Connect with us

State

110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಬೆಂಗಳೂರು, ಫೆ.20: “ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ತಿಳಿಸಿದರು.

“ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ ನೀರು ಹರಿಸಲು ಇದ್ದಂತಹ ತೊಡಕುಗಳನ್ನು ನಿವಾರಿಸಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಜೊತೆಗೆ ಚರ್ಚೆ ನಡೆಸಲಾಗಿದೆ.

ಯಶವಂತಪುರ ಕ್ಷೇತ್ರ ದೊಡ್ಡದಾಗಿದ್ದು, ನಗರ ಭಾಗದಷ್ಟೇ ವಿಸ್ತೀರ್ಣವನ್ನು ಗ್ರಾಮೀಣ ಭಾಗ ಹೊಂದಿದೆ. ಎಲ್ಲಾ ಸಮಸ್ಯೆಗಳನ್ನು ನಾನೇ ಖುದ್ದಾಗಿ ಬಗೆಹರಿಸುತ್ತೇನೆ” ಎಂದರು.

ಬೆಂಗಳೂರು ವ್ಯಾಪ್ತಿಯ ಪ್ರತಿ ಶಾಸಕರಿಗೆ 10 ಕೋಟಿ ಅನುದಾನ: 11 ಸಾವಿರ ಕೊಳವೆ ಬಾವಿ ಕೊರೆಯಲು ಆದೇಶ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆಬಾವಿಗಳನ್ನು ಕೊರೆಸುವ ಸಂಬಂಧ ಬಿಜೆಪಿ ಶಾಸಕರಾದ ಮುನಿರಾಜು ಮತ್ತು ಬೈರತಿ ಬಸವರಾಜು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೇ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್ ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ ಬಾವಿಗಳನ್ನು ಮತ್ತೆ ಕೊರೆಯಲು ಆದೇಶ ನೀಡಲಾಗಿದೆ” ಎಂದು ಹೇಳಿದರು.

“ಕೋವಿಡ್ ಕಾರಣದಿಂದ ಕಾವೇರಿ ನೀರು ಸರಬರಾಜು ಕಾಮಗಾರಿ ತಡವಾಗಿತ್ತು. ಅಲ್ಲಿಯವರೆಗೆ ರೀ- ಬೋರ್ವೆಲ್, ಪಂಪ್ ದುರಸ್ತಿ ಸೇರಿದಂತೆ ಇತರೇ ಕೆಲಸಗಳಿಗೆ ಟೆಂಡರ್ ಕರೆಯಲಾಗಿದೆ. ಕೂಡಲೇ ಮುಂದಿನ ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆ ವ್ಯಾಪ್ತಿಯಲ್ಲಿ 68 ಟ್ಯಾಂಕರ್ ಗಳು ಕಾರ್ಯನಿರ್ವಹಿಸುತ್ತಿವೆ” ಎಂದು ತಿಳಿಸಿದರು.

“ದಾಸರಹಳ್ಳಿಗೆ ಈಗಾಗಲೇ 5.24 ಲಕ್ಷ ಅನುದಾನವನ್ನು ನೀಡಲಾಗಿದೆ. ಲಕ್ಷ್ಮೀಪುರ ಸೇರಿದಂತೆ ದಾಸರಹಳ್ಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕಾವೇರಿ ನೀರು ಪೂರೈಕೆ ಕಾಮಗಾರಿಯನ್ನು ನಡೆಸಲಾಗುವುದು. ದಾಸರಹಳ್ಳಿ ಕ್ಷೇತ್ರದಲ್ಲಿ ಕಾರ್ಖಾನೆಗಳು ಹೆಚ್ಚು ಇರುವ ಕಾರಣ ನೀರು ಹೆಚ್ಚು ಬಳಕೆಯಾಗುತ್ತಿದೆ. ಆದ ಕಾರಣ ವಸತಿ ಪ್ರದೇಶಗಳಿಗೆ ತೊಂದರೆಯಾಗುತ್ತಿದೆ. ಬೋರ್ವೆಲ್ ನೀರು ಬಳಕೆಯ ಬಗ್ಗೆ ಈಗಾಗಲೇ ಕಾನೂನು ಇದ್ದು. ಈ ಬಗ್ಗೆಯೂ ಸದನದಲ್ಲಿ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

ಕೆ.ಆರ್ ಪುರಂ ಕ್ಷೇತ್ರದಲ್ಲಿ ನಾರಾಯಣಪುರ ಸೇರಿದಂತೆ ಕೆಲವೆಡೆ ನೀರನ್ನು ತುಂಬುವ ಕೆಲಸ ಮಾಡಬೇಕಿದೆ ಟ್ಯಾಂಕರ್ ಗಳು ರೂ.1,500 ವಸೂಲಿ ಮಾಡುತ್ತಿದ್ದು ಇದನ್ನು ರೂ. 500ಕ್ಕೆ ಇಳಿಸಬೇಕು ಎಂದು ಬೈರತಿ ಬಸವರಾಜು ಅವರು ಮನವಿ ಮಾಡಿದ್ದು. ಖಾಸಗಿ ನೀರು ಟ್ಯಾಂಕರ್ ದರ ಇಳಿಸಲು ಕಾನೂನು ತರಬಹುದು. ಇಲ್ಲಿ ಎಲ್ಲರೂ ಒಮ್ಮತಕ್ಕೆ ಬಂದರೆ ಇದನ್ನು ಜಾರಿಗೆ ತರಲು ಸಿದ್ಧ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರಿಂದ ಒಂದು ಪತ್ರ ಬರೆಸಿ ಕೊಟ್ಟರೆ ಸಲಹೆಯನ್ನು ಪರಿಗಣಿಸುತ್ತೇವೆ” ಎಂದು ಹೇಳಿದರು.

“ಇದರ ಜೊತೆಗೆ ಅಂತರ್ಜಲ ನೀರಿನ ಅತಿ ಹೆಚ್ಚಿನ ಬಳಕೆ, ಶೋಷಣೆ ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ವಿಚಾರವಾಗಿ ಕಂದಾಯ ಇಲಾಖೆಯ ಬಳಿಯೂ ಚರ್ಚೆ ನಡೆಸಲಾಗುವುದು. ಬೆಂಗಳೂರಿಗೆ ಈಗ 1,450 ಎಂಎಲ್ಡಿ ನೀರು ಸರಬರಾಜಾಗುತ್ತಿದೆ. ಈ ವರ್ಷ ಬರಗಾಲ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು. ಈ ವಿಚಾರವಾಗಿ ಮೊನ್ನೆ ಬಿಜೆಪಿ ಶಾಸಕರಾದ ಸೋಮಶೇಖರ್ ಹಾಗೂ ಮುನಿರತ್ನ ಅವರು ಪ್ರಸ್ತುತ ಇರುವ ಕೊಳವೆ ಬಾವಿಗಳನ್ನು ಇನ್ನೂ 500 ಅಡಿ ಹೆಚ್ಚು ಕೊರೆಯಲು ಅವಕಾಶ ನೀಡಬೇಕು ಎಂಬ ಸಲಹೆ ನೀಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

Continue Reading
Click to comment

Leave a Reply

Your email address will not be published. Required fields are marked *

State

ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗವಹಿಸಿದ ಬಾಲಿವುಡ್ ಕುಟುಂಬ

Published

on

ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.

ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದರೆ, ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಅಧಿಕೃತರಲ್ಲಿ ಮನವಿ ಮಾಡಿದ್ದರು.

ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.

Continue Reading

State

ಸೆಝ್ ಕೈಗಾರಿಕಾ ವಲಯದಲ್ಲಿ ಬೆಂಕಿ‌ ಅವಘಡ- ಕೋಟ್ಯಾಂತರ ನಷ್ಟ

Published

on

ಮಂಗಳೂರು: ಸೆಝ್ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ರವಿವಾರ ಮಧ್ಯಾಹ್ನ ಸಂಭವಿಸಿದೆ.

ಕಂಪೆನಿಯಲ್ಲಿ ದುರಸ್ತಿ ಕಾರ್ಯನಡೆಯುತ್ತ ಕಾರಣ ನೌಕರರು ಯಾರು ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಥೆಂಟಿಕ್ ಓಷನ್ ಟ್ರೆಷರ್ ನ ಮೂಲವೊಂದು ಮಾಹಿತಿ ನೀಡಿದೆ.

ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದ ಸುಮಾರು 10 ಕೋ.ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ.

ಸದ್ಯ ಕೈಗಾರಿಕಾ ವಲಯ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.

ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಯ ಪ್ಯಾಕೇಟ್ ಗಳನ್ನು ಮಾಡಿ ವಿದೇಶಗಳಿಗೆ ತಫ್ತು ಮಾಡುವ ಕಂಪೆನಿಯಾಗಿದೆ.

Continue Reading

State

ಮಂಗಳೂರು: ಕಾನ್‌ಸ್ಟೇಬಲ್‌ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

Published

on

ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌ ಇನ್‌ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ.

ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌‌ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್‌ರಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6,000 ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20000 ಹಣನೀಡಿ, ಬಳಿಕ ಪ್ರತಿ ತಿಂಗಳು 6,000ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 50,000 ರೂ. ಲಂಚ ನೀಡಲಾಗಿತ್ತು.

ಆದರೆ ಪೊಲೀಸ್ ಕಾನ್ಸ್‌ಸ್ಟೇಬಲ್‌ ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ 3ತಿಂಗಳಿನಿಂದ ಲಂಚ ನೀಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಮಹಮ್ಮದ್ ಹ್ಯಾರೀಸ್ ಪ್ರತಿದಿನ ಕರೆಮಾಡಿ 18,000 ರೂ. ಹಣ ಲಂಚವಾಗಿ ನೀಡಬೇಕೆಂದು ಇಲ್ಲವಾದರೆ ಡ್ಯೂಟಿ ಬದಲಾಯಿಸುತ್ತೇನೆ ಎಂದು ಫಿರ್ಯಾದಿದಾರರಿಗೆ ಬೆದರಿಸುತ್ತಿದ್ದ.

ಇದರಿಂದ ಬೇಸತ್ತ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅದರಂತೆ 18,000 ಲಂಚ ಪಡೆಯುತ್ತಿದ್ದಾಗಲೇ ಮಹಮ್ಮದ್ ಹ್ಯಾರೀಸ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

Continue Reading

Trending

error: Content is protected !!