Connect with us

Uncategorized

ಹಾಸನ ತಹಸೀಲ್ದಾರ್ ಶ್ವೇತಾ ವರ್ಗಾವಣೆಗೆ ಕೆಎಟಿ ತಡೆ

Published

on

ಹಾಸನ: ಹಾಸನ ತಹಸೀಲ್ದಾರ್ ಆಗಿದ್ದ ಶ್ವೇತಾ ಅವರ ವರ್ಗಾವಣೆಗೆ ಕೆಎಟಿ ತಡೆ ನೀಡಿದೆ.
ಶ್ವೇತಾ ಸೇರಿದಂತೆ ಮೊನ್ನೆಯಷ್ಟೇ ೧೩ ಮಂದಿ ತಹಸೀಲ್ದಾರ್‌ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಆದರೆ ತಾವು ಹಾಸನ ತಹಸೀಲ್ದಾರ್ ಆಗಿ ಕೇವಲ ೮ ತಿಂಗಳಾಗಿವೆ. ಒಂದು ವರ್ಷ ತುಂಬುವ ಮುನ್ನವೇ ವರ್ಗ ಮಾಡಲಾಗಿದೆ ಎಂದು ಶ್ವೇತಾ ಕೆಎಟಿ ಮೊರೆ ಹೋಗಿದ್ದರು.
ಈ ನಡುವೆ ಶ್ವೇತಾ ಅವರು ಗ್ರೇಡ್-೧ ತಹಸೀಲ್ದಾರ್ ಆಗಿದ್ದು, ಅವರ ಸ್ಥಾನಕ್ಕೆ ಗ್ರೇಡ್-೨ ತಹಸೀಲ್ದಾರ್‌ರನ್ನು ನಿಯೋಜನೆ ಮಾಡಿರುವುದು ಎಷ್ಟು ಸರಿ, ಇದು ಊರ್ಜಿತವೇ ಎಂದು ಶ್ವೇತಾ ಅವರ ಪರ ವಕೀಲರು ಕರ್ನಾಟಕ ನ್ಯಾಯಾಧಿಕರಣದ ಮುಂದೆ ವಾದ ಮಂಡಿಸಿದರು.ಈ ವಾದ ಹಾಗೂ ಮನವಿಯನ್ನು ಪುರಸ್ಕರಿಸಿದ ನ್ಯಾಯಮಂಡಳಿ ಶ್ವೇತಾ ಅವರ ವರ್ಗಾವಣೆಗೆ ತಡೆ ನೀಡಿದೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಮೇಲೆ ದಾಳಿ ಮಾಡಲು ಮುಂದಾದ ಕಾಡಾನೆ*

Published

on

ಮಡಿಕೇರಿ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಲು ಯತ್ನಿಸಿರುವ ಘಟನೆ ಗುರುವಾರ ಬೆಳಗ್ಗೆ 7.20ರ ಸಮಯದಲ್ಲಿ

ವಿರಾಜಪೇಟೆ ತಾಲೂಕು, ಚಂಬೆಬೆಳ್ಳೂರು ಗ್ರಾಮದ ಪುದುಕೋಟೆ ಭದ್ರಕಾಳಿ ದೇವಾಲಯದ ಕೆಳಗಿನ ಸಿಮೆಂಟ್ ರಸ್ತೆಯಲ್ಲಿ ನಡೆದಿದೆ.


ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಜಿ.ಟಿ. ಚಂಗಪ್ಪ ಎಂಬುವವರು ಕಾಲೇಜಿಗೆ ತೆರಳಲು ಬಸ್ ಗಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ದಿಢೀರ್ ಎದುರಾದ ಕಾಡನೆ ಆತನನ್ನು ಬೆನ್ನಟ್ಟಿದೆ. ಚಂಗಪ್ಪ ಓಡಿ ಕಾಡಾನೆಯ ಹಿಡಿತದಿಂದ ತಪ್ಪಿಸಿಕೊಂಡಿದ್ದಾನೆ. ಆದರೆ ಓಡುವ ಸಂದರ್ಭ ಸಿಮೆಂಟ್ ರಸ್ತೆಗೆ ಬಿದ್ದು ಗಾಯಗಳು ಉಂಟಾಗಿವೆ ಅಲ್ಲದೇ ಸೊಂಟಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವಿಷಯ ಅರಿತು ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿಗಳು ಆತನನ್ನು ವಿರಾಜಪೇಟೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ.


ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಮರಿ ಆನೆಗಳೊಂದಿಗೆ ಮೂರಕ್ಕೂ ಹೆಚ್ಚು ಆನೆಗಳು ಈ ಭಾಗದಲ್ಲಿ ಸಂಚರಿಸುತ್ತಾ ಜನರಿಗೆ ಭೀತಿಯನ್ನು ಹುಟ್ಟಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೂಡಲೇ ಇಲ್ಲಿರುವ ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಆಗಬೇಕೆಂದು ಗ್ರಾಮಸ್ಥರು ಸಂಬಂಧಿಸಿದವರನ್ನು ಒತ್ತಾಯಿಸಿದ್ದಾರೆ.
ಎಸಿಎಫ್ ನೆಹರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕರ ತೆರಳಿ ಘಟನೆ ಕುರಿತು ಮಾಹಿತಿ ಪಡೆದು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

Continue Reading

Uncategorized

ಅನಾಥ ಮಕ್ಕಳಿಗೆ ಅನ್ನದಾನ ಮಾಡುವ ಮೂಲಕ ವಾರ್ಷಿಕೋತ್ಸವ ಆಚರಿಸಿದ ಕರ್ನಾಟಕ ಭೀಮ ಸೇನೆ

Published

on

ನಂಜನಗೂಡು ಮೇ.22

ಅನಾಥ ಮಕ್ಕಳಿಗೆ ಅನ್ನದಾನ ಮಾಡುವ ಮೂಲಕ ವಿನೂತನವಾಗಿ ಕರ್ನಾಟಕ ಭೀಮ ಸೇನೆ ಎರಡನೇ ವರ್ಷದ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ.
ಮೈಸೂರಿನ ವಿಜಯನಗರದ ಸವಿ ನೆನಪು ಫೌಂಡೇಷನ್ ಸೇವಾಶ್ರಮದಲ್ಲಿ ಕರ್ನಾಟಕ ಭೀಮ ಸೇನೆಯ ಎರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಘಟಕದ ವತಿಯಿಂದ ಸುಮಾರು 50ಕ್ಕೂ ಹೆಚ್ಚು ಅನಾಥ ಮಕ್ಕಳಿಗೆ ಒಂದು ದಿನದ ಅನ್ನದಾನ ಮಾಡುವ ಮೂಲಕ ಮೂರನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.
ಅನಾಥ ಮಕ್ಕಳೊಂದಿಗೆ ಕರ್ನಾಟಕ ಭೀಮ ಸೇನೆಯ ಪದಾಧಿಕಾರಿಗಳು ಕೇಕ್ ಕತ್ತರಿಸಿ ಮಕ್ಕಳಿಗೆ ಕೇಕ್ ಕಟ್ ಮಾಡಿ ತಿನ್ನಿಸಿ, ಊಟ ಬಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ಬಳಿಕ ಕರ್ನಾಟಕ ಭೀಮ ಸೇನೆಯ ಜಿಲ್ಲಾಧ್ಯಕ್ಷ ಸರ್ವೇಶ್ ಮಾತನಾಡಿ, ರಾಜ್ಯಾದ್ಯಂತ ಸಂಘಟನೆಯು ಬಲಿಷ್ಠವಾಗಿ ಬೆಳೆಯುತ್ತಿದೆ. ಏಕಕಾಲದಲ್ಲಿ ಕಾರ್ಯಕ್ರಮ ನಡೆಸಲು ಎರಡನೇ ವರ್ಷದ ಸಂಭ್ರಮಾಚರಣೆಯನ್ನು ಅನಾಥ ಮಕ್ಕಳಿಗೆ ಒಂದು ದಿನದ ಅನ್ನದಾನ ಮಾಡಲು ಸಂಘಟನೆಯು ತೀರ್ಮಾನ ಮಾಡಲಾಗಿತ್ತು. ಅದರಂತೆ ಇಂದು ಮಕ್ಕಳಿಗೆ ಅನ್ನದಾನ ಮಾಡಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಆರೋಗ್ಯ ತಪಾಸಣೆ, ರಕ್ತದಾನ ಶಿಬಿರವನ್ನು ಮಾಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮತ್ತು ಕೆ.ಶಿವರಾಂ ರವರ ನೆನಪಿನಾರ್ಥವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತೀರ್ಮಾನ ಮಾಡಿದ್ದೇವೆ. ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ನಾವು ಸಂಘಟನೆಯನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಮಾದೇಶ್, ಮೈಸೂರು ತಾಲ್ಲೂಕು ಗೌರವಾಧ್ಯಕ್ಷ ವೈರಮುಡಿ, ಮೈಸೂರು ತಾಲ್ಲೂಕು ಅಧ್ಯಕ್ಷ ಮಲ್ಲೇಶ್, ಜಿಲ್ಲಾ ಕಾರ್ಯದರ್ಶಿ ಬಾಲರಾಜು, ನಗರ ಸಂಘಟನಾ ಕಾರ್ಯದರ್ಶಿ ರವಿಚಂದ್ರ, ನಂಜನಗೂಡು ತಾಲ್ಲೂಕು ಅಧ್ಯಕ್ಷ ಬಾಣೂರು ಶಿವಸ್ವಾಮಿ, ಹುಣಸೂರು ತಾಲ್ಲೂಕು ಅಧ್ಯಕ್ಷ ಶಿವು, ನಂಜನಗೂಡು ತಾಲ್ಲೂಕು ಗೌರವಾಧ್ಯಕ್ಷರಾದ ಎಚ್.ಡಿ ಶಂಭಯ್ಯ, ರವಿಚಂದ್ರ ಪ್ರಕಾಶ್ ಪುಟ್ಟಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Uncategorized

ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ – ಮಾಜಿಸಚಿವ ಎಚ್.ಡಿ.ರೇವಣ್ಣ

Published

on

ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಹೇಳಿಕೆ

ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ

ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ

ನಾನು ದೇವರ ಮೇಲೆ ನಂಬಿಕೆ ಇಟ್ಟಿರುವವನು

ರಾಜ್ಯದ, ಜಿಲ್ಲೆಯ ಹಾಗೂ ಹೊಳೆನರಸೀಪುರದ‌ ದೇವೇಗೌಡರನ್ನು ಅರವತ್ತು ವರ್ಷದಿಂದ ರಾಜಕೀಯ ಶಕ್ತಿ ಕೊಟ್ಟಿದ್ದಾರೆ

ಕುಮಾರಸ್ವಾಮಿ, ನನಗೆ ಶಕ್ತಿ ಕೊಟ್ಟಿದ್ದಾರೆ

ಇಪ್ಪತ್ತೈದು ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ

ಹೊಳೆನರಸೀಪುರ ತಾಲ್ಲೂಕು ಜನರು, ಜಿಲ್ಲೆಯ ಜನರ ಜೊತೆ ನಾನು ಬದುಕಿರುವವರೆ ನಿಮ್ಮ ಜೊತೆ ನಾನು ದೇವೇಗೌಡರು, ಕುಮಾರಸ್ವಾಮಿ ನಮ್ಮ ಕುಟುಂಬ ಇರುತ್ತದೆ

ಯಾರು ದೃತಿಗೆಡಬೇಕಾದ ಪ್ರಮೇಯವಿಲ್ಲ

ಜಿಲ್ಲೆಯ ಜನ ನನಗೆ ಸಹಕಾರ ಕೊಟ್ಟಿದ್ದಾರೆ, ಆ ಸಹಕಾರಕ್ಕೆ ನಾನು ಋಣಿಯಾಗಿರುತ್ತೇನೆ

ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಇರ್ತಿನಿ

ಹೊಳೆನರಸೀಪುರದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಮಾಜಿಸಚಿವ ಎಚ್.ಡಿ.ರೇವಣ್ಣ

ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಎಚ್.ಡಿ.ರೇವಣ್ಣ

ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಎಚ್‌ಡಿಆರ್

ಪ್ರಜ್ವಲ್‌ರೇವಣ್ಣ ಹೆಸರಲ್ಲೂ ಅರ್ಚನೆ ಮಾಡಿಸಿದ ಎಚ್.ಡಿ.ರೇವಣ್ಣ

Continue Reading

Trending

error: Content is protected !!