Connect with us

Chikmagalur

ಹೇವಾವತಿ ನದಿಯಲ್ಲಿ ವೃದ್ದೆಯ ಶವ ಪತ್ತೆ

Published

on

ಮೂಡಿಗೆರೆ: ತಾಲೂಕಿನ ದಾರದಹಳ್ಳಿ ಸಮೀಪದ ಹೇಮಾವತಿ ನದಿಯಲ್ಲಿ 60 ವರ್ಷದ ವೃದ್ಧೆಯ ಶವವೊಂದು ಮರದ ಕೊಂಬೆಯೊಂದಕ್ಕೆ ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.
ಮೃತರು ದಾರದಹಳ್ಳಿ ಕಾಲೋನಿಯ ದೇವಮ್ಮ (60) ಎಂದು ತಿಳಿದುಬಂದಿದೆ. ದೇವಮ್ಮ ಅವರು ದಾರದಹಳ್ಳಿ ಕಾಲೋನಿಯಲ್ಲಿ ವಾಸ ಮಾಡುತ್ತಿದ್ದು, ಕಳೆದ 3 ದಿನದಿಂದ ಮನೆಯಿಂದ ಕಾಣೆಯಾಗಿದ್ದರು. ದೇವಮ್ಮ
ಅವರು ಹಾಗಾಗ ನೆಂಟರ ಮನೆಗೆ ಹೋಗಿ ಬರುತ್ತಿದ್ದರಿಂದ ಅವರ ಪುತ್ರರು ಈಗಲೂ ನೆಂಟರ ಮನೆಗೆ ಹೋಗಿರಬಹುದೆಂದು ಭಾವಿಸಿ ಸುಮ್ಮನಿದ್ದರೆನ್ನಲಾಗಿದೆ.
ಆದರೆ, ಬುಧವಾರ ದೇವಮ್ಮ ಅವರ ಮೃತ ದೇಹ, ವಾಸದ ಮನೆಯಿಂದ ಒಂದೂವರೆ ಕಿ.ಮೀ ದೂರದ ಹೇಮಾವತಿ ನದಿಯ ಪಕ್ಕದಲ್ಲಿರುವ ಮರದ ಕೊಂಬೆಯೊಂದಕ್ಕೆ ಸಿಕ್ಕಿಹಾಕಿಕೊಂಡಿದ್ದು, ಇದನ್ನು
ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಸಮಾಜ ಸೇವಕ ಫಿಶ್ ಮೋಣು ತಂಡದ ಸಹಾಯದಿಂದ ಶವವನ್ನು ಹೊರ ತೆಗೆಯಲಾಯಿತು. ಘಟನೆಯ ಸತ್ಯಾಸತ್ಯತೆ ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ

Published

on

ಚಿಕ್ಕಮಗಳೂರು : ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ

ನಾಯಿ ಮಾಲೀಕರ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆಯವರು

ಸಾಕಿದ ನಾಯಿ ಬೊಗಳಿದ್ದಕ್ಕೆ ಯಜಮಾನ ಸುಂದರನಿಂದ ನಾಯಿಗೆ ಬೈಗುಳ

ನಮಗೆ ಬೈಯುತ್ತಿದ್ದಾನೆ ಎಂದು ತಿಳಿದು ಆಸಿಡ್ ದಾಳಿ

ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ಘಟನೆ

ಸುಂದರ್ ರಾಜ್ ಎಂಬುವರ ಮೇಲೆ ಆಸಿಡ್ ದಾಳಿ

ಆಸಿಡ್ ದಾಳಿಗೊಳಗಾದ ಬಳಿಕ ಸುಂದರರಾಜ್ ಪರಿಸ್ಥಿತಿ ಗಂಭೀರ

ಎಡಗಣ್ಣಿಗೆ ಗಂಭೀರ ಗಾಯ, ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚನೆ

ಗಾಯಾಳು ಸುಂದರ್ ರಾಜ್ ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲು

ಜೇಮ್ಸ್, ಸುಂದರ್ ರಾಜ್ ಮೇಲೆ ಆಸಿಡ್ ದಾಳಿದ ವ್ಯಕ್ತಿ

ನಾಯಿ ಹೆಸರಿನಲ್ಲಿ ಜೇಮ್ಸ್ ಗೆ ಬೈಯುತ್ತಿರುವ ಆರೋಪ

ಸುಂದರಾಜ್ ಮೇಲಿನ ಸಿಟ್ಟಿನಿಂದ ಆಸಿಡ್ ನಿಂದ ದಾಳಿ ಮಾಡಿದ ಜೇಮ್ಸ್

ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲು

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು

Continue Reading

Chikmagalur

ಚಿಕ್ಕಮಗಳೂರು ನಗರ ವ್ಯಾಪ್ತಿಯ ಎಲ್ಲ ಠಾಣೆಯ ಸಿಬ್ಬಂದಿಗಳಿಂದ ಠಾಣೆಯಲ್ಲೇ ಮಾಹಿತಿ ಪಡೆಯಲಾಗುವುದು : ಐಜಿಪಿ ಚಂದ್ರಗುಪ್ತ

Published

on

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಎಸ್ ಪಿ ವರದಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳಿಗೆ ಯಾವ ರೀತಿ ಸಮಸ್ಯೆಯಾಗುತ್ತಿದೆ ಎಂಬ ಬಗ್ಗೆ ಎಲ್ಲಾ ಸಿಬ್ಬಂದಿಗಳ ಜೊತೆ ಠಾಣೆಗಳಲ್ಲಿಯೇ ಮಾಹಿತಿ ಪಡೆಯುತ್ತೇವೆ ಎಂದು ಐಜಿಪಿ ಚಂದ್ರಗುಪ್ತ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ನಗರ ವ್ಯಾಪ್ತಿಯ 6 ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಗಳಿಂದ ಈಗಾಗಲೇ ಮಾಹಿತಿ ಪಡೆಯಲಾಗಿದೆ ಎಂದರು.
ಪೊಲೀಸ್ ಇಲಾಖೆಗೆ ಹೆಚ್ಚಿನ ಜವಾಬ್ದಾರಿಯಿದೆ. ನಮ್ಮ ತೊಂದರೆಯ ಜೊತೆಗೆ ಬೇರೆಯವರ ತೊಂದರೆಯನ್ನು ನಾವು ನೋಡಬೇಕಿದೆ. ಹೀಗಾಗಿ ಸಿಬ್ಬಂದಿಗಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದೇವೆ. ಎಲ್ಲರೂ ಅವರವರ ಕೆಲಸ ಮಾಡಿಕೊಂಡು ಹೋದರೆ ಸಮಸ್ಯೆ ಬರುವುದಿಲ್ಲ. ಶನಿವಾರ ನಡೆದ ಘಟನೆಯ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ವಕೀಲರು ಹಾಗೂ ಪೊಲೀಸ್ ಸಿಬ್ಬಂದಿ ಮೇಲಿನ ಕೇಸ್ ಗಳ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Continue Reading

Chikmagalur

ಕೊನೆಗೂ ಪ್ರತಿಭಟನೆ ಕೈಬಿಟ್ಟ ಪೊಲೀಸರು

Published

on

ವಕೀಲರ ಮೇಲೆ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲು

ಚಿಕ್ಕಮಗಳೂರು: ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದ ಪೊಲೀಸರು ಭಾನುವಾರ ಬೆಳಗಿನ ಜಾವ ಪ್ರತಿಭಟನೆ ಕೈಬಿಟ್ಟಿದ್ದಾರೆ.
ಐ ಜಿ ಪಿ ಶನಿವಾರ ರಾತ್ರಿ ಬಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದ ಕೆಲವೇ ಕ್ಷಣಗಳಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ್ದ ಪೊಲೀಸರು ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸಲಾರಂಭಿಸಿದ್ದರು. ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪೊಲೀಸರು ಪ್ರತಿಭಟನೆಗೆ ಸಾಥ್ ನೀಡಿದ್ದರು. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮುಂದುವರಿಸಿದ್ದ ಪೊಲೀಸರು. ಕೊನೆಗೂ ಪೊಲೀಸರ ಬೇಡಿಕೆಗೆ ಸ್ಪಂದಿಸಿದ ಹಿರಿಯ ಅಧಿಕಾರಿಗಳು. ಹೀಗಾಗಿ ಭಾನುವಾರ ಬೆಳಗ್ಗೆ ಐದು ಮೂವತ್ತಕ್ಕೆ ಪ್ರತಿಭಟನೆ ಹಿಂಪಡೆದ ಪೊಲೀಸರು.


ಪೊಲೀಸರ ಪ್ರತಿಭಟನೆ ಹಿನ್ನೆಲೆಯಲ್ಲಿ ವಕೀಲರ ಮೇಲೆ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಗಳು. ಇದರ ಜೊತೆಗೆ ಈಗಾಗಲೇ ಅಮಾನತ್ತಾಗಿರುವ ಪೊಲೀಸರ ಅಮಾನತು ಆದೇಶ ಹಿಂಪಡೆಯಲು ಸಮಯವಕಾಶ ಕೇಳಿದ ಎಸ್ ಪಿ. ಬೆಳಗಿನ ಜಾವ ದೂರವಾಣಿ ಕರೆಯಲ್ಲಿ ಸಿಬ್ಬಂದಿಗಳ ಜೊತೆ ಮಾತನಾಡಿದ ಎಸ್ ಪಿ. ಹೀಗಾಗಿ ಪ್ರತಿಭಟನೆ ಹಿಂಪಡೆದ ಪೊಲೀಸ್ ಸಿಬ್ಬಂದಿಗಳು. ಮಂಗಳವಾರ ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದು ಇಲಾಖೆಗೆ ಸಹಕಾರ ನೀಡಿರುವ ಪೊಲೀಸ್ ಸಿಬ್ಬಂದಿ

Continue Reading

Trending