State
ಸಾಮೂಹಿಕ ಅತ್ಯಾಚಾರ ಪ್ರಕರಣಗಳ ತನಿಖೆಗೆ ಎಸ್‍ಐಟಿ ರಚಿಸಲು ಬಸವರಾಜ ಬೊಮ್ಮಾಯಿ ಆಗ್ರಹ
ಬೆಂಗಳೂರು: ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ; ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ಒತ್ತಾಯಿಸಿದರು.
3 ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದು ಕೇಳಿದರು. ನಾಳೆ ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ ಎಂದು ಪ್ರಕಟಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಮಕ್ಕಳು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಹೆಣ್ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಂಗಳೂರು ಒಂದರಲ್ಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಶೇ 30ರಷ್ಟು ಹೆಚ್ಚಾಗಿವೆ ಎಂದು ಆಕ್ಷೇಪಿಸಿದರು.

ಅತ್ಯಾಚಾರ, ಕಿರುಕುಳ, ಹಿಂಸಾಚಾರ ಹೆಚ್ಚಾಗಿದೆ. ಗ್ರಾಮಾಂತರದಲ್ಲೂ ಮಹಿಳೆಯರು ಸುರಕ್ಷಿತವಾಗಿಲ್ಲ. ಇಂಥ ಹಲವಾರು ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡಿದರೆ ಅವರ ಮೇಲೆ ಸರಕಾರದ ವಕ್ರದೃಷ್ಟಿ ಕಾಡುತ್ತಿದೆ ಎಂದು ವಿವರಿಸಿದರು.
ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗಲೇ ವಿಧಾನಸೌಧದ ಅತ್ಯಂತ ಹತ್ತಿರ ಇರುವ ಒಬ್ಬ ಹೆಣ್ಮಗಳನ್ನು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ್ದು ಈ ಸರಕಾರದ ಮತ್ತು ಪೊಲೀಸ್ ಇಲಾಖೆ ಮೇಲೆ ಭಯ ಇಲ್ಲದ್ದನ್ನು ತೋರಿಸಿತ್ತು. ಸಾರ್ವಜನಿಕರು ತಮ್ಮ ರಕ್ಷಣೆ ಬಗ್ಗೆ ಭಯಪಡುವ ಸ್ಥಿತಿ ಉಂಟಾಗಿತ್ತು. ಕೇವಲ ಆಸ್ಪತ್ರೆಗೆ ಹೋಗಿ ನೋಡಿದರೆÉÉ ಮುಗಿಯಿತೇ? ಸರಿಯಾದ ತನಿಖೆ ಆಗಿಲ್ಲ. ಹಲವರ ಬಂಧನ ನಡೆದಿಲ್ಲ. ದಲಿತ ಮಹಿಳೆಗೆ ಹೀಗಾದರೂ ಮುಖ್ಯಮಂತ್ರಿಗಳಿಂದ ಕ್ರಮ ಇಲ್ಲ ಎಂದು ದೂರಿದರು.
ಸಮುದಾಯ ನೋಡಿ ಕೇಸು ಹಾಕುವಂತೆ ಸ್ಟಾಂಡರ್ಡ್ ಇನ್‍ಸ್ಟ್ರಕ್ಷನ್ ಕೊಟ್ಟಿದ್ದೀರಾ ಎಂದು ಗೃಹ ಸಚಿವರನ್ನು ಪ್ರಶ್ನಿಸಿದರು. ಹಾವೇರಿಯಲ್ಲಿ ನಮ್ಮನ್ನು ಯಾರೂ ಮುಟ್ಟುವುದಿಲ್ಲ ಎಂಬ ಪರಿಸ್ಥಿತಿ ಕೆಲವು ವರ್ಗದ್ದು. ಹಲವೆಡೆ ನೈತಿಕ ಪೊಲೀಸ್‍ಗಿರಿ ನಡೆದಿದೆ. ಶಿರಸಿಯ ಒಬ್ಬ ಹೆಣ್ಮಗಳು ಮತ್ತು ಬೇಕಾದವರು ಹಾನಗಲ್‍ನಲ್ಲಿ ಹೋಟೆಲ್‍ನಲ್ಲಿ ಇದ್ದರೆ ಅಕ್ಕಿಆಲೂರಿನ ಯುವಕರು ಇಬ್ಬರನ್ನೂ ಥಳಿಸಿ ಅವಳ ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಇದನ್ನು ಮುಚ್ಚಿ ಹಾಕಲು ಮುಂದಾಗಿದ್ದರು ಎಂದು ತಿಳಿಸಿದರು.
ಪೊಲೀಸರು ಮೊಂಡುವಾದವನ್ನೇ ಮಾಡುತ್ತಿದ್ದರು. ವೈದ್ಯಕೀಯ ಪರೀಕ್ಷೆಗಾಗಿ ನಾನು ಒತ್ತಾಯಿಸಿದೆ. ಇವರು ಯಾರನ್ನು ರಕ್ಷಿಸಲು ಹೊರಟಿದ್ದರು? ಬೇರೆ ಕೋಮಿಗೊಂದು ನೀತಿ ಇದೆಯೇ? ಇದರ ಹಿಂದೆ ಯಾರ ಚಿತಾವಣೆ ಇದೆ? ಒತ್ತಡ ಯಾರದ್ದು ಎಂದು ಕೇಳಿದರು. ಅಲ್ಪಸಂಖ್ಯಾತ ಹೆಣ್ಮಗಳ ಮೇಲೆ ಅತ್ಯಾಚಾರ ಆಗಿದ್ದರೂ ಗೃಹ ಸಚಿವರು ಸಮರ್ಪಕ ಕ್ರಮಕ್ಕೆ ಮುಂದಾಗಿಲ್ಲ. ಪ್ರಭಾವಿಗಳ ಬಗ್ಗೆ ಇವರ ಕಾಳಜಿ ಇದೆ ಎಂದು ಟೀಕಿಸಿದರು.
ಗ್ರಾಮೀಣ ಪೊಲೀಸ್ ಸ್ಟೇಷನ್‍ಗಳು ಕಲೆಕ್ಷನ್ ಅಡ್ಡಾ ಆಗಿ ಪರಿವರ್ತನೆಗೊಂಡಿವೆ. ಕೆಲವೆಡೆ ಪೊಲೀಸ್ ಇನ್‍ಸ್ಪೆಕ್ಟರ್‍ಗಳು ಇಸ್ಪೇಟ್, ಮದ್ಯದ ದಂಧೆಗೆ ಪೊಲೀಸರೇ ಪ್ರೋತ್ಸಾಹ ಕೊಡುತ್ತಿದ್ದಾರೆ. ಕರ್ನಾಟಕವು ಜಂಗಲ್ ರಾಜ್ಯ ಆಗಿದೆ ಎಂದ ಅವರು, ಕಾಂಗ್ರೆಸ್ ಸ್ಥಳೀಯ ನಾಯಕರ ಬೆಂಬಲದಿಂದ ಪುಡಿ ರೌಡಿಗಳು ಮತ್ತೆ ಇಸ್ಪೇಟ್ ಕ್ಲಬ್, ಜೂಜು ಆರಂಭಿಸಿದ್ದಾರೆ ಎಂದರು.

ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ ಕೇಸಿಲ್ಲದಿದ್ದರೂ ಬಂಧಿಸಲಾಗಿದೆ. ವಿಪಕ್ಷ ನಾಯಕರನ್ನೂ ಬಂಧಿಸಿ ಕೇಸು ಹಾಕಿದ್ದಾರೆ. ಕೋಲಾರದಲ್ಲೂ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ 5 ಜನರಿಂದ ಅತ್ಯಾಚಾರ ಮಾಡಿದ್ದಾರೆ. ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವಿವರಿಸಿದರು. ಹಾವೇರಿಯಲ್ಲಿ ಇದೇ ಗ್ಯಾಂಗ್ ಅಲ್ಪಸಂಖ್ಯಾತ ಮಹಿಳೆ ಮೇಲೆ ಇನ್ನೊಂದು ಅತ್ಯಾಚಾರ ಮಾಡಿತ್ತು ಎಂದು ತಿಳಿಸಿದರು.
ಸಿದ್ದರಾಮಯ್ಯನವರು ಇಂಥ ವಿಚಾರದಲ್ಲಿ ಯಾಕೆ ಮಾತನಾಡುತ್ತಿಲ್ಲ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷ ಕಾನೂನಿನ ಮೇಲೆ ನಂಬಿಕೆ ಇಟ್ಟಿಲ್ಲ. ಪೊಲೀಸ್ ಸ್ಟೇಷನ್‍ಗಳ ಮೇಲೆ ಬೆಂಕಿ ಹಾಕಿದ ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದ ಬಂಧಿತ ಹಲವು ಆರೋಪಿಗಳು ಅಮಾಯಕರೆಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಇದು ವಿರೋಧಾಭಾಸವಲ್ಲವೇ? ಅಲ್ಪಸಂಖ್ಯಾತರ ತುಷ್ಟೀಕರಣ ಮೇರೆ ಮೀರಿದೆ ಎಂದು ಟೀಕಿಸಿದರು.
ರಾಜ್ಯದ ವಾಸ್ತವ ಸ್ಥಿತಿಯನ್ನು ಹಣಕಾಸು ಆಯೋಗದ ಮುಂದೆ ಹಿಂದಿನ ಸಿದ್ದರಾಮಯ್ಯರ ಸರಕಾರ ಇಟ್ಟಿರಲಿಲ್ಲ. ಈ ವಿಷಯದಲ್ಲಿ ಇವರ ವೈಫಲ್ಯವಿದೆ. 14ನೇ ಹಣಕಾಸಿಗಿಂತ ಇನ್ನೂ 1 ಲಕ್ಷ ಕೋಟಿ ಹೆಚ್ಚು ಹಣ ಬರಲಿದೆ. ನಿಗದಿತ ಕಾಲಾವಧಿ ಮುಗಿದಿಲ್ಲ. ಅಷ್ಟರೊಳಗೆ ಅನ್ಯಾಯ ಆಗಿದೆ ಎಂದರೆ ಹೇಗೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
State
ಕಮಿಷನ್‌ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದಲ್ಲಿಯೇ ಕಮಿಷನ್‌ಗಾಗಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಆಡಿಯೋ ವೈರಲ್ ಆದ ಬೆನ್ನಲ್ಲೆ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಬಿ.ಜಗನ್ನಾಥ್ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಟೆಂಡರ್ ಪ್ರಕ್ರಿಯೆ ಬಿಡ್ ಗಾಗಿ ಸಣ್ಣ ಗುತ್ತಿಗೆದಾರರಿಂದ 3 ಪರ್ಸೆಂಟ್ ವರೆಗೂ ಕಮಿಷನ್ ಗೆ ಬೇಡಿಕೆ ಇಡುತ್ತಿದ್ದರು ಎಂಬ ಆಂಶ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಜಗನ್ನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂಬ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
Politics
ವಿಬಿ ಜಿ ರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರೀ ಗದ್ದಲ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್‌ಜಿ ಕಾಯ್ದೆವಿಚಾರದ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದರಿಂದ ಸದನದಲ್ಲಿ ತೀವ್ರ ಗದ್ದಲ, ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.
ವಿಧಾನಸೌಧದಲ್ಲಿ ಇಂದು ಸರ್ಕಾರದ ನಿರ್ಣಯ ಓದಿದ ಸಿಎಂ, ಈ ಸದನ ವಿಬಿ-ಜಿರಾಮ್‌ಜಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತದೆ. ವಿಬಿ ಜಿ ರಾಮ್ ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ ಕಾಯ್ದೆ ಮೂಲ ಸ್ವರೂಪದಲ್ಲಿ ಮರು ಜಾರಿ ಮಾಡಬೇಕು. ವಿಬಿ ಜಿ ರಾಮ್ ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಮನರೇಗಾ ಸಂವಿಧಾನದ ಹಕ್ಕುಗಳನ್ನು ನೀಡುವ ಯೋಜನೆ. ಕೆಲಸದ ಹಕ್ಕು ಯೋಜನೆ ನೀಡುತ್ತಿದ್ದ ಯೋಜನೆ ಮನರೇಗಾ. ನರೇಗಾ ವಾಪಸ್ ಜಾರಿ, ವಿಬಿ ಜಿ ರಾಮ್ ಜಿ ರದ್ದಿಗೆ ಈ ನಿರ್ಣಯ ಮೂಲಕ ಈ ಸದನ ಕೇಂದ್ರಕ್ಕೆ ಆಗ್ರಹಿಸುತ್ತದೆ. ಈ ನಿರ್ಣಯವನ್ನು ಈ ಸದನ ನಿರ್ಣಯ ಅಂಗೀಕರಿಸುತ್ತದೆ ಎಂದು ಗದ್ದಲದ ಮಧ್ಯೆಯೇ ಸಿಎಂ ನಿರ್ಣಯ ಓದಿದರು.

ಇದೇ ವೇಳೆ ಈ ಸದನ ಅಲ್ಲ, ನಿಮ್ಮ ಸರ್ಕಾರ ವಿರೋಧಿಸುತ್ತದೆ ಎಂದು ಹೇಳಿ ಎಂದು ಅಶೋಕ್ ಒತ್ತಾಯಿಸಿದರು. ಆಗ ಈ ಸದನ ಈ ಸದನವೆಂದು ಒತ್ತಿ ಹೇಳಿ ವಿಪಕ್ಷಗಳಿಗೆ ಸಿಎಂ ಗುದ್ದು ನೀಡಿದರು. ಇದಕ್ಕೆ ಸರ್ಕಾರ ಸರ್ಕಾರ ಈ ಸದನ ಅಲ್ಲವೆಂದು ವಿಪಕ್ಷ ಸದಸ್ಯರು ಟಾಂಗ್ ನೀಡಿದರು.
ವಿಪಕ್ಷಗಳಿಂದ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಮುಂದುವರೆಯಿತು. ಆರ್.ಬಿ. ತಿಮ್ಮಾಪೂರ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಸಿಎಂ ನಿರ್ಣಯ ಮಂಡನೆಗೆ ವಿಪಕ್ಷಗಳ ಸದಸ್ಯರು ಎದ್ದು ನಿಂತು ಅಡ್ಡಿ ಪಡಿಸಿದರು. ಈ ವೇಳೆ ವಿಪಕ್ಷಗಳ ಮೇಲೆ ಸಿಎಂ ಗರಂ ಆದರು. ಅಧ್ಯಕ್ಷರೇ ಅವರನ್ನು ಕೂರಿಸಿ, ಯಾರು ನಿಮ್ಮ ಮಾತು ಕೇಳೋದಿಲ್ಲವೋ ಅವರನ್ನು ಹೊರಗೆ ಹಾಕಿ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಸದನದಲ್ಲಿ ಗದ್ದಲ, ಕೋಲಾಹಲ, ಪರಸ್ಪರ ಆರೋಪ, ವಾಕ್ಸಮರಗಳಿಂದ ಗೊಂದಲದ ಗೂಡಾಯ್ತು. ಇದು ಲೂಟಿ ಸರ್ಕಾರವೆಂದು ಘೋಷಣೆ ವಿಪಕ್ಷ ಸದಸ್ಯರು ಘೋಷಣೆ ಕೂಗುತ್ತಲೇ ಇದ್ದರು. ವಿಪಕ್ಷಗಳ ನಡೆಗೆ ಸಿಎಂ ತೀವ್ರ ಖಂಡಿಸಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು.
ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆ ಸದನವನ್ನೇ ಸ್ಪೀಕರ್ ಮುಂದೂಡಬೇಕಾಯಿತು. ಭೋಜನದ ನಂತರ ಕಲಾಪ ಶುರುವಾದರೂ ಮತ್ತೆ ಸದನದಲ್ಲಿ ಗದ್ದಲ, ಜಟಾಪಟಿ ಮುಂದುವರೆಯಿತು.
Politics
ಪ್ರಧಾನಿ ಮೋದಿ-ಟ್ರಂಪ್ ನಡುವಿನ ಒಪ್ಪಂದ ಮಹತ್ವದ ಮೈಲಿಗಲ್ಲು: ಬಸವರಾಜ ಬೊಮ್ಮಾಯಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವಿನ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರು, ಸಣ್ಣ ಕೈಗಾರಿಕೆಗಳು ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
-
National23 hours agoದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ: ವಾಟ್ಸಪ್ಗೆ ಸುಪ್ರೀಂ ಎಚ್ಚರಿಕೆ
-
Hassan17 hours agoಎಸ್ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್ಡಿಪಿಐ ಮುಖಂಡ
-
Special17 hours agoಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ
-
State18 hours agoಕಮಿಷನ್‌ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
-
Kodagu19 hours agoಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
-
Manglore23 hours agoಬೆಳ್ತಂಗಡಿ ಮೂಲದ ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್ಡಿಎಂ ಆಸ್ಪತ್ರೆಗೆ ಭೇಟಿ
-
Hassan19 hours agoಪರೀಕ್ಷೆ ಎಂಬ ಭಯವನ್ನು ಮನಸ್ಸಿನಿಂದ ಹೋಗಲಾಡಿಸಬೇಕು: ಕೆ. ಟಿ. ಮೇಘನಾ
-
Hassan19 hours agoಗ್ರಾಮದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಕುಡಿಯುವ ನೀರಿಗೆ ಸಮಸ್ಯೆ: ತಾ.ಪಂ.ಕಚೇರಿ ಮುಂದೆ ಪ್ರತಿಭಟನೆ
