Connect with us

Mysore

ಶ್ರೇಷ್ಠ ಸಂವಿಧಾನ ದೇಶದ ಜನರಿಗೆ ಪ್ರೇರಕ ಶಕ್ತಿ : ಗ್ರಾ. ಪಂ. ಅಧ್ಯಕ್ಷ ಶಿವಣ್ಣ

Published

on

ಸಾಲಿಗ್ರಾಮ ತಾಲೂಕು ಹೊನ್ನೇನಹಳ್ಳಿ ಗ್ರಾಮಕ್ಕೆ ಸಂವಿಧಾನ ಜಾಗೃತಿ ಜಾಥಾ ಅಭಿಯಾನಕ್ಕೆ ಅಭೂತ ಪೂರ್ವ ಸ್ವಾಗತ ಕೋರಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ, ಅವರು ಮಾತನಾಡಿದರು.

ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಸಂವಿಧಾನ ದೇಶದ ಜನರಿಗೆ ಪ್ರೇರಕ ಶಕ್ತಿಯಾಗಿದೆ. ಭಾರತದಲ್ಲಿ ಡಾ : ಬಿ ಆರ್ ಅಂಬೇಡ್ಕರ್ ರವರು ರಚಿಸಿರುವ ಶ್ರೇಷ್ಠ ಸಂವಿಧಾನವು ಜನತೆಗೆ ಶಕ್ತಿ ತುಂಬಿ, ಮಾರ್ಗದರ್ಶನ ವಾಗಿದೆ. ಸಂವಿಧಾನ ಜಾಗೃತಿ ಸಾರುವ ಜಾಥಾ ತಾಲೂಕಿನಲ್ಲಿ ಸಂಚರಿಸುತ್ತಿದ್ದು, ಸ್ತಬ್ದ ಚಿತ್ರದಲ್ಲಿ ಸಂವಿಧಾನ ಪ್ರಸ್ತಾವನೆ ಇದೆ, ಹಕ್ಕುಗಳ ಬಗ್ಗೆ ಮಾಹಿತಿ ಫಲಕದಲ್ಲಿ ವಿಚಾರ ಅಳವಡಿಸಿದ್ದು, ನಾವೆಲ್ಲರೂ ಹಳ್ಳಿಗಳಲ್ಲಿ ಜನರಿಗೆ ತಿಳಿಸಬೇಕು ಎಂದು ಮನವಿ ಮಾಡಿದರು.

ತಂದ್ರೆ, ಹಾಗೂ ಕರ್ಪೂರವಳ್ಳಿ ಗ್ರಾಮಗಳಲ್ಲಿ ಜಾಗೃತಿ ಜಾಥಾ ಸಂಚರಿಸಿ ಸಂವಿಧಾನದ ಬಗ್ಗೆ   ಅರಿವು ಮೂಡಿಸಿದರು

ಸಮಾಜ ಕಲ್ಯಾಣ ಇಲಾಖೆ ಅಶೋಕ್, ಪಿ ಡಿ ಒ ಗಳಾದ  ಹೊನ್ನೇನಹಳ್ಳಿ  ನವೀನ್, ತಂದ್ರೆ ಮಹದೇವ್, ಕರ್ಪೂರವಳ್ಳಿ ಕುಳ್ಳೇಗೌಡ, ತಂದ್ರೆ ಗ್ರಾ ಪಂ ಅಧ್ಯಕ್ಷ ರೇಣುಕಾ ವೆಂಕಟೇಶ್, ಉಪಾಧ್ಯಕ್ಷ ಮಹದೇವ್, ಕರ್ಪೂರವಳ್ಳಿ ಗ್ರಾ ಪಂ ಅಧ್ಯಕ್ಷೆ ಪ್ರೇಮಾ ಸ್ವಾಮಿ, ಉಪಾಧ್ಯಕ್ಷ ಅನುಷಾ, ತಂದ್ರೆ ಸದಸ್ಯರಾದ ಮಹದೇವಪ್ಪ, ಪವಿತ್ರ, ಅನಿತಾ, ಯೋಗೀಶ್, ಸಣ್ಣಸ್ವಾಮಿ, ಕರ್ಪೂರವಳ್ಳಿ ಸದಸ್ಯರಾದ ರಾಂಪುರ ಲೋಕೇಶ್, ಮೂಡಲಬೀಡು ರಘು, ಸ್ವಾಮಿ ಹೊನ್ನೇನಹಳ್ಳಿ ಸದಸ್ಯರಾದ ಲತಾ ದೇವೇಂದ್ರ, ಕಿಜಾರ್ ಪಾಷಾ, ರಾಧಾ ಕುಬೇರ, ಅಶೋಕ್, ವಿ ಎ ಆರತಿ, ವಕೀಲ ಕಾಂತರಾಜ್, ಡಿ ಎಸ್ ಎಸ್ ಜಿಲ್ಲಾ ಸಂಚಾಲಕ ಕಳ್ಳಿಮುದ್ದಾನಹಳ್ಳಿ ಚಂದ್ರು, ಜವರಯ್ಯ, ಲಕ್ಕಿಕುಪ್ಪೆ ರಮೇಶ್, ಪ್ರೀತಮ್, ಸಂತೋಷ್  , ಶಿಕ್ಷಕರಾದ ನಾಗೇಶ್, ರಾಜ, ಪಾಂಡು, ರಘು, ರಮೇಶ್, ಕುಮಾರ್,ಸುರೇಶ, ವಿದ್ಯಾರ್ಥಿಗಳು ಸೇರಿದಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ*

Published

on

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ

Published

on

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೋರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮುಡಾ ಅಕ್ರಮ ನಿವೇಶನ ಹಂಚಿಕೆ: ಏಕ ಸದಸ್ಯ ವಿಚಾರಣಾ ಆಯೋಗ ರಚನೆ

Published

on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು, ತಾಂತ್ರಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೀಡಲು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸಬೇಕು ಎಂದು ಸೂಚಿಸಲಾಗಿದೆ.

ಆಯೋಗವು ವಿಚಾರಣೆಗೆ ಬಯಸುವ ಎಲ್ಲ ಕಡತಗಳು ಮತ್ತು ದಾಖಲಾತಿಗಳನ್ನು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒದಗಿಸಬೇಕು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತನಿಖೆಗೆ ಆದೇಶಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಮುಡಾ ನಿವೇಶನ ಹಂಚಿಕೆಯ ವಿರುದ್ಧ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂಬ ಆಶಯದೊಂದಿಗೆ ರಾಜ್ಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ. ಎನ್. ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ತನಿಖೆಗೆ ವಹಿಸಿದೆ. ಪ್ರಕರಣದ ಕೂಲಂಕಷವಾದ ವಿಚಾರಣೆ ನಡೆದು, ಸತ್ಯಾಸತ್ಯತೆ ಹೊರಬರಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

Continue Reading

Trending

error: Content is protected !!