Crime
2.09 ಲಕ್ಷ ರೂ ದರೋಡೆ – ವಿಶೇಷ ತಂಡ ರಚನೆ

ಮಡಿಕೇರಿ : ಚಿನ್ನಾಭರಣವನ್ನು ಅಡವಿಟ್ಟು ಹಣ ಕೊಂಡೊಯ್ಯುತ್ತಿದ್ದ ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದು ಸುಮಾರು 2.09 ಲಕ್ಷ ರೂ.ಗಳನ್ನು ದೋಚಿದ ಪ್ರಕರಣ ಕುಶಾಲನಗರದಲ್ಲಿ ನಡೆದಿದೆ.
ಮೂಲತಃ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಆನಂದನಗರದ ಎಂಬುವವರೇ ಹಣ ಕಳೆದುಕೊಂಡ ವ್ಯಕ್ತಿ. ಬ್ಯಾಂಕ್ ನ ಕೃಷಿ ಸಾಲ ತೀರಿಸಲೆಂದು ಮತ್ತೊಂದು ಬ್ಯಾಂಕ್ ನಲ್ಲಿ ಚಿನ್ನಾಭರಣ ಅಡವಿಟ್ಟು ಹಣವನ್ನು ಬೈಕ್ ನಲ್ಲಿ ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ಕುಸಾಲನಗರದ ಅಯ್ಯಪ್ಪಸ್ವಾಮಿ ದೇವಾಲಯದ ರಸ್ತೆ ಬಳಿ ಇದ್ದ ನಾಲ್ವರು ಅಪರಿಚಿತರು ನಿಮ್ಮ ಹಣ ರಸ್ತೆಯಲ್ಲಿ ಬಿದ್ದಿದೆ ಎಂದು ವೈಲೇಶ್ ಅವರ ಗಮನವನ್ನು ಬೇರೆಡೆ ಸೆಳೆದಿದ್ದಾರೆ.
ಬೈಕ್ ನಿಂದ ಕೆಳಗೆ ಇಳಿದ ವೈಲೇಶ್ ಅವರು ರಸ್ತೆಯಲ್ಲಿ ಬಿದ್ದಿದ್ದ ಕೆಲವು ನೋಟುಗಳನ್ನು ತೆಗೆದುಕೊಳ್ಳುತ್ತಿದ್ದಾಗ ಬೈಕ್ ನ ಎದುರು ಭಾಗದ ಬ್ಯಾಗ್ ನಲ್ಲಿ ಇರಿಸಿದ್ದ 2.09 ಲಕ್ಷ ರೂ.ಗಳನ್ನು ಚೋರರು ದೋಚಿ ತಾವು ಬಂದಿದ್ದ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚೋರರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
Crime
ಹಾಸನ: ತಂದೆ ಹಾಗೂ ಅಣ್ಣನನ್ನೇ ಕೊಲೆಗೈದ ದುರುಳ

ದೇವೇಗೌಡ (70), ಮಂಜುನಾಥ್ (50) ಕೊಲೆಯಾದವರು
ಮೋಹನ್ (47) ತಂದೆ ಹಾಗೂ ಅಣ್ಣನನ್ನೇ ಕೊಲೆಗೈದ ಆರೋಪಿ
ಹಾಸನ- ಆಸ್ತಿ ವಿಚಾರಕ್ಕೆ ಸಹೋದರನಿಂದ ತಂದೆ ಮತ್ತು ಅಣ್ಣನ ಬರ್ಬಕೊಲೆ
ಬರ್ಬರವಾಗಿ ಕೊಚ್ಚಿ ಕೊಲೆಗೈದ ಪಾಪಿ ಸಹೊದರ
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ
ದೇವೇಗೌಡರ, ಮಂಜುನಾಥ ಕೊಲೆಯಾದ ತಂದೆ ಮಗ
ದೇವೇಗೌಡ ಪುತ್ರ ಮೋಹನ್ ನಿಂದಲೇ ಕೃತ್ಯ ಆರೋಪ
ಜೋಡಿ ಕೊಲೆಗೆ ಬೆಚ್ಚಿಬಿದ್ದ ಜನತೆ
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಕಲ್ಲು ಗಣಿಗಾರಿಕೆ ವೇಳೆ ಸ್ಫೋಟ,ಮೂರಕ್ಕೂ ಹೆಚ್ಚು ಕಾರ್ಮಿಕರ ಸಾವಿನ ಶಂಕೆ

ಹಾಸನ: ತಾಲ್ಲೂಕಿನ ಶಾಂತಿಗ್ರಾಮ ದೂಮಗೆರೆ ಗ್ರಾಮದ ಕಲ್ಲು ಕ್ವಾರಿಯಲ್ಲಿ ಬೃಹತ್ ಸ್ಫೋಟ ನಡೆದು ಈ ಘಟನೆಯಲ್ಲಿ ಮೂವರು ಮೃತಪಟ್ಟಿರುವ ಶಂಕೆ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಸದ್ಯ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ ಒಬ್ಬನ ಪರಿಸ್ಥಿತಿ ಚಿಂತಾಜನಕವಾಗಿದೆ. ವಿಷಯ ತಿಳಿದ ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಎಸ್ಪಿ ಮೊಹಮದ್ ಸುಜೀತಾ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ಉಪವಿಭಾಗಾಧಿಕಾರಿ ಮಾರುತಿ ಇವರು ತಡರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಂಡ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿ ಸಿ.ಸತ್ಯಭಾಮ ಕ್ವಾರಿ ಗುತ್ತಿಗೆ ಪಡೆದಿರುವ ಮಾಲೀಕ ದೇವರಾಜು ವಿರುದ್ಧ ಹರಿಹಾಯ್ದರು. ಮಾಹಿತಿ ಮುಚ್ಚಿಟ್ಟ ಆರೋಪದಡಿ ದೇವರಾಜ್ ವಿರುದ್ಧ ಎಫ್ ಐಆರ್ ದಾಖಲಿಸಲು ಡಿಸಿ ಸೂಚಿಸಿದರು.
Crime
ಸಂಭ್ರಮಾಚರಣೆ ವೇಳೆ RCB ಅಭಿಮಾನಿಗೆ ಚಾ*ಕು ಇರಿತ

ಬೆಂಗಳೂರು, ಜೂನ್ 4: ಆರ್ಸಿಬಿ (RCB) ತಂಡ ಚೊಚ್ಚಲ ಐಪಿಎಲ್ ಟ್ರೋಫಿ (IPL Trophy) ಎತ್ತಿಹಿಡಿದ ಬೆನ್ನಲ್ಲೇ ಬೆಂಗಳೂರು ನಗರದಾದ್ಯಂತ ಸಂಭ್ರಮಾಚರಣೆ ಮುಗಿಲುಮುಟ್ಟಿತು. ಹಲವೆಡೆ ಪಟಾಕಿಗಳನ್ನು ಸಿಡಿಸಿ ಜನ ಸಂಭ್ರಮಿಸಿದರೆ, ಇನ್ನು ಕೆಲವೆಡೆ ರಸ್ತೆಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ, ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ದುಷ್ಕರ್ಮಿಗಳ ಗುಂಪು ಕ್ರೌರ್ಯ ಮೆರೆದಿದೆ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರಿಯಿಡೀ ಸಂಭ್ರಮಾಚರಣೆ ನೆರವೇರಿದೆ. ವಿವಿಧೆಡೆ ರಸ್ತೆಗಳಲ್ಲಿ ಘೋಷಣೆ ಕೂಗುತ್ತಾ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕನಿಗೆ ಚಾಕು ಇರಿದ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
-
Special11 hours ago
ಸೃಷ್ಟಿಯ ನಿಯಮವನ್ನು ಮೀರುವುದೆಂದರೆ ಇದೇ….?
-
Chamarajanagar5 hours ago
ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ
-
Chamarajanagar11 hours ago
ಮಹಿಳಾ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ
-
Hassan6 hours ago
ಮುಸುಕಿನ ಜೋಳಕ್ಕೆ ಬಿಳಿ ಸುಳಿ ರೋಗ: ರೈತರಿಗೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ ಎ.ಎಸ್.ಪಾಟೀಲ್ ನಡಹಳ್ಳಿ
-
Mysore7 hours ago
ಮುಖ್ಯಮಂತ್ರಿ ಬದಲಾವಣೆ ವಿಚಾರ| ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ: ಎಚ್.ಸಿ.ಮಹದೇವಪ್ಪ
-
Mysore7 hours ago
ಸರ್ಕಾರದ ಸಾಧನೆಗಳ ಸಮಾವೇಶ, ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ ಎಚ್.ಸಿ.ಮಹದೇವಪ್ಪ
-
Hassan5 hours ago
ಹೆಣ್ಣಿನ ವ್ಯಕ್ತಿತ್ವ ಪ್ರತಿಪಾದಿಸುವ ವಕ್ತಿತ್ವದವರು ನಮ್ಮ ಜೊತೆ ಇರುವುದೇ ಒಂದು ಹೆಮ್ಮೆಯ ವಿಷಯ: ಕೆ.ಎಸ್. ಲತಾ ಕುಮಾರಿ
-
Kodagu5 hours ago
ಬಂದೂಕು ವಿನಾಯಿತಿ ಪ್ರಮಾಣ ಪತ್ರ : ಕೊಡವ ಜನಾಂಗೀಯ ಪ್ರಮಾಣ ಪತ್ರ ಪಡೆಯಲು ಸಿಎನ್ಸಿ ಸಲಹೆ