ್ಲಿಪೇಟೆ 49.2 km ಉದ್ದದ ರಾಜ್ಯ ಹೆದ್ದಾರಿಯು ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರದ ಬಳಿ ತಡೆಗೋಡೆ ಕುಸಿತ ಉಂಟಾಗಿತ್ತು. SDMF/NDRF ಅಡಿಯಲ್ಲಿ ₹ 33 ಲಕ್ಷ ವೆಚ್ಚದಲ್ಲಿ ನೂತನ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಸದರಿ ಪ್ರದೇಶ ಶೀತವಾಗಿದ್ದು, ಕಾಮಗಾರಿ ನಡೆಸುವ ವೇಳೆ ರಸ್ತೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ವಾಹನಗಳು ರಾಷ್ಟ್ರೀಯ ಹೆದ್ದಾರಿ 75 ರ ಪಾಳ್ಯ ಬಳಿಯ ಕಣದಹಳ್ಳಿ ವೃತದಿಂದ ಬಲ್ಲೂರು, ಬೆಟ್ಟಳ್ಳಿ ಕ್ರಾಸ್ ಮೂಲಕ ಮಗ್ಗೆ ಗ್ರಾಮವನ್ನು ತಲುಪುವಂತೆ ಸೂಚಿಸಲಾಗಿದೆ.

Continue Reading

Hassan

ಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ

Published

on

ಆಲೂರು: ಪ್ರಸಕ್ತ ಸಾಲಿನಲ್ಲಿ ಸುರಿದ ಭಾರಿ ಮಳೆಗೆ ತಾಲೂಕಿನ ಬೇಲೂರು, ಕೊಡ್ಲಿಪೇಟೆ ರಾಜ್ಯ ಹೆದ್ದಾರಿ ಚನ್ನಾಪುರದ ಬಳಿ ತಡೆಗೋಡೆ ಕುಸಿದಿದ್ದು, ಕಾಮಗಾರಿ ನಡೆಯುತ್ತಿರುವುದರಿಂದ ಬೈರಾಪುರ-ಚನ್ನಪುರ- ಮಗ್ಗೆ ಸಂಪರ್ಕಿಸಿ ರಸ್ತೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮುರುಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇಲೂರು ಕೊಡ್ಲಿಪೇಟೆ 49.2 km ಉದ್ದದ ರಾಜ್ಯ ಹೆದ್ದಾರಿಯು ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರದ ಬಳಿ ತಡೆಗೋಡೆ ಕುಸಿತ ಉಂಟಾಗಿತ್ತು. SDMF/NDRF ಅಡಿಯಲ್ಲಿ ₹ 33 ಲಕ್ಷ ವೆಚ್ಚದಲ್ಲಿ ನೂತನ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಸದರಿ ಪ್ರದೇಶ ಶೀತವಾಗಿದ್ದು, ಕಾಮಗಾರಿ ನಡೆಸುವ ವೇಳೆ ರಸ್ತೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು,  ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ 75 ರ ಪಾಳ್ಯ ಬಳಿಯ ಕಣದಹಳ್ಳಿ ವೃತ್ತ  ಬಲ್ಲೂರು, ಬೆಟ್ಟಳ್ಳಿ ಕ್ರಾಸ್ ಮಾರ್ಗದ ಮೂಲಕ ಮಗ್ಗೆ ಗ್ರಾಮವನ್ನು ತಲುಪುವಂತೆ ಸೂಚಿಸಲಾಗಿದೆ.

Continue Reading

Hassan

ಸಕಲೇಶಪುರದಲ್ಲಿ ಗೋವಾ ಮದ್ಯ ಸಾಗಣೆ ಪತ್ತೆ: 5.24 ಲಕ್ಷ ರೂ. ಮೌಲ್ಯದ ಮದ್ಯ–ವಾಹನ ಜಪ್ತಿ

Published

on

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು  ಹಾಗೂ ಹಾಸನ ಜಿಲ್ಲಾ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ, ಸಕಲೇಶಪುರ ಉಪವಿಭಾಗದ ಅಬಕಾರಿ ಉಪ ಅಧೀಕ್ಷರ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ 12.15 ಗಂಟೆಯ ವೇಳೆಗೆ ರಸ್ತೆಗಾವಲು ನಡೆಸಲಾಯಿತು. ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಹೊಂಗಡಹಳ್ಳಿ ಗ್ರಾಮದ ರಸ್ತೆಯಲ್ಲಿ KA-18-N-5253 ಸಂಖ್ಯೆಯ ಟಾಟಾ ಸಫಾರಿ ವಾಹನವನ್ನು ಶೋಧಿಸಿದಾಗ “FOR SALE IN GOA ONLY” ಎಂದು ನಮೂದಿರುವ ಮದ್ಯ ಪತ್ತೆಯಾಗಿದೆ.

ಶೋಧನೆಯಲ್ಲಿ 750 ಮಿಲಿ ಮ್ಯಾನ್‌ಷನ್ ಹೌಸ್ ಫ್ರೆಂಚ್ ಬ್ರಾಂಡಿ 179 ಬಾಟಲ್, 2 ಲೀಟರ್ ಸಾಮರ್ಥ್ಯದ 5 ಪ್ಲಾಸ್ಟಿಕ್ ಬಾಟಲ್ ಹಾಗೂ 750 ಮಿಲಿ ಇಂಪೀರಿಯಲ್ ಬ್ಲ್ಯೂ ಹ್ಯಾಂಡ್ ಪಿಕ್ ಗ್ರೀನ್ ವಿಸ್ಕಿ 180 ಬಾಟಲ್ ಸೇರಿ ಒಟ್ಟು 279.250 ಲೀಟರ್ (364 ಬಾಟಲ್) ಮದ್ಯ ಜಪ್ತುಪಡಿಸಲಾಗಿದೆ.

ಮದ್ಯದ ಮೌಲ್ಯ ರೂ.1,24,395 ಮತ್ತು ವಾಹನ ಮೌಲ್ಯ ರೂ.4 ಲಕ್ಷ ಸೇರಿ ಒಟ್ಟು ಅಂದಾಜು ಮೌಲ್ಯ ರೂ.5,24,395 ಆಗಿದೆ. ಈ ಸಂಬಂಧ ಅಬಕಾರಿ ನಿರೀಕ್ಷಕ ವಿ.ಜಿ. ಜಯಕುಮಾರ ಅವರು ಅಬಕಾರಿ ನಿಯಮಾನುಸಾರ ಪ್ರಕರಣ ದಾಖಲಿಸಿದ್ದಾರೆ.

Continue Reading

Trending

error: Content is protected !!