Connect with us

Mysore

ಸಂಶೋಧನಾ ವಿದ್ಯಾರ್ಥಿಗಳು ಕಾಪಿಪೇಸ್ಟ್ ಮಾಡಬೇಡಿ

Published

on

ಮೈಸೂರು: ಸಂಶೋಧನಾ ವಿದ್ಯಾರ್ಥಿಗಳು ಚಾಟ್ ಜಿಪಿಟಿ ಸೇರಿದಂತೆ ವಿವಿಧ ಕಡೆಗಳಿಂದ ಸಂಶೋಧನೆಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಿ. ಆದರೆ, ಅಲ್ಲಿ ಪಡೆದ ಮಾಹಿತಿಯನ್ನೇ ಕಾಪಿ ಪೇಸ್ಟ್ ಮಾಡಬೇಡಿ ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಪ್ರೊ. ಹಸೀನ್ ತಾಜ್ ಸಂಶೋಧನಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಕಾವೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಸಂಶೋಧನೆ ಮತ್ತು ಪ್ರಕಟಣಾ ನೀತಿಶಾಸ್ತ್ರ’ ಕುರಿತ ರಾಜ್ಯಮಟ್ಟದ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ನಿಮ್ಮ ಸಂಶೋಧನೆಗೆ ತಂತ್ರಜ್ಞಾನ, ಪುಸ್ತಕಗಳ ನೆರವು ಪಡೆಯಿರಿ. ಆದರೆ, ಅಲ್ಲಿರುವ ಮಾಹಿತಿಯನ್ನೇ ಕಾಪಿ ಮಾಡುವುದು ಸರಿಯಾದ ಸಂಶೋಧನಾ ವಿಧಾನವಲ್ಲ. ಸಂಶೋಧಕರಿಗೆ ತಾವು ಸಂಶೋಧಿಸುವ ವಿಷಯದ ಕುರಿತು ಆಳವಾದ ಜ್ಞಾನ ಹಾಗೂ ಅಧ್ಯಯನ ಅವಶ್ಯಕ ಎಂದರು.
ಸಂಶೋಧನಾ ಪ್ರಬಂಧದಲ್ಲಿ ಯಾವುದೇ ರೀತಿಯ ತಪ್ಪುಗಳು ಆಗದಂತೆ ಎಚ್ಚರ ವಹಿಸಬೇಕಾಗಿರುವುದು ಸಂಶೋಧನಾ ವಿದ್ಯಾರ್ಥಿ ಗಳ ಕರ್ತವ್ಯ. ಸಣ್ಣ ವ್ಯಾಕರಣದೋಷ ಸಹ ಕಂಡು ಬರಬಾರದು. ಕೆಲವೊಂದು ವೇಳೆ ಸಣ್ಣದೋಷಗಳು ಭಿನ್ನವಾದ ಅರ್ಥ ಹೊಂದಿರುತ್ತದೆ. ಹಾಗಾಗಿ ಸಂಶೋಧನಾ ಪ್ರಬಂಧವನ್ನು ಓದುವವರಿಗೆ ಗೊಂದಲ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಹೇಳಿದರು.
ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ತಳವಾರ್ ಮಾತನಾಡಿ, ಇತ್ತೀಚೆಗೆ ಸಂಶೋಧನಾ ವಿದ್ಯಾರ್ಥಿಗಳಲ್ಲಿ ಬದ್ಧತೆ ಕೊರತೆ ಹೆಚ್ಚಾಗಿ ಕಂಡು ಬರುತ್ತಿದೆ. ಕಾಟಾಚಾರಕ್ಕೆ ಸಂಶೋಧನಾ ಪ್ರಬಂಧಗಳು ಪ್ರಕಟವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಶೋಧನೆ ಕೈಗೊಳ್ಳುವ ವಿಷಯದ ಕುರಿತು ಸಂಶೋಧನಾ ವಿದ್ಯಾರ್ಥಿಗಳು ಆಳವಾದ ಅಧ್ಯಯನ ನಡೆಸಬೇಕು. ಸಂಶೋಧನೆ ಮುಗಿಯುವವರೆಗೆ ಸಂಶೋಧನಾ ವಿದ್ಯಾರ್ಥಿಗಳು ವಿಷಯದ ಕುರಿತು ಎಲ್ಲ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.
ವೇದಿಕೆಯಲ್ಲಿ ಮುಕ್ತ ವಿವಿ  ಕುಲಸಚಿವ ಪ್ರೊ.ಕೆ.ಎಲ್.ಎನ್. ಮೂರ್ತಿ, ಅಕಾಡೆಮಿಕ್ ಡೀನ್ ಪ್ರೊ.ಎನ್. ಲಕ್ಷ್ಮಿ ಇದ್ದರು.
Continue Reading
Click to comment

Leave a Reply

Your email address will not be published. Required fields are marked *

Mysore

ಜೂಜಾಡುತ್ತಿದ್ದ ನಾಲ್ವರ ಬಂಧನ

Published

on

ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.

ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.

Continue Reading

Mysore

ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.

Published

on

ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.

ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Continue Reading

Mysore

ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ

Published

on

ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.

ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

Trending

error: Content is protected !!