Connect with us

State

ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ: ಸಿ.ಎಂ

Published

on

ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿ

ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ

ಬಿಜೆಪಿ ಯವರಿಗೆ ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ

ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಬುರುಡೆ ಬಿಡ್ತಾರೆ

ಕಾಂಗ್ರೆಸ್ ಜನರ ಪ್ರಗತಿಗಾಗಿ ಹುಟ್ಟಿದ ಹೋರಾಟದ ಸಿದ್ಧಾಂತ ಮತ್ತು ಚಳವಳಿ

ನೆಹರೂ-ಇಂದಿರಾ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು: ಸಿ.ಎಂ.ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ: ಸಿ.ಎಂ

ಹಿಂದೂ ಬೇರೆ-ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ: ಸಿಎಂ ವ್ಯಂಗ್ಯ

ಬೆಂಗಳೂರು ಡಿ 28: ನೆಹರೂ-ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ 139 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ. ಪ್ರಧಾನಿ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿ. ಬ್ರಿಟಿಷರನ್ನು ಅಹಿಂಸೆ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು ಎಂದು ವಿವರಿಸಿದರು.

ಬಿಜೆಪಿ, ಜನ ಸಂಘ, RSS ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ RSS ಹುಟ್ಟಿತ್ತು‌. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಗೀತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದರು.

ಹಿಂದೂ ಬೇರೆ-ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಸಿಎಂ ವ್ಯಂಗ್ಯವಾಡಿದರು.

ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿ ಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.

ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

State

ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ: ಆರೋಪಿ ರನ್ಯಾರಾವ್‌ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Published

on

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಎ1 ಆರೋಪಿ ರನ್ಯಾರಾವ್‌ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ನ ಏಕಸದಸ್ಯ ಪೀಠವೂ ಆದೇಶ ಹೊರಡಿಸಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾರಾವ್‌ ಹಾಗೂ ಆಪ್ತ ತರುಣ್ ರಾಜ್ ಜಾಮೀನು ಕೋರಿ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್‌.26) ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠವೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.

ನಟಿ ರನ್ಯಾರಾವ್‌ ಅವರ ಜಾಮೀನು ಅರ್ಜಿ ಇಲ್ಲಿಯವರೆಗೆ 2 ಬಾರಿ ವಜಾ ಆಗಿದೆ. ಹೀಗಾಗಿ ಇನ್ನೂ ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗುತ್ತದೆ.

Continue Reading

State

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Published

on

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್‌ ಅವರು ನಿಧನರಾಗಿದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ ಎಂದಿದ್ದಾರೆ.

ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.

ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Continue Reading

State

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ಪ್ರಕರಣ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಆರ್‌.ಅಶೋಕ್‌

Published

on

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಏಪ್ರಿಲ್.23 ರಂದು, ರಾಜ್ಯಾದ್ಯಂತ ಹಲವಾರು ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಭಯಭೀತ ಧಾರ್ಮಿಕ ಚಿಹ್ನೆಗಳಾದ ಜನಿವಾರ (ಯಜ್ಞೋಪವೀತ), ಶಿವದಾರ ಇತ್ಯಾದಿಗಳನ್ನು ತೆಗೆದುಹಾಕಲು ಒತ್ತಾಯಿಸಿ ಕರ್ನಾಟಕ ಸರ್ಕಾರವು ವೈಯಕ್ತಿಕ ನಂಬಿಕೆಗಳ ಉಲ್ಲಂಘನೆಯ ಘಟನೆಗಳ ಬಗ್ಗೆ ನಾನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು ಎಂದು ನಾಗರಿಕರ, ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

Continue Reading

Trending

error: Content is protected !!