Connect with us

Hassan

ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದವರ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹೆಚ್.ಎಂ. ಶಿವಣ್ಣ

Published

on

ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಅಂಗವಾಗಿ ಮಂಗಳವಾರದಂದು ಸರಿಯಾಗಿ ಬೆಳಿಗ್ಗೆ ೧೧ ಗಂಟೆಗೆ ಏರ್ಪಡಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅಗ್ನಿಶಾಮಕದಳವು ಸೈರನ್ ಧ್ವನಿ ಕೇಳಿದ ಕುಡಲೇ ಎರಡು ನಿಮಿಷ ಮೌನ ಆಚರಿಸುವುದರ ಮೂಲಕ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.

ನಂತರ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ. ಶಿವಣ್ಣ ಅವರು ಮಾಧ್ಯಮದೊಂದಿಗೆ ಮಾತನಾಡಿ, ದಿನವನ್ನು ಹುತಾತ್ಮ ದಿನಾಚರಣೆ ಇಲ್ಲವೇ ಸರ್ವೋದಯ ದಿನಾಚರಣೆಯನ್ನು ಇಡೀ ದೇಶದಾಧ್ಯಂತ ಆಚರಿಸಲಾಗುತ್ತಿದೆ. ೧೯೪೭ ಆಗಸ್ಟ್ ೧೫ ರಂದು ದೇಶಕ್ಕೆ ಸ್ವಾತಂತ್ರ ಬಂದಿದ್ದು, ನಂತರ ಗಾಂಧೀಜಿಯವರು ಕಾರಣಂತರದಿಂದ ಉಳಿಯಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೆ ಪಣಕ್ಕೆ ಇಟ್ಟು ತ್ಯಾಗ ಬಲಿದಾನ ಅರ್ಪಿಸುವುದರ ಮೂಲಕ ಹುತಾತ್ಮರಾದವರನ್ನು ಈ ವೇಳೆ ನೆನಪಿಸಿಕೊಳ್ಳುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಈ ದಿನ ಎಂದರೇ ಜನರಿಗೆ ನೋವನ್ನು ತಂದಂತಹ ದಿನವಾಗಿದೆ. ೧೯೪೮ ಜನವರಿ ೩೦ ರಂದು ೭೬ ವರ್ಷಗಳ ಹಿಂದೆ ಮಹಾತ್ಮ ಗಾಂಧಿಜಿಯವರು ದೆಹಲಿ ಬಿರ್ಲಾಭವನದಲ್ಲಿ ಸಂಜೆ ೫:೩೦ರ ಸಮಯದಲ್ಲಿ ಪ್ರಾರ್ಥನೆಗೆ ಹೋಗುತ್ತಾ ಇದ್ದರು. ಸಾವಿರಾರು ಜನ ಗಾಂಧೀಜಿಯ ಅನ್ವಯಿಗಳು ಜನರು ಎಲ್ಲ ಪ್ರಾರ್ಥನೆಗೆ ಸಿದ್ಧವಾಗಿದ್ದರು. ಅದೇ ಸಮಯದಲ್ಲಿ ನಾತುರಾಮ್ ಗೋಡ್ಸೆ ಎಂಬ ವ್ಯಕ್ತಿ ಗಾಂಧೀಜಿಯವರ ಮೇಲೆ ಗುಂಡಿನ ಸುರಿಮಲೆಯನ್ನೇ ಸುರಿಸಿದಾಗ ಗಾಂಧೀಜಿಯವರು ಕೊನೆ ಉಸಿರು ಎಳೆಯುವ ಸಮಯದಲ್ಲಿ ಹರೇ ರಾಮ್ ಎಂದು ಹೇಳುತ್ತಾ ಇದ್ದರು. ಸ್ವತಂತ್ರ ಸಂಗ್ರಮಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಂತ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ ಎಂಬ ನೋವು ಕಾಡುತ್ತಾ ಇದೆ ಎಂದರು. ಗಾಂಧೀಜಿಯವರ ವಿಚಾರಧಾರೆಗಳು ಎಂದೆಂದಿಗೂ ಪ್ರಸ್ತುತ ಗಾಂಧೀಜಿಯ ವಿಚಾರಧಾರೆಗಳು ಇವತ್ತಿನ ಯುವಕರಿಗೆ ಮಾಧರಿ ಆದರ ಸ್ತಂಭವಾಗಿದೆ ಎಂದು ಹೇಳಿದರು. ಇದೆ ವೇಳೆ ಅವರು ಮಹಾತ್ಮಾ ಗಾಂಧೀಜಿಯವರ ಜೀವನ ಮೌಲ್ಯಗಳ ಬಗ್ಗೆ ತಿಳಿಸಿದರು.

ಇದೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಶಾಂತಲಾ, ತಹಸೀಲ್ದಾರ್ ಶ್ವೇತಾ, ಉಪವಿಭಾಗಾಧಿಕಾರಿ ಮಾರುತಿ, ಹಾಗೂ ಕಂದಾಯ ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿಗಳು ಜಿಲ್ಲಾಧಿಕಾರಿಗಳ ಹಾಲ್ ನಲ್ಲಿ ಎರಡು ನಿಮಿಷ ಮೌನ ಆಚರಿಸಿದರೇ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೊರ ಭಾಗದಲ್ಲಿ ನಿಂತು ಮೌನ ಆಚರಿಸಿ ಗೌರವ ಸಲ್ಲಿಸಿದರು.

Continue Reading
Click to comment

Leave a Reply

Your email address will not be published. Required fields are marked *

Hassan

ಛತ್ರಪತಿ ಶಿವಾಜಿ ತತ್ವ ಆದರ್ಶ ಅನುಸರಿಸಿ: ಸಂಸದ ಶ್ರೇಯಸ್ ಪಟೇಲ್

Published

on

ಹಾಸನ : ಇಡೀ ದೇಶಕ್ಕೆ ಮಾದರಿಯಾದ ಛತ್ರಪತಿ ಶಿವಾಜಿ ಮಹಾರಾಜರ ತತ್ವ ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಕರೆ ನೀಡಿದರು.

ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭಾನುವಾರದಂದು ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಾಜಿ ಅವರ ಧೈರ್ಯ, ಶೌರ್ಯ, ನೇರ ನುಡಿಯನ್ನು ಎಲ್ಲರೂ ಮೆಚ್ಚಲೇಬೇಕು. ಶಿವಾಜಿ ಅವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಇಡೀ ದೇಶಕ್ಕೆ ಮಾದರಿಯಾದ ಕ್ರಾಂತಿವೀರರು. ಮುಂದಿನ ಪೀಳಿಗೆಯವರು, ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ ಎಂದು ಹೇಳಿದರು.

ಬೆಂಗಳೂರಿನ ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ ಮಾತನಾಡಿ, ಛತ್ರಪತಿ ಶಿವಾಜಿಯವರು ಕೇವಲ ಮರಾಠ ಸಮಾಜಕ್ಕೆ ಸೀಮಿತವಲ್ಲ, ಇಡೀ ವಿಶ್ವಕ್ಕೆ ಆದರ್ಶ ಪುರುಷರಾಗಿದ್ದಾರೆ. ಶಿವಾಜಿ ರಾಷ್ಟ್ರ ನಾಯಕ, ಸ್ವರಾಜ್ಯ ಸ್ಥಾಪಕರಾಗಿದ್ದಾರೆ. ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ಆದರ್ಶ ಕೊಟ್ಟಿರುವ ಮಹಾಪುರುಷರಲ್ಲಿ ಶಿವಾಜಿ ಅವರೂ ಒಬ್ಬರು. ಶಿವಾಜಿವನ್ನು ನಾಲ್ಕು ಗೋಡೆಗೆ ಸೀಮಿತಗೊಳಿಸದೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಹೇಳಿದರು.

ಶಾಸಕ ಹೆಚ್.ಪಿ. ಸ್ವರೂಪ್ ಮಾತನಾಡಿ, ಶಿವಾಜಿಯವರು ವೀರ ಯೋಧರಾಗಿದ್ದು, ವಿಶ್ವ ಪ್ರಸಿದ್ಧರಾಗಿದ್ದಾರೆ. ಶಿವಾಜಿ ಅವರ ಪುತ್ತಳಿಯನ್ನು ಹಾಸನದಲ್ಲಿ ಶೀಘ್ರದಲ್ಲೇ ಅನಾವರಣ ಮಾಡೋಣ ಹಾಗೂ ಮರಾಠ ಸಮುದಾಯದ ಮಕ್ಕಳಿಗೆ ವಸತಿ ನಿಲಯವನ್ನು ನಿರ್ಮಾಣ ಮಾಡಿಕೊಡುವುದರ ಕುರಿತು ನೀವು ಕೂಡ ಮನವಿ ಮಾಡಿದ್ದೀರಿ ಅದನ್ನು ಶೀಘ್ರದಲ್ಲೇ ಶಾಸಕರ ನಿಧಿಯಿಂದ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮೊದಲು ೩೯೮ನೇ ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಅಂಗವಾಗಿ ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪ, ಅಗ್ರಹಾರ, ಹಾಸನದಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಇಲ್ಲಿಂದ ಮೆರವಣಿಗೆ ಹೊರಟು ಹಳೆ ಬಸ್ ಸ್ಟ್ಯಾಂಡ್ ರಸ್ತೆ ಮಾರ್ಗವಾಗಿ ಕಲಾಭವನವರೆಗೆ ಮೆರವಣಿಗೆ ನಡೆಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಚ್.ಪಿ. ತಾರಾನಾಥ್, ಹಾಸನ ಜಿಲ್ಲಾ ನೌಕರರ ಸಂಘದ ಗೌವಾಧ್ಯಕ್ಷರಾದ ಈ. ಕೃಷ್ಣೇಗೌಡ, ವಕೀಲರಾದ ವಿಜಯಕುಮಾರ್ ನಾರ್ವೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಹಾಸನ ಜಿಲ್ಲಾಧ್ಯಕ್ಷರಾದ ಎನ್ ಲೀಲಾಕುಮಾರ್, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎ.ವಿ. ರುದ್ರಪ್ಪಾಜಿರಾವ್ ಫೋರ್ಪಡೆ, ಗೌರವಾಧ್ಯಕ್ಷ ಹೆಚ್.ಜೆ. ತುಳಜಿರಾವ್ ಠಾಣ್ಗೆ, ಖಜಾಂಚಿ ಪ್ರಕಾಶ್, ನಿರ್ದೇಶಕ ಸುರೇಶ್ ಇತರರು ಉಪಸ್ಥಿತರಿದ್ದರು. ಯದೀಶ್ ಅವರು ಕಾರ್ಯಕ್ರಮ ನಿರೂಪಿಸಿದರು.

Continue Reading

Hassan

ಏ.12, 13ರಂದು ಹಾಸನದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

Published

on

ಹಾಸನ: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಸೂಚನೆಯಂತೆ ಏಪ್ರಿಲ್ 12 ಮತ್ತು 13 ರಂದು ನಗರದ ಸರಕಾರಿ ಕಲಾ ಕಾಲೇಜು ಮತ್ತು ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಮೆಂಟ್ ನಡೆಸಲು ಹಾಸನ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಭೆ ನಡೆಸಿ ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಮಾತನಾಡಿ, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಹಾಸನದಲ್ಲಿ ಆಯೋಜಿಸಲು ತೀರ್ಮಾನ ಮಾಡಲಾಗಿದ್ದು, ಕಳೆದ ವರ್ಷ ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಬಹಳ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ಅದಕ್ಕಿಂತ ಬಿನ್ನವಾಗಿ ಇಲ್ಲಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲು ಆಲೂಚನೆ ಇಟ್ಟುಕೊಂಡು ನಿರ್ಧರಿಸಲಾಗಿದೆ. ಕೊಪ್ಪಳದಲ್ಲಿ ನಡೆದ ಸಮ್ಮೇಳನದಲ್ಲಿ ಮದನ್ ಗೌಡರು ತಿಳಿಸಿದ್ದರು. ಏಪ್ರಿಲ್ ೧೨ ಮತ್ತು ೧೩ನೇ ದಿನಾಂಕದಂದು ಹಾಸನದಲ್ಲಿ ಏರ್ಪಡು ಮಾಡಲು ಭಾನುವಾರದಂದು ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.

ಯಾರು ಪತ್ರಕರ್ತರ ಸಂಘದ ಸದಸ್ಯರಾಗಿದ್ದಾರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ತಂಡ ಭಾಗವಹಿಸಲು ಅವಕಾಶ ಇರುತ್ತದೆ. ಪ್ರತಿಯೊಬ್ಬರ ಐಡಿ ಕಾರ್ಡ್ ಪರೀಕ್ಷೆ ಮಾಡಲಾಗುದು. ಹೊರ ಜಿಲ್ಲೆಯಿಂದ ಬರುವ ಪತ್ರಕರ್ತ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕ್ರೀಡಾಕೂಟ ಯಶಸ್ವಿಗೆ ಜಿಲ್ಲಾ ಸಮಿತಿ, ಉಪ ಸಮಿತಿ ಮಾಡಿಕೊಂಡು ಆವರವರ ಜವಬ್ಧಾರಿಯನ್ನು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಹಿಸಿಕೊಡಲಿದೆ. ಪ್ರಾರಂಭದ ದಿನದಲ್ಲಿ ಮೊದಲ ಆಟ ಸೆಲೆಬ್ರೆಟಿ ಕ್ರಿಕೆಟ್ ನಡೆಯಲಿದೆ. ಮಂಗಳೂರಿನಲ್ಲಿಯೂ ಕೂಡ ಸೆಲಬ್ರಿಟಿ ಜನಪ್ರತಿನಿಧಿಗಳಿಂದ ಆಟೋಟ ನಡೆದಿತ್ತು. ಒಟ್ಟಾರೆ ರಾಜ್ಯ ಮಟ್ಟದ ಈ ಕ್ರಿಕೆಟ್ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿ ಮನವಿ ಮಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂರ್ಘದ ಅಧ್ಯಕ್ಷ ಕೆ.ಹೆಚ್. ವೇಣುಕುಮಾರ್ ಮಾತನಾಡಿ, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಕ್ರಿಕೆಟ್ ಕ್ರೀಡಾಪಟುಗಳಿಗೆ ವಸತಿ ಸೌಲಭ್ಯ, ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ. ಕ್ರಿಕೆಟ್ ಪಂದ್ಯಾವಳಿಗೆ ವಿಶೇಷವಾಗಿ ರಾಜ್ಯ ಸಭಾಪತಿ ಯೂ.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಆಗಮಿಸಲಿದ್ದಾರೆ. .

ಸಭೆಯಲ್ಲಿ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ಹೆಚ್.ಬಿ. ಮದನ್ ಗೌಡ, ಮಾಜಿ ಅಧ್ಯಕ್ಷರಾದ ಮಂಜುನಾಥ್, ರವಿನಾಕಲಗೂಡು, ಬಿ.ಆರ್. ಉದಯಕುಮಾರ್, ಪ್ರಸನ್ನಕುಮಾರ್, ಕಾರ್ಯದರ್ಶಿ .ಪಿ.ಎ. ಶ್ರೀನಿವಾಸ್, ಕುಮಾರ್, ನಟರಾಜು, ಜಿ. ಪ್ರಕಾಶ್, ಹೆತ್ತೂರ್ ನಾಗರಾಜು, ಜ್ಞಾನೇಶ್, ಕುಶ್ವಂತ್, ಕೃಷ್ಣ, ನಾಗರಾಜು, ಮಂಜು, ಮೆಹಾಬೂಬ್, ದಯಾನಂದ್, ಶರತ್ ಇತರರು ಉಪಸ್ಥಿತರಿದ್ದರು.

Continue Reading

Hassan

ಇನ್ನು 15 ದಿನದಲ್ಲಿ ಎಲ್ಲಾ ಶಾಸಕರ ಜೊತೆ ವಿವಿ ಉಳಿಸಿ ಹೋರಾಟ ಸಮಿತಿಯಿಂದ ಸಿಎಂ ಭೇಟಿ: ಸಂಸದ ಶ್ರೇಯಸ್ ಪಟೇಲ್

Published

on

ಹಾಸನ: ಪಕ್ಷ ಭೇದ ಮರೆತು ಪ್ರಾಮಾಣಿಕವಾಗಿ ನಿಮ್ಮ ಜೊತೆ ಹಾಸನ ವಿವಿ ಉಳಿಸುವ ಕೆಲಸವನ್ನು ಮಾಡಲಾಗುವುದು. ಎಲ್ಲಾ ಶಾಸಕರ ಒಟ್ಟುಗೂಡಿ, ನಮ್ಮ ಜೊತೆ ಸಮಿತಿಯಿಂದ 15 ಜನರ ತಂಡ ಈ ವಾರದಲ್ಲಿ ದಿನ ನಿಗಧಿ ಮಾಡಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡುವ ಕೆಲಸ ಮಾಡಿ ಗಮನ ಸೆಳೆಯಲಾಗುವುದು ಎಂದು ಸಂಸದ ಶ್ರೇಯಸ್. ಎಂ. ಪಟೇಲ್ ಭರವಸೆ ನೀಡಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಾಸನ ವಿಶ್ವವಿದ್ಯಾಲಯ ಉಳಿಸಿ ಬೆಳೆಸಲು ಭಾನುವಾರ ಕರೆಯಲಾಗಿದ್ದ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸದ ಶ್ರೇಯಸ್.ಎಂ. ಪಟೇಲ್ ಮಾತನಾಡಿ, ವಿಶ್ವ ವಿದ್ಯಾಲಯದ ಕುರಿತು ದುಂಡು ಮೇಜಿನ ಸಭೆಯಲ್ಲಿ ಮೌಲ್ಯಾಧರಿತ ಚರ್ಚೆಗಳು ನಡೆದಿದ್ದು, ಅಭಿವೃದ್ಧಿ ಮತ್ತು ಯೋಗಕ್ಷೇಮ ಬಂದಾಗ ಪಕ್ಷ ಮರೆತು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕಾಗುತ್ತದೆ. ಎಲ್ಲಾರ ಪರ ನಿಂತು ಕೊಳ್ಳುವ ಕೆಲಸ ಮಾಡಲಾಗುವುದು ಎಂದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಲಾಗುವುದು. ಸಮಿತಿ ವರದಿ ಕೂಡ ಇಲ್ಲಿವರೆಗೂ ಬಂದಿರುವುದಿಲ್ಲ. ವಿಶ್ವವಿದ್ಯಾಲಯವನ್ನು ಮುಚ್ಚುವ ನಿರ್ಧಾರವನ್ನು ಇಲ್ಲಿವರೆಗೂ ತೆಗೆದುಕೊಂಡಿರುವುದಿಲ್ಲ. ಯಾರು ಗಾಬರಿ ಪಡಬಾರದೆಂದು ಶಿಕ್ಷಣ ಸಚಿವರು ಹೇಳಿದ್ದು, ಈಗ ಅಧಿವೇಶನ ನಡೆಯುತ್ತಿರುವುದರಿಂದ ಎಲ್ಲಾ ಶಾಸಕರು ಒಳಗೊಂಡಂತೆ ಸಮಿತಿ ರಚಿಸಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡಿ ಆಗಬಹುದಾದಂತಹ ಬೇಡಿಕೆಯನ್ನು ಮುಂದಿಟ್ಟು ಮನವಿಯನ್ನು ಮಾಡೋಣ ಎಂದರು.

ಶಾಸಕ ಎ. ಮಂಜು ಮಾತನಾಡಿ, ವಿಶ್ವವಿದ್ಯಾಲಯ ಇಲ್ಲೆ ಉಳಿಸುವ ನಿಟ್ಟಿನಲ್ಲಿ ಆಗಬೇಕಾದ ಕೆಲಸ ತಡವಾಗಿದೆ ಎಂಬುದು ನನ್ನ ಭಾವನೆ. ಕಾಲೇಜುಗಳನ್ನು ಯಾವ ಸರಕಾರ ಬಂದರೂ ಮುಚ್ಚುವುದಕ್ಕೆ ಆಗುವುದಿಲ್ಲ. ಆದರೇ ವಿಲೀನಗೊಳಿಸಲಾಗುತ್ತದೆ. ಹಳ್ಳಿ ಸೇರಿದಂತೆ ಎಲ್ಲಾ ಮಕ್ಕಳಿಗೂ ವಿಧ್ಯೆ ಸಿಗಬೇಕಾದರೇ ವಿವಿಗಳು ಆಯಾ ಜಿಲ್ಲೆ ಇರಬೇಕು. ಆಗ ಮಾತ್ರ ಹೆಚ್ಚಿನ ಅವಕಾಶಗಳು ದೊರೆಯುತ್ತದೆ. ವಿಶ್ವವಿದ್ಯಾಲಯದ ಅಭಿವೃದ್ಧಿ ಆಗಬೇಕು. ಹೆಚ್ಚಿನ ಹೋರಾಟಕ್ಕೆ ಮುಂದಾದ ಜಿಲ್ಲೆ ಇದ್ದರೇ ಹಾಸನ. ಈ ಹೋರಾಟದಲ್ಲಿ ಯಾವ ರಾಜಕಾರಣ ಆಗಬಾರದು. ವಿವಿ ರಾಜ್ಯ ಸರಕಾರದಿಂದ ಮಾತ್ರ ನಡೆಯುವುದಿಲ್ಲ. ಕೇಂದ್ರದ ಯುಜಿಸಿ ಸ್ಕೇಲ್ ಕೂಡ ಇದೆ ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ ಮಾತನಾಡಿ, ವಿದ್ಯಾರ್ಥಿಗಳ ಮೊದಲ ಆಯ್ಕೆ ಸರಕಾರ ಶಿಕ್ಷಣ ಸಂಸ್ಥೆಗಳು. ಇಂಜಿನಿಯರ್, ವೈದ್ಯಕೀಯ ಯಾವುದೇ ಆಗಿರಲಿ ಸರಕಾರಿ ಸಂಸ್ಥೆಗಳಿಗೆ ಬರಲು ಮುಂದಾಗುತ್ತಾರೆ. ಸೀಟು ಇಲ್ಲದಾಗ ಅನಿವಾರ್ಯವಾಗಿ ಖಾಸಗೀ ಕಡೆ ಹೋಗುತ್ತಾರೆ. ಏನಾದರೂ ಈ ರೀತಿ ತಾತ್ಸರ ಮಾಡಿದರೇ ಮುಂದಿನ ದಿನಗಳಲ್ಲಿ ಖಾಸಗೀ ಶಿಕ್ಷಣ ಸಂಸ್ಥೆಯವರು ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಮುಂದಾದರೇ ಆ ಖಾಸಗೀಯವರು ಮಾಡಿದ ನಿರ್ಣಯದಂತೆ ಉನ್ನತ ಶಿಕ್ಷಣ ಸಾಗುತ್ತದೆ ಎಂದು ಎಚ್ಚರಿಸಿದರು.

ಇದರಿಂದ ಯಾವ ಯಾವ ಸಂಸ್ಥೆ ಯಾವ ಯಾವ ಮೌಲ್ಯವನ್ನು ಭಿತ್ತಬಹುದು. ಸರಕಾರದವರು ಹೀಗೆ ಮುಂದುವರೆದರೇ ಬಂಡವಾಳ ಶಾಹಿಗಳು ತಮಗೆ ಬೇಕಾದ ಮೌಲ್ಯಗಳನ್ನು ಯುವ ತಲೆಮಾರಿಗೆ ಬಿತ್ತುತ್ತಾರೆ. ಇದುಉನ್ನತ ಶಿಕ್ಷಣದ ದೊಡ್ಡ ದುರಂತದ ಸಂಗತಿ ಆಗಿತು ಎಂದು ಬೇಸರವ್ಯಕ್ತಪಡಿಸಿದರು.

ಹಸಿರುಭೂಮಿ ಪ್ರತಿಷ್ಠಾನದ ಬಿ.ಕೆ. ಮಂಜುನಾಥ್ ಮಾತನಾಡಿ, ಸರಕಾರದಲ್ಲಿ ಗೊಂದಲವಿದ್ದು, ಜನರಲ್ಲಿ ವಿಶ್ವವಿದ್ಯಾಲಯ ಉಳಿಯುತ್ತದೆಯೂ ಇಲ್ಲವೊ ಎಂಬುದು ಬೇರೂರಿದೆ. ಈ ಕಮಿಟಿ ಶಾಸಕರು. ಸಂಸದರು ಎಲ್ಲಾ ಸೇರಿ ಸಭೆ ಮಾಡಿ ದೃಢವಾದ ನಿಲುವು ತೆಗೆದುಕೊಂಡರೇ ಖಂಡಿತ ಸರಕಾರ ಒಪ್ಪಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ಡಾ. ವೈ.ಎಸ್. ವೀರಭದ್ರಪ್ಪ, ಆರ್.ಪಿ. ವೆಂಕಟೇಶ್ ಮೂರ್ತಿ, ಧರ್ಮೇಶ್, ಹೆಚ್.ಕೆ. ಸಂದೇಶ್, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಹೆಚ್.ಪಿ. ಮೋಹನ್, ಹಿರಿಯ ಪತ್ರಕರ್ತ ವೆಂಕಟೇಶ್, ಹೆಚ್.ಆರ್. ನವೀನ್ ಕುಮಾರ್, ಎಂ.ಜಿ. ಪೃಥ್ವಿ, ಸಾಹಿತಿ ರೂಪ ಹಾಸನ್, ತಾರಾಚಂದನ್, ರಮೇಶ್, ಎಣ.ಬಿ. ಪುಷ್ಪ, ಸಮೀರ್ ಅಹಮದ್ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!