ಏಕೀಕರಣದ ಏಕತಾ ಮೂರ್ತಿ….

ಏಕೀಕರಣದ ಏಕತಾ ಮೂರ್ತಿ….

– ಪ್ರೀತಮ್ ಹೆಬ್ಬಾರ್

ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 144 ಜನ್ಮದಿನ ಬನ್ನಿ ಸರ್ದಾರ್ ವಲ್ಲಭಭಾಯ್ ಪಟೇಲರ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ……

ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು 31ಅಕ್ಟೋಬರ್ 1875 ರಲ್ಲಿ ಗುಜರಾತ್ ನ ನಾಡಿಯಾದ್ ಎಂಬಲ್ಲಿ ಜನಿಸಿದರು.ವೃತ್ತಿಯ್ಲಲಿ ವಕೀಲರಾಗಿದ್ದರು ರಾಜಕೀಯ ಮುತ್ಸದ್ಧಿ ಯಾಗಿದ್ದ ಇವರು ಗಾಂಧೀಜಿಯವರ ಜೊತೆಯಲ್ಲಿ ಭಾರತೀಯ ರಾಷ್ಟೀಯ ಕಾಂಗ್ರೆಸ್‌ನ ಮುಖ್ಯ ನಿರ್ವಾಹಕರು ಆಗಿದ್ದರು. ಪಟೇಲರು 1918 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು ಅವರು ಕಾರ್ಯದರ್ಶಿಯಾಗಿದ್ದ ಗುಜರಾತ್ ಸಭಾ 1920 ರಲ್ಲಿ ಗುಜರಾತ್ ಪ್ರದೇಶ ಕಾಂಗ್ರೆಸ್ ಕಮಿಟಿಯಾಗಿ ಬದಲಾಯಿತು. ತದನಂತರ 1947 ರ ವರೆಗೂ ಅವರೂ ಅದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.ಇವರ ಪ್ರಯತ್ನಗಳಿಂದಲೇ 1937ರ ಮತದಾನದಲ್ಲಿ ಕಾಂಗ್ರೆಸ್ ಸಂಪೂರ್ಣ ಜಯವನ್ನು ಸಾಧಿಸಿತು.ಆಗ ಸರ್ದಾರ್ ಪಟೇಲ್‌ರವರೇ ಕಾಂಗ್ರೆಸ್ ಸದಸ್ಯರಿಂದ ಪ್ರಧಾನಿ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ ಗಾಂಧೀಜಿಯವರ ಒತ್ತಾಯದ ಮೇಲೆ ಇವರು ಪ್ರಧಾನಿ ಹುದ್ದೆಯನ್ನು ಜವಾಹರ್ ಲಾಲ್ ನೆಹರೂರವರಿಗೆ ಬಿಟ್ಟು ಕೊಟ್ಟರು.
ಆದರೂ ಕೂಡ ಇವರು ಉಪ ಪ್ರಧಾನಿಯಾಗಿ
15 ಆಗಸ್ಟ್ 1947ರಿಂದ 25 ಡಿಸೆಂಬರ್ 1950ರ ವರೆಗೆ ಕಾರ್ಯ ನಿರ್ವಹಿಸಿದ್ದರು.
ಹಾಗೂ ಇದೇ ಅವಧಿಯಲ್ಲಿ ಅವರು ಕೇಂದ್ರ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಖೇಡಾ ಸತ್ಯಾಗ್ರಹದೊಂದಿಗೆ ಪಟೇಲರು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು ಗುಜರಾತಿನ ಖೇಡಾ ವಿಭಾಗವು ತೀವ್ರ ಕ್ಷಾಮದಿಂದ ತತ್ತರಿಸುತ್ತಿದ್ದು, ಅಲ್ಲಿಯ ರೈತರು ಕರ ವಿನಾಯಿತಿಗೆ ಬೇಡಿಕೆಯಿಟ್ಟರು.ಈ ಹೋರಾಟದ ಮುಖಂಡತ್ವವನ್ನು ಸ್ವತಃ ಪಟೇಲರೆ ವಹಿಸಿದ್ದರು.
1919 ರಿಂದ 1928 ರವರೆಗೆ, ಪಟೇಲರು, ಅಸ್ಪ್ರಶ್ಯತೆ, ಮದ್ಯಪಾನ, ಬಡತನ ಹಾಗೂ ಅಜ್ಙಾನದ ವಿರುದ್ಧ ತೀವ್ರವಾದ ಹೋರಾಟವನ್ನು ನೆಡೆಸಿದ್ದರು.ತದ ನಂತರದಲ್ಲಿ ಜಿನ್ನಾ ಅವರಂತಹ ವ್ಯೆಕ್ತಿಗಳಿಂದ ವಿಭಜನೆಯ ಕೂಗು ಕೇಳಿ ಬಂದ ಸಂದರ್ಭದಲ್ಲಿ ಪಟೇಲರಿಗೆ ತಮ್ಮ ಸ್ವಂತ ರಾಜ್ಯ ಗುಜರಾತಿನಲ್ಲಿದ್ದ ಜುನಾಘಡ ಸಂಸ್ಥಾನ ಪಟೇಲರಿಗೆ ಸಹಜವಾಗಿಯೇ ಮಹತ್ವದ್ದಾಗಿತ್ತು. ಅಲ್ಲಿಯ ನವಾಬರ ಮೇಲೆ ಪಾಕಿಸ್ತಾನ ಸೇರುವಂತೆ ಸರ್ ಶಾ ನವಾಜ್ ಭುಟ್ಟೋ ಒತ್ತಡ ಹೇರಿದ್ದರು. ಜುನಾಗಡ ಪಾಕಿಸ್ತಾನದಿಂದ ಸಾಕಷ್ಟು ದೂರವಿದ್ದದ್ದಷ್ಟೇ ಅಲ್ಲ ಅಲ್ಲಿಯ ಜನಸಂಖ್ಯೆಯ ಶೇಕಡಾ ೮೦ ಹಿಂದೂಗಳಾಗಿದ್ದರು. ಪಟೇಲರು ಮುತ್ಸದ್ದಿತನದೊಡನೆ, ಬಲಪ್ರದರ್ಶನವನ್ನೂ ಮಾಡಿ ಪಾಕಿಸ್ತಾನ ಜುನಾಘಡದಿಂದ ದೂರವಿರುವಂತೆಯೂ, ಹಾಗೂ ಜುನಾಘಡವು ಭಾರತದೊಂದಿಗೆ ವಿಲೀನವಾಗಬೇಕೆಂದೂ ಒತ್ತಡ ಹಾಕಿದರು.
ಜಿನ್ನಾರ ನಾಯಕತ್ವದಲ್ಲಿ ದಿನೇದಿನೇ ಹೆಚ್ಚುತ್ತಿದ್ದ ಮುಸ್ಲಿಮ್ ಪ್ರತ್ಯೇಕತಾ ಬೇಡಿಕೆಯಿಂದ ಭಾರತದ ವಿಭಜನೆ ಅನಿವಾರ್ಯ ಎಂಬ ನಿರ್ಣಯಕ್ಕೆ ಬಂದ ಕಾಂಗ್ರೆಸ್ ನಾಯಕರುಗಳಲ್ಲಿ ಪಟೇಲರು ಒಬ್ಬರಾಗಿದ್ದರು. ಕಾಂಗ್ರೆಸ್ ಮತ್ತು ಮುಸ್ಲಿಮ್ ಲೀಗ್ ಮಧ್ಯೆ ಸಂಧಾನದ ಪ್ರಯತ್ನಗಳನ್ನು ವಿಫಲಗೊಳಿಸಿ, ಜಿನ್ನಾ ತನ್ನ ಹಿಂಬಾಲಕರನ್ನು ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದಿಸುತ್ತಿದ್ದದ್ದು ಪಟೇಲರನ್ನು ತೀವ್ರ ದುಃಖಕ್ಕೆ ಕಾರಣವಾಗಿತ್ತು.ಆದರೂ ಜಿನ್ನಾ ಮುಸ್ಲಿಮರ ಜನಪ್ರಿಯ ನಾಯಕನಾಗಿದರಿಂದ ಅನಿವಾರ್ಯವಾಗಿ ಭಾರತವನ್ನು ವಿಭಜಿಸ ಬೇಕಾಯಿತು.ಸರ್ದಾರ್ ವಲ್ಲಭಬಾಯಿ ಪಟೇಲ್ ಸ್ವಾತಂತ್ರ್ಯ ಭಾರತದ ಬಳಿಕ ಮೊದಲ ಗೃಹ ಸಚಿವರಾಗಿದ್ದವರು. ಕಾನೂನು ಪದವಿ ಪಡೆದಿದ್ದ ಅವರು ಗಾಂಧೀಜಿ ಅವರ ಕರೆಗೆ ಓಗೊಟ್ಟು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಧುಮುಕಿ ಸ್ವತಂತ್ರ ಭಾರತಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದರು. ಸ್ವಾತಂತ್ರ್ಯದ ಬಳಿಕ ರಾಜ್ಯಗಳ ಪುನರ್ ವಿಂಗಡನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಭಾರತವನ್ನು ಒಟ್ಟುಗೂಡಿಸುವುದು ಸುಲಭದಕೆಲಸವೇನಾಗಿರಲಿಲ್ಲ. ಪಟೇಲರ ಗಣನೀಯಸೇವೆಯನ್ನು ಗಮನದಲ್ಲಿಟ್ಟು ಅವರನ್ನು ಭಾರತದ ಬಿಸ್ಮಾರ್ಕ್ ಎಂದು ಕರೆಯಲಾಗುತ್ತದೆ.
ಭಾರತದ ಸಂವಿಧಾನದಲ್ಲಿ ನಾಗರಿಕ ಸ್ವಾತಂತ್ರ್ಯದ ರೂಪರೇಷೆಗಳನ್ನು ನಿರ್ಧರಿಸುವುದಕ್ಕಾಗಿ ರಚಿಸಲಾಗಿದ್ದ ಅನೇಕ ಮಹತ್ವದ ಸಮಿತಿಗಳ ನಾಯಕರಾಗಿದ್ದರು. ರಾಷ್ಟ್ರೀಕೃತ ಸಿವಿಲ್ ಸರ್ವೀಸನ್ನು ಅವರು ಬಲವಾಗಿ ಬೆಂಬಲಿಸಿದ್ದಲ್ಲದೇ , ಆಸ್ತಿ ಹಕ್ಕು ಮತ್ತು ರಾಜಧನದ ಕಲಮುಗಳನ್ನೂ ಸೇರಿಸಿದರು.ಸುಮಾರು 500ಕ್ಕೂ ಅಧಿಕ ರಾಜಮನೆತನ ಅಡಿಯಲ್ಲಿದ್ದ ರಾಜ್ಯಗಳನ್ನು ನೆಹರೂ ಸರ್ಕಾರದ ಸುಪರ್ದಿಗೆ ತಂದರು. ಇದಲ್ಲದೆ ಗುಜರಾತಿನ ಖೇದ, ಬೊರ್ಸದ್, ಬಾರ್ಡೋಲಿಗಳಲ್ಲಿ ರೈತರ ಪರ ಹೋರಾಟದಲ್ಲೂ ಪಟೇಲ್ ಅವರು ಪಾಲ್ಗೊಂಡಿದ್ದರು.ಪಟೇಲರು ಭಾರತದ ರಾಜಕೀಯ ಏಕೀಕರಣದಲ್ಲಿ ಮುಖ್ಯ ಪಾತ್ರ ವಹಿಸಿದ್ದನ್ನು ಎಂದಿಗೂ ಮರೆಯಲಾಗುವುದಿಲ್ಲ.ಭಾರತದಲ್ಲಿದ್ದ ಪುಟ್ಟ ಪುಟ್ಟ ರಾಜರಿಂದಾಳಲ್ಪಟ್ಟ ರಾಜ್ಯಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಇವರು ಉಕ್ಕಿನ ಮನುಷ್ಯ ರೆಂದೇ ಪ್ರಸಿದ್ದಿ ಯಾದರು.ಪಟೇಲರಿಗೆ 1991 ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಹಾಗೂ ಗುಜರಾತಿನ ‘ಸರ್ದಾರ್’ ಎಂಬ ಬಿರುದು ನೀಡಿ ಗೌರವಿಸಿದರು.
ಏಕತಾ ಪ್ರತಿಮೆ ಗೌರವ: ಭಾರತವನ್ನು ಏಕೀಕರಣಗೊಳಿಸಿದ ಪಟೇಲರಿಗೆ ಗೌರವಯುತವಾಗಿ ಕಳೆದವರ್ಷ ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ನರ್ಮದಾ ನದಿ ತೀರದ ಕೆವಾಡಿಯಾ ಎಂಬಲ್ಲಿ ನಿರ್ಮಿಸಲಾಗಿರುವ ಜಗತ್ತಿನ ಅತಿ ಎತ್ತರದ, 182 ಮೀಟರ್​ ಎತ್ತರದ ಸರ್ದಾರ್​ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದರು.

ತಾಜಾ ಸುದ್ದಿಗಳು