Connect with us

Hassan

ಹಾಸನ ಜಿಲ್ಲೆಯ ರೈಲ್ವೆ ಯೋಜನೆ ಮೇಲಧಿಕಾರಿಗಳಿಗೆ ಹಲವು ಮನವಿ

Published

on

ಹಾಸನ: ಹುಬ್ಬಳ್ಳಿಯ ದಕ್ಷಿಣ ವಲಯದ ರೈಲ್ವೆ ಜನರಲ್ ಮ್ಯಾನೇಜರ್ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ರೈಲ್ವೆ ಸಚಿವರ ಸೂಚನೆ ಮೇರೆಗೆ ಅಧಿಕಾರಿಗಳು-ಜನಪ್ರತಿನಿಧಿಗಳ ಸಭೆ ನಡೆಯಿತು.
ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್ ಭಾಗವಹಿಸಿದ್ದರು.
ಸಭೆಯಲ್ಲಿ ಹಾಸನ ನಗರದ ರೈಲ್ವೆ ಮೇಲ್ಸೇತುವೆ ಪೂರ್ಣಕ್ಕೆ ಇನ್ನೂ ೭೬ ಕೋಟಿ ಹಣ ಬೇಕಿದೆ. ಉಳಿಕೆ ಕಾಮಗಾರಿಗೆ ರಾಜ್ಯ ಸರ್ಕಾರ ಅನುದಾನ ನೀಡದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೇ ಭರಿಸುವಂತೆ ಸಂಸದರು, ಶಾಸಕರು ಮನವಿ ಮಾಡಿದರು.
ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣವಾಗುವವರೆಗೂ ಮೇಲ್ಸೇತುವೆಯ ಒಂದು ಭಾಗ ಮತ್ತು ಹಳಿಯ ಮೇಲೆ ಎರಡೂ ಕಡೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆಯೂ ವಿನಂತಿಸಿದರು.
ಹಾಗೆಯೇ ಮೊಸಳೆ ಹೊಸಳ್ಳಿ ರೈಲು ನಿಲ್ದಾಣವನ್ನು ಆಧುನೀಕರಣಗೊಳಿಸಿ ರೈಲುಗಳ ನಿಲುಗಡೆಗೆ ಅನುಮತಿ ನೀಡಬೇಕು. ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಹಿಂದೆ ಪಕ್ಕದಲ್ಲೇ ತಾತ್ಕಾಲಿಕವಾಗಿ ಹಳಿಯ ಮೇಲೆ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಬಗ್ಗೆಯೂ ಮೇಲಧಿಕಾರಿಗಳ ಗಮನಕ್ಕೆ ತರಲಾಯಿತು.


ಚನ್ನರಾಯಪಟ್ಟಣದಲ್ಲಿ ಸೋಲಾಪುರ ಎಕ್ಸ್‌ಪ್ರೆಸ್ ರೈಲು ನಿಲುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಹಿರೀಸಾವೆಯಲ್ಲಿ ಕಾರವಾರ ಎಕ್ಸ್‌ಪ್ರೆಸ್ ರೈಲು ನಿಲುಗಡೆ ಮಾಡುವಂತೆಯೂ ಕೋರಲಾಯಿತು.
ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ವಂದೇ ಮಾತರಂ ರೈಲು ನಿಲುಗಡೆ ಮಾಡಲು ಆಸ್ತೆ ವಹಿಸಬೇಕು. ದುದ್ದದ ರೈಲ್ವೆ ನಿಲ್ದಾಣವನ್ನು ಆಧುನೀಕರಣಗೊಳಿಸಿ ರೈಲು ನಿಲುಗಡೆಗೆ ಅನುಮತಿ ನೀಡಬೇಕು.
ಮೈಸೂರು-ಅರಸೀಕೆರೆ ನಡುವೆ ಎರಡು ಹೊಸ ಪುಷ್ಪಕ್ ರೈಲುಗಳ ಸಂಚಾರಕ್ಕೆ ಬೇಡಿಕೆ ಸಲ್ಲಿಸಲಾಯಿತು.
ಜಿಲ್ಲೆಯ ಜನಪ್ರತಿನಿಧಿಗಳ ಎಲ್ಲಾ ಬೇಡಿಕೆ, ಮನವಿಗಳಿಗೂ ರೈಲ್ವೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು. ಸಭೆಯಲ್ಲಿ ದಕ್ಷಿಣ ರೈಲ್ವೆ ವಿಭಾಗದ ಜನರಲ್ ಮ್ಯಾನೇಜರ್ ಸಂಜೀವ್ ಕುಮಾರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಗೌತಮ್, ಪಿಸಿಸಿಎಂ ಶಾಸ್ತ್ರಿ , ಪಿಸಿಇ ಬ್ರಹ್ಮಾನಂದಂ ಇತರೆ ಅಧಿಕಾರಿಗಳು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಫೆ.8 ರಂದು ಶ್ರೀ ಉದ್ಭವ ಶನೈಶ್ಚರಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ 42ನೇ ವರ್ಷದ ಮಹಾಶಿವರಾತ್ರಿ ಮಹೋತ್ಸವ

Published

on

ಹಾಸನ: ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಚಗಚಗೆರೆ ಗ್ರಾಮದಲ್ಲಿ ನೆಲೆಸಿರುವ ಶ್ರೀ ಉದ್ಭವ ಶನೈಶ್ಚರಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ 42ನೇ ವರ್ಷದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವನ್ನು ಫೆಬ್ರವರಿ 8 ರಂದು ಭಾನುವಾರ ಶ್ರದ್ಧಾಭಕ್ತಿಯಿಂದ ಆಯೋಜಿಸಲಾಗಿದೆ ಎಂದು ಅನಿಲ್ ಅವರು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಧ್ವಜ ಪ್ರತಿಷ್ಠಾನ (ರಿ) ವತಿಯಿಂದ ಆಯೋಜಿಸಲಾದ ಈ ಧಾರ್ಮಿಕ ಕಾರ್ಯಕ್ರಮವು ಜಗದ್ಗುರು ಶ್ರೀ ಶಂಕರಾಚಾರ್ಯ ದಕ್ಷಿಣಾಮ್ನಾಯ ಶಾರದಾಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ಕೃಪಾಶೀರ್ವಾದ ಹಾಗೂ ಜಗದ್ಗುರು  ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಅನುಗ್ರಹದೊಂದಿಗೆ ನಡೆಯಲಿದೆ. ಪರಮಪೂಜ್ಯ ಶ್ರೀ ವಿದ್ಯಾನಂದ ಮಹಾಸ್ವಾಮೀಜಿಯವರ ಆಶೀರ್ವಾದವೂ ಕಾರ್ಯಕ್ರಮಕ್ಕೆ ಲಭಿಸಲಿದೆ ಎಂದರು.


ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ದೇವಾಲಯದಿಂದ ಗಂಗೆ ತರುವ ಸ್ಥಳಕ್ಕೆ ತೆರಳಿ, ಸುಮಂಗಲಿಯರಿಂದ ಗಂಗಾಪೂಜೆ, ಬಾಗಿನ ಅರ್ಪಣೆ ಹಾಗೂ ಮಹಾ ಪ್ರಾರ್ಥನೆ ಸಲ್ಲಿಸಲಾಗುವುದು. ನಂತರ 108 ಅಗೋಧಕ ಕಳಶಗಳೊಂದಿಗೆ ಗ್ರಾಮ ಪ್ರದಕ್ಷಿಣೆ ಮಾಡಿ ದೇವಾಲಯಕ್ಕೆ ತರಲಾಗುವುದು. ಆ ಬಳಿಕ ಶ್ರೀ ಸ್ವಾಮಿಗೆ ಮಹಾ ರುದ್ರಾಭಿಷೇಕ, ಗಣಪತಿ ಹೋಮ, ನವಗ್ರಹ ಹೋಮ, ಮಹಾಮೃತ್ಯುಂಜಯ ಹೋಮ, ಶನೈಶ್ಚರಸ್ವಾಮಿ ಹೋಮ ಸೇರಿದಂತೆ ವಿವಿಧ ವೈದಿಕ ಹೋಮ-ಹವನಗಳು ಜರುಗಲಿವೆ ಎಂದರು.

ಸಮಸ್ತ ಭಕ್ತರ ಸಮ್ಮುಖದಲ್ಲಿ ಕುಂಭಾಭಿಷೇಕ ಮಹಾಪೂರ್ಣಾಹುತಿ, ಕದಳಿ ಛೇದನ, ರಾಜೋಪಚಾರ, ಮಹಾ ನೈವೇದ್ಯ ಹಾಗೂ ಮಹಾಮಂಗಳಾರತಿ ನೆರವೇರಲಿದೆ. ಇದೇ ಸಂದರ್ಭದಲ್ಲಿ ಶ್ರೀ ಸ್ವಾಮಿಗೆ ನೂತನ ರಜತ ಕಿರೀಟ ಧಾರಣೆ ಕಾರ್ಯಕ್ರಮವೂ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದ ಲಭಿಸಲಿದೆ.


ಮಧ್ಯಾಹ್ನ 12 ಗಂಟೆಗೆ ಧಾರ್ಮಿಕ ಸಮಾರಂಭ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ವೆಲ್ಲೂರು (ತಮಿಳುನಾಡು) ಮೂಲದ ಸರ್ವಸಾಧಕಂ ಶ್ರೀ ವಿಶ್ವೇಶ್ ಶಿವಂ ಸ್ವಾಮೀಜಿಯವರು ಹಾಗೂ ತಂಡದವರು ವೈದಿಕ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷರು, ಕರ್ನಾಟಕ ಗೃಹ ಮಂಡಳಿ ಹಾಗೂ ಶಾಸಕರಾದ ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರಿಗೆ “ಬರನಾಡಿನ ಭಗೀರಥ” ಎಂಬ ನಾಮಾಂಕಿತ ಬಿರುದು ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀ ಶೃಂಗೇರಿ ಶಾರದಾ ಪೀಠದ ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠ, ಹಂಗರಹಳ್ಳಿ ಬಸವಣ್ಣನವರು ಸೇರಿದಂತೆ ವಿವಿಧ ದೇವತೆಗಳು ಆಗಮಿಸಲಿವೆ ಎಂದರು.


ಎಲ್ಲಾ ಭಕ್ತರು ಕುಟುಂಬ ಸಮೇತರಾಗಿ ಭಾಗವಹಿಸಿ ಶ್ರೀ ಉದ್ಭವ ಶನೈಶ್ಚರಸ್ವಾಮಿ ಹಾಗೂ ಶ್ರೀ ಆದಿಶಕ್ತಿ ಮಳೆಯಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರ ಧರ್ಮಧ್ವಜ ಪ್ರತಿಷ್ಠಾನ (ರಿ)ಯ ಅಧ್ಯಕ್ಷರು, ಸದಸ್ಯರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಉದಯ್ ಕುಮಾರ್, ರಾಜೇಶ್, ಪೃಥ್ವಿ ರಾಜ್, ಬಸವರಾಜ್, ದೇವರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

Hassan

ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

Published

on

ಬೆಂಗಳೂರು/ಹಾಸನ: ಹಾಸನ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಎರಡು ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಎರಡೂ ಯೋಜನೆಗಳು ನೀರಾವರಿ ಇಲಾಖೆಯಡಿ ಕೈಗೆತ್ತಿಕೊಳ್ಳಲಾಗಲಿದ್ದು, ಜಿಲ್ಲೆಯ ಬರಪೀಡಿತ ಪ್ರದೇಶಗಳ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶ ಹೊಂದಿವೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕೆಂಕೆರೆ ಸೇರಿ 20ಕ್ಕೂ ಹೆಚ್ಚು ಕೆರೆಗಳಿಗೆ ಹೇಮಾವತಿ ನದಿಯಿಂದ ಲಿಫ್ಟ್ ನೀರಾವರಿ ಮೂಲಕ ನೀರು ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ವಿಷಯವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದ್ದರು. ಅದರಂತೆ, ಬರಪ್ರದೇಶದ ನೀರಿನ ಸಮಸ್ಯೆ ನಿವಾರಣೆಗೆ 32 ಕೋಟಿ ರೂ. ವೆಚ್ಚದ ಈ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

 

ಇನ್ನೊಂದೆಡೆ, ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಲಿಫ್ಟ್ ನೀರಾವರಿ ಯೋಜನೆಯ ಪುನಶ್ಚೇತನಕ್ಕೂ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈಗಿರುವ ಈ ಯೋಜನೆ ನಿರಂತರ ತಾಂತ್ರಿಕ ದೋಷ, ಪಂಪುಗಳ ವೈಫಲ್ಯ, ರೈಜಿಂಗ್ ಮೇನ್ ಹಾಗೂ ಕಾಲುವೆಗಳ ಹಾನಿಯಿಂದ ಬಳಲುತ್ತಿತ್ತು. ಹೀಗಾಗಿ ಹೊಸ ಪಂಪುಗಳು, ಮೋಟಾರ್‌ಗಳು, ಪೈಪ್‌ಲೈನ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 11.50 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಈ ಮೂಲಕ ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಒಟ್ಟಾರೆ 43.50 ಕೋಟಿ ರೂ.  ವೆಚ್ಚದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದಂತಾಗಿದೆ.

ಹಾಸನ ಜಿಲ್ಲೆಯ ಪರವಾಗಿ, ಜಿಲ್ಲೆಯ ಜನತೆಯ ಅಗತ್ಯಗಳಿಗೆ ಸ್ಪಂದಿಸಿ ಈ ಮಹತ್ವದ ಯೋಜನೆಗಳನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕೃತಜ್ಞತೆ
ಸಲ್ಲಿಸಿದ್ದಾರೆ.

Continue Reading

Hassan

ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ಫೇಸ್ ಬುಕ್ ಹ್ಯಾಕ್

Published

on

ಹಾಸನ: ಜಿಲ್ಲಾಧಿಕಾರಿ ಕೆ.ಎಸ್‌‍. ಲತಾಕುಮಾರಿ ಅವರ ಭಾವಚಿತ್ರವಿರುವ ಫೇಸ್‌‍ ಬುಕ್‌ ಐಡಿಯಿಂದ ಸಂದೇಶಗಳು ಬೇರೆಯವರ ಮೊಬೈಲ್‌ಗಳಿಗೆ ರವಾನೆಯಾಗುತ್ತಿರುವುದು ಕಂಡು ಬಂದಿದ್ದು, ಫೇಸ್‌‍ ಬುಕ್‌ ಐಡಿಯಿಂದ ಯಾವುದೇ ಸಂದೇಶ ಜಿಲ್ಲಾಧಿಕಾರಿ ಕಳುಹಿಸುತ್ತಿಲ್ಲ.


ಫೇಸ್‌‍ ಬುಕ್‌ ಐಡಿ ನಕಲಿ ಖಾತೆಯನ್ನು ಬಳಸುತ್ತಿರುವುದು ಕಂಡು ಬಂದಿದೆ. ನಕಲಿ ಖಾತೆಯಿಂದ ಬರುವ ಮೇಸೆಜ್‌ಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಹಾಗೂ ಯಾವುದೇ ದೂರುಗಳು ಇದ್ದರೆ ಕಚೇರಿ ವೇಳೆಯಲ್ಲಿ ಭೇಟಿ ಮಾಡಿ ದೂರು ನೀಡಬಹುದಾಗಿದೆ. ಸೈಬರ್‌ ಅಪರಾಧದ ಬಗ್ಗೆ ಜಾಗೃತರಾಗುವಂತೆ ಜಿಲ್ಲಾಧಿಕಾರಿ ಕೆ.ಎಸ್‌‍. ಲತಾಕುಮಾರಿ ತಿಳಿಸಿದ್ದಾರೆ.

Continue Reading

Trending

error: Content is protected !!