Mysore
ಸಂವಿಧಾನ ಅರಿವಿನ ಜಾಥಾ,
ಸಾಲಿಗ್ರಾಮ ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಾದ ಮಿರ್ಲೆ, ನರಚನಹಳ್ಳಿ,ಅಂಕನಹಳ್ಳಿ, ಮೇಲೂರು ಭೇರ್ಯ ಮತ್ತು ಮುಂಜನಹಳ್ಳಿ ಗ್ರಾಮಗಳಿಗೆ ಭಾರತದ ಸಂವಿಧಾನ ಅರಿವಿನ ಜಾಥಾವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಿದರು.
ಗ್ರಾಮಗಳಲ್ಲಿ ಹೆಣ್ಣು ಮಕ್ಕಳು ಕಳಸ ಹಾಗೂ ವಾದ್ಯ ದೊಂದಿಗೆ ಸ್ವಾಗತ ಮಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ನಾಗರಾಜು ರವರು ಮಾತನಾಡಿ ಇದರ ವಿಧಿ, ವಿಧಾನ, ಹಾಗೂ ಗ್ರಂಥವೇ ಸಂವಿಧಾನ, ಪ್ರಜೆಗಳಾದ ನಾವು ಭಾರತವನ್ನು ಸಾರ್ವ ಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾ ಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಹಾಗೂ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಶ್ರದ್ದೆ, ಮತ್ತು ಉಪಾಸನಾ ಸ್ವತಂತ್ರ ಹಾಗೂ ಸ್ಥಾನ ಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ವೃದ್ಧಿ ಗೊಳಿಸಲು ಈ ನಮ್ಮ ಸಂವಿಧಾನ ವನ್ನು ಅಂಗಿಕರಿಸೋಣ ಎಂದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ್, ಮಿರ್ಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲು, ಮೇಲೂರು ಗ್ರಾ ಪಂ ಅಧ್ಯಕ್ಷೆ ವಿಜಿಯಮ್ಮ, ಉಪಾಧ್ಯಕ್ಷ ಲೀಲಾವತಿ, ಅಂಕನಲ್ಲಿ ಗ್ರಾ ಪಂ ಅಧ್ಯಕ್ಷ ಧನಂಜಯ, ಭೇರ್ಯ ಗ್ರಾ ಪಂ ಅಧ್ಯಕ್ಷ ಜಯಲಕ್ಷ್ಮಿ, ಉಪಾಧ್ಯಕ್ಷ ರೂಪ, ಪಿ ಡಿ ಒ ಗಳಾದ ಮಿರ್ಲೆ ಸಂದೀಪ್, ಅಂಕನಲ್ಲಿ ನಾಗರಾಜ್, ಮೇಲೂರು ಗೋವಿಂದರಾಜು, ಭೇರ್ಯ ಕೆ ಮಂಜುನಾಥ್, ಸಾರಾ ಯುವ ಸೇನೆ ರಾಜ್ಯಾಧ್ಯಕ್ಷ ಗೌತಮ್, ಲೆಕ್ಕ ಸಹಾಯಕಿ ಅಶ್ವಿನಿ, ವಕೀಲರಾದ ಕಾಂತರಾಜ್, ಸಾಮಾಜಿಕ ಕಾರ್ಯಕರ್ತ ಡಿ. ಕೃಷ್ಣ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಇದ್ದಾರೆ.
Mysore
ಮೈಸೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿಕೆ.
ಮೈಸೂರು
– ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅತುರದ ಕ್ರಮ ಕೈಗೊಂಡರು.
– ಉಪ ಚುನಾವಣೆ ಮೂಲಕ ಜನ ಈ ಎಚ್ಚರಿಕೆ ಗಂಟೆ ಬಾರಿಸುತ್ತಾರೆ.
– ಮೂರು ಕ್ಷೇತ್ರಗಳಲ್ಲೂ ಎನ್ ಡಿ ಎ ಅಭ್ಯರ್ಥಿಗಳು ಗೆಲುತ್ತಾರೆ.
– ಮುಡಾ ಹಗರಣ ತಾರ್ಕಿಕ ಅಂತ್ಯಕ್ಕೆ ಹೋಗಿತ್ತದೆ.
– ಭೈರತಿ ಸುರೇಶ್ ತಾನು ಮಂತ್ರಿ ಅನ್ನೋದನ್ನೆ ಮರೆತು ಮಾತಾಡುತ್ತಿದ್ದಾರೆ.
– ಸಹೋದರಿ ಶೋಭಕರಂದ್ಲಾಜೆ ಪುಟ್ಟವಿಟ್ಟ ಚಿನ್ನವಿದ್ದಂತೆ. ಅವರ ಬಗ್ಗೆ ಕೀಳಾಗಿ ಮಾತಾಡಬೇಡಿ ಎಂದ ಸೋಮಣ್ಣ
Mysore
ಈ ಬಾರಿ ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ – ವಿ ಸೋಮಣ್ಣ
ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.
ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.
ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ.ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ದಿ ಮಾಡಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುಧಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು
ದೇಶಕ್ಕೆ ತನ್ನದೇ ಅದ ಪರಂಪರೆ ಇದೆ ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಕೊಡಗು ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ ಕಳೆದ 10 ವರ್ಷಗಳಲ್ಲಿ ಮಾನ್ಯ ಪ್ರಧಾನ ಮಂತ್ರಿ ಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047 ಕ್ಕೇ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ. ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ,
ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್
ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Mysore
ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ನಂಜನಗೂಡು : ಇಂದು ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುವ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದ ಕಟ್ಟಡ ಕಾಮಗಾರಿಗೆ 15 ಲಕ್ಷ ರೂ ವೆಚ್ಚದಲ್ಲಿ ನಂಜನಗೂಡು ಕ್ಷೇತ್ರದ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಶಾಸಕರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಸಮುದಾಯ ಭವನಗಳ ಅವಶ್ಯಕತೆ ಇರುವ ಉದ್ದೇಶದಿಂದ ಕ್ಷೇತ್ರದ ಗ್ರಾಮೀಣ ಭಾಗದಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
ನನ್ನ ತಂದೆ ದಿ.ಆರ್ ಧ್ರುವನಾರಾಯಣ್ ಅವರ ಆಡಳಿತ ಅವಧಿಯಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಸರ್ವ ಜನಾಂಗದ ಎಲ್ಲ ವರ್ಗದವರಿಗೂ ಸಮುದಾಯ ಭವನ ನಿರ್ಮಿಸಲಾಗಿದೆ ಅವರ ಹಾದಿಯಲ್ಲೇ ನಾನು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದೆನೆ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣವಾಗುತ್ತಿದ್ದು ಇದನ್ನು ಕೆಟ್ಟ ಚಟಗಳಿಗೆ ಬಳಸದೆ ಒಳ್ಳೆಯ ಕೆಲಸಕ್ಕೆ ಉಪಯೋಗಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ಗುಣಮಟ್ಟದವಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕು.
ನಾನು ಶಾಸಕನಾಗಿ ಕ್ಷೇತ್ರವನ್ನು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ನೀಡಿದ ವೇಳೆ ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದೆ ಹೀಗಾಗಿ ಆದ್ಯತೆ ಮೇರೆಗೆ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ಗ್ಯಾರಂಟಿ ಯೋಜನೆಯ ತಾಲ್ಲೂಕು ಅದ್ಯಕ್ಷ ಕೆ ಮಾರುತಿ, ಹುಲ್ಲಹಳ್ಳಿ ಬ್ಲಾಕ್ ಅದ್ಯಕ್ಷ ಶ್ರೀಕಂಠನಾಯಕ, ಗ್ರಾ ಪಂ ಅದ್ಯಕ್ಷೆ ದೇವಮ್ಮ,ಗ್ರಾ ಪಂ ಸದಸ್ಯ ಪಾಪ,ಶಿವಕುಮಾರ್,ಎಇ ಶರಣ್, ಇಂಜಿನೀಯರ್ ಕಾವ್ಯ,ಪುರುಷೋತ್ತಮ್, ಮುಖಂಡರುಗಳಾದ ಮಹದೇವಯ್ಯ,ಚೆಲುವಯ್ಯ,ದುಂಡಯ್ಯ,ವೆಂಕಟರಾಜು,ಸೇರಿದಂತೆ ಪ್ರಮುಖರು ಹಾಜರಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
-
Mysore6 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State9 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State9 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health9 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan6 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized5 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized11 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State9 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.