Connect with us

Mandya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಸರ್ಕಾರ: ಡಾ.ಇಂದ್ರೇಶ್

Published

on

ಮಂಡ್ಯ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ, ಮಹಿಳೆಯರ, ದಲಿತರ ಹಾಗೂ ಹಿಂದೂ ವಿರೋಧಿ ಸರ್ಕಾರವಾಗಿದ್ದು ಒಟ್ಟಾರೆ ಇದೊಂದು ಜನ ವಿರೋಧಿ ಸರ್ಕಾರ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಇಂದ್ರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿ ಆಡಳಿತ ಎಲ್ಲ ರಂಗಗಳಲ್ಲೂ ವೈಫಲ್ಯವಾಗಿದೆ. ವಿದ್ಯುತ್ ದರ ಏರಿಕೆ, ಹಾಲಿನ ದರ ಏರಿಕೆ ಮಾತ್ರವಲ್ಲದೆ, ಅಬಕಾರಿ ಸುಂಕ, ಆಸ್ತಿ ನೋಂದಣಿ ದರ, ವಾಹನ ನೋಂದಣಿ ದರವನ್ನು ಹೆಚ್ಚಿಸಿ ಜನ ವಿರೋಧಿ ಸರ್ಕಾರವಾಗಿದೆ ಎಂದರು.

ಇಡೀ ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದರೂ ರಾಜ್ಯ ಕಾಂಗ್ರೆಸ್ ಸರಕಾರ ಬರಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ. ೮೭೫ ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಜನರು ಗುಳೆ ಹೋಗುತ್ತಿದ್ದಾರೆ. ಆದರೆ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿಲ್ಲ ಎಂದರು.

ದಲಿತ ವಿರೋಧಿ ಸರ್ಕಾರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಯಲು ಬಿಟ್ಟು ಕಾವೇರಿ ಕೊಳ್ಳದ ರೈತರ ಬದುಕನ್ನು ದುರ್ಬರಗೊಳಿಸಿ, ಮೈಸೂರು ಬೆಂಗಳೂರಿನ ಜನರಿಗೆ ಕುಡಿಯುವ ನೀರಿಲ್ಲದೆ ಒದ್ದಾಡುವಂತೆ ಮಾಡಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಅಭಿವೃದ್ಧಿಗೆ ಸಂಬಂಧಿಸಿದ (ಎಸ್‌ಸಿಎಸ್‌ಪಿ, ಎಸ್‌ಟಿಪಿ) ೧೧ ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ಬೇರೆ ಉದ್ದೇಶಕ್ಕೆ ಗ್ಯಾರಂಟಿಗಳಿಗೆ ಬಳಸಿಕೊಂಡಿದೆ. ದಲಿತರು, ಶೋಷಿತ ವರ್ಗದವರ ಕುರಿತು ಸಿದ್ದರಾಮಯ್ಯನವರ ಮೊಸಳೆಕಣ್ಣೀರಿಗೆ ಇದು ಸಾಕ್ಷಿ ಶೋಷಿತ, ಪೀಡಿತ, ವಂಚಿತ ತಳ ಸಮುದಾಯಗಳ ಮೇಲಿನ ನಿರಂತರ ಅನ್ಯಾಯ ಮುಂದುವರೆದಿದೆ. ಇದು ದಲಿತ ವಿರೋಧಿ ಸರ್ಕಾರ ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇದಕ್ಕೆ ಸಾಕ್ಷಿ ನಿನ್ನೆ ವಿಧಾನಸೌಧದ ಆವರಣದಲ್ಲಿ ಶತ್ರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಇವೆಲ್ಲವೂ ಕಾಂಗ್ರೆಸ್ಸಿನ ಓಲೈಕೆ ರಾಜಕಾರಣದ ಫಲ. ನಾಸಿರ್ ರಾಜ್ಯಸಭೆಗೆ ಆಯ್ಕೆಯಾದ ಕ್ಷಣವೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೇಳಿದ್ದು ಅತ್ಯಂತ ಕೆಟ್ಟ ಬೆಳವಣಿಗೆ.ಕಾಂಗ್ರೆಸ್ ಎಂದೆಂದಿಗೂ ದೇಶದ್ರೋಹಿಗಳ ಪರವಾಗಿಯೇ ಇದೆ ಎಂದರು.

ಕಿಸಾನ್ ಸಮ್ಮಾನ್ ಯೋಜನೆಯಡಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ೬ ಸಾವಿರ ನೀಡುತ್ತಿದೆ. ನಮ್ಮ ರಾಜ್ಯದಲ್ಲಿ ಅಂದಿನ ಯಡಿಯೂರಪ್ಪ ಅವರ ಸರಕಾರ ಆರಂಭಿಸಿದ್ದ ಹೆಚ್ಚುವರಿ ೪ ಸಾವಿರ ನೀಡುವ ವ್ಯವಸ್ಥೆಯನ್ನು ರಾಜ್ಯ ಕಾಂಗ್ರೆಸ್ ಸರಕಾರ ನಿಲ್ಲಿಸಿದೆ ಎಂದು ದೂರಿದರು.

ರೈಲ್ವೆ ಅಭಿವೃದ್ಧಿಯಲ್ಲಿ ಮೈಲುಗಲ್ಲು: ಮನೆಮನೆಗೆ ಶುದ್ಧ ಕುಡಿಯುವ ನೀರು (ಜಲ್ ಜೀವನ್), ಆಯುಷ್ಮಾನ್ ಕಾರ್ಡ್, ಜನ್‌ಧನ್ ಯೋಜನೆ, ೧೦ ಕೋಟಿಗೂ ಹೆಚ್ಚು ಶೌಚಾಲಯಗಳ ನಿರ್ಮಾಣ- ಇವೆಲ್ಲವೂ ಮೋದಿಯವರ ಸರ್ಕಾರದ ಮಹತ್ವದ ಸಾಧನೆಗಳು. ಇತ್ತೀಚಿಗೆ ಪ್ರಧಾನಿ ಮೋದಿಯವರು, ದೇಶದಾದ್ಯಂತ ಒಟ್ಟು ೪೧,೦೦೦ ಕೋಟಿ ರೂ. ವೆಚ್ಚದ ಎರಡು ಸಾವಿರಕ್ಕೂ ಅಧಿಕ ರೈಲ್ವೆ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಕರ್ನಾಟಕದ ೩೧ ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣಗಳಾಗಿ ಪರಿವರ್ತಿಸಲು ಚಾಲನೆ ನೀಡಿದ್ದಾರೆ. ರೈಲ್ವೆ ಅಭಿವೃದ್ಧಿಯಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಲಿದೆ ಎಂದರು.

ಭಾರತ್ ಬ್ರಾಂಡ್ ಅಡಿಯಲ್ಲಿ ಭಾರತ್ ಅಕ್ಕಿ ಕೆಜಿಗೆ ೨೯ ರೂ.ಗಳಂತೆ ದೇಶಾದ್ಯಂತ ಬಡವರಿಗೆ ನೀಡಲಾಗುತ್ತಿದೆ. ಕೆ.ಜಿಗೆ ಕೇವಲ ೨೭.೫೦ ರೂ. ದರದಲ್ಲಿ ಗೋಧಿ ಹಿಟ್ಟನ್ನು ವಿತರಿಸುತ್ತಿದೆ ‘ಭಾರತ್ ದಾಲ್’ ಎಂಬ ಬ್ರಾಂಡ್ ಹೆಸರಿನಲ್ಲಿ ಸಬ್ಸಿಡಿ ದರದಲ್ಲಿ ಕಡಲೆಬೇಳೆ ಮಾರಾಟವನ್ನು ಕೂಡ ಪ್ರಾರಂಭಿಸಿದೆ ಎಂದು ಪ್ರಶಂಸಿಸಿದರು.

ಹಿಂದೂ ವಿರೋಧಿ ಸರ್ಕಾರ: ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆಗೆ ಗೈರುಹಾಜರಿ, ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ ಸುಳ್ಳು ಕೇಸು ಹಾಕಿ ಜೈಲಿಗೆ ಕಳಿಸಿದ್ದು, ಮಂಡ್ಯದ ಕೆರೆಗೋಡಿನಲ್ಲಿ ಹನುಮಧ್ವಜ ಹಾರಿಸಿದ್ದಕ್ಕೆ ಅವರ ಮೇಲೆ ಕ್ರಮ, ಹಿಂದೂ ದೇವಸ್ಥಾನಗಳ ಹುಂಡಿಯಿಂದ ಹಣ ಕಿತ್ತುಕೊಂಡು ಅದನ್ನು ಅನ್ಯ ಉದ್ದೇಶಕ್ಕೆ ಬಳಸುವ ಹುನ್ನಾರ ಇವೆಲ್ಲವೂ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯದರ್ಶಿ ಪರಮಾನಂದ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆನಂದ್, ಮಾಧ್ಯಮ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ಸಂಚಾಲಕ ನಾಗಾನಂದ್, ಬಾಲು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!