Mysore
ಹೊಸೂರು ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಜನವರಿ ವೇಳೆಗೆ ಹೆರಿಗೆ ಸೌಲಭ್ಯ ಒದಗಿಸಲು ಕ್ರಮ, ತಾಲೂಕು ಆರೋಗ್ಯಾಧಿಕಾರಿ ಡಾ. ನಟರಾಜ್
ಸಾಲಿಗ್ರಾಮ : ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನವರಿ ಅಂತ್ಯದ ವೇಳೆಗೆ ಸ್ಥಗಿತ ಗೊಂಡಿರುವ ಹೆರಿಗೆ ಸೌಲಭ್ಯವನ್ನು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕೆ.ಆರ್.ನಗರ ತಾಲೂಕು ಆರೋಗ್ಯಾಧಿಕಾರಿ ಡಾ.ನಟರಾಜು ಹೇಳಿದರು
ಸಾಲಿಗ್ರಾಮ ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಮಗೆ ಕೇಂದ್ರದ ವ್ಯಾಪ್ತಿಯ ಆರೋಗ್ಯ ಕೇಂದ್ರಗಳ ವೈದ್ಯರು ಮತ್ತು ಸಿಬ್ಬಂದಿಗಳು ಏರ್ಪಡಿಸಿದ್ದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಹೆರಿಗೆಗಾಗಿ ಈ ಭಾಗದ ಮಹಿಳೆಯರು ಸಾಲಿಗ್ರಾಮ, ಕೆ.ಆರ್.ನಗರಕ್ಕೆ ತೆರಳಬೇಕಾದ ಅನಿವಾರ್ಯತೆ ಇದ್ದು, ಇದನ್ನು ತಪ್ಪಿಸಲು ಈ ಆರೋಗ್ಯ ಕೇಂದ್ರಕ್ಕೆ ಮತ್ತಷ್ಟು ಸಿಬ್ಬಂದಿಗಳು, ಔಷದ ಉಪಚಾರಗಳನ್ನುಒದಗಿಸಿ ಇಲ್ಲಿಯೇ ಹೆರಿಗೆ ಸೌಲಭ್ಯವನ್ನು ಕಲ್ಪಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳ ಸಹಕಾರ ದಿಂದ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಹೊಸೂರು ಆರೋಗ್ಯ ಕೇಂದ್ರವು ಸಾಕಷ್ಟು ಗ್ರಾಮಗಳ ದೊಡ್ಡ ವ್ಯಾಪ್ತಿಯನ್ನು ಹೊಂದಿದ್ದು, ಆದ್ದರಿಂದ ಇದನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡಲು ಪ್ರಸ್ತಾವನೆಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸುವುದಾಗಿ ತಿಳಿಸಿದ ಡಾ.ನಟರಾಜು ಇಲ್ಲಿ ಖಾಲಿ ಇರುವ 19 ಮಂದಿ ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇಲ್ಲಿರುವ ಸಿಬ್ಬಂದಿಗಳ ವಸತಿ ಗೃಹಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಅವುಗಳನ್ನು ಕೆಡವಿಹಾಕಿ ಹೊಸದಾಗಿ ವಸತಿ ಗೃಹಗಳನ್ನು ನಿರ್ಮಾಣ ಮಾಡಲು ಅನುದಾನ ಮತ್ತು ಅತಿ ಶೀಘ್ರದಲ್ಲಿಯೇ ಹೊಸ ಅಂಬುಲೈನ್ಸ್ ಅನ್ನು ನೀಡುವಂತೆ ಶಾಸಕ ಡಿ.ರವಿಶಂಕರ್ ಅವರಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.

ಕ್ಲಿನಿಕ್ ಗಳಿಗೆ ಭೇಟಿ : ಇದಕ್ಕೂ ಮೊದಲು ಹೊಸೂರಿನ ಹಳಿಯೂರು ಬಡಾವಣೆಯಲ್ಲಿರುವ ವಿವಿಧ ಕ್ಲೀನಿಕ್ ಗಳಿಗೆ ಬೇಟಿ ನೀಡಿದ ಡಾ.ನಟರಾಜು ಖಾಸಗಿ ಕ್ಲಿನಿಕ್ ನಡೆಸಲು ಕೆ.ಪಿ.ಎಂ.ಇ.ಪರವಾನಿಗೆ ಪಡೆದಿರುವ ದಾಖಲೆ, ವೈದ್ಯರು ತಾವು ಪಡೆದ ವೈದ್ಯ ಪ್ರಮಾಣ ಪತ್ರ ಪ್ರದರ್ಶನ ಮಾಡುವುದು ಜತಗೆ ಚಿಕಿತ್ಸೆಗೆ ದರ ಪಟ್ಟಿ ಹಾಕಿ ತಮ್ಮಲ್ಲಿ ಬರುವ ಎಲ್ಲಾ ರೋಗಿಗಳ ಬಗ್ಗೆ ರಿಜಿಸ್ಟ್ರಾರ್ ನಲ್ಲಿ ದಾಖಲು ಮಾಡಿ ಅಧಿಕಾರಿಗಳು ತಪಾಸಣೆ ಮತ್ತು ವಿಚಾರಣೆಗೆ ಬಂದಾಗ ಈ ದಾಖಲೆಗಳು ಅತ್ಯವಶ್ಯ. ಇಲ್ಲದಿದ್ದರೆ ಕ್ಲಿನಿಕ್ ಮುಚ್ಚಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವೈದ್ಯರಾದ ಸುನಂದ, ಎ.ವಿ.ಸಚಿನ್, ಶಿವಕುಮಾರಿ, ಎಸ್.ಎಂ.ಸಚಿನ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ವಿ.ರಮೇಶ್, ಬಿಪಿಎಂ ರೇಖಾ,ಎಲ್.ಎಚ್.ವಿ.ನಾಗವೇಣಿ,

ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಚಂದ್ರು , ಹೆಮೇಶ್ , ಭಾರತ್ ರಾವ್ , ರವಿ , ಭವ್ಯ , ಸಮುದಾಯ ಆರೋಗ್ಯ ಅಧಿಕಾರಿಗಳಾದ ಯೋಗೇಶ್, ಸಚಿನ್ , ರಂಗಸ್ವಾಮಿ, ಚೇತನ್ , ರಕ್ಷೀತಾ, ತೇಜಸ್ವಿನಿ, ಸಮ್ರೀನ್, ಸುಧಾ, ಸಬ್ನಮ್, ಸಹನಾ , ರಶ್ಮಿ ,ಸಿಬ್ಬಂದಿಗಳಾದ ಯಶವಂತ್, ರಂಗಮ್ಮ, ನಾರಾಯಣಮ್ಮ,ಆಶಾ ಕಾರ್ಯಕರ್ತೆಯರಾದ ರೂಪ, ಶೋಭ, ಸುಮತಿ,ಚೆನ್ನಾಜಮ್ಮ,ರೇಣುಕ,ಲತಾ,ಸುಜಾತ,ಜ್ಯೋತಿ,ಸರೋಜ,ಸೌಭಾಗ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Mysore
ಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
ಮೈಸೂರು: 2025 ರ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ದಸರಾ ವಸ್ತು ಪ್ರದರ್ಶನದ ಉಪಸಮಿತಿಗಳಲ್ಲಿ ಒಂದಾದ ಮಹಿಳಾ ಉದ್ಯಮಿ ಉಪಸಮಿತಿ-2025 ಕ್ಕೆ ಎಸ್. ರಂಗನಾಥ ಅವರು ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.
ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್. ರಂಗನಾಥ ಅವರು ಪ್ರಸ್ತುತ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Mysore
ನಿಮ್ಮ ಎಲ್ಲಾ ತುರ್ತು ಸಂದರ್ಭಗಳಲ್ಲಿ 112 ಸಂಪರ್ಕಿಸಿ: ಸಿ.ಎಂ.ರವೀಂದ್ರ
ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ನಿಮ್ಮ ಎಲ್ಲಾ ಸಮಸ್ಯೆಗಳಿಗೆ ನೇರವಾಗಿ ನಮ್ಮನ್ನು ಸಂಪರ್ಕಿಸಿ ಎಂದು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಿ.ಎಂ.ರವೀಂದ್ರ ತಿಳಿಸಿದರು.
ನಂಜನಗೂಡು ನಗರದ ಟಿಚರ್ಸ್ ಕಾಲೋನಿಯಲ್ಲಿ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಪಟ್ಟಣ ಪೊಲೀಸ್ ಠಾಣೆ, ನಂಜನಗೂಡು ಉಪ ವಿಭಾಗ ವತಿಯಿಂದ ಮನೆಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುಟುಂಬ ಸಂಭ್ರಮ, ಸ್ನೇಹ ಬಳಗ ಮತ್ತು ಪೊಲೀಸ್ ಇಲಾಖೆ ನಂಜನಗೂಡು ಟೌನ್ ಇವರ ವತಿಯಿಂದ ಸರಗಳ್ಳತನ ಅಪರಾಧ ತಡೆ ಇನ್ನಿತರ ವಿಚಾರಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವುದು ನಮ್ಮ ಕರ್ತವ್ಯ ಎಂದರು.
ಮೊಬೈಲ್ ಬಳಕೆಯಿಂದ ದುಷ್ಪರಿಣಾಮ ಬೀರುತ್ತಿದ್ದು, ಮಕ್ಕಳಿಗೆ ಪೋಷಕರು ಮೊಬೈಲ್ ಕೊಡಬಾರದು. ಸಾಧ್ಯವಾದಷ್ಟು ಮನೆಗಳ ಮುಂದೆ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಿಕೊಳ್ಳಬೇಕು. ಅಪರಿಚಿತ ವ್ಯಕ್ತಿಗಳು ಕಂಡಾಗ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಮನೆಯಿಂದ ಎರಡ್ಮೂರು ದಿನಗಳ ಕಾಲ ಹೊರಗಡೆ ಹೋದ ಸಂದರ್ಭದಲ್ಲಿ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಬೇಕು. ಅಲ್ಲದೇ ನಿಮ್ಮ ತುರ್ತು ಸಂದರ್ಭಗಳಿಗೆ 112ಗೆ ಕರೆ ಮಾಡಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತುರ್ತು ಸೇವೆಗಳು, ಮನೆ ಕಳ್ಳತನ, ಸರಕಳ್ಳತನ, ಸೈಬರ್ ಅಪರಾಧ, ಆನ್‌ಲೈನ್ ವಂಚನೆ, ಮಾದಕ ವಸ್ತುಗಳ ಬಗ್ಗೆ, ಕಾನೂನು ಅರಿವು ಮತ್ತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಎಎಸ್ಐ ದೇವರಾಜು, ಮಂಜುನಾಥ್, ಲಿಂಗೇಗೌಡರು, ಸಿಬ್ಬಂದಿಗಳಾದ ಕೃಷ್ಣ, ಮುರುಳಿಧರ್, ತಿಮ್ಮಯ್ಯ, ಶಿವಕುಮಾರ್, ವೈ.ಎಂ. ಮಹೇಶ್, ಬೀರಪ್ಪ, ಭರತ್, ಶಿವರಾಂ, ಸೈಯದ್ ಅರ್ಕುಡ, ನೇತ್ರಾವತಿ, ಸುಷ್ಮಿತಾ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.
Mysore
ದೌರ್ಜನ್ಯ ತಡೆಗೆ ಕೆಪಿಎ- ಸಾವಿತ್ರಿಬಾ ಫುಲೆ ಸಂಸ್ಥೆ ನಡುವೆ ಒಡಂಬಡಿಕೆ
ಮೈಸೂರು: ದೌರ್ಜನ್ಯರಹಿತ ಸಮಾಜ ನಿರ್ಮಾಣಕ್ಕಾಗಿ ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಭಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಗಳ ನಡುವೆ ಒಡಂಬಡಿಕೆ ಏರ್ಪಟ್ಟಿದ್ದು, ಎರಡೂ ಸಂಸ್ಥೆಗಳ ಮುಖ್ಯಸ್ಥರು ಒಡಂಬಡಿಕೆಗೆ ಸಹಿ ಹಾಕಿದರು.
ಈ ವೇಳೆ ಮಾತನಾಡಿದ ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ಎಸ್.ಎಲ್.ಚೆನ್ನಬಸವಣ್ಣ, ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಸಾವಿತ್ರಿಭಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯೊಡನೆ ಒಡಂಬಡಿಕೆೆ ವಿಶಿಷ್ಟವಾಗಿದೆ.

ಪ್ರಸ್ತುತ ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳು ಎದುರಿಸುತ್ತಿರುವ ಸವಾಲುಗಳು, ಸಮಸ್ಯೆಗಳ ನಿರ್ವಹಣೆಯಲ್ಲಿ ಪೊಲೀಸ್ ಇಲಾಖೆಯ ಪಾತ್ರ, ಕಾನೂನುಗಳು ಹಾಗೂ ಸಂಬಂಧಪಟ್ಟ ಪ್ರಚಲಿತ ವಿದ್ಯಮಾನಗಳ ಕುರಿತು ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವ ಅಧಿಕಾರಿಗಳಿಗೆ ಹಾಗೂ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರನ್ನು ಸಂವೇದನಾಶೀಲರನ್ನಾಗಿ ಮಾಡಲು ಬಹಳ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಾವಿತ್ರಿಭಾಯಿ ಫುಲೆ ಸಂಸ್ಥೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪಿ.ಜೆ.ಫಿಲಿಪ್ಸ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವರದಿಯಾಗುತ್ತಿರುವ ಮಹಿಳೆಯರ ಮತ್ತು ಮಕ್ಕಳ ದೌರ್ಜನ್ಯಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುವುದು, ರಾಜ್ಯವನ್ನು ದೌರ್ಜನ್ಯಮುಕ್ತ ಮಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸುವುದು ಒಡಂಬಡಿಕೆಯ ಉದ್ದೇಶ ಎಂದರು.

ಸಂಸ್ಥೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ಉಪ ನಿರ್ದೇಶಕ ಲೋಕೇಶ್, ಕೆಪಿಎ ಅಧಿಕಾರಿಗಳು, ಬೋಧಕರು ಹಾಜರಿದ್ದರು.
-
Mandya14 hours agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Mysore12 hours agoಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
-
Mandya20 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Hassan16 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Hassan16 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Mysore22 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
-
Kodagu17 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Kodagu15 hours agoಶನಿವಾರಸಂತೆ – ಡಿ.10ಕ್ಕೆ ವಿದ್ಯುತ್ ವ್ಯತ್ಯಯ
