State
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.

ಬೆಂಗಳೂರು: 01.04.2006 ಪೂರ್ವದಲ್ಲಿನ ನೇಮಕಾತಿಯ ಅಧಿಸೂಚನೆಗಳ ಮೂಲಕ ಆಯ್ಕೆ ಯಾಗಿರುವ , ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತ ರಾಜ್ಯಪತ್ರವನ್ನು ರಾಜ್ಯ ಸರ್ಕಾರವು ಹೊರಡಿಸಿದೆ.
ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಸೂಚನೆಗಳ ಅನ್ವಯ ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಮಾಗಸೂಚಿಗಳನ್ನು ಸೂಚಿಸಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ.
ಕೇಂದ್ರ ಸರ್ಕಾರವು ತನ್ನ ನೌಕರರಿಗೆ 22-12-2003 ರ ಮೊದಲು ನೇಮಕಾತಿ/ನೇಮಕಾತಿಗಾಗಿ ಜಾಹೀರಾತು/ಹಾಗೂ ನೌಕರರು ನೇಮಕಾತಿ ಹೊಂದಿದ ನಂತರ ಸೇವೆಯನ್ನು ಆರಂಭಿಸಿದ ನೌಕರರು ಮೊದಲ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಆಯ್ಕೆಯ ಅವಕಾಶವನ್ನು ಕಲ್ಪಿಸಿ ದಿನಾಂಕ:31.08.2023 ರೊಳಗೆ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರದ ದಿನಾಂಕ:03.03.2023ರ ಅಧಿಕೃತ ಸಮಯಾವಕಾಶವನ್ನು ನೀಡಲಾಗಿದೆ.
ದಿನಾಂಕ: 03.03.2023ರ ಕೇಂದ್ರ ಸರ್ಕಾರವು ಹೊರಡಿಸಿದ ಆದೇಶದಲ್ಲಿ ಕೇಂದ್ರ ನೌಕರರಿಗೆ ಇರುವ ಸೌಲಭ್ಯಗಳನ್ನು ರಾಜ್ಯ ನೌಕರರಿಗೂ ಅನ್ವಯವಾಗುವಂತೆ ತೀರ್ಮಾನಿಸಿದ ಸರ್ಕಾರ ದಿನಾಂಕ: 01.04.2006ರ ನಂತರ ನೇಮಕಾತಿ ಹೊಂದಿದ ಎಲ್ಲಾ ಸರ್ಕಾರಿ ನೌಕರರಿಗೆ ಡಿಫೈನ್ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅಭಿಮತವನ್ನು ಸೂಚಿಸಿತು. ಈ ಕ್ರಮ ಸೂಕ್ತ ಎಂದು ಪರಿಗಣಿಸಿ ಈ ಕೆಳಗಿನಂತೆ ಆದೇಶ ನೀಡಿತು.
ರಾಜ್ಯದಲ್ಲಿ ರಾಜ್ಯ ಸಿವಿಲ್ ಯೋಜನೆಗಳಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ದಿನಾಂಕ 01.04.2006ರ ನಂತರ ನೇಮಕ ಹೊಂದಿದ ಸರ್ಕಾರಿ ನೌಕರರು ಈ ಕೆಳಗಿನ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಸರ್ಕಾರ ಒಪ್ಪಿಗೆಯನ್ನು ಸೂಚಿಸಿದೆ.
1. ದಿನಾಂಕ: 01.04.2006ರ ನಂತರ ರಾಜ್ಯ ಸರ್ಕಾರಕ್ಕೆ ನೇಮಕಾತಿ ಹೊಂದಿದ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಷ್ಟಪಟ್ಟರೆ, ತಮ್ಮ ಅಭಿಪ್ರಾಯದ ಅಭಿಮತವನ್ನು ನಮೂನೆಯ ಜೊತೆಗೆದಿನಾಂಕ: 30.06.2024ರೊಳಗೆ ನೇರವಾಗಿ ಪ್ರಾಧಿಕಾರಕ್ಕೆ ಸಲ್ಲಿಸಬಹುದು. ಈ ಆಯ್ಕೆಯು ಕೇವಲ ಒಂದು ಬಾರಿಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.
2. ಒಮ್ಮೆ ಮಾಡಿದ ಆಯ್ಕೆಯನ್ನು ಬದಲಾಯಿಸಲು ಸಾಧ್ಯವಿಲ್ಲ.
3. ಮೇಲಿನ ಅನ್ವಯ 1 ರಂತೆ ನಿಗದಿತ ಸರ್ಕಾರಿ ನೌಕರ ಯಾವುದೇ ಅಭಿಮತವನ್ನು ಅಥವಾ ನಮೂನೆಯನ್ನು ಸಲ್ಲಿಸದೆ ಇದ್ದರೆ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
4. ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡುವ ನಿಗದಿತ ಅರ್ಹತೆಯನ್ನು ಹೊಂದಿರುವ ನೇಮಕಾತಿಯನ್ನು ಪ್ರಾಧಿಕಾರವು ಖಚಿತಪಡಿಸಿಕೊಂಡು 31.07.2024 ರೊಳಗಾಗಿ ಅಂತಹ ನೌಕರರನ್ನು ಕಳೆದ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಸೂಕ್ತ ಮಾರ್ಗದರ್ಶನದೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಒಟ್ಟಾರೆಯ ಪ್ರಸ್ತಾವನೆಯನ್ನು ಸಲ್ಲಿಸಬೇಕು.
5. ಇಲಾಖೆಯ ಮುಖ್ಯಸ್ಥರು ತಮಗೆ ಬಂದ ಎಲ್ಲಾ ಪ್ರಸ್ತಾವನೆಗಳನ್ನು ಸ್ವೀಕರಿಸಿ ಸೂಕ್ಷ್ಮವಾಗಿ ಪರಿಶೀಲಿಸಿ ಕಳೆದ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ಇಚ್ಚಿಸುವ ಅಭ್ಯರ್ಥಿಗಳ ಪಟ್ಟಿಯನ್ನು 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ನೇರವಾಗಿ ಸಲ್ಲಿಸತಕ್ಕದ್ದು.
6. ರಾಜ್ಯ ಸರ್ಕಾರ ನೌಕರರು ಈ ಇಂದಿನ ಡಿಫೈನ್ಸ್ ಪಿಂಚಣಿ ಯೋಜನೆಯನ್ನು ಪಡೆದುಕೊಳ್ಳಲು ಒಪ್ಪಿದರೆ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ 30.06.2024ರೊಳಗಾಗಿ ಸಲ್ಲಿಸಬೇಕಾಗುತ್ತದೆ. ಬೇರೆ ಬೇರೆ ಇಲಾಖೆಗೆ ಆಯ್ಕೆಯಾಗಿರುವ ಹುದ್ದೆಗೆ ವರದಿಮಾಡಿಕೊಳ್ಳುವ ಕಾರಣ ಹೇಳಿ ಬಿಡುಗಡೆ ಮಾಡಿಕೊಂಡಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸಿ ಕೊಡಬೇಕು ಎಂದು ಆದೇಶವು ತಿಳಿಸಿದೆ.
State
ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ವಿಚಾರ ಕುರಿತು ಚರ್ಚೆ ಮಾಡಿದ್ದೇನೆ. ಭೇಟಿಗೆ ಡಿಕೆಶಿ ಅವರು ಸಮಯ ನೀಡಿದ್ದರು. ಅದರಂತೆ ಇಂದು ಭೇಟಿ ಮಾಡಿದ್ದೇನೆ. ಮದುವೆಗೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು.
ವೈಯಕ್ತಿಕ ವಿಚಾರಕ್ಕೆ ಮಾತ್ರ ನಾನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಏನು ಇಲ್ಲ. ಅಧಿಕಾರದಲ್ಲಿದ್ದಾಗ, ಸರ್ಕಾರ ಇದ್ದಾಗ ಪಕ್ಷ ಬೇಧ ಮರೆತು ಭೇಟಿ ಮಾಡುವುದು ಸಾಮಾನ್ಯ. ಅದರಂತೆ ಬಿಜೆಪಿಯ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಭೇಟಿ ಮಾಡಿದ್ದಾರೆ. ಅದಕ್ಕೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಸ್ಪಷ್ಟನೆ ನೀಡಿದರು.
State
ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ

ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್ ಗುಡ್ ಫ್ರೈಡೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಮೌಲ್ಯ ಮಾಪನ ಕರ್ತವ್ಯಕ್ಕೆ ವಿನಾಯಿತಿ,ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ
ಪವಿತ್ರ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರು ಎಸ್ ಎಸ್ ಎಲ್ ಸಿ ಮೌಲ್ಯ ಮಾಪನದ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು.ಈ ಬಗ್ಗೆ ಯು ಟಿ ಖಾದರ್ ರವರ ಬಳಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ ಶಿಕ್ಷಕಿಯರು ಸರಕಾರದ ಜೊತೆ ಮಾತುಕತೆ ನಡೆಸಿ ವಿನಾಯಿತಿ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು.
ಈ ಬಗ್ಗೆ ಶಿಕ್ಷಣ ಇಲಾಖೆಯ ಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು ಟಿ ಖಾದರ್ ಈಸ್ಟರ್ ಗುಡ್ ಫ್ರೈಡೇ ದಿನಗಳಾದ ಗುರುವಾರ,ಶುಕ್ರವಾರ ಹಾಗೂ ಭಾನುವಾರ ಕರ್ತವ್ಯಕ್ಕೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದರು.
ಅದರಂತೆ ಶಿಕ್ಷಣ ಇಲಾಖೆಯು ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ವಿನಾಯಿತಿ ನೀಡಿ ಉಳಿದ ದಿನಗಳಲ್ಲಿ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.
State
ಸಿದ್ದರಾಮಯ್ಯ ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುತ್ತಿದ್ದಾರೆ: ಆರ್.ಅಶೋಕ್

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಆಗ್ರಹಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಶೋಕ್ ಅವರು, ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನೆಸಿದ್ದಾರೆ.
ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ? ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu24 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur23 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Chikmagalur24 hours ago
ಜನಿವಾರ ತೆಗೆಸಿರುವುದು ಖಂಡನೀಯ